ಸಿಎಂ ಆದ ಕೂಡಲೆ ದೇವೇಗೌಡರ ಭೇಟಿಯ ಅಗತ್ಯವೇನಿತ್ತು?; ಬೊಮ್ಮಾಯಿ ವಿರುದ್ಧ ಪ್ರೀತಮ್ ಗೌಡ ಅಸಮಾಧಾನ ಸ್ಫೋಟ

BJP MLA Preetham Gowda: ನಾವು ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ವಿರೋಧಿಯಾಗಿ ರಾಜಕಾರಣ ಮಾಡುತ್ತಿದ್ದೇವೆ. ಈ ಭಾಗಕ್ಕೆ ಸಚಿವ ಸ್ಥಾನ ಕೊಡದಿದ್ದರೂ ಪರವಾಗಿಲ್ಲ, ಕನಿಷ್ಠ ಇಲ್ಲಿನ ಬಿಜೆಪಿ ಕಾರ್ಯಕರ್ತರಿಗೆ ಮಾನಸಿಕ ಸ್ಥೈರ್ಯ ತುಂಬೋ ‌ಕೆಲಸ ಮಾಡಬೇಕು ಎಂದು ಹಾಸನದ ಬಿಜೆಪಿ ಶಾಸಕ ಪ್ರೀತಮ್ ಗೌಡ ಕಿಡಿ ಕಾರಿದ್ದಾರೆ.

ಸಿಎಂ ಆದ ಕೂಡಲೆ ದೇವೇಗೌಡರ ಭೇಟಿಯ ಅಗತ್ಯವೇನಿತ್ತು?; ಬೊಮ್ಮಾಯಿ ವಿರುದ್ಧ ಪ್ರೀತಮ್ ಗೌಡ ಅಸಮಾಧಾನ ಸ್ಫೋಟ
ದೇವೇಗೌಡರ ಮನೆಗೆ ಭೇಟಿ ನೀಡಿದ್ದ ಸಿಎಂ ಬಸವರಾಜ ಬೊಮ್ಮಾಯಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Aug 07, 2021 | 12:59 PM

ಹಾಸನ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಹಾಸನ ಬಿಜೆಪಿ ಶಾಸಕ ಪ್ರೀತಮ್ ಗೌಡರಿಗೆ (Preetham Gowda)  ಈ ಬಾರಿ ಬಸವರಾಜ ಬೊಮ್ಮಾಯಿಯವರ ಸಂಪುಟದಲ್ಲಿ ಸಚಿವ ಸ್ಥಾನ ಸಿಗಲಿದೆ ಎನ್ನಲಾಗಿತ್ತು. ಆದರೆ, ನೂತನ ಸಚಿವರ ಪಟ್ಟಿಯಲ್ಲಿ ಅವರ ಹೆಸರಿರಲಿಲ್ಲ. ದೇವೇಗೌಡರ (HD Deve Gowda) ತವರು ಕ್ಷೇತ್ರವಾದ ಹಾಸನದಲ್ಲಿ ಜೆಡಿಎಸ್ (JDS) ಅಲೆ ಜೋರಾಗಿಯೇ ಇದೆ ಎಂಬುದನ್ನು ಪ್ರತ್ಯೇಕವಾಗಿ ಏನೂ ಹೇಳಬೇಕಾಗಿಲ್ಲ. ಹಾಸನದಲ್ಲಿ ಜೆಡಿಎಸ್ ಹಾಗೂ ದೇವೇಗೌಡರ ಕುಟುಂಬದ ವಿರುದ್ಧ ಟೊಂಕ ಕಟ್ಟಿ ನಿಂತಿರುವ ಬಿಜೆಪಿ ಶಾಸಕ ಪ್ರೀತಮ್ ಗೌಡ ಹಾಗೂ ಅವರ ಬೆಂಬಲಿಗರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿಎಂ ಆಗಿ ಅಧಿಕಾರ ಸ್ವೀಕರಿಸಿ 24 ಗಂಟೆಯೊಳಗೆ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ಹೋಗಿ ಅವರ ಆಶೀರ್ವಾದ ಪಡೆದಿರುವುದು ಭಾರೀ ಅಸಮಾಧಾನ ತರಿಸಿದೆ. ಈ ವಿಷಯವಾಗಿ ಹಾಸನದ ಬಿಜೆಪಿ ಶಾಸಕ ಪ್ರೀತಮ್ ಗೌಡ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ.

ನಾವು ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ವಿರೋಧಿಯಾಗಿ ರಾಜಕಾರಣ ಮಾಡುತ್ತಿದ್ದೇವೆ. ಈ ಭಾಗಕ್ಕೆ ಸಚಿವ ಸ್ಥಾನ ಕೊಡದಿದ್ದರೂ ಪರವಾಗಿಲ್ಲ, ಕನಿಷ್ಠ ಇಲ್ಲಿನ ಬಿಜೆಪಿ ಕಾರ್ಯಕರ್ತರಿಗೆ ಮಾನಸಿಕ ಸ್ಥೈರ್ಯ ತುಂಬೋ ‌ಕೆಲಸ ಮಾಡಬೇಕು. ನೀವು ಬೊಮ್ಮಾಯಿವರು ಆಗಿ 24 ಗಂಟೆ ಒಳಗೆ ದೇವೇಗೌಡರ ಮನೆಗೆ ಹೋಗೊ ಅವಶ್ಯಕತೆ ಏನಿತ್ತು? ಹೀಗೆಂದು ಕಾರ್ಯಕರ್ತರು ನನ್ನ ಪ್ರಶ್ನೆ ಮಾಡುತ್ತಿದ್ದಾರೆ. ಈ ಪ್ರಶ್ನೆಗೆ ಉತ್ತರ ಕಂಡುಕೊಳ್ಳಲು ನಾನು ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಾದ್ಯಕ್ಷರು ಹಾಗೂ ಸಂಘ ಪರಿವಾರದ ಜೊತೆಯೂ ಈ ವಿಚಾರವಾಗಿ ನಾನು ಚರ್ಚೆ ಮಾಡುತ್ತೇನೆ ಎಂದು ಹಾಸನದಲ್ಲಿ ಬಿಜೆಪಿ ಯುವ ಶಾಸಕ ಪ್ರೀತಮ್ ಗೌಡ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ.

ಮುಂದೆ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ಇದೆ. ಆ ಚುನಾವಣೆ ಕಾರ್ಯಕರ್ತರ ಚುನಾವಣೆಯೆಂಬುದು ಎಲ್ಲರಿಗೂ ಗೊತ್ತಿದೆ. ನಾವು ಜನತಾದಳದ ವಿರುದ್ಧವೇ ಚುನಾವಣೆ ಮಾಡಬೇಕು. ಅದನ್ನು ಮಾಡಬೇಕಾದರೆ ರಾಜಕೀಯದ ಹೇಳಿಕೆ ಕೊಡಬೇಕು. ಈಗಿನ ನಾಯಕರು ಆ ರೀತಿಯ ರಾಜಕೀಯ ಹೇಳಿಕೆಗಳನ್ನು ಕೊಡುತ್ತಾರೋ ಇಲ್ಲವೋ ಎಂಬ ಅನುಮಾನ ಕಾರ್ಯಕರ್ತರನ್ನು ಕಾಡುತ್ತಿದೆ. ನಾನು ಬಿಜೆಪಿ ಕಾರ್ಯಕರ್ತರ ನೋವಿಗೆ ಸ್ಪಂದಿಸೋ ಕೆಲಸ ಮಾಡುತ್ತೇನೆ. ಆದರೆ, ಯಾವುದೇ ಕಾರಣಕ್ಕೂ ನಮ್ಮ ಎದುರಾಳಿಯಾದ ಜೆಡಿಎಸ್ ಅವರೊಂದಿಗೆ ಅವರೊಟ್ಟಿಗೆ ಹೊಂದಾಣಿಕೆ ಮಾಡಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ನನಗನಿಸುತ್ತಿದೆ ಎಂದು ಪ್ರೀತಮ್ ಗೌಡ ಹೇಳಿದ್ದಾರೆ.

ನಾವು 125 ಜನ ಜನ ಬಿಜೆಪಿ ಶಾಸಕರು ಸಿಎಂ ಬೊಮ್ಮಾಯಿ ಅವರ ಬೆನ್ನಿಗಿದ್ದೇವೆ. ಹಾಗಾಗಿ ಯಾವುದೇ ಕಾರಣಕ್ಕೂ ಒಂದು ಅವಕಾಶ ಸಿಕ್ಕರೆ ಅಡ್ಜೆಸ್ಟ್​ಮೆಂಟ್ ಮಾಡಿಕೊಳ್ತೀವಿ ಎಂದು ಜೆಡಿಎಸ್​ನವರು ಕಾಯುತ್ತಿದ್ದಾರೆ. ಅವರಿಗೆ ಅದಕ್ಕೆ ಅವಕಾಶ ಸಿಗುವುದಿಲ್ಲ. ಈ ಬಗ್ಗೆ ನಾನು ಸಿಎಂ ಬಸವರಾಜ ಬೊಮ್ಮಾಯಿಯವರ ಜೊತೆಗೆ ಚರ್ಚೆ ಮಾಡುತ್ತೇನೆ ಎಂದು ಜೆಡಿಎಸ್ ವಿರುದ್ಧವೂ ಶಾಸಕ ಪ್ರೀತಮ್ ಗೌಡ ಹರಿಹಾಯ್ದಿದ್ದಾರೆ.

ನಿಮ್ಮ ಮನೆಗೆ ನುಗ್ಗಿ ಕಲ್ಲು ಹೊಡೆದವರ ಮನೆಗೆ ಸಂಪುಟ ರಚನೆ ಆಗುವ ಮೊದಲೇ ಮುಖ್ಯಮಂತ್ರಿಗಳು ಭೇಟಿ ನೀಡಿದರೆ ನಮ್ಮಂತಹ ಕಾರ್ಯಕರ್ತರನ್ನು ಯಾರು‌ ಉಳಿಸಿಕೊಳ್ಳುತ್ತಾರೆ? ಎಂದು ಹಾಸನದ ಬಿಜೆಪಿ ಕಾರ್ಯಕರ್ತರು ನನ್ನನ್ನು ಕೇಳುತ್ತಿದ್ದಾರೆ.‌ ಅವರಿಗೆ ನಾನು ಏನು ಉತ್ತರ ಕೊಡಲಿ? ಹಳೆ ಮೈಸೂರು ಭಾಗದ ಕಾರ್ಯಕರ್ತರು ಹಾಗೂ ಮುಖಂಡರು ಹೋರಾಟದ ಮೂಲಕ ಬಿಜೆಪಿ ಪಕ್ಷ ಹಾಗೂ ಸಂಘಟನೆ ಕಟ್ಟಿದ್ದೀರಿ. ಆ ಸಂಘಟನೆ ಮುಂದುವರೆಯುತ್ತದೆ. ಕಾರ್ಯಕರ್ತರು ಇದ್ದರೆ ಮಾತ್ರ ಪಕ್ಷ ಉಳಿಯುತ್ತದೆ. ಪಕ್ಷ ಇದ್ದರೆ ನನ್ನಂತವರು ಶಾಸಕರಾಗಬಹುದು, ಮುಖ್ಯಮಂತ್ರಿಯೂ ಆಗಬಹುದು. ಕಾರ್ಯಕರ್ತರೇ ಇಲ್ಲದೇ ಏನೂ ಆಗಲು ಸಾಧ್ಯವಿಲ್ಲ ಎಂದು ಹೇಳುತ್ತಿದ್ದೇನೆ ಎಂದು ಶಾಸಕ ಪ್ರೀತಮ್ ಗೌಡ ಹೇಳಿದ್ದಾರೆ.

ಇದನ್ನೂ ಓದಿ: ದೇವೇಗೌಡರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಸಿಎಂ ಬಸವರಾಜ ಬೊಮ್ಮಾಯಿ, ದೇವೇಗೌಡರಿಂದ ನೂತನ ಸಿಎಂಗೆ ಸನ್ಮಾನ

29 ಸಚಿವರಿಗೆ ಖಾತೆ ಹಂಚಿಕೆ; ಹಣಕಾಸು ಮತ್ತು ಬೆಂಗಳೂರು ಅಭಿವೃದ್ಧಿ ಖಾತೆ ತನ್ನಲ್ಲಿಯೇ ಉಳಿಸಿಕೊಂಡ ಸಿಎಂ ಬೊಮ್ಮಾಯಿ

(Hassan BJP MLA Preetham Gowda Lashes out at CM Basavaraj Bommai for visiting HD Deve Gowda’s House)

Published On - 12:54 pm, Sat, 7 August 21

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್