Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಚುನಾವಣೆಗೆ ಸಚಿವರು ಸ್ಪರ್ಧೆ: ಎಲ್ಲಾ ಗೊಂದಲಗಳಿಗೆ ತೆರೆ ಎಳೆದ ಹೆಚ್​ಸಿ ಮಹಾದೇವಪ್ಪ

ಮುಂದಿನ ಲೋಕಸಭಾ ಚುನಾವಣೆಗೆ ಕೆಲ ಸಚಿವರು ಸ್ಪರ್ಧೆ ಮಾಡುವ ಸಂದರ್ಭ ಬರಬಹುದು. ಹೀಗಾಗಿ ಎಲ್ಲದಕ್ಕೂ ಸಿದ್ಧರಾಗಿ ಎಂದು ಹೈಕಮಾಂಡ್​ ಸೂಚನೆ ನೀಡಿದೆ ಎನ್ನುವ ಸುದ್ದಿ ಹರಿದಾಡುತ್ತಿದ್ದು, ಇದೀಗ ಇದಕ್ಕೆ ಸಚಿವ ಮಹಾದೇವಪ್ಪ ಸ್ಪಷ್ಟನೆ ನೀಡಿದ್ದಾರೆ.

ಲೋಕಸಭಾ ಚುನಾವಣೆಗೆ ಸಚಿವರು ಸ್ಪರ್ಧೆ: ಎಲ್ಲಾ ಗೊಂದಲಗಳಿಗೆ ತೆರೆ ಎಳೆದ ಹೆಚ್​ಸಿ ಮಹಾದೇವಪ್ಪ
ಸಚಿವ ಹೆಚ್.ಸಿ.ಮಹದೇವಪ್ಪ
Follow us
ರಾಮ್​, ಮೈಸೂರು
| Updated By: ರಮೇಶ್ ಬಿ. ಜವಳಗೇರಾ

Updated on: Aug 07, 2023 | 3:12 PM

ಮೈಸೂರು, (ಆಗಸ್ಟ್ 07): ಮುಂದಿನ ಲೋಕಸಭಾ ಚುನಾವಣೆಗೆ (Loksabha Elections 2024) ರಾಜ್ಯ ಕಾಂಗ್ರೆಸ್ (Congress) ನಾಯಕರಿಗೆ ಹೈಕಮಾಂಡ್ ಕನಿಷ್ಠ 20 ಸ್ಥಾನಗಳನ್ನ ಗೆಲ್ಲಲು ಬಿಗ್ ಬಿಗ್ ಟಾಸ್ಕ್​ ಕೊಟ್ಟಿದೆ. ಹೈಕಮಾಂಡ್​, ರಾಜ್ಯ ನಾಯಕರನ್ನು ದೆಹಲಿಗೆ ಕರೆಸಿಕೊಂಡು ಈ ಬಗ್ಗೆ ಕೆಲ ಸಲಹೆ ಸೂಚನೆಗಳನ್ನು ನೀಡಿದೆ. ಅದರಲ್ಲೂ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕೆಲ ಸಚಿವರನ್ನು ಕಣಕ್ಕಿಳಿಸುವ ಬಗ್ಗೆಯೂ ಚರ್ಚೆಗಳು ನಡೆದಿವೆ ಎನ್ನಲಾಗಿದೆ. ಈ ಬಗ್ಗೆ ಕಾಂಗ್ರೆಸ್​ ವಲಯದಲ್ಲಿ ಸುದ್ದಿ  ಹರಿದಾಡುತ್ತಿವೆ. ಅದರಲ್ಲೂ ಮೈಸೂರು ಲೋಕಸಭಾ ಚುನಾವಣೆಗೆ ಸಚಿವ ಹೆಚ್​ಸಿ ಮಹಾದೇವಪ್ಪ ಸ್ಪರ್ಧೆ ಮಾಡುತ್ತಾರೆ ಎನ್ನುವ ಮಾತುಗಳು ಹೇಳಿಬಂದಿವೆ. ಇನ್ನು ಈ ಬಗ್ಗೆ ಸ್ವತಃ ಸಚಿವ ಮಹಾದೇವಪ್ಪ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಎಲ್ಲಾ ಅಂತೆ-ಕಂತೆಗಳಿಗೆ ತೆರೆ ಎಳೆದಿದ್ದಾರೆ.

ಇದನ್ನೂ ಓದಿ: ಲೋಕಸಭೆ ಚುನಾವಣೆ ಗೆಲ್ಲಲು ಕಾಂಗ್ರೆಸ್ ಬಿಗ್ ಪ್ಲ್ಯಾನ್, ಜಗದೀಶ್ ಶೆಟ್ಟರ್, ಲಕ್ಷ್ಮಣ ಸವದಿಗೆ ಮಹತ್ವದ ಹುದ್ದೆ?

ಮೈಸೂರಿನಲ್ಲಿ ಇಂದು (ಆಗಸ್ಟ್ 07) ಸುದ್ದಿಗಾರರೊಂದಿಗೆ ಮಾತನಾಡಿದ ಮಹಾದೇವಪ್ಪ ಸಚಿವರನ್ನು ಲೋಕಸಭಾ ಚುನಾವಣೆಗೆ ನಿಲ್ಲಿಸುವ ಬಗ್ಗೆ ಪಕ್ಷದಲ್ಲಿ ಯಾವ ಚರ್ಚೆಯೂ ಆಗಿಲ್ಲ. ಇದರ ಬಗ್ಗೆ ಕೇವಲ ಮಾಧ್ಯಮಗಳಲ್ಲಿ ಸುದ್ದಿಗಳು ಬರುತ್ತಿದೆ ಅಷ್ಟೇ. ನಮಗೆ ಅಂತಹ ಯಾವುದೇ ಸೂಚನೆ ಬಂದಿಲ್ಲ. ಪಕ್ಷದಲ್ಲೂ ಚರ್ಚೆಗಳು ನಡೆದಿಲ್ಲ. ನಡೆಯದಿರುವ ಚರ್ಚೆ ನಿಮ್ಮ ಗಮನಕ್ಕೆ ಹೇಗೆ ಬಂತು ಗೊತ್ತಿಲ್ಲ ಎಂದು ಸ್ಪಷ್ಟಪಡಿಸಿದರು. ಇದರೊಂದಿಗೆ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದರು.

ಡಾ ಹೆಚ್​ಸಿ ಮಹಾದೇವಪ್ಪ ಅವರನ್ನು ಮೈಸೂರು ಲೋಕಸಭೆ ಕ್ಷೇತ್ರದಿಂದ ನಿಲ್ಲಸಬೇಕು. ಎಂಎಲ್​ಎ ಕ್ಷೇತ್ರವನ್ನು ಅವರ ಪುತ್ರನಿಗೆ ನೀಡುವ ಬಗ್ಗೆ ಚಿಂತನೆಗಳು ನಡೆದಿವೆಯಂತೆ. ಇನ್ನು ಬೆಳಗಾವಿ ಕ್ಷೇತ್ರದಿಮದ ಸತೀಶ್ ಜಾರಕಿಹೊಳಿ, ಮಂಡ್ಯದಿಂದ ಎನ್​ ಚಲುವರಾಯಸ್ವಾಮಿ.ಹೀಗೆ ಕೆಲ ಪ್ರಮುಖ ಸಚಿವರನ್ನು ಮುಂಬರುವ ಲೋಕಸಭಾ ಚುನಾವಣೆಗೆ ನಿಲ್ಲಿಸುವ ಬಗ್ಗೆ ಚರ್ಚೆಗಳು ನಡೆದಿವೆಯಂತೆ.  ಹೀಗಾಗಿ ಎಲ್ಲದಕ್ಕೂ ಸಿದ್ಧರಾಗಿರಿ ಎಂದು ಹೈಕಮಾಂಡ್​, ಸಚಿವರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಬ್ಯಾಂಕಾಕ್​ನಲ್ಲಿ ಥಾಯ್ ರಾಮಾಯಣ ವೀಕ್ಷಿಸಿದ ಪ್ರಧಾನಿ ಮೋದಿ
ಬ್ಯಾಂಕಾಕ್​ನಲ್ಲಿ ಥಾಯ್ ರಾಮಾಯಣ ವೀಕ್ಷಿಸಿದ ಪ್ರಧಾನಿ ಮೋದಿ
ವಕ್ಫ್ ಬಿಲ್​​ ಬಗ್ಗೆ ಮಾತಾಡುವ ರಾಜ್ಯ ಬಿಜೆಪಿಗೆ ನಾಚಿಕೆಯಾಗಬೇಕು: ಮುತಾಲಿಕ್
ವಕ್ಫ್ ಬಿಲ್​​ ಬಗ್ಗೆ ಮಾತಾಡುವ ರಾಜ್ಯ ಬಿಜೆಪಿಗೆ ನಾಚಿಕೆಯಾಗಬೇಕು: ಮುತಾಲಿಕ್
RCB vs GT: ನಾನು ಮ್ಯಾಚ್ ವಿನ್ನರ್ ಸಿರಾಜ್ ಅನ್ನು ಮಾತ್ರ ನಂಬುತ್ತೇನೆ..!
RCB vs GT: ನಾನು ಮ್ಯಾಚ್ ವಿನ್ನರ್ ಸಿರಾಜ್ ಅನ್ನು ಮಾತ್ರ ನಂಬುತ್ತೇನೆ..!
ಇಳಿವಯಸ್ಸಿನಲ್ಲೂ ಯಡಿಯೂರಪ್ಪ ಪಕ್ಷದ ಅತ್ಯಂತ ಪ್ರಭಾವಿ ನಾಯಕ
ಇಳಿವಯಸ್ಸಿನಲ್ಲೂ ಯಡಿಯೂರಪ್ಪ ಪಕ್ಷದ ಅತ್ಯಂತ ಪ್ರಭಾವಿ ನಾಯಕ
ಸಿದ್ದಗಂಗಾ ಮಠದ ಜೊತೆ ನನ್ನ ಕುಟಂಬಕ್ಕೆ ಅವಿನಾಭಾವ ಸಂಬಂಧ: ಪರಮೇಶ್ವರ್
ಸಿದ್ದಗಂಗಾ ಮಠದ ಜೊತೆ ನನ್ನ ಕುಟಂಬಕ್ಕೆ ಅವಿನಾಭಾವ ಸಂಬಂಧ: ಪರಮೇಶ್ವರ್
ಗುಜರಾತ್​ನಲ್ಲಿ ಐಎಎಫ್​ನ ಜಾಗ್ವಾರ್ ಯುದ್ಧ ವಿಮಾನ ಪತನ, ಪೈಲಟ್ ಸಾವು
ಗುಜರಾತ್​ನಲ್ಲಿ ಐಎಎಫ್​ನ ಜಾಗ್ವಾರ್ ಯುದ್ಧ ವಿಮಾನ ಪತನ, ಪೈಲಟ್ ಸಾವು
ಸೈಟು ಹಿಂತಿರುಗಿಸಿದ್ದು ಆದ ಪ್ರಮಾದವನ್ನು ಸಿಎಂ ಅಂಗೀಕರಿಸಿದಂತೆ: ವಿಜಯೇಂದ್ರ
ಸೈಟು ಹಿಂತಿರುಗಿಸಿದ್ದು ಆದ ಪ್ರಮಾದವನ್ನು ಸಿಎಂ ಅಂಗೀಕರಿಸಿದಂತೆ: ವಿಜಯೇಂದ್ರ
ಮೋದಿ, ಮೋದಿ ಎಂದು ಜೈಕಾರ ಹಾಕಿ ಮೋದಿಯನ್ನು ಸ್ವಾಗತಿಸಿದ ಬ್ಯಾಂಕಾಕ್ ಜನ
ಮೋದಿ, ಮೋದಿ ಎಂದು ಜೈಕಾರ ಹಾಕಿ ಮೋದಿಯನ್ನು ಸ್ವಾಗತಿಸಿದ ಬ್ಯಾಂಕಾಕ್ ಜನ
ಅರಣ್ಯಪ್ರದೇಶದಲ್ಲಿ ಬತ್ತಿವೆ ಕೆರೆಕುಂಟೆ, ಪ್ರಾಣಿಗಳಿಗೆ ಸಿಗುತ್ತಿಲ್ಲ ನೀರು
ಅರಣ್ಯಪ್ರದೇಶದಲ್ಲಿ ಬತ್ತಿವೆ ಕೆರೆಕುಂಟೆ, ಪ್ರಾಣಿಗಳಿಗೆ ಸಿಗುತ್ತಿಲ್ಲ ನೀರು
6 ತಿಂಗಳ ಮಗುವನ್ನೆತ್ತಿಕೊಂಡು ಕೆಂಡ ಹಾಯಲು ಹೋಗಿ ಮುಗ್ಗರಿಸಿ ಬಿದ್ದ ವ್ಯಕ್ತ
6 ತಿಂಗಳ ಮಗುವನ್ನೆತ್ತಿಕೊಂಡು ಕೆಂಡ ಹಾಯಲು ಹೋಗಿ ಮುಗ್ಗರಿಸಿ ಬಿದ್ದ ವ್ಯಕ್ತ