AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಯಾವ ಪಕ್ಷದಲ್ಲಿರಬೇಕೆಂದು ಜನ ತೀರ್ಮಾನ ಮಾಡುತ್ತಾರೆ: ಜಿಟಿ ದೇವೇಗೌಡ ಹೇಳಿಕೆ

GT Devegowda: ಕ್ಷೇತ್ರದ ಮತದಾರರು ಹೇಳಿದಂತೆ ನಾನು ಕೇಳ್ತೇನೆ. ಹೆಚ್.ಡಿ. ಕುಮಾರಸ್ವಾಮಿಗೆ ಯಾವ ಅಭಿಪ್ರಾಯವಾದರೂ ಇರಲಿ. ನನ್ನ ನಿರ್ಧಾರ ಮಾತ್ರ ಬದಲಾಗುವುದಿಲ್ಲ ಎಂದು ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಹೇಳಿಕೆ ನೀಡಿದ್ದಾರೆ.

ನಾನು ಯಾವ ಪಕ್ಷದಲ್ಲಿರಬೇಕೆಂದು ಜನ ತೀರ್ಮಾನ ಮಾಡುತ್ತಾರೆ: ಜಿಟಿ ದೇವೇಗೌಡ ಹೇಳಿಕೆ
ಜಿ.ಟಿ.ದೇವೇಗೌಡ (ಸಂಗ್ರಹ ಚಿತ್ರ)
TV9 Web
| Updated By: ganapathi bhat|

Updated on: Nov 07, 2021 | 2:37 PM

Share

ಮೈಸೂರು: ನಾನು ಯಾವ ಪಕ್ಷದಲ್ಲಿರಬೇಕೆಂದು ಜನ ತೀರ್ಮಾನ ಮಾಡುತ್ತಾರೆ. ಚಾಮುಂಡೇಶ್ವರಿ ಕ್ಷೇತ್ರದ ಮತದಾರರು ಹೇಳಿದಂತೆ ನಾನು ಕೇಳ್ತೇನೆ. ಹೆಚ್.ಡಿ. ಕುಮಾರಸ್ವಾಮಿಗೆ ಯಾವ ಅಭಿಪ್ರಾಯವಾದರೂ ಇರಲಿ. ನನ್ನ ನಿರ್ಧಾರ ಮಾತ್ರ ಬದಲಾಗುವುದಿಲ್ಲ ಎಂದು ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಇಂದು (ನವೆಂಬರ್ 7) ಹೇಳಿಕೆ ನೀಡಿದ್ದಾರೆ.

ಕಾರ್ಯಕ್ರಮ ನಿಮಿತ್ತ ಸಿದ್ದರಾಮಯ್ಯ ಕ್ಷೇತ್ರಕ್ಕೆ ಬರುತ್ತಿದ್ದಾರೆ. ಆ ಕಾರ್ಯಕ್ರಮಕ್ಕೆ ಸ್ಥಳೀಯರು ನನ್ನನ್ನು ಆಹ್ವಾನಿಸಿದ್ದಾರೆ. ಹೀಗಾಗಿ ನಾನು ಆ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತೇನೆ. ಕ್ಷೇತ್ರದ ಜನರು ನನ್ನನ್ನು ಆಹ್ವಾನಿಸಿದಾಗ ಹೋಗಲೇಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಂದಾಗಲೂ ಅವರ ಜತೆ ವೇದಿಕೆ ಹಂಚಿಕೊಂಡಿದ್ದೆ. ಮುಂದೆ ನಾನು ಯಾವ ಪಕ್ಷದಲ್ಲಿರಬೇಕೆಂದು ಜನ ಹೇಳ್ತಾರೆ. ಅವರು ಹೇಳಿದಂತೆ ನಡೆದುಕೊಳ್ಳುತ್ತೇನೆ ಎಂದು ಜಿ.ಟಿ. ದೇವೇಗೌಡ ತಿಳಿಸಿದ್ದಾರೆ.

ಕಾಂಗ್ರೆಸ್ ಸೇರುವ ಸುಳಿವು ಬಿಟ್ಟುಕೊಟ್ಟಿದ್ದ ಜಿಟಿ ದೇವೇಗೌಡ ಜೆಡಿಎಸ್​ನಲ್ಲಿ ಆದ ಅವಮಾನಗಳ ಬಗ್ಗೆ ಹೆಚ್​​.ಡಿ. ದೇವೇಗೌಡರ ಜೊತೆ ಚರ್ಚೆ ಮಾಡಿದ್ದೇನೆ. ಆಗ ಅವರು ನಿನ್ನನ್ನು ಮರಿದೇವೇಗೌಡ ಎಂದುಕೊಂಡಿದ್ದೇನೆ. ನೀನು ನನ್ನ ಜೊತೆಯೇ ಇರಬೇಕೆಂದು ಹೇಳಿದ್ದರು. ಅದಕ್ಕೆ ನಾನು ದಯವಿಟ್ಟು ಕ್ಷಮಿಸಿ ಎಂದು ದೇವೇಗೌಡರಿಗೆ ಹೇಳಿದ್ದೆ. ನನ್ನೊಂದಿಗೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಮಾತಾಡಿದ್ದಾರೆ ಎಂದಿದ್ದೆ ಎಂದು ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಆಗಸ್ಟ್ 24 ರಂದು ತಿಳಿಸಿದ್ದರು. ಮುಂದಿನ ದಿನಗಳಲ್ಲಿ ಕಾಂಗ್ರೆಸ್​ ಸೇರುವ ಬಗ್ಗೆ ಜಿ.ಟಿ. ದೇವೇಗೌಡ ಸುಳಿವು ನೀಡಿದ್ದರು.

ಮೈಸೂರು ಮಹಾನಗರ ಪಾಲಿಕೆ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಕರಪತ್ರದಲ್ಲಿ ಹರೀಶ್‌ಗೌಡ ಫೋಟೋ ವಿಚಾರವಾಗಿ ಜಿ.ಟಿ. ದೇವೇಗೌಡ ಪ್ರತಿಕ್ರಿಯೆ ನೀಡಿದ್ದರು. ಕಾಂಗ್ರೆಸ್ ಅಭ್ಯರ್ಥಿ ರಜನಿ ಅಣ್ಣಯ್ಯ ನಮಗೆ ಆಪ್ತರು. ಹೀಗಾಗಿ ನನ್ನ ಪುತ್ರ ಹರೀಶ್ ಗೌಡ ಫೋಟೋ ಹಾಕಿದ್ದಾರೆ. ಆದರೆ ಹರೀಶ್ ಗೌಡ ಇನ್ನೂ ಕಾಂಗ್ರೆಸ್ ಪಕ್ಷಕ್ಕೆ ಸೇರಿಲ್ಲ ಎಂದು ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಸ್ಪಷ್ಟನೆ ನೀಡಿದ್ದರು.

ನಾನು ಯಾವತ್ತೂ ಪಕ್ಷದ ವಿರುದ್ಧವಾಗಿ ನಡೆದುಕೊಂಡಿಲ್ಲ. ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ಮೈಸೂರು ಮೇಯರ್ ಚುನಾವಣೆ ನಡೆದಿತ್ತು. ಆಗ, ಚುನಾವಣೆಯ ವೇಳೆ ನನ್ನನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ನನ್ನ ಮನಸ್ಸಿಗೆ ಅನಿಸಿದ್ದನ್ನು ನಾನು ನೇರವಾಗಿ ಹೇಳುತ್ತೇನೆ. ಅದನ್ನು ಸಹಿಸಿಕೊಳ್ಳುವುದಕ್ಕೆ ಅವರಿಗೆ ಆಗಿಲ್ಲ. ನಂತರ ನಡೆದ ಜೆಡಿಎಸ್ ಸಭೆಗಳಿಗೆ ನನ್ನನ್ನು ಆಹ್ವಾನಿಸಿಲ್ಲ. ನಾನು ಜೆಡಿಎಸ್‌ನಲ್ಲೇ ಇದ್ದರೂ ಕರೆದು ಮಾತನಾಡಿಲ್ಲ. ನನ್ನನ್ನು ಜಿಲ್ಲಾಧ್ಯಕ್ಷರನ್ನಾಗಿ ಮಾಡುವಂತೆ ನಿಯೋಗ ತೆರಳಿತ್ತು. ಆದರೆ, ಸಾರಾರನ್ನು ಜಿಲ್ಲಾಧ್ಯಕ್ಷರನ್ನಾಗಿ ಮಾಡಲು ಹೇಳಿದ್ದಾರೆ. ನಾನು ಯಾವುದೇ ಹುದ್ದೆ ಕೇಳದಿದ್ದರೂ ನನಗೆ ಅಪಮಾನ ಮಾಡಲಾಗಿದೆ ಎಂದು ಜೆಡಿಎಸ್ ನಾಯಕ ಕುಮಾರಸ್ವಾಮಿ ವಿರುದ್ಧ ಜಿ.ಟಿ. ದೇವೇಗೌಡ ಅಸಮಾಧಾನ ಹೊರಹಾಕಿದ್ದರು.

ಹಳೇ ವಿಷಯ ಕೆದಕಿ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಜಿ.ಟಿ. ದೇವೇಗೌಡ ಅಸಮಾಧಾನ ಹೊರಹಾಕಿದ್ದರು. ನಗರ ಪಾಲಿಕೆ ಚುನಾವಣೆ ಸಂಬಂಧ, ಟಿಕೆಟ್ ಹಂಚಿಕೆ ಸಂಬಂಧ ಚರ್ಚಿಸಿಲು ಕುಮಾರಸ್ವಾಮಿ ಕರೆ ಮಾಡಿದ್ದರು. ಆಗ ಹೆಚ್‌ಡಿಕೆ ಬಳಸಿದ ಭಾಷೆಯನ್ನು ಹೇಳಲಾಗುವುದಿಲ್ಲ. ಅಂತಹ ಭಾಷೆ ಬಳಸದಂತೆ ಕುಮಾರಸ್ವಾಮಿಗೆ ಹೇಳಿದ್ದೇನೆ. ಅದನ್ನು ಬಿಟ್ಟರೆ ಬೇರೆ ಏನನ್ನೂ ಕುಮಾರಸ್ವಾಮಿಗೆ ಹೇಳಿಲ್ಲ ಎಂದು ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: ಮೈಮುಲ್ ನೂತನ ಅಧ್ಯಕ್ಷರಿಗೆ ಸಲಹೆ ಕೊಡುತ್ತಲೇ ಕುಮಾರಸ್ವಾಮಿಗೆ ಜಿಟಿ ದೇವೇಗೌಡ ಟಾಂಗ್

ಇದನ್ನೂ ಓದಿ: ಜೆಡಿಎಸ್​ ಬಗ್ಗೆ ಅಸಮಾಧಾನ; ಕಾಂಗ್ರೆಸ್ ಸೇರುವ ಸುಳಿವು ಬಿಟ್ಟುಕೊಟ್ಟ ಜಿಟಿ ದೇವೇಗೌಡ

ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ರೈಲ್ವೆ ಹಳಿ ಪಕ್ಕ ಮರಿಗೆ ಜನ್ಮ ನೀಡಿದ ಆನೆ, ಎರಡು ಗಂಟೆಗಳ ಕಾಲ ನಿಂತ ರೈಲು
ರೈಲ್ವೆ ಹಳಿ ಪಕ್ಕ ಮರಿಗೆ ಜನ್ಮ ನೀಡಿದ ಆನೆ, ಎರಡು ಗಂಟೆಗಳ ಕಾಲ ನಿಂತ ರೈಲು
ಹೃದಯಾಘಾತಗಳ ಹೆಚ್ಚಳಕ್ಕೆ ನಿಖರವಾದ ಕಾರಣ ವೈದ್ಯರಿಗೆ ಗೊತ್ತಾಗುತ್ತಿಲ್ಲ
ಹೃದಯಾಘಾತಗಳ ಹೆಚ್ಚಳಕ್ಕೆ ನಿಖರವಾದ ಕಾರಣ ವೈದ್ಯರಿಗೆ ಗೊತ್ತಾಗುತ್ತಿಲ್ಲ
ಮಾವಿನ ಹಣ್ಣೆಂದು ಬೈಕ್ ಮೇಲೆ ಮಹಿಳೆಯ ಶವ ಸಾಗಿಸುತ್ತಿದ್ದ ವ್ಯಕ್ತಿ
ಮಾವಿನ ಹಣ್ಣೆಂದು ಬೈಕ್ ಮೇಲೆ ಮಹಿಳೆಯ ಶವ ಸಾಗಿಸುತ್ತಿದ್ದ ವ್ಯಕ್ತಿ
ಟೀಮ್ ಇಂಡಿಯಾವನ್ನು ಕೂಡಿಕೊಂಡ ಮುಂಬೈ ಇಂಡಿಯನ್ಸ್ ವೇಗಿ
ಟೀಮ್ ಇಂಡಿಯಾವನ್ನು ಕೂಡಿಕೊಂಡ ಮುಂಬೈ ಇಂಡಿಯನ್ಸ್ ವೇಗಿ
ಮಧ್ಯಾಹ್ನ ರಾಹುಲ್ ಗಾಂಧಿಯನ್ನು ಭೇಟಿಯಾಗಲಿರುವ ಸಿಎಂ, ಡಿಸಿಎಂ
ಮಧ್ಯಾಹ್ನ ರಾಹುಲ್ ಗಾಂಧಿಯನ್ನು ಭೇಟಿಯಾಗಲಿರುವ ಸಿಎಂ, ಡಿಸಿಎಂ
ಮನೆ ಎದುರು ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಮನೆ ಎದುರು ಆಟವಾಡುತ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ