ಉಪಚುನಾವಣೆ: ಹಾನಗಲ್ ಹಾಗೂ ಸಿಂದಗಿ ಕ್ಷೇತ್ರಗಳ ಮತದಾರರ ಅಂಕಿ-ಅಂಶ; ಸಂಪೂರ್ಣ ವಿವರ ಇಲ್ಲಿದೆ

Karnataka Byelections: ಚುನಾವಣೆ ನಡೆಯಲಿರುವ ಹಾವೇರಿ ಜಿಲ್ಲೆಯ ಹಾನಗಲ್, ವಿಜಯಪುರ ಜಿಲ್ಲೆಯ ಸಿಂದಗಿ, ಎರಡು ವಿಧಾನಸಭಾ ಕ್ಷೇತ್ರಗಳ ಮತದಾರರ, ಜಾತಿವಾರು ಲೆಕ್ಕಾಚಾರ ಹಾಗೂ ಇತರ ಅಂಕಿ ಅಂಶಗಳನ್ನು ಇಲ್ಲಿ ನೀಡಲಾಗಿದೆ.

ಉಪಚುನಾವಣೆ: ಹಾನಗಲ್ ಹಾಗೂ ಸಿಂದಗಿ ಕ್ಷೇತ್ರಗಳ ಮತದಾರರ ಅಂಕಿ-ಅಂಶ; ಸಂಪೂರ್ಣ ವಿವರ ಇಲ್ಲಿದೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Oct 29, 2021 | 10:46 PM

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 30 ರಂದು ಉಪಚುನಾವಣೆ ನಡೆಯಲಿದೆ. ಬೆಳಿಗ್ಗೆ 7ರಿಂದ ಸಂಜೆ 7ರವರೆಗೆ ಮತದಾನ ನಡೆಯಲಿದ್ದು, ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಾಗಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಹಾನಗಲ್ ಹಾಗೂ ಸಿಂದಗಿ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಮೂರು ಪಕ್ಷಗಳು ಗೆಲ್ಲುವ ಪಣತೊಟ್ಟು ಭರ್ಜರಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಳಿನ್ ಕುಮಾರ್ ಕಟೀಲ್, ಪ್ರಲ್ಹಾದ್ ಜೋಶಿ ಸೇರಿದಂತೆ ಅನೇಕ ಬಿಜೆಪಿ ನಾಯಕರು ಪ್ರಚಾರ ಕಣದಲ್ಲಿ ಪಾಲ್ಗೊಂಡಿದ್ದಾರೆ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಪರವಾಗಿ ಹಾಗೂ ಜೆಡಿಎಸ್ ಪರವಾಗಿ ಹೆಚ್​.ಡಿ. ಕುಮಾರಸ್ವಾಮಿ, ಹೆಚ್.ಡಿ. ದೇವೇಗೌಡ ಪ್ರಚಾರ ಮಾಡಿದ್ದಾರೆ.

ಚುನಾವಣೆ ನಡೆಯಲಿರುವ ಹಾವೇರಿ ಜಿಲ್ಲೆಯ ಹಾನಗಲ್, ವಿಜಯಪುರ ಜಿಲ್ಲೆಯ ಸಿಂದಗಿ, ಎರಡು ವಿಧಾನಸಭಾ ಕ್ಷೇತ್ರಗಳ ಮತದಾರರ, ಜಾತಿವಾರು ಲೆಕ್ಕಾಚಾರ ಹಾಗೂ ಇತರ ಅಂಕಿ ಅಂಶಗಳನ್ನು ಇಲ್ಲಿ ನೀಡಲಾಗಿದೆ.

ಹಾವೇರಿ ಜಿಲ್ಲೆ ಹಾನಗಲ್ ವಿಧಾನಸಭಾ ಕ್ಷೇತ್ರದ ಮತದಾರರ ವಿವರ ಮತ್ತು ಜಾತಿವಾರು ಲೆಕ್ಕಾಚಾರ: ಪುರುಷ ಮತದಾರರು: 105405 ಮಹಿಳಾ ಮತದಾರರು: 98798 ಇತರೆ ಮತದಾರರು: 03 ಸೇವಾ ಮತದಾರರು: 83 ಒಟ್ಟು ಮತದಾರರು: 204289

ಜಾತಿವಾರು ಲೆಕ್ಕಾಚಾರ ಲಿಂಗಾಯತ: 76000 ಮುಸ್ಲಿಂ: 34000 ಗಂಗಾಮತ: 28000 ಪರಿಶಿಷ್ಟ ಜಾತಿ: 25000 ಪರಿಶಿಷ್ಟ ಪಂಗಡ: 17000 ಕುರುಬ: 8000 ಮರಾಠಾ: 6000 ಒಬಿಸಿ: 10000 ಜೈನ್: 2000

ಸಿಂದಗಿ ಉಪಚುನಾವಣೆ ಸಮರ, ಕ್ಷೇತ್ರದ ಮತದಾರರ ವಿವರ ಮತ್ತು ಜಾತಿವಾರು ಲೆಕ್ಕಾಚಾರ: ಒಟ್ಟು ಮತದಾರರು: 2,34,309 ಪುರುಷ ಮತದಾರರು: 1,20,949 ಮಹಿಳಾ ಮತದಾರರು: 1,13,327 ಇತರೆ ಮತದಾರರು: 33

ಕ್ಷೇತ್ರದಲ್ಲಿ ಜಾತಿವಾರು ಮಾಹಿತಿ ಕುರುಬ ಸಮಾಜ: 37,000 ಗಾಣಿಗ: 31,000 ಪಂಚಮಸಾಲಿ: 22,000 ಮುಸ್ಲಿಂ: 38,000 ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ: 55,000 ಕೋಳಿ ಕಬ್ಬಲಿಗ: 21,000 ಬಣಜಿಗ: 11,500 ಆದಿ ಬಣಜಿಗ: 4,000 ಜಂಗಮ: 6,500 ಕುಡಒಕ್ಕಲಿಗ: 3,500 ರೆಡ್ಡಿ: 3,500

ಉಪ ಚುನಾವಣೆಗೆ ಮೂರು ಪಕ್ಷದ ಅಭ್ಯರ್ಥಿಗಳ ಹೆಸರು ಅಂತಿಮವಾಗಿದೆ. ಬಿಜೆಪಿ, ಕಾಂಗ್ರೆಸ, ಜೆಡಿಎಸ್ ಪಕ್ಷದ ಅಭ್ಯರ್ಥಿಗಳ ವಿವರ ಹೀಗಿದೆ. ಬಿಜೆಪಿ ಹಾನಗಲ್ ಉಪಚುನಾವಣೆ ಅಭ್ಯರ್ಥಿ- ಶಿವರಾಜ್ ಸಜ್ಜನರ ಸಿಂಧಗಿ ಉಪಚುನಾವಣೆ ಅಭ್ಯರ್ಥಿ- ರಮೇಶ್ ಭೂಸನೂರು

ಕಾಂಗ್ರೆಸ್ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಅಭ್ಯರ್ಥಿ- ಶ್ರೀನಿವಾಸ್ ಮಾನೆ ಸಿಂದಗಿ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ- ಅಶೋಕ ಮನಗೂಳಿ

ಜೆಡಿಎಸ್ ಸಿಂಧಗಿ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ- ನಾಜಿಯಾ ಶಕೀಲಾ ಅಂಗಡಿ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಅಭ್ಯರ್ಥಿ- ನಿಯಾಜ್ ಶೇಖ್

ಇದನ್ನೂ ಓದಿ: Hangal Byelections: ಕಾಂಗ್ರೆಸ್ ಪಕ್ಷ, ಸಿದ್ದರಾಮಯ್ಯ ವಿರುದ್ಧ ಬಸವರಾಜ ಬೊಮ್ಮಾಯಿ ವಾಗ್ದಾಳಿ; ಹಾನಗಲ್​ನಲ್ಲಿ ಭರ್ಜರಿ ಪ್ರಚಾರ

ಇದನ್ನೂ ಓದಿ: ಹಾನಗಲ್, ಸಿಂದಗಿ ಉಪಚುನಾವಣೆ ನೆರಳಲ್ಲಿ ಸಿದ್ದರಾಮಯ್ಯ vs ಬಿಜೆಪಿ ಟ್ವೀಟ್ ವಾರ್

Published On - 4:14 pm, Wed, 27 October 21

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು