ಬೆಂಗಳೂರು ನ.13: ಬಿವೈ ವಿಜಯೇಂದ್ರ (BY Vijayendra) ಅವರು ಬಿಜೆಪಿ (BJP) ರಾಜ್ಯಾಧ್ಯಕ್ಷರಾಗಿದ್ದಕ್ಕೆ ಸಂತೋಷವಾಗಿದೆ. ಒಂದೆಡೆ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ನೇಮಕವಾದರೇ, ಮತ್ತೊಂದೆಡೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇಮಕವಾಗಿದ್ದಾರೆ. ಇದರಿಂದ ಎರಡು ಪಕ್ಷಗಳಿಗೆ ಮತ್ತಷ್ಟು ಬಲ ಬಂದಿದೆ. ಲೋಕಸಭೆ ಚುನಾವಣೆ ಬಗ್ಗೆ ಹೆಚ್ಡಿ ದೇವೇಗೌಡರ ಜೊತೆ ವಿಜಯೇಂದ್ರ ಚರ್ಚೆ ಮಾಡಿದ್ದಾರೆ. ಹಾಸನದಲ್ಲಿ ಯಾರೇ ಅಭ್ಯರ್ಥಿಯಾದರೂ ನಾನು ಕೆಲಸ ಮಾಡುತ್ತೇನೆ. ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಜನರು ಅಸಮಾಧಾನಗೊಂಡಿದ್ದಾರೆ ಎಂದು ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಹೇಳಿದರು.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಲೋಕಸಭಾ ಚುನಾವಣೆ ಬಗ್ಗೆ ಹೆಚ್ಡಿ ದೇವೆಗೌಡ ಅವರ ಜೊತೆ ಬಿವೈ ವಿಜಯೇಂದ್ರ ಅಣ್ಣ ಮುಕ್ತವಾಗಿ ಚರ್ಚೆ ಮಾಡಿದ್ದಾರೆ. ಸಣ್ಣಪುಟ್ಟ ಗೊಂದಲ ಇತ್ತು ಅದನ್ನು ಬಗೆಹರಿಸಿಕೊಂಡು ಹೋರಾಟ ಮಾಡುವ ಬಗ್ಗೆ ಚರ್ಚೆ ಮಾಡಿದ್ದೇವೆ. ಕಳೆದ ಬಾರಿಗಿಂತ ಎರಡರಷ್ಟು ಒಡಾಟ ಮಾಡಿ ನಮ್ಮ ಅಭ್ಯರ್ಥಿ ಗೆಲ್ಲಿಸಿಕೊಂಡು ಬರುತ್ತೇವೆ. ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಜನ ಅಸಮಾಧಾನಗೊಂಡಿದ್ದಾರೆ. ಕಾಂಗ್ರೆಸ್ ಕರ್ನಾಟಕ ಮಾಡೆಲ್ ಲೋಕಸಭಾ ಚುನಾವಣೆ ಅಲ್ಲ ಯಾವ ಚುನಾವಣೆಯಲ್ಲಿ ವರ್ಕೌಟ್ ಆಗಲ್ಲ ಎಂದರು.
ಇದನ್ನೂ ಓದಿ: ಬಿವೈ ವಿಜಯೇಂದ್ರಗೆ ಬೆಂಗಾವಲು ವಾಹನ, ಭದ್ರತೆ ಒದಗಿಸಿದ ಸರ್ಕಾರ
ಇಂದು (ನ.14) ಬಿವೈ ವಿಜಯೇಂದ್ರ ಅವರು ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ, ಎಸ್ಎಂ ಕೃಷ್ಣ ಅವರನ್ನು ಭೇಟಿಯಾದರು. ಬಳಿಕ ಮಾಜಿ ಪ್ರಧಾನಿ ದೇವೇಗೌಡರ ಅವರನ್ನು ಭೇಟಿಯಾಗಿ ಸುಮಾರು 20 ನಿಮಿಷಗಳ ಕಾಲ ಚರ್ಚೆ ನಡೆಸಿದರು. ಈ ವೇಳೆ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಉಪಸ್ಥಿತರಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ