AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

HD Deve Gowda Birthday: ಮಣ್ಣಿನ ಮಗನಿಗೆ 91ನೇ ಜನ್ಮದಿನದ ಸಂಭ್ರಮ, ಕೆಂಪುಕೋಟೆ ಮೇಲೆ ತ್ರಿವರ್ಣ ಧ್ವಜ ಹಾರಿಸಿದ ಏಕೈಕ ಕನ್ನಡಿಗನ ಆಸಕ್ತಿಕರ ಸಂಗತಿಗಳು

ಕೆಂಪು ಕೋಟೆ ಮೇಲೆ ತ್ರಿವರ್ಣ ಧ್ವಜ ಹಾರಿಸಿದ ಕನ್ನಡಾಂಬೆಯ ಕುವರ. ರಾಜ್ಯ ನೀರಾವರಿ ಯೋಜನೆಗಳ ಪಿತಾಮಹ, ರಾಜಕೀಯ ಚಾಣಕ್ಯ, ದೀನ ದಲಿತರ ಧ್ವನಿ, ರೈತರ ನಾಡಿ ಮಿಡಿತ ಅರಿತಿರುವ ಮಣ್ಣಿನ ಮಗ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರಿಗೆ ಇಂದು 91ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.ಅವರ ಬದುಕಿನ ಆಸಕ್ತಿಕರ ಅಂಶಗಳು ಇಲ್ಲಿವೆ ನೋಡಿ.

HD Deve Gowda Birthday: ಮಣ್ಣಿನ ಮಗನಿಗೆ 91ನೇ ಜನ್ಮದಿನದ ಸಂಭ್ರಮ, ಕೆಂಪುಕೋಟೆ ಮೇಲೆ ತ್ರಿವರ್ಣ ಧ್ವಜ ಹಾರಿಸಿದ ಏಕೈಕ ಕನ್ನಡಿಗನ ಆಸಕ್ತಿಕರ ಸಂಗತಿಗಳು
HD Devegowda
ರಮೇಶ್ ಬಿ. ಜವಳಗೇರಾ
|

Updated on: May 18, 2023 | 7:46 AM

Share

ಬೆಂಗಳೂರು:  ಮಾಜಿ ಪ್ರಧಾನ ಮಂತ್ರಿ ಹೆಚ್. ಡಿ. ದೇವೇಗೌಡರು(HD Deve Gowda )ಒಂದು ಸಣ್ಣ ಹಳ್ಳಿಯಿಂದ ದೇಶದ ಅತ್ಯುನ್ನತ ಸ್ಥಾನವನ್ನು ಅಲಂಕರಿಸುವ ಮಟ್ಟಕ್ಕೆ ಬೆಳೆದಿರುವ ನಾಯಕ. ಇಂದು(ಮೇ 18) ಅವರಿಗೆ 91ನೇ ಹುಟ್ಟುಹಬ್ಬದ ಸಂಭ್ರಮ. ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ. ಅಂದರೆ ಹೆಚ್​ಡಿ ದೇವೇಗೌಡ ಅವರು ಹುಟ್ಟಿದ ದಿನ ಇಂದು(HD Deve Gowda Birthday). ಮಾಜಿ ಪ್ರಧಾನಿ ದೇವೇಗೌಡರು ಮಣ್ಣಿನ ಮಗ ಅಂತಾನೇ ಫೇಮಸ್. ಪ್ರಧಾನಿಯಾಗಿ, ಮುಖ್ಯಮಂತ್ರಿಯಾಗಿ, ಸಚಿವರಾಗಿ, ಶಾಸಕನಾಗಿ, ಸಂಸದನಾಗಿ, ರೈತ ನಾಯಕನಾಗಿ, ಹೋರಾಟಗಾರನಾಗಿ ಅವರು ಮಾಡಿರುವ ಸೇವೆ ಅಸಂಖ್ಯಾತ. ಕೆಂಪುಕೋಟೆಯಲ್ಲಿ ಪ್ರಧಾನಿಯಾಗಿ ರಾಷ್ಟ್ರಧ್ವಜ ಹಾರಿಸಿದ ಮೊದಲ ಮತ್ತು ಸದ್ಯದ ಏಕೈಕ ಕನ್ನಡಿಗ ಹೆಚ್​ಡಿ ದೇವೇಗೌಡ. . ಹುಟ್ಟುಹಬ್ಬದ ಸಂಭ್ರಮದಲ್ಲಿರುದ ದೊಡ್ಡಗೌಡರ ಬದುಕಿನ ಪ್ರಮುಖ ಹೆಜ್ಜೆ ಗುರುತುಗಳು ಇಲ್ಲಿದೆ ನೋಡಿ.

  1. ಹೆಚ್.ಡಿ.ದೇವೇಗೌಡರ ಅವರು ಸಾಮಾಜಿಕ-ಆರ್ಥಿಕ ಅಭಿವೃದ್ಧಿಯ ಸುಧಾರಕರು ಹಾಗೂ ಭಾರತದ ಭವ್ಯ ಸಂಸ್ಕಂತಿ ಪರಂಪರೆಯ ಪ್ರಶಂಸಕರು. ಇವರು ಮೇ 18, 1933ರಂದು ಕರ್ನಾಟಕದ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿ ಗ್ರಾಮದಲ್ಲಿ ಜನಿಸಿದರು. ಸಿವಿಲ್ ಎಂಜಿನಿಯರಿಂದ ಡಿಪ್ಲೊಮಾ ಪಡೆದಿರುವ ಶ್ರೀದೇವೇಗೌಡರು 20 ವರ್ಷದ ಯುವಕನಾಗಿದ್ದಾಗಲೇ ಸಕ್ರಿಯ ರಾಜಕಾರಣಕ್ಕೆ ಧುಮುಕಿದರು.
  2. ಶಿಕ್ಷಣ ಪೂರೈಸಿದ ನಂತರ 1953ರಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರಿ 1962ರ ತನಕ ಆ ಪಕ್ಷದಲ್ಲೇ ಸದಸ್ಯರಾಗಿ ಉಳಿದಿದ್ದರು. ಮಧ್ಯಮ ವರ್ಗದ ಕೃಷಿ ಕುಟುಂಬದ ಹಿನ್ನೆಲೆಯಿಂದ ಬಂದ ಗೌಡರಿಗೆ ರೈತನ ಬದುಕಿನ ಕಷ್ಟಗಳು ಚೆನ್ನಾಗಿ ತಿಳಿದಿದ್ದವು. ಯುವ ಗೌಡರು, ಬಡ ರೈತರು, ಸೌಲಭ್ಯ ವಂಚಿತರು ಹಾಗೂ ಸಮಾಜದ ದುರ್ಬಲ ವರ್ಗಗಳ ಒಳಿತಿಗಾಗಿ ತಾವೊಬ್ಬ ಹೋರಾಟಗಾರನಾಗುವುದಾಗಿ ಘೋಷಿಸಿದ್ದರು.
  3. ಪ್ರಜಾಸತ್ತಾತ್ಮಕ ವ್ಯವಸ್ಥೆಯ ಕೆಳ ಸ್ತರದಿಂದ ಆರಂಭಿಸಿದ ಇವರ ಹೋರಾಟದ ಬದುಕು ರಾಜಕೀಯ ರಂಗದಲ್ಲಿ ಹಂತ ಹಂತವಾಗಿ ಮೇಲೇರಿತು. ಆಂಜನೇಯ ಸಹಕಾರ ಸಂಘದ ಅಧ್ಯಕ್ಷರಾಗಿ ಇವರು ಸೇವೆ ಸಲ್ಲಿಸುತ್ತಿದ್ದಾಗಲೇ ಬಡಜನರ ಸೇವೆಯಲ್ಲಿ ಹೆಸರಾಗಿದ್ದರು. ನಂತರ ಇವರು ಹೊಳೆನರಸೀಪುರ ತಾಲ್ಲೂಕು ಅಭಿವೃದ್ಧಿ ಮಂಡಳಿಯ ಸದಸ್ಯರಾದರು.
  4. ಸಮಾಜದಲ್ಲಿನ ಅಸಮಾನತೆಗಳನ್ನು ಸರಿಪಡಿಸುವ ಆಶಯದೊಂದಿಗೆ ಸದಾ ಆದರ್ಶ ರಾಜ್ಯವೊಂದರ ಕನಸು ಕಾಣುತ್ತಿದ್ದರು. ಕೇವಲ 28 ವರ್ಷಗಳಿದ್ದಾಗ ಯುವ ದೇವೇಗೌಡರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು ಹಾಗೂ 1962ರಲ್ಲಿ ಕರ್ನಾಕ ವಿಧಾನಸಭೆ ಸದಸ್ಯನಾಗಿ ಆಯ್ಕೆಯಾದ ದಿನದಿಂದ ಇವರು ಯಶಸ್ಸಿನ ಓಟದಲ್ಲೇ ಮುಂದುವರೆದರು. ವಿಧಾನಸಭೆಯಲ್ಲಿ ಪರಿಣಾಮಕಾರಿ ಭಾಷಣಗಾರರಾದ ಇವರು ತನ್ನ ಹಿರಿಯರು ಸೇರಿದಂತೆ ಎಲ್ಲರ ಮೆಚ್ಚುಗೆಗೆ ಪಾತ್ರರಾದರು. ಹೊಳೆನರಸೀಪುರ ಕ್ಷೇತ್ರದಿಂದ ಸತತ ಮೂರು ಬಾರಿ ಅಂದರೆ ನಾಲ್ಕನೇ (1967-71), ಐದನೇ (1972-77) ಹಾಗೂ ಆರನೇ (1978-83) ವಿಧಾನಸಭೆಗಳಿಗೆ ಚುನಾಯಿತರಾದರು.
  5. ಇವರು ಮಾರ್ಚ್ 1972 ರಿಂದ ಮಾರ್ಚ್ 1976 ಹಾಗೂ ನವೆಂಬರ್ 1976 ರಿಂದ ಡಿಸೆಂಬರ್ 1977ರವರೆಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಸೇವೆ ಸಲ್ಲಿಸಿ ಮೆಚ್ಚುಗೆಗೆ ಪಾತ್ರರಾದರು.
  6. ದೇವೇಗೌಡರು ನವೆಂಬರ್ 22, 1982ರಂದು ಆರನೇ ವಿಧಾನಸಭೆಯ ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದರು. ಏಳನೇ ಮತ್ತು ಎಂಟನೇ ವಿಧಾನಸಭೆಯ ಸದಸ್ಯರಾಗಿ, ಲೋಕೋಪಯೋಗಿ ಮತ್ತು ನೀರಾವರಿ ಸಚಿವರಾಗಿ ಸೇವೆ ಸಲ್ಲಿಸಿದರು. ನೀರಾವರಿ ಸಚಿವರಾಗಿದ್ದ ಅವರ ಅವಧಿಯಲ್ಲಿ ಅನೇಕ ನೀರಾವರಿ ಯೋಜನೆಗಳು ಅನುಷ್ಠಾನಗೊಂಡವು. ನೀರಾವರಿಗೆ ಸಾಕಷ್ಟು ಹಣಕಾಸು ಮಂಜೂರಾತಿ ನೀಡದಿದ್ದನ್ನು ಪ್ರತಿಭಟಿಸಿ 1987ರಲ್ಲಿ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದರು.
  7. ಸ್ವಾತಂತ್ರ್ಯ ಮತ್ತು ಸಮಾನತೆಯ ಹರಿಕಾರರಾದ ಇವರು 1975-76ರಲ್ಲಿ ಕೇಂದ್ರ ಸರ್ಕಾರದ ಮೇಲೆ ಆಕ್ರೋಶಗೊಂಡರು ಹಾಗೂ ತುರ್ತು ಪರಿಸ್ಥಿತಿ ದಿನಗಳಲ್ಲಿ ಜೈಲು ವಾಸ ಅನುಭವಿಸಿದರು.  ದೇವೇಗೌಡರು ಈ ಅವಧಿಯಲ್ಲಿ ಹೆಚ್ಚು ಕಾಲ ಓದುವುದರಲ್ಲಿ ತೊಡಗಿ ತಮ್ಮ ಜ್ಞಾನವನ್ನು ಇನ್ನಷ್ಟು ಸಮೃದ್ಧಗೊಳಿಸಿದರು. ನಿರಂತರ ಓದುವಿಕೆ ಹಾಗೂ ಆ ಅವಧಿಯಲ್ಲಿ ಕಾರಾಗೃಹದಲ್ಲಿದ್ದ ಭಾರತೀಯ ರಾಜಕಾರಣದ ಇತರ ಮುತ್ಸದ್ದಿಗಳ ಜೊತೆ ಒಡನಾಟವು ಅವರ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ನೆರವಾಯಿತು. ಬಂಧಮುಕ್ತರಾದ ನಂತರ ಅವರು ದೃಢ ವ್ಯಕ್ತಿಯಾಗಿ ಹೊರ ಹೊಮ್ಮಿದರು.
  8. 1991ರಲ್ಲಿ ಹಾಸನ ಲೋಕಸಭಾ ಕ್ಷೇತ್ರದಿಂದ ಸಂಸತ್​ಗೆ ಆಯ್ಕೆಯಾದ ಅವರು ವಿಶೇಷವಾಗಿ ರೈತರು ಒಳಗೊಂಡಂತೆ ರಾಜ್ಯದ ಸಮಸ್ಯೆಗಳನ್ನು ಪ್ರಸ್ತಾಪಿಸುವಲ್ಲಿ ಮುಂಚೂಣಿ ಪಾತ್ರ ವಹಿಸಿದರು. ಸಂಸತ್ನಲ್ಲಿ ರೈತರ ಬವಣೆ ಮತ್ತು ಸಂಕಷ್ಟಗಳ ಮೇಲೆ ಬೆಳಕು ಚೆಲ್ಲಿ ಕೃಷಿಕರ ದನಿಯಾದರು. ಸಂಸತ್ ಮತ್ತು ಅದರ ಸಂಸ್ಥೆಗಳ ಘನತೆ ಮತ್ತು ಗೌರವಗಳನ್ನು ಎತ್ತಿ ಹಿಡಿಯುವಲ್ಲಿಯೂ ಸಹ ಇವರು ಹೆಸರು ಮಾಡಿದರು.
  9.  ದೇವೇಗೌಡರು ರಾಜ್ಯ ಮಟ್ಟದಲ್ಲಿ ಎರಡು ಬಾರಿ ಜನತಾ ಪಕ್ಷದ ಅಧ್ಯಕ್ಷರು ಹಾಗೂ 1994ರಲ್ಲಿ ರಾಜ್ಯ ಜನತಾದಳದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದರು. 1994ರಲ್ಲಿ ರಾಜ್ಯದಲ್ಲಿ ಜನತಾದಳವು ಅಧಿಕಾರಕ್ಕೆ ಬರುವಲ್ಲಿ ಇವರು ಮಹತ್ವದ ಪಾತ್ರ ವಹಿಸಿದರು. ಡಿಸೆಂಬರ್ 11, 1994ರಂದು ಇವರು ಜನತಾದಳ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿ ಕರ್ನಾಟಕದ 14ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಆನಂತರ ಇವರು ರಾಮನಗರ ವಿಧಾನಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಭಾರಿ ಮತಗಳ ಅಂತರದಿಂದ ಗೆಲುವು ಸಾಧಿಸಿದರು.
  10. ತಮ್ಮ ಸಕ್ರಿಯ ರಾಜಕಾರಣ ಮತ್ತು ಬೇರುಮಟ್ಟದ ಭದ್ರ ಬುನಾದಿಯಿಂದಾಗಿ ರಾಜ್ಯ ಎದುರಿಸುತ್ತಿದ್ದ ಅನೇಕ ಸಮಸ್ಯೆಗಳನ್ನು ನಿಭಾಯಿಸುವ ಹೊಣೆಯನ್ನು ನೇರವಾಗಿ ಕೈಗೆತ್ತಿಕೊಂಡರು. ಹುಬ್ಬಳ್ಳಿಯ ಈದ್ಗಾ ಮೈದಾನ ವಿವಾದವನ್ನು ಮುಂಚೂಣಿಗೆ ತಂದಾಗ ಅವರ ರಾಜಕೀಯ ಕುಶಾಗ್ರಮತಿ ಮತ್ತೊಮ್ಮೆ ಪರೀಕ್ಷೆಗೆ ಒಳಪಟ್ಟಿತು. ಇದು ಅಲ್ಪ ಸಂಖ್ಯಾತ ಸಮುದಾಯಕ್ಕೆ ಸೇರಿದ ಮೈದಾನವಾಗಿದ್ದು, ರಾಜಕೀಯ ವಿವಾದಕ್ಕೂ ಎಡೆ ಮಾಡಿಕೊಟ್ಟಿತ್ತು. ಗೌಡರು ಈ ವಿವಾದಕ್ಕೆ ಶಾಂತಿಯುತ ಪರಿಹಾರ ಕಂಡುಕೊಳ್ಳುವಲ್ಲಿ ಯಶಸ್ವಿಯಾದರು.
  11. ಜನವರಿ 1995ರಲ್ಲಿ ದೇವೇಗೌಡರು ಸ್ವಿಟ್ಜರ್ಲೆಂಡ್​ಗೆ ಪ್ರವಾಸ ಕೈಗೊಂಡು, ಅಂತಾರಾಷ್ಟ್ರೀಯ ಆರ್ಥಿಕ ತಜ್ಞರ ಸಮಾವೇಶದಲ್ಲಿ ಪಾಲ್ಗೊಂಡರು. ಯುರೋಪ್ ಮತ್ತು ಮಧ್ಯಪೂರ್ವ ರಾಷ್ಟ್ರಗಳಿಗೆ ಇವರು ಕೈಗೊಂಡ ಪ್ರವಾಸವು ಓರ್ವ ಸಮರ್ಪಣಾ ಮನೋಭಾವ ರಾಜಕಾರಣಿಯ ಸಾಧನೆಗಳಿಗೆ ಸಾಕ್ಷಿಯಾಗುತ್ತದೆ. ಅವರ ಸಿಂಗಾಪುರ ಪ್ರವಾಸವು ರಾಜ್ಯಕ್ಕೆ ತುಂಬಾ ಅಗತ್ಯವಾದ ವಿದೇಶಿ ಬಂಡವಾಳವನ್ನು ತರುವಲ್ಲಿ ಯಶಸ್ವಿಯಾಗಿದ್ದು, ಅದು ಅವರ ವ್ಯವಹಾರಿಕ ಜಾಣ್ಮೆಯನ್ನು ಸಾಬೀತುಪಡಿಸುತ್ತದೆ.
  12. 1989ರಲ್ಲಿ ಜನತಾ ಪಕ್ಷದ ಅವರ ಸಮೂಹವು ಕರ್ನಾಟಕದಲ್ಲಿ ತಾನು ಸ್ಪರ್ಧಿಸಿದ 222 ವಿಧಾನಸಭಾ ಕ್ಷೇತ್ರಗಳಲ್ಲಿ ಕೇವಲ 2 ಕ್ಷೇತ್ರಗಳಲ್ಲಿ ಮಾತ್ರ ಗೆದ್ದು ಅತ್ಯಂತ ಕಳಪೆ ಸಾಧನೆ ಮಾಡಿತು.  ದೇವೇಗೌಡರು ತಾವು ಸ್ಪರ್ಧಿಸಿದ ಎರಡು ಕ್ಷೇತ್ರಗಳಲ್ಲಿ ಪರಾಭವಗೊಂಡು ತಮ್ಮ ರಾಜಕೀಯ ಜೀವನದಲ್ಲಿ ಮೊಟ್ಟ ಮೊದಲ ಬಾರಿಗೆ ಸೋಲಿನ ರುಚಿ ಕಂಡರು.
  13. ಈ ಹೀನಾಯ ಪರಾಭವು ಅವರನ್ನು ಮೊನಚಾದ ತುದಿಗೆ ಕೊಂಡ್ಯೊಯಿತು. ಕಳೆದ ಹೋದ ಘನತೆ, ಗೌರವ ಮತ್ತು ಶಕ್ತಿಯನ್ನು ಮತ್ತೆ ಗಳಿಸಲು ಅವರು ಅಪಾರ ಪರಿಶ್ರಮ ಪಡಬೇಕಾಯಿತು. ತಮ್ಮದೇ ಶೈಲಿಯ ರಾಜಕಾರಣವನ್ನು ಅವರು ಮರು ಪರೀಕ್ಷಿಸಿಕೊಳ್ಳುವಂತೆ ಅವರನ್ನು ಪ್ರಚೋದಿಸಿತು. ಅವರು ಕರ್ನಾಟಕ ಮತ್ತು ದೆಹಲಿಯಲ್ಲಿ ಸ್ನೇಹಿತರನ್ನು ಗಳಿಸಿದರು. ರಾಜಕೀಯ ವೈರಿಗಳೊಂದಿಗೆ ತನ್ನ ಹಳೆ ಹಗೆತನವನ್ನು ಬದಿಗಿಟ್ಟರು. ದೇವೇಗೌಡರು ಸರಳ, ನೇರ ನಡೆ ನುಡಿಗೆ ಹೆಸರಾದವರು. ತಾವು ಸರಳವಾಗಿದ್ದರೂ ಅದು ಸದೃಢ ಮತ್ತು ಪರಿಣಾಮಕಾರಿಯಾದಂಥ ಜೀವನ ಶೈಲಿಯನ್ನು ಹೊಂದಿರುವ ವ್ಯಕ್ತಿ ಎನಿಸಿದ್ದಾರೆ.
  14. ರಾಜಕೀಯ ಪ್ರವೇಶಕ್ಕೂ ಮುನ್ನ, ದೇವೇಗೌಡರು ಗುತ್ತಿಗೆದಾರರಾಗಿದ್ದು, ಸಣ್ಣ ಕಾಮಗಾರಿಗಳನ್ನು ಕೈಗೊಳ್ಳುತ್ತಿದ್ದರು. ಸ್ವತಂತ್ರರಾಗಿ ಏಳು ವರ್ಷಗಳ ಕಾಲ ಕಳೆದ ಇವರಿಗೆ ಹೊರಗಿನಿಂದ ಪಕ್ಷದ ರಾಜಕೀಯವನ್ನು ವೀಕ್ಷಿಸಲು ನೆರವಾಯಿತು. ಸದಾ ಚಟುವಟಿಕೆಯಿಂದ ಇರುತ್ತಿದ್ದ ಅವರು ಶಾಸನಸಭೆಯ ಗ್ರಂಥಾಲಯದಲ್ಲಿ ಪುಸ್ತಕಗಳು ಮತ್ತು ನಿಯತಕಾಲಿಕಗಳನ್ನು ತಿರುವಿ ಹಾಕುತ್ತಿದ್ದರು.
  15. 1967ರಲ್ಲಿ ನಡೆದ ಮರು ಚುನಾವಣೆ ಅವರಿಗೆ ಹೆಚ್ಚು ವಿಶ್ವಾಸ ನೀಡಿತು ಹಾಗೂ 1969ರಲ್ಲಿ ಕಾಂಗ್ರೆಸ್ ಪಕ್ಷವು ಇಬ್ಭಾಗವಾದಾಗ,  ನಿಜಲಿಂಗಪ್ಪ ನೇತೃತ್ವದ ಕಾಂಗ್ರೆಸ್ (ಒ) ಪಕ್ಷವನ್ನು ಸೇರಿದರು. ಆದ ಆ ಪಕ್ಷ ಕರ್ನಾಟಕದಲ್ಲಿ ಅಧಿಕಾರದಲ್ಲಿತ್ತು. ಆದರೆ,  ಗೌಡರು 1971ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್  ಪಕ್ಷದ ಗೆಲುವಿನ ಬಳಿಕದ ಅವರಿಗೆ ಒಂದು ದೊಡ್ಡ ಅವಕಾಶ ಒದಗಿ ಬಂದಿತು. ಇಂದಿರಾಗಾಂಧಿ ಅವರ ಅಲೆಯನ್ನು ಮೊಟಕುಗೊಳಿಸುವ ಪ್ರತಿಪಕ್ಷದ ಓರ್ವ ನಾಯಕರಾಗಿ ಇವರು ಹೊರಹೊಮ್ಮಿದರು.
  16. ದೊಡ್ಡೇಗೌಡ ಮತ್ತು ಶ್ರೀಮತಿ ದೇವಮ್ಮ ಅವರ ಪುತ್ರರಾಗಿ ಜನಿಸಿದ ಶ್ರೀದೇವೇಗೌಡರಿಗೆ ತಾವು ಸರಳ ಕೃಷಿ ಕುಟುಂಬದ ಹಿನ್ನೆಲೆಯಿಂದ ಬಂದಿದ್ದಕ್ಕೆ ಹೆಮ್ಮೆ ಇದೆ. ಶೀಮತಿ ಚೆನ್ನಮ್ಮ ಅವರನ್ನು ವಿವಾಹವಾದ ಶ್ರೀ ದೇವೇಗೌಡ ದಂಪತಿಗೆ ನಾಲ್ವರು ಪುತ್ರರು ಮತ್ತು ಇಬ್ಬರು ಪುತ್ರಿಯರಿದ್ದಾರೆ. ಒಬ್ಬ ಪುತ್ರ ಶಾಸಕನಾಗಿದ್ದರೆ, ಇನ್ನೊಬ್ಬ ಪುತ್ರ ಲೋಕಸಭೆ ಸದಸ್ಯರಾಗಿದ್ದಾರೆ.
  17. ತಾವು ಬಯಸದೇ ಇದ್ದರೂ ಶ್ರೀ ದೇವೇಗೌಡರಿಗೆ ತೃತೀಯ ರಂಗದ (ಪ್ರಾದೇಶಿಕ ಪಕ್ಷಗಳು ಹಾಗೂ ಕಾಂಗ್ರೆಸ್ಸೇತರ ಮತ್ತು ಬಿಜೆಪಿಯೇತರ ಸಂಯೋಜನೆ) ನಾಯಕತ್ವ ವಹಿಸಲು ಮತ್ತು ಪ್ರಧಾನಮಂತ್ರಿ ಗದ್ದುಗೆಗೇರುವ ಅವಕಾಶ ಒದಗಿ ಬಂದಿತು.
  18. ಭಾರತದ 11ನೇ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಮೇ 30, 1996ರಂದು ಕರ್ನಾಟಕ ಮುಖ್ಯಮಂತ್ರಿ ಹುದ್ದೆಗೆ ದೇವೇಗೌಡರು ರಾಜೀನಾಮೆ ನೀಡಿದ್ದರು.

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?