ಷರತ್ತುಗಳಿಲ್ಲದೆ ಗ್ಯಾರಂಟಿ ಜಾರಿಮಾಡಬೇಕು, ಇಲ್ಲಾಂದ್ರೆ ಜೂನ್​ 1ರಿಂದ ಹೋರಾಟ: ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ

ಗ್ಯಾರಂಟಿ ಕಾರ್ಡ್​ನಲ್ಲಿ ಯಾವುದೇ ಷರತ್ತುಗಳ ಬಗ್ಗೆ ಉಲ್ಲೇಖಿಸಿಲ್ಲ. ಒಂದು ವೇಳೆ ಷರತ್ತು ವಿಧಿಸಿದರೆ ಜೂನ್​ 1ರಿಂದ ಹೋರಾಟ ಮಾಡುತ್ತೇವೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ ನೀಡಿದ್ದಾರೆ.

Follow us
ಗಂಗಾಧರ​ ಬ. ಸಾಬೋಜಿ
|

Updated on: May 25, 2023 | 2:57 PM

ಮೈಸೂರು: ಗ್ಯಾರಂಟಿ ಕಾರ್ಡ್​ನಲ್ಲಿ ಯಾವುದೇ ಷರತ್ತುಗಳ ಬಗ್ಗೆ ಉಲ್ಲೇಖಿಸಿಲ್ಲ. ಗ್ಯಾರಂಟಿಗಳ ಜಾರಿ ಬಗ್ಗೆ ಜೂನ್​ 1ರವರೆಗೆ ಕಾಯುತ್ತೇವೆ. ಷರತ್ತುಗಳು ಇಲ್ಲದೆ ಗ್ಯಾರಂಟಿಗಳನ್ನು ಜಾರಿಮಾಡಬೇಕು. ಒಂದು ವೇಳೆ ಷರತ್ತು ವಿಧಿಸಿದರೆ ಜೂನ್​ 1ರಿಂದ ಹೋರಾಟ ಮಾಡುತ್ತೇವೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಸಂಸದ ಪ್ರತಾಪ್ ಸಿಂಹ (Pratap Simha) ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಕಾರ್ಡ್​ ವಿಚಾರದಲ್ಲಿ ಬಿಜೆಪಿ ಎಚ್ಚೆತ್ತುಕೊಂಡಿದ್ದರೆ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ. ಕಾಂಗ್ರೆಸ್​ನ ಗ್ಯಾರಂಟಿ ಸ್ಕೀಂ ಪರ ಇದ್ದೇನೆ ಎಂದು ಹೇಳಿದರು.

ಈ ಫಲಿತಾಂಶ ಲೋಕಸಭಾ ಚುನಾವಣೆ ಮೇಲೆ ಪ್ರಭಾವ ಬೀರಲ್ಲ. ದೇಶಕ್ಕೆ ಎಂತಹ ನಾಯಕ ಬೇಕು ಅನ್ನೋದು ಕನ್ನಡಿಗರಿಗೆ ಗೊತ್ತು. ಆದಾಯದ ಆಧಾರದ ಮೇಲೆ ಖರ್ಚು ಮಾಡಬೇಕು ಎಂಬ ನಿಯಮ ವಿಧಾನಸಭೆಯಲ್ಲಿ ಇದೆ. ವಿತ್ತಿಯ ಹೊಣೆಗಾರಿಕೆ ಬಿಲ್ ಕರ್ನಾಟಕದಲ್ಲಿ ಪಾಸ್ ಆಗಿದೆ. ಮುಂದಿನ ತಲೆಮಾರನ್ನು ಅಪಾಯಕ್ಕೆ ತಳ್ಳಬೇಡಿ.

ಇದನ್ನೂ ಓದಿ: MP holds presser; ಕಾಂಗ್ರೆಸ್ ನೀಡಿದ ಗ್ಯಾರಂಟಿಗಳಿಗೆ ಷರತ್ತು ಅನ್ವಯ ಅಂತ ಎಲ್ಲೂ ಉಲ್ಲೇಖವಾಗಿಲ್ಲ: ಪ್ರತಾಪ್ ಸಿಂಹ, ಸಂಸದ

ಕಂಡೀಷನ್ ಹಾಕಿದರೆ ಜೂನ್ 1 ರಿಂದ ಹೋರಾಟ

ಗ್ಯಾರಂಟಿ ಕಾರ್ಡ್ ಅಲ್ಲಿ ಕಂಡೀಷನ್ ಅಪ್ಲೈ ಅಂತಾ ಎಲ್ಲೂ ಹಾಕಿಲ್ಲ. ಎಲ್ಲಾ ಮನೆಯ ಯಜಮಾನಿಗೆ 2 ಸಾವಿರ ಕೊಡಬೇಕು. ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪಯಣಕ್ಕೆ ಅವಕಾಶ ಕೊಡಬೇಕು. ಜೂನ್ 1 ರಿಂದ 200 ಯೂನಿಟ್ ಒಳಗೆ ವಿದ್ಯುತ್ ಬಿಲ್ ಬಂದರೆ ಕಟ್ಟಬೇಡಿ. 200 ಯೂನಿಟ್ ಮೇಲೆ ಎಷ್ಟು ಯೂನಿಟ್ ಬಳಸುತ್ತಿರಾ ಹೆಚ್ಚುವರಿಗೆ ಮಾತ್ರ ಕಟ್ಟಿ. ಕಂಡೀಷನ್ ಹಾಕಿದರೆ ಜೂನ್ 1 ರಿಂದ ಹೋರಾಟ ಮಾಡುತ್ತೇವೆ ಎಂದು ಕಿಡಿಕಾರಿದರು.

ಗ್ಯಾರಂಟಿ ಕಾರ್ಡ್ ನೋಡಿ ಮತ ಹಾಕಿದ್ದಾರೆ

ನಿಮ್ಮ‌ ಮುಖ ನೋಡಿ ಮತ ಹಾಕಿಲ್ಲ, ಗ್ಯಾರಂಟಿ ಕಾರ್ಡ್ ನೋಡಿ ಮತ ಹಾಕಿದ್ದಾರೆ ಅದು ನೆನಪಿರಲಿ. ನಾವು ಸೋತಿದ್ದೇವೆ, ಹೊರತು ಸತ್ತಿಲ್ಲ. ಕೊಟ್ಟ ಭರವಸೆ ಈಡೇರಿಸಿ. ರಾಜಸ್ಥಾನದಲ್ಲಿ ಇದೇ ರೀತಿ ಹೇಳಿ ಇವತ್ತಿನವರೆಗೆ ಮಾಡಿಲ್ಲ. ಸಿದ್ದರಾಮಯ್ಯ ಅಥವಾ ನಾನು ಯಾರು ಆರ್ಥಿಕ ತಜ್ಞರಲ್ಲ. ಸಿಎಂ ಕುರ್ಚಿ ಅನ್ನೋದು ಯಾರ ಸ್ವತ್ತಲ್ಲ. ಆದರೆ ಪೊಲೀಸ್ ವ್ಯವಸ್ಥೆ ಅನ್ನೋದು ಶಾಶ್ವತ ಇರುತ್ತದೆ. ವಿಧಾನಸೌಧದದಲ್ಲಿ ಕೂತು ಪೊಲೀಸ್ ಇಲಾಖೆಗೆ ಧಮ್ಕಿ ಹಾಕುತ್ತೀರಾ ಎಂದು ಪ್ರಶ್ನಿಸಿದರು. ಮೊದಲು ಪೊಲೀಸ್ ಇಲಾಖೆಗೆ ಧಮ್ಕಿ ಹಾಕುವುದು ನಿಲ್ಲಿಸಿ ಎಂದು ಪ್ರತಾಪ ಸಿಂಹ ವಾಗ್ದಾಳಿ ಮಾಡಿದರು.

ಇದನ್ನೂ ಓದಿ: ‘ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯನನ್ನು ಹೊಡೆದು ಹಾಕಿ’: ಮಾಜಿ ಸಚಿವ ಡಾ ಅಶ್ವತ್ಥ್ ನಾರಾಯಣ ವಿರುದ್ಧ FIR ದಾಖಲು

ನಾನೇ ನಿಮ್ಮ ಕಾಲಿಗೆ ನಮಸ್ಕರಿಸುವೆ

ಕಾಮಗಾರಿಗೆ ಹಣ ಬಿಡುಗಡೆ ಮಾಡುವುದನ್ನು ತಡೆದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಎಷ್ಟು ಪರ್ಸೆಂಟ್ ಕಮಿಷನ್​ಗಾಗಿ ಕಾಯುತ್ತಿದ್ದೀರಾ? ಕಾಮಗಾರಿಗೆ ಹಣ ಬಿಡುಗಡೆ ಮಾಡದೆ ಯಾಕೆ ತಡೆದಿದ್ದೀರಾ ಎಂದು ಪ್ರಶ್ನಿಸಿದರು. ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದೀರಾ, ಈಗ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ, ಕೂಡಲೇ ತನಿಖೆಗೆ ಆದೇಶಿಸಲಿ. ತಪ್ಪು ಮಾಡಿದವರನ್ನು ಶಿಕ್ಷಿಸಿ ನಾನೇ ನಿಮ್ಮ ಕಾಲಿಗೆ ನಮಸ್ಕರಿಸುವೆ. ಕಮಿಷನ್​​ ಪಡೆದವರನ್ನು ಜೈಲಿಗೆ ಕಳಿಸುವ ಹೊಣೆ ನಿಮ್ಮದು. ಇಲ್ಲದಿದ್ರೆ ನೀವು ಹೇಳಿದ್ದು ಸುಳ್ಳು ಅಂತಾಗುತ್ತೆ ಎಂದರು.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ