ಬೆಂಗಳೂರು: ಫ್ರೀ..ಫ್ರೀ..ಫ್ರೀ…ಅಂತಾನೆ ಚುನಾವಣೆ ಪ್ರಚಾರದ ವೇಳೆ ಭರವಸೆ ನೀಡಿದ್ದ ಐದು ಘೋಷಣೆಗಳನ್ನು ಇಂದು ಸಿಎಂ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. ಆ ಪೈಕಿ ಗೃಹಜ್ಯೋತಿ ಯೋಜನೆ (Gruha Jyothi Scheme) ಒಂದು. ಜುಲೈ 1 ರಿಂದ ಬಳಕೆ ಮಾಡುವ ವಿದ್ಯುತ್ ಉಚಿತವಾಗಿರಲಿದೆ ಎಂದು ಸಿಎಂ ಹೇಳಿದ್ದಾರೆ. ಈ ಯೋಜನೆ ಮೂಲಕ 200 ಯೂನಿಟ್ ವಿದ್ಯುತ್ನ್ನು ಕಾಂಗ್ರೆಸ್ ಸರ್ಕಾರ ಉಚಿತ ನೀಡುತ್ತಿದೆ. ಹಾಗಾದ್ರೆ ಬಾಡಿಗೆದಾರರಿಗೂ ಈ ಯೋಜನೆ ಅನ್ವಯಿಸುತ್ತಾ ಎನ್ನುವ ಕುತೂಹಲಕ್ಕೆ ಕಾರಣವಾಗಿದೆ. ಈ ಕುರಿತಾಗಿ ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ ಹೀಗಿದೆ.
ವಾಣಿಜ್ಯ ಬಳಕೆದಾರರಿಗೆ ‘ಗೃಹಜ್ಯೋತಿ’ ಯೋಜನೆ ಅನ್ವಯಿಸಲ್ಲ. ಬಾಡಿಗೆದಾರರು ಬಿಲ್ ಕಟ್ಟುತ್ತಿದ್ದರೆ ಉಚಿತ ವಿದ್ಯುತ್ ನೀಡುತ್ತೇವೆ. ಒಂದು ಕಟ್ಟಡದಲ್ಲಿ ಒಂದಕ್ಕಿಂತ ಹೆಚ್ಚು ಆರ್ಆರ್ ನಂಬರ್ ಇದ್ದರೆ ಹೊಂದಿದ್ದರೆ ಅದನ್ನು ಕಮರ್ಷಿಯಲ್ ಎಂದು ಪರಿಗಣಿಸಲಾಗುವುದು. ಹಾಗಾಗಿ ಬಾಡಿಗೆದಾರರಿಗೆ ‘ಗೃಹಜ್ಯೋತಿ’ ಯೋಜನೆ ಅನ್ವಯವಾಗಲ್ಲ ಎಂದಿದ್ದಾರೆ.
ಇದನ್ನೂ ಓದಿ: Gruha Jyothi Scheme: ಜುಲೈ 1ರಿಂದ 200 ಯುನಿಟ್ ವಿದ್ಯುತ್ ಉಚಿತ: ಸಿದ್ದರಾಮಯ್ಯ ಘೋಷಣೆ
ಸಿಂಗಲ್ ಬಿಲ್ಡಿಂಗ್ನಲ್ಲಿ ಬಾಡಿಗೆದಾರರಿದ್ದರೆ ಮಾತ್ರ ಉಚಿತವಿರುತ್ತದೆ. ಒಂದು ಬಿಲ್ಡಿಂಗ್ನಲ್ಲಿ ಒಂದು ಮನೆ RR ನಂಬರ್ ಮಾತ್ರ ಪರಿಗಣನೆ ಮಾಡಲಾಗುತ್ತಿದೆ. ಒಂದು ಬಿಲ್ಡಿಂಗ್ನಲ್ಲಿ ಒಂದಕ್ಕಿಂತ ಹೆಚ್ಚು ಆರ್ಆರ್ ನಂಬರ್ಯಿದ್ದರೆ, ಅದರ ಲಾಭವನ್ನು ಬಿಲ್ಡಿಂಗ್ ಮಾಲೀಕರು ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದರು.
12 ತಿಂಗಳ ಸರಾಸರಿ ಆಧಾರದಲ್ಲಿ ವಿದ್ಯುತ್ ಬಿಲ್ ಪರಿಗಣೆ ಮಾಡಲಾಗುತ್ತಿದ್ದು, 12 ತಿಂಗಳಲ್ಲಿ ಎಷ್ಟು ಬಳಸುತ್ತಾರೋ ಅದರ ಸರಾಸರಿ ಪಡೆದುಕೊಂಡು 10% ಹೆಚ್ಚು ವಿದ್ಯುತ್ ನೀಡುತ್ತೇವೆ. 12 ತಿಂಗಳ ಆವರೇಜ್ ವಿದ್ಯುತ್ ಬಳಕೆ ಮೇಲೆ 10% ನೀಡುತ್ತೇವೆ. ಸರಾಸರಿ ಬಳಕೆಗೆ 10% ಸೇರಿಸಿ ಹೆಚ್ಚುವರಿ ವಿದ್ಯುತ್ ನೀಡಲಾಗುವುದು. 200 ಯೂನಿಟ್ ವಿದ್ಯುತ್ ಬಳಕೆಗೆ ಯಾವುದೇ ಶುಲ್ಕ ಇರುವುದಿಲ್ಲ.
ಇದನ್ನೂ ಓದಿ: Karnataka Guarantee Schemes: 5 ಗ್ಯಾರಂಟಿ ಜಾರಿ, ಅಧಿಕೃತವಾಗಿ ಘೋಷಿಸಿದ ಸಿಎಂ: ಕಂಡೀಷನ್ಗಳೇನು? ಇಲ್ಲಿದೆ ವಿವರ
ಗೃಹಜ್ಯೋತಿ ಸೇರಿದಂತೆ ಗೃಹಲಕ್ಷ್ಮೀ, ಅನ್ನಭಾಗ್ಯ, ಯುವನಿಧಿ, ಮಹಿಳೆಯರಿಗೆ ಉಚಿತ ಬಸ್ ಯೋಜನೆಗಳನ್ನು ಸಹ ಸಿಎಂ ಸಿದ್ದರಾಮಯ್ಯ ಜಾರಿಗೊಳಿಸಿದರು. 5 ಗ್ಯಾರಂಟಿಗಳನ್ನು ಈ ಆರ್ಥಿಕ ವರ್ಷದಲ್ಲಿ ಜಾರಿ ಮಾಡಬೇಕು ಎಂದು ತೀರ್ಮಾನ ಮಾಡಲಾಗಿದ್ದು, ಯಾವುದೇ ಜಾತಿ, ಧರ್ಮ, ಭಾಷೆ ಬೇಧವಿಲ್ಲದೇ ಗ್ಯಾರಂಟಿ ಜಾರಿ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 4:43 pm, Fri, 2 June 23