ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್​ ಕೇಸ್​ ರದ್ದುಪಡಿಸಿದ ಹೈಕೋರ್ಟ್

ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣವನ್ನು ಹೈಕೋರ್ಟ್​ ರದ್ದುಪಡಿಸಿದೆ. ಆ ಮೂಲಕ ಬಿ.ಎಸ್​ ಯಡಿಯೂರಪ್ಪ ಅವರಿಗೆ ಬಿಗ್​ ರಿಲೀಫ್ ನೀಡಿದೆ.

ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್​ ಕೇಸ್​ ರದ್ದುಪಡಿಸಿದ ಹೈಕೋರ್ಟ್
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ
Follow us
ಗಂಗಾಧರ​ ಬ. ಸಾಬೋಜಿ
|

Updated on:Jun 07, 2023 | 8:42 PM

ಬೆಂಗಳೂರು: ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ (BS Yediyurappa) ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣವನ್ನು ಹೈಕೋರ್ಟ್​ ರದ್ದುಪಡಿಸಿದೆ. ಆ ಮೂಲಕ ಬಿ.ಎಸ್​ ಯಡಿಯೂರಪ್ಪ ಅವರಿಗೆ ಬಿಗ್​ ರಿಲೀಫ್ ನೀಡಿದೆ. 2015ರಲ್ಲಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಲಾಗಿತ್ತು. ಈ ಹಿಂದೆ ಸಿಎಜಿ ವರದಿ ಆಧರಿಸಿದ 15 ಕೇಸ್ ಹೈಕೋರ್ಟ್ ರದ್ದುಪಡಿಸಿತ್ತು. ಹಿಂದಿನ ತೀರ್ಪು ಆಧರಿಸಿ 19 ಡಿಸೆಂಬರ್​ 2015ರ ಕೇಸ್​ನ್ನು ಹೈಕೋರ್ಟ್ ರದ್ದುಪಡಿಸಿದೆ.

2013ರಲ್ಲಿ ನ್ಯಾಯಾಲಯಕ್ಕೆ ಖಾಸಗಿ ದೂರು

2006-07ರಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಯಡಿಯೂರಪ್ಪ ಅವರು ಕಾನೂನಿ ವಿರುದ್ಧವಾಗಿ ಬೆಳ್ಳಂದೂರು ಮತ್ತು ದೇವರಬೀಸನಹಳ್ಳಿ ಗ್ರಾಮಗಳಲ್ಲಿ ಎಂಟು ಎಜರೆ ಹತ್ತು ಗುಂಟೆ ಜಮೀನನ್ನು ಡಿನೋಟಿಫೈ ಮಾಡಿದ್ದಾರೆ ಎಂದು ಆರೋಪಿಸಿ ವಾಸುದೇವ ರೆಡ್ಡಿ ಎಂಬುವರು 2013ರಲ್ಲಿ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.

ಇದನ್ನೂ ಓದಿ: ಸರ್ಕಾರದ ಕಾವೇರಿ ನಿವಾಸ ಖಾಲಿ ಮಾಡಿದ ಯಡಿಯೂರಪ್ಪ, ಈಗ ಮಾಜಿ ಸಿಎಂ ವಾಸ್ತವ್ಯ ಎಲ್ಲಿ?

ಬಳಿಕ ಕೋರ್ಟ್ ಆದೇಶದಂತೆ 2015ರ ಫೆಬ್ರವರಿ 21ರಂದು ಲೋಕಾಯುಕ್ತ ಪೊಲೀಸರು ಎಫ್​ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದರು. ನಂತರ ತನಿಖೆಯಲ್ಲಿ ಯಾವುದೇ ಪ್ರಗತಿ ಕಂಡುಬಂದಿಲ್ಲ. ಈ ಹಿನ್ನೆಲೆಯಲ್ಲಿ ಪ್ರಕರಣ ರದ್ದು ಮಾಡುವಂತೆ ಕೋರಿ ಯಡಿಯೂರಪ್ಪ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ಆದ್ರೆ, ಅದನ್ನು 2020ರಲ್ಲಿ ಹೈಕೋರ್ಟ್ ವಜಾ ಮಾಡಿತ್ತು. ತನಿಖೆಯನ್ನು ವಿಳಂಬಗೊಳಿಸುತ್ತಿರುವುದಕ್ಕೆ ಪೊಲೀಸರನ್ನು ಹೈಕೋರ್ಟ್ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರು ತರಾಟೆಗೆ ತೆಗೆದುಕೊಂಡಿದ್ದರು. ತನಿಖೆಯನ್ನು ಉದ್ದೇಶಪೂರ್ವಕವಾಗಿ ತಡ ಮಾಡಲಾಗುತ್ತಿದೆ ಎನ್ನುವುದು ಸ್ಪಷ್ಟವಾಗಿ ಕಂಡುಬರುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದರು.

ಸುಪ್ರೀಂ ಕೋರ್ಟ್​ ಮೊರೆ ಹೋದ ಯಡಿಯೂರಪ್ಪ  

ಬೆಳ್ಳಂದೂರು ಮತ್ತು ದೇವರಬೀಸನಹಳ್ಳಿ ಡಿನೋಟಿಫೈ ಪ್ರಕರಣದ ತನಿಖೆ ರದ್ದುಪಡಿಸುವಂತೆ ಕೋರಿ ಯಡಿಯೂರಪ್ಪ ಅವರು ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದರು. ಅ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಂದಿನ ವಿಚಾರಣೆಯನ್ನು ಫೆ. 14ಕ್ಕೆ ಮುಂದೂಡಿತ್ತು.

ಭ್ರಷ್ಟಾಚಾರ ತಡೆ ಕಾಯ್ದೆಗೆ 2018ರಲ್ಲಿ ತಿದ್ದುಪಡಿ ತರಲಾಗಿದೆ. ಬಿಎಸ್‌ವೈ ವಿರುದ್ಧದ ತನಿಖೆಯನ್ನು ರದ್ದುಪಡಿಸುವಂತೆ ವಕೀಲರ ಮನವಿ ಮಾಡಿದ್ದರು. ಇದಕ್ಕೆ ಪ್ರತಿವಾದಿ ವಾಸುದೇವರೆಡ್ಡಿ ಪರ ವಕೀಲ ಕೆ.ವಿ.ಧನಂಜಯ ವಿರೋಧಿಸಿದ್ದು, ವಿಚಾರಣಾ ಹಂತದಲ್ಲಿರುವ ಪ್ರಕರಣಕ್ಕೆ ಈ ತಿದ್ದುಪಡಿ ಅನ್ವಯವಾಗಲ್ಲ ಎಂದಿದ್ದರು. ಬಳಿಕ ವಾದ ಮಂಡನೆಗೆ ವಕೀಲರು 2 ಗಂಟೆಗಳ ಕಾಲಾವಕಾಶ ಕೇಳಿದ್ದರು. ಇದರಿಂದ ಸುಪ್ರೀಂಕೋರ್ಟ್ ವಿಚಾರಣೆಯನ್ನು ಫೆಬ್ರವರಿ 14ಕ್ಕೆ ಮುಂದೂಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:30 pm, Wed, 7 June 23

ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ಪಾರ್ಕಿಂಗ್ ವಿಚಾರವಾಗಿ ಜಗಳ, ವ್ಯಕ್ತಿಗೆ ಮನಬಂದಂತೆ ಥಳಿಸಿದ ಗುಂಪು
ಪಾರ್ಕಿಂಗ್ ವಿಚಾರವಾಗಿ ಜಗಳ, ವ್ಯಕ್ತಿಗೆ ಮನಬಂದಂತೆ ಥಳಿಸಿದ ಗುಂಪು
ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?
ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
ಕಾರ್ತಿಕ ಮಾಸದ ಕೊನೆ ಸೋಮವಾರ ಶಿವನ ಆರಾಧನೆ ಹೇಗೆ ಮಾಡುವುದು? ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
Daily Horoscope: ಕಾರ್ತಿಕ ಮಾಸದ ಕೊನೆ ಸೋಮವಾರ ದಿನ ಭವಿಷ್ಯ ತಿಳಿಯಿರಿ
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್