AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ ಪ್ರೇರಣೆ: ಕೆ ಸುಧಾಕರ್​ ಆರೋಪಕ್ಕೆ H​ ವಿಶ್ವನಾಥ್​​ ತಿರುಗೇಟು

ಸಿದ್ದರಾಮಯ್ಯ ನಮ್ಮನ್ನು ಬಿಜೆಪಿಗೆ ಕಳುಹಿಸಿರಲಿಲ್ಲ. ಬಾಂಬೆ ಟೀಂ ಕ್ಯಾಪ್ಟನ್ ಆಗಿದ್ದೆ, ಏನಾಗಿದೆ ಅನ್ನೋದು ಗೊತ್ತು. ಈಗ ಯಾಕೆ ಡಾ ಕೆ.ಸುಧಾಕರ್​​ ಮಾತನಾಡುತ್ತಿದ್ದಾರೆ ಗೊತ್ತಿಲ್ಲ ಎಂದು H​. ವಿಶ್ವನಾಥ್​ ಹೇಳಿದರು.

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ ಪ್ರೇರಣೆ: ಕೆ ಸುಧಾಕರ್​ ಆರೋಪಕ್ಕೆ H​ ವಿಶ್ವನಾಥ್​​ ತಿರುಗೇಟು
ಕೆ. ಸುಧಾಕರ್, H​.ವಿಶ್ವನಾಥ್
ಗಂಗಾಧರ​ ಬ. ಸಾಬೋಜಿ
|

Updated on: May 19, 2023 | 10:31 AM

Share

ಬೆಂಗಳೂರು: ಸಿದ್ದರಾಮಯ್ಯ ನಮ್ಮನ್ನು ಬಿಜೆಪಿಗೆ ಕಳುಹಿಸಿರಲಿಲ್ಲ. ಬಾಂಬೆ ಟೀಂ ಕ್ಯಾಪ್ಟನ್ ಆಗಿದ್ದೆ, ಏನಾಗಿದೆ ಅನ್ನೋದು ಗೊತ್ತು. ಈಗ ಯಾಕೆ ಡಾ ಕೆ.ಸುಧಾಕರ್ (K Sudhakar)​​ ಮಾತನಾಡುತ್ತಿದ್ದಾರೆ ಗೊತ್ತಿಲ್ಲ ಎಂದು H​. ವಿಶ್ವನಾಥ್​ ಹೇಳಿದರು. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಪತನಕ್ಕೆ ಸಿದ್ದರಾಮಯ್ಯ ಪ್ರೇರಣೆ ಎಂಬ ಮಾಜಿ ಸಚಿವ ಸುಧಾಕರ್​ ಆರೋಪಕ್ಕೆ ಅವರು​​ ತಿರುಗೇಟು ನೀಡಿದರು. ನಾನು ಬಿಜೆಪಿ, ಕಾಂಗ್ರೆಸ್ ಅಂತಲ್ಲ ಜನರ ಮಧ್ಯೆ ಇರೋನು. ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ ಒಗ್ಗಟ್ಟಿನಿಂದ ಸರ್ಕಾರ ಮುನ್ನಡೆಸುತ್ತಾರೆ. ನಾನು ಕೂಡ ಈ ಸರ್ಕಾರಕ್ಕೆ ಸಲಹೆ ನೀಡುತ್ತೇನೆ. ​ಬಿಜೆಪಿ ಮಾಡಿದ ತಪ್ಪುಗಳಿಂದ ಅಧಿಕಾರ ಕಳೆದುಕೊಂಡಿತು ಎಂದು ಹೇಳಿದರು.

ಸುಧಾಕರ್ ಆರೋಪ ಸತ್ಯಕ್ಕೆ ದೂರವಾದದ್ದು. ಚುನಾವಣೆ ಸಂದರ್ಭದಲ್ಲಿ ಹೇಳಿದ್ದರೆ ಗೌರವ ಇರುತ್ತಿತ್ತು. ಈಗ ಏನೋ ಸತ್ಯ ಹೇಳುತ್ತಿದ್ದೇನೆ ಅಂತಾ ಪೋಸು ಕೊಡ್ತಿದ್ದಾರೆ. ಸೋತು ಸುಣ್ಣ ಆದ ಮೇಲೆ ಈ ರೀತಿ ಹೇಳುತ್ತಿರುವುದು ನಗೆ ಪಾಟಲು. ಮಾಜಿ ಸಚಿವ ಸುಧಾಕರ್​ ಜೊತೆ ಬಿಜೆಪಿ ಸರ್ವನಾಶದತ್ತ ಬಂದಿದೆ. ಡಾ.ಕೆ.ಸುಧಾಕರ್​​ರನ್ನು ದುಡ್ಡು ಇಲ್ಲದ ಯುವಕ ಸೋಲಿಸಿದ್ದಾನೆ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಮೈತ್ರಿ ಸರ್ಕಾರ ಪತನವನ್ನು ಸಿದ್ದರಾಮಯ್ಯ ಹಣೆಗೆ ಕಟ್ಟಿದ ಸುಧಾಕರ್​ಗೆ ಕುಕ್ಕಿದ ಹಳ್ಳಿಹಕ್ಕಿ

ಸುಧಾಕರ್ ಆರೋಪವೇನು?

JDS-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ನಮ್ಮ ಸಮಸ್ಯೆ ಬಗ್ಗೆ, ನಮಗೆ ಆಗುತ್ತಿದ್ದ ಅನ್ಯಾಯಗಳ ಬಗ್ಗೆ ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಸಿದ್ದರಾಮಯ್ಯ ಬಳಿ ಪ್ರಸ್ತಾಪ ಮಾಡುತ್ತಿದ್ದೆವು. ಸಿದ್ದರಾಮಯ್ಯ ಆಗ ಈ ಸರ್ಕಾರದಲ್ಲಿ ನನ್ನ ಮಾತು ನಡೆಯುತ್ತಿಲ್ಲ. ನನ್ನ ಕ್ಷೇತ್ರ, ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು. 2019ರ ಲೋಕಸಭಾ ಚುನಾವಣೆವರೆಗೂ ಸಹಿಸಿಕೊಳ್ಳಿ. ಲೋಕಸಭಾ ಚುನಾವಣೆ ಮುಗಿದ ಬಳಿಕ ಮೈತ್ರಿ ಸರ್ಕಾರ ಇರಲ್ಲ.

ಇದನ್ನೂ ಓದಿ: ಸಿಇಟಿ ಪರೀಕ್ಷೆ ದಿನವೇ ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ಪ್ರಮಾಣ ವಚನ: ವಿದ್ಯಾರ್ಥಿಗಳಿಗೆ ಟ್ರಾಫಿಕ್‌ ಸಮಸ್ಯೆ ಭೀತಿ

ಹೆಚ್​ಡಿ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಇರಲು ಬಿಡಲ್ಲ ಎಂದು ಹೇಳ್ತಿದ್ದರು. ಸಿದ್ದರಾಮಯ್ಯ ಶಾಸಕರಿಗೆ ಸಮಾಧಾನ ಹೇಳಿ ಕಳುಹಿಸುತ್ತಿದ್ದರು. ಕಾರ್ಯಕರ್ತರು, ಮುಖಂಡರನ್ನು ಉಳಿಸಿಕೊಳ್ಳಲು ರಿಸ್ಕ್ ತೆಗೆದುಕೊಂಡ್ವಿ. ರಾಜೀನಾಮೆ ನೀಡಿ ಮತ್ತೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು. ನಮ್ಮ ಈ ನಡೆಯಲ್ಲಿ ಸಿದ್ದರಾಮಯ್ಯ ಪ್ರೇರಣೆ ಇದೆ. ಇದನ್ನು ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇಲ್ಲ ಎನ್ನಲು ಸಾಧ್ಯವೇ? ಎಂದು ಟ್ವೀಟ್​ ಮೂಲಕ ಸಿದ್ದರಾಮಯ್ಯ ವಿರುದ್ಧ ಡಾ.ಸುಧಾಕರ್​ ಆರೋಪ ಮಾಡಿದ್ದರು.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘ನಮಗೆ ಮೋಸ ಆಗಿದ್ದು ನಿಜ’; ಪುಷ್ಪಾ ಬಗ್ಗೆ ಕಲಾವಿದೆ ಸ್ವರ್ಣ ಬೇಸರ
‘ನಮಗೆ ಮೋಸ ಆಗಿದ್ದು ನಿಜ’; ಪುಷ್ಪಾ ಬಗ್ಗೆ ಕಲಾವಿದೆ ಸ್ವರ್ಣ ಬೇಸರ
‘ಇದು ಕದಂಬರ ಬಗೆಗಿನ ಕಥೆ ಅಲ್ಲ’; ಸ್ಟೋರಿ ಬಗ್ಗೆ ರಿಷಬ್ ಸ್ಪಷ್ಟನೆ
‘ಇದು ಕದಂಬರ ಬಗೆಗಿನ ಕಥೆ ಅಲ್ಲ’; ಸ್ಟೋರಿ ಬಗ್ಗೆ ರಿಷಬ್ ಸ್ಪಷ್ಟನೆ
ರಾಜಸ್ಥಾನದಲ್ಲಿ ಸಿಬ್ಬಂದಿಯನ್ನು ಒತ್ತೆಯಾಳಾಗಿರಿಸಿ ಪೆಟ್ರೋಲ್ ಬಂಕ್ ಲೂಟಿ
ರಾಜಸ್ಥಾನದಲ್ಲಿ ಸಿಬ್ಬಂದಿಯನ್ನು ಒತ್ತೆಯಾಳಾಗಿರಿಸಿ ಪೆಟ್ರೋಲ್ ಬಂಕ್ ಲೂಟಿ
ವಿದ್ಯುತ್ ಕಂಬ ಏರಿ ತಂತಿ ಹಿಡಿದು ನೇತಾಡಿದ ಮಕ್ಕಳು
ವಿದ್ಯುತ್ ಕಂಬ ಏರಿ ತಂತಿ ಹಿಡಿದು ನೇತಾಡಿದ ಮಕ್ಕಳು
ದಸರಾ ದೀಪಾಲಂಕಾರ: ಲೈಟಿಂಗ್ಸ್​ನಿಂದ ಝಗಮಗಿಸುತ್ತಿರುವ ಮೈಸೂರು ರಸ್ತೆಗಳ ನೋಡಿ
ದಸರಾ ದೀಪಾಲಂಕಾರ: ಲೈಟಿಂಗ್ಸ್​ನಿಂದ ಝಗಮಗಿಸುತ್ತಿರುವ ಮೈಸೂರು ರಸ್ತೆಗಳ ನೋಡಿ
ಇಂದೋರ್​​ನಲ್ಲಿ ಭಾರಿ ಮಳೆಗೆ ಕಟ್ಟಡ ಕುಸಿತ, ಇಬ್ಬರು ಸಾವು
ಇಂದೋರ್​​ನಲ್ಲಿ ಭಾರಿ ಮಳೆಗೆ ಕಟ್ಟಡ ಕುಸಿತ, ಇಬ್ಬರು ಸಾವು
ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ
‘ಕಾಂತಾರ: ಚಾಪ್ಟರ್ 1’ ಸುದ್ದಿಗೋಷ್ಠಿಯಲ್ಲಿ ಕ್ಷಮೆ ಕೇಳಿದ ಪ್ರಗತಿ ಶೆಟ್ಟಿ