Gujarat Elections: ಬಿಜೆಪಿಗೆ ಪ್ರಚಂಡ ಗೆಲುವು ತಂದುಕೊಟ್ಟ ಗುಜರಾತ್ ಜನರಿಗೆ ನಮೋ ನಮಃ ಎಂದ ಪ್ರಧಾನಿ ನರೇಂದ್ರ ಮೋದಿ

ದಾಖಲೆಯ ಗೆಲುವಿನ ನಂತರ ಗುಜರಾತ್​ನ ಅಹಮದಾಬಾದ್‌​ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ರೋಡ್ ಶೋ ನಡೆಸಿದರು. ಈ ವೇಳೆ ರಸ್ತೆಗಳಲ್ಲಿ ಜನರು ಕಿಕ್ಕಿರಿದು ಸೇರಿ ಸ್ವಾಗತಿಸಿದರು.

Gujarat Elections: ಬಿಜೆಪಿಗೆ ಪ್ರಚಂಡ ಗೆಲುವು ತಂದುಕೊಟ್ಟ ಗುಜರಾತ್ ಜನರಿಗೆ ನಮೋ ನಮಃ ಎಂದ ಪ್ರಧಾನಿ ನರೇಂದ್ರ ಮೋದಿ
ಅಹಮದಾಬಾದ್​ನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್​ಶೋ
Follow us
| Updated By: Rakesh Nayak Manchi

Updated on: Dec 12, 2022 | 8:22 AM

ಅಹಮದಾಬಾದ್: ಸತತ ಎರಡನೇ ಬಾರಿಗೆ ಗುಜರಾತ್ ಮುಖ್ಯಮಂತ್ರಿ (Gujarat CM)ಯಾಗಿ ಸೋಮವಾರ (ಡಿ.12) ಪ್ರಮಾಣ ವಚನ ಸ್ವೀಕರಿಸಲಿರುವ ಭೂಪೇಂದ್ರ ಪಟೇಲ್ (Bhupendra Patel) ಅವರ ಪ್ರಮಾಣವಚನ ಸಮಾರಂಭದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ (Narendra Modi) ಅಹಮದಾಬಾದ್‌ಗೆ ಬಂದಿಳಿದರು. ಈ ವೇಳೆ 1960 ರಲ್ಲಿ ರಾಜ್ಯ ರಚನೆಯಾದ ನಂತರ ಯಾವುದೇ ಪಕ್ಷವು ಗಳಿಸದ ಅತ್ಯಧಿಕ ಸ್ಥಾನಗಳನ್ನು ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಗೆದ್ದುಕೊಂಡ (182 ಸ್ಥಾನಗಳಲ್ಲಿ 156 ಸ್ಥಾನಗಳನ್ನು ಗೆದ್ದುಕೊಂಡಿದೆ) ಹಿನ್ನಲೆ ಪ್ರಧಾನಿಯವರು ರೋಡ್​ ಶೋ (Ahmedabad Road Show) ನಡೆಸಿದರು. ತಡರಾತ್ರಿ ನಡೆದ ಈ ರೋಡ್ ಶೋ ವೇಳೆ ತಮ್ಮ ಪಕ್ಷಕ್ಕೆ ದಾಖಲೆಯ ಗೆಲುವು ತಂದುಕೊಟ್ಟ ಹಾಗೂ ರಸ್ತೆಯುದ್ದಕ್ಕೂ ನಿಂತಿದ್ದ ಜನರತ್ತ ಕೈಬೀಸಿದ ಮೋದಿಯವರು ಧನ್ಯವಾದಗಳನ್ನು ಅರ್ಪಿಸಿದರು.

“ಜನರ ಅತ್ಯಂತ ಆತ್ಮೀಯ ಸ್ವಾಗತದೊಂದಿಗೆ ಅಹಮದಾಬಾದ್‌ಗೆ ಬಂದಿಳಿದಿದೆ. ನಾಳೆ, ಹೊಸ ಗುಜರಾತ್ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದೇನೆ” ಎಂದು ಪ್ರಧಾನಿ ಮೋದಿ ಭಾನುವಾರ ರೋಡ್‌ಶೋ ಚಿತ್ರಗಳೊಂದಿಗೆ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಗುಜರಾತ್ ಬಿಜೆಪಿ ದಾಖಲೆಯ ಗೆಲುವು: ವಿಮರ್ಶೆ, ವಿರೋಧ ಎಲ್ಲವನ್ನೂ ಮೀರಿ ನಿಂತಿದೆ ಮೋದಿ ಸಾಧನೆ ಎಂದ ವಿದೇಶಿ ಮಾಧ್ಯಮಗಳು

ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಶುಕ್ರವಾರ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರಿಗೆ ರಾಜೀನಾಮೆ ಸಲ್ಲಿಸಿದರು. ರಾಜ್ಯ ಬಿಜೆಪಿ ಅಧ್ಯಕ್ಷ ಸಿಆರ್ ಪಾಟೀಲ್, ಗೃಹ ಸಚಿವ ಹರ್ಷ ಸಂಘವಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಋಷಿಕೇಶ್ ಪಟೇಲ್ ಮತ್ತು ಗುಜರಾತ್‌ನ ಮುಖ್ಯ ಸಚೇತಕ ಪಂಕಜ್ ದೇಸಾಯಿ ಅವರೊಂದಿಗೆ ಶುಕ್ರವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ರಾಜಭವನಕ್ಕೆ ಆಗಮಿಸಿ ಸರ್ಕಾರಕ್ಕೆ ರಾಜೀನಾಮೆ ಸಲ್ಲಿಸಿದ್ದು, ರಾಜ್ಯಪಾಲರಿಂದ ಅಂಗೀಕರಿಸಲ್ಪಟ್ಟಿದೆ.

ಇದೀಗ ಎರಡನೇ ಬಾರಿ ಭೂಪೇಂದ್ರ ಪಟೇಲ್ ಅವರು 20 ಕ್ಯಾಬಿನೆಟ್ ಸಚಿವರೊಂದಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಮಾರಂಭದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ನೇತೃತ್ವದ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸುವ ಸಾಧ್ಯತೆಯಿದೆ. ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗುವ ನಿಟ್ಟಿನಲ್ಲಿ ನಿಗದಿಯಾಗಿದ್ದ ಕಾರ್ಯಕ್ರಮಗಳನ್ನು ಒಂದು ದಿನದ ಮಟ್ಟಿಗೆ ಮುಂದೂಡಿದ್ದಾರೆ.

ಬಿಜೆಪಿ ತನ್ನ ಶಾಸಕಾಂಗ ಪಕ್ಷದ ಸಭೆಯನ್ನು ಶನಿವಾರ ಬೆಳಿಗ್ಗೆ 10:30 ಕ್ಕೆ ಗಾಂಧಿನಗರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಕಮಲಮ್​ನಲ್ಲಿ ನಡೆಸಿತು, ನಂತರ ನಾಯಕರು ಮಧ್ಯಾಹ್ನ 2 ಗಂಟೆಗೆ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು.

ಇದನ್ನೂ ಓದಿ: ಕರ್ನಾಟಕದಲ್ಲೂ ಗುಜರಾತ್ ಮಾದರಿ ಎಲೆಕ್ಷನ್: ಏನಿದು ಗುಜರಾತ್ ಮಾಡೆಲ್? ಹೇಗಿರುತ್ತೆ ಕಾರ್ಯ ತಂತ್ರ? ಇಲ್ಲಿದೆ ಮಾಹಿತಿ

182 ಸದಸ್ಯ ಬಲದ ಅಸೆಂಬ್ಲಿಯಲ್ಲಿ ಬಿಜೆಪಿ 156 ಸ್ಥಾನಗಳನ್ನು ಗೆದ್ದುಕೊಂಡಿದ್ದು, ರಾಜ್ಯದಲ್ಲಿ ಇದುವರೆಗಿನ ಅತ್ಯಧಿಕ ಮತದಾನವಾಗಿದೆ. ಪ್ರತಿಪಕ್ಷ ಕಾಂಗ್ರೆಸ್ 17 ಸ್ಥಾನಗಳನ್ನು ಮಾತ್ರ ನಿರ್ವಹಿಸಲಾಗಿದ್ದರೆ, ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ ಕೇವಲ 5 ಸ್ಥಾನಗಳಿಗೆ ತೃಪ್ತಿಪಡಬೇಕಾಯಿತು. ಮೂರು ಸ್ಥಾನಗಳು ಸ್ವತಂತ್ರ ಅಭ್ಯರ್ಥಿಗಳ ಪಾಲಾಗಿದ್ದು, ಸಮಾಜವಾದಿ ಪಕ್ಷ (ಎಸ್‌ಪಿ) ರಾಜ್ಯದಲ್ಲಿ ಏಕೈಕ ಸ್ಥಾನವನ್ನು ಗೆದ್ದಿದೆ.

1960 ರಲ್ಲಿ ಈ ರಾಜ್ಯ ಸ್ಥಾಪನೆಯಾದ ನಂತರ ಗುಜರಾತ್‌ನಲ್ಲಿ ಬಿಜೆಪಿಯ ಸತತ ಏಳನೇ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ತವರು ರಾಜ್ಯದಲ್ಲಿ ಬಿಜೆಪಿ ಚುನಾವಣಾ ಸಾಧನೆಯ ಹಿಂದಿನ ಎಲ್ಲಾ ದಾಖಲೆಗಳನ್ನು ಒಡೆದು ಹಾಕಿದೆ. ಕಳೆದ 2017 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 99 ಸ್ಥಾನಗಳನ್ನು ಗೆದ್ದುಕೊಂಡಿತು, ಕಾಂಗ್ರೆಸ್ 77 ಮತ್ತು ಎನ್‌ಸಿಪಿ, ಬಿಟಿಪಿ ಮತ್ತು ಸ್ವತಂತ್ರ ಅಭ್ಯರ್ಥಿಗಳು ಕ್ರಮವಾಗಿ 1, 2 ಮತ್ತು 3 ಸ್ಥಾನಗಳನ್ನು ಗಳಿಸಿದ್ದರು.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ