AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat Elections 2022: ಪ್ರಧಾನಿ ಮೋದಿ ರಾವಣನಂತೆ 100 ತಲೆ ಹೊಂದಿದ್ದೀರಾ? ಖರ್ಗೆ ಮಾತಿಗೆ ಬಿಜೆಪಿ ಆಕ್ರೋಶ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾವಣ ಎಂದು ಕರೆದಿದ್ದಾರೆ. ಅವರು ಗುಜರಾತ್ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ಮೋದಿ ರಾವಣನಂತೆ 100 ತಲೆ ಹೊಂದಿದ್ದೀರಾ? ಎಂದು ಹೇಳಿದ್ದಾರೆ. ಇದೀಗ ಈ ಮಾತು ರಾಜಕೀಯ ಗದ್ದಲವನ್ನು ಸೃಷ್ಟಿಸಿದೆ.

Gujarat Elections 2022: ಪ್ರಧಾನಿ ಮೋದಿ ರಾವಣನಂತೆ 100 ತಲೆ ಹೊಂದಿದ್ದೀರಾ? ಖರ್ಗೆ ಮಾತಿಗೆ ಬಿಜೆಪಿ ಆಕ್ರೋಶ
Kharge
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on: Nov 29, 2022 | 3:10 PM

Share

ದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾವಣ ಎಂದು ಕರೆದಿದ್ದಾರೆ. ಅವರು ಗುಜರಾತ್ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ಮೋದಿ ರಾವಣನಂತೆ 100 ತಲೆ ಹೊಂದಿದ್ದೀರಾ? ಎಂದು ಹೇಳಿದ್ದಾರೆ. ಇದೀಗ ಈ ಮಾತು ರಾಜಕೀಯ ಗದ್ದಲವನ್ನು ಸೃಷ್ಟಿಸಿದೆ. ಖರ್ಗೆ ಅವರಿಗೆ ಈ ಮಾತು ಶೋಭೆ ತರುವುದಿಲ್ಲ, ಅವರು ಗುಜರಾತ್‌ನ ಮಗನನ್ನು ಪದೇ ಪದೇ ಅವಮಾನಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಖರ್ಗೆ ಅವರು ಮುಂದಿನ ತಿಂಗಳು ನಡೆಯಲಿರುವ ಚುನಾವಣೆಗೆ ಮುನ್ನ ಅಹಮದಾಬಾದ್‌ನಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ್ದಾರೆ.

ಪ್ರಧಾನಿ ಮೋದಿಯವರು ತಮ್ಮ ಕೆಲಸವನ್ನು ಮರೆತು, ಕಾರ್ಪೊರೇಷನ್ ಚುನಾವಣೆಗಳಲ್ಲಿ, ಎಂಎಲ್ಎ ಚುನಾವಣೆಗಳಲ್ಲಿ, ಎಂಪಿ ಚುನಾವಣೆಗಳಲ್ಲಿ, ಎಲ್ಲೆಡೆ ಪ್ರಚಾರ ಮಾಡುತ್ತಾರೆ. ಪ್ರತಿ ಭಾಷಣದಲ್ಲೂ ತಮ್ಮ ಬಗ್ಗೆ ಮಾತ್ರ ಮಾತನಾಡುತ್ತಾರೆ. ಬೇರೆ ಯಾರನ್ನೂ ನೋಡಬೇಡಿ ನನ್ನನ್ನೂ ನೋಡಿ, ನನ್ನ ಮುಖವನ್ನು ನೋಡಿ ಮತದಾನ ನೀಡಿ ಎಂದು ಹೇಳುತ್ತೀರಾ, ಆದರೆ ನಾವು ನಿಮ್ಮ ಮುಖವನ್ನು ಎಷ್ಟು ಬಾರಿ ನೋಡಬೇಕು? ನಿಮಗೆ ಎಷ್ಟು ರೂಪಗಳಿವೆ? ನಿಮಗೆ ರಾವಣನಂತೆ 100 ತಲೆಗಳಿವೆಯೇ? ಎಂದು ಖರ್ಗೆ ಹೇಳಿದ್ದಾರೆ.

ಪ್ರತಿ ಚುನಾವಣೆಯಲ್ಲಿ ಅಭ್ಯರ್ಥಿಗಳು ಪ್ರಧಾನಿ ಮೋದಿ ಹೆಸರಿನಲ್ಲಿ ಮತ ಕೇಳುತ್ತಾರೆ ಎಂದು ಖರ್ಗೆ ಹೇಳಿದ್ದಾರೆ. ನೀವು ಮೋದಿ ಹೆಸರಿನಲ್ಲಿ ಮತ ಕೇಳುವುದನ್ನು ನಾನು ನೋಡಿದ್ದೇನೆ, ಕಾರ್ಪೊರೇಷನ್ ಅಥವಾ ವಿಧಾನ ಸಭೆ ಚುನಾವಣೆಗಳಲ್ಲಿ ನಿಮ್ಮ ಅಭ್ಯರ್ಥಿಯ ಹೆಸರಿನಲ್ಲಿ ಮತ ಕೇಳಿ. ಮೋದಿ ಅವರು ಪುರಸಭೆಗೆ ಬಂದು ಕೆಲಸ ಮಾಡುತ್ತಾರೆಯೇ? ನಿಮ್ಮ ಕಷ್ಟದ ಸಮಯದಲ್ಲಿ ಅವರು ನಿಮಗೆ ಸಹಾಯ ಮಾಡುತ್ತಾರೆಯೇ? ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ ಮಾಡಿದ್ದಾರೆ.

ಇದನ್ನು ಓದಿ:  12 ಬಂಡಾಯ ಅಭ್ಯರ್ಥಿಗಳನ್ನು ಪಕ್ಷದಿಂದ ಹೊರಹಾಕಿದ ಬಿಜೆಪಿ

ಖರ್ಗೆ ಅವರ ಮಾತಿಗೆ ಬಿಜೆಪಿಯ ಅಮಿತ್ ಮಾಳವಿಯಾ ಅವರು ತಿರುಗೇಟು ನೀಡಿದ್ದಾರೆ. ಗುಜರಾತ್ ಚುನಾವಣೆಯ ಬಿಸಿ ತಾಳಲಾರದೆ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಮ್ಮ ಮಾತಿನ ಮೇಲೆ ಹಿಡಿತ ಕಳೆದುಕೊಂಡಿದ್ದಾರೆ, ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾವಣ ಎಂದು ಕರೆದಿದ್ದಾರೆ. “ಮೌತ್ ಕಾ ಸೌದಾಗರ್” ನಿಂದ “ರಾವಣ” ವರೆಗೆ ಕಾಂಗ್ರೆಸ್ ಗುಜರಾತ್ ಅನ್ನು ಅವಮಾನಿಸುತ್ತಲೇ ಇದೆ ಎಂದು ಹೇಳಿದ್ದಾರೆ.

2007 ರ ಗುಜರಾತ್ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಯವರ ವಿವಾದಾತ್ಮಕ “ಮೌತ್ ಕಾ ಸೌದಾಗರ್ (ಸಾವಿನ ವ್ಯಾಪಾರಿ)” ಹೇಳಿಕೆಯನ್ನು ಬಿಜೆಪಿ ತನ್ನ ಟ್ವೀಟ್​​ನಲ್ಲಿ ಉಲ್ಲೇಖಿಸಿದೆ, 2002 ರ ಗಲಭೆಗಳ ಕುರಿತು ಪ್ರಧಾನಿ ಮೋದಿಯನ್ನು ಗುರಿಯಾಗಿಸಿ ಎಂದು ಬಿಜೆಪಿ ಹೇಳಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!