ಹಾಸನ: ಲೋಕಸಭಾ ಅಭ್ಯರ್ಥಿಗಳ ಪಟ್ಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಅಚ್ಚರಿಯ ಘೋಷಣೆ

CM Siddaramaiah: ಹಾಸನದಲ್ಲಿ ಕಾಂಗ್ರೆಸ್ ಗ್ಯಾರಂಟಿ ಸಮಾವೇಶದಲ್ಲಿ ಭಾಗವಹಿಸಲು ಬಂದಿರುವ ಸಿಎಂ ಸಿದ್ದರಾಮಯ್ಯ ಜಾತಿ ಗಣತಿ ವರದಿ, ವಿಧಾನಸೌಧ ಆವರಣದಲ್ಲಿ ಪಾಕಿಸ್ತಾನ ಬರ ಘೋಷಣೆ ಕೂಗಿರುವ ಆರೋಪ, ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಮಾತನಾಡಿದರು. ಆ ಕುರಿತ ವಿವರ ಇಲ್ಲಿದೆ.

ಹಾಸನ: ಲೋಕಸಭಾ ಅಭ್ಯರ್ಥಿಗಳ ಪಟ್ಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಅಚ್ಚರಿಯ ಘೋಷಣೆ
ಸಿದ್ದರಾಮಯ್ಯ
Follow us
TV9 Web
| Updated By: Ganapathi Sharma

Updated on: Mar 01, 2024 | 2:38 PM

ಹಾಸನ, ಮಾರ್ಚ್​ 1: ಲೋಕಸಭಾ ಚುನಾವಣೆಗೆ (Lok Sabha Elections) ಕಾಂಗ್ರೆಸ್ (Congress) ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ (Siddaramaiah) ಹಾಸನದಲ್ಲಿ ಮಾತನಾಡಿದ್ದಾರೆ. ಗ್ಯಾರಂಟಿ ಸಮಾವೇಶದಲ್ಲಿ ಭಾಗವಹಿಸಲು ಬಂದಿರುವ ಅವರು, ಹಾಸನ ಹೊರವಲಯದ ಬೂವನಹಳ್ಳಿ ಹೆಲಿಪ್ಯಾಡ್‌ನಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದರು. ಲೋಕಸಭೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಅಷ್ಟೊಂದು ಗೊಂದಲ ಇಲ್ಲ ಹಾಸನದಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದಾರೆ ಎಂದರು.

ಲೋಕಸಭಾ ಅಭ್ಯರ್ಥಿಗಳ ಪಟ್ಟಿ ತಕ್ಷಣ ಬಿಡುಗಡೆ ಮಾಡುತ್ತೇವೆ. ಅಭ್ಯರ್ಥಿ ಆಯ್ಕೆ ಮಾಡಲು ಸಮಸ್ಯೆ ಏನು ಇಲ್ಲ ಎಂದು ಅವರು ಹೇಳಿದರು.

ವಿದಾನಸಭೆ ಆವರಣದಲ್ಲಿ ಪಾಕ್ ಪರ ಘೋಷಣೆ ವಿಚಾರವಾಗಿ ಎಫ್​ಎಸ್​ಎಲ್ ವರದಿ ಬಹಿರಂಗ ಪಡಿಸುವಂತೆ ವಿಪಕ್ಷ ನಾಯಕರ ಒತ್ತಾಯದ ಬಗ್ಗೆ ಪ್ರತಿಕ್ರಿಯಿಸಿ, ವರದಿ ಬಂದ ಕೂಡಲೇ ಬಹಿರಂಗ ಮಾಡುತ್ತೇವೆ. ಯಾರೇ ಆದರೂ ಕೂಡ ಭಾರತದ ಪರ ಇಲ್ಲದಿರುವ, ಬೇರೆ ದೇಶದ ಮೇಲೆ ನಿಷ್ಠೆ ಇದ್ದರೆ ಅಂತಹವರ ಕಠಿಣವಾದ ಕ್ರಮ ಕೈಗೊಳ್ಳುತ್ತೇವೆ. ದೇಶ ಭಕ್ತಿಯನ್ನು ನಮಗೆ ಬಿಜೆಪಿಯವರು ಹೇಳಿ ಕೊಡಬೇಕಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ದೇಶ ಭಕ್ತಿ ಹೇಳಿ ಕೊಡಬೇಕಾ? ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟವರು ಯಾರು? ಅವರು ರಾಜಕೀಯಕ್ಕೋಸ್ಕರ ಏನೋ ಹೇಳ್ತಾರೆ, ಅದು ಬೇರೆ ವಿಚಾರ. ಅವರು ಏನಾದರೂ ಆ ತರ ಕೂಗಿದ್ರೆ ಕಠಿಣವಾದ ಕ್ರಮ ತೆಗೆದುಕೊಳ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.

ಜಾತಿ ಗಣತಿ ವರದಿ ಬಗ್ಗೆ ಏನಂದರು ಸಿದ್ದರಾಮಯ್ಯ?

ಹಿಂದುಳಿದ ವರ್ಗಗಳ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ನೇತೃತ್ವದ ಸಮಿತಿ ಜಾತಿಗಣತಿ ವರದಿ ಸಲ್ಲಿಸಿದೆ. ವರದಿಯಲ್ಲಿ ಏನಿದೆ ಎಂದು ಇನ್ನೂ ನೋಡಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ವರದಿಯನ್ನು ಜಯಪ್ರಕಾಶ್ ಹೆಗ್ಡೆ ನೇತೃತ್ವದ ಸಮಿತಿ ಗುರುವಾರ ಸಿಎಂಗೆ ಸಲ್ಲಿಸಿತ್ತು. ವರದಿಗೆ ಲಿಂಗಾಯತರು ಮತ್ತು ಒಕ್ಕಲಿಗರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ವರದಿಯನ್ನು ಸಿಎಂ ಸ್ವೀಕರಿಸಿದ ಬೆನ್ನಲ್ಲೇ ಕಾಂಗ್ರೆಸ್​ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಸರ್ಕಾರ ಹಾಗೂ ಸಿಎಂ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅನೇಕ ಸ್ವಾಮೀಜಿಗಳು ಸಹ ವರದಿಯನ್ನು ಅಂಗೀಕರಿಸಬಾರದು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿವೆ: ಶಿವಲಿಂಗೇ ಗೌಡ

ರಾಜ್ಯದ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿದೆ ಎನ್ನಲು ಈ ಸಮಾವೇಶವೇ ಸಾಕ್ಷಿ ಎಂದು ಗೃಹ ಮಂಡಳಿ ಅಧ್ಯಕ್ಷರೂ ಆಗಿರುವ, ಶಾಸಕ ಶಿವಲಿಂಗೇಗೌಡ ಹೇಳಿದ್ದಾರೆ. ಹಿಂದೆ ಮಾಜಿ ಪ್ರಧಾನಿ ದಿ. ಇಂದಿರಾ ಗಾಂಧಿ ಬರುತ್ತಾರೆ ಅಂದರೆ ಜನ ಭಾರೀ ಸಂಖ್ಯೆಯಲ್ಲಿ ಸೇರ್ತಾ ಇದ್ದರು. ಈಗ ಸಿದ್ದರಾಮಯ್ಯ ಅವರು ಹಾಗು ಡಿಕೆ ಶಿವಕುಮಾರ್ ಬರುತ್ತಾರೆ ಎಂದರೆ ಜನರು ಭಾರೀ ಸಂಖ್ಯೆಯಲ್ಲಿ ಸೇರ್ತಾರೆ. ಹಣಕಾಸು ವ್ಯವಸ್ಥೆಯಲ್ಲಿ ನಮ್ಮ ಸರ್ಕಾರ ಸುಭದ್ರವಾಗಿ ಇದೆ. ಗ್ಯಾರಂಟಿ ಯೋಜನೆಗೆ ಹಣ ಕೊಟ್ಟರೂ ಅಭಿವೃದ್ಧಿ ನಿಂತಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಇಡೀ ಸಚಿವ ಸಂಪುಟ ಪಾಕ್ ಪರ ಘೋಷಣೆ ಕೂಗಿದವರ ಪರವಿದೆ: ಕೋಟ ಶ್ರೀನಿವಾಸ್ ಪೂಜಾರಿ

ಗ್ಯಾರಂಟಿಗೆ ಹಣ ಕೊಟ್ಟರೆ ಅಭಿವೃದ್ಧಿಗೆ ಹಣ ದೊರೆಯುವುದಿಲ್ಲ ಎಂದು ತಿರುಚುವ ಕೆಲಸ ನಡೆಯುತ್ತಿದೆ. ಸಿದ್ದರಾಮಯ್ಯ ಅವರ ಬಜೆಟ್ ಮುಂದೆ ಜಾರಿಯಾದಾಗ ಅದರ ಗಟ್ಟಿತನ ಗೊತ್ತಾಗುತ್ತದೆ. ಜೋಡೆತ್ತುಗಳಾಗಿ ಇವರು ಕೆಲಸ ಮಾಡುವಾಗ ಸುಮ್ಮನೆ ದೂರುವ ಕೆಲಸ ಯಾರೂ ಮಾಡಬಾರದು ಎಂದು ಅವರು ಹೇಳಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ