ಬಿಜೆಪಿಗೆ ದಳಪತಿ ಶುಭಾಶಯ, ಮೋದಿ ಅದ್ಭುತ ಪ್ರದರ್ಶನಕ್ಕೆ ಚುನಾವಣಾ ಫಲಿತಾಂಶ ಸಾಕ್ಷಿ: ಹೆಚ್ಡಿ ದೇವೇಗೌಡ
ಪಂಚ ರಾಜ್ಯಗಳಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಬಗ್ಗೆ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಅವರು ಟ್ವೀಟ್ ಮಾಡಿ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಭಾಶಯ ಕೋರಿದ್ದಾರೆ. ಅದೇ ರೀತಿ, ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಕೂಟ ಟ್ವೀಟ್ ಮಾಡಿದ್ದಾರೆ.
ಬೆಂಗಳೂರು, ಡಿ.3: ಪಂಚ ರಾಜ್ಯಗಳಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಿಜೆಪಿಗೆ ಹಾಗೂ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ (HD Deve Gowda) ಅವರು ಶುಭಾಶಯ ಕೋರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿದ ದೇವೇಗೌಡ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಅದ್ಭುತ ಪ್ರದರ್ಶನಕ್ಕಾಗಿ ನನ್ನ ಪಕ್ಷವು ಬಿಜೆಪಿಯ ಉನ್ನತ ನಾಯಕತ್ವವನ್ನು, ವಿಶೇಷವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸುತ್ತದೆ ಎಂದಿದ್ದಾರೆ.
My party congratulates the top leadership of @BJP4India, especially Prime Minister @narendramodi, for their splendid performance in Madhya Pradesh, Rajasthan and Chhattisgarh. #ElectionResult2023
— H D Deve Gowda (@H_D_Devegowda) December 3, 2023
ಚುನಾವಣಾ ಫಲಿತಾಂಶಗಳ ಬಗ್ಗೆ ಟಿವಿ9 ಜೊತೆ ಮಾತನಾಡಿದ ದೇವೇಗೌಡ, ನರೇಂದ್ರ ಮೋದಿಯವರ ಅವರ ಅದ್ಭುತ ಪ್ರದರ್ಶನಕ್ಕೆ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢ 2023 ರ ಫಲಿತಾಂಶ ಸಾಕ್ಷಿಯಾಗಿದೆ ಎಂದರು.
ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ಬಿಜೆಪಿ ಗೆಲುವಿಗೆ ಶುಭಾಶಯ ಕೋರಿದ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ, ಬಿಜೆಪಿಯ ಎಲ್ಲ ನಾಯಕರಿಗೆ ಅಭಿನಂದನೆಗಳು ಹಾಗೂ ಶುಭಾಶಯಗಳು ಎಂದರು.
ಮಧ್ಯಪ್ರದೇಶ, ಛತ್ತೀಸಗಢ ಹಾಗೂ ರಾಜಸ್ತಾನ ರಾಜ್ಯಗಳಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ @BJP4India ಹಾಗೂ ಆ ಪಕ್ಷದ ಎಲ್ಲಾ ನಾಯಕರಿಗೆ ಹಾರ್ದಿಕ ಅಭಿನಂದನೆಗಳು ಮತ್ತು ಶುಭಾಶಯಗಳು.
ಪ್ರಧಾನಿಗಳಾದ ಶ್ರೀ @narendramodi ಅವರ ಬಲಿಷ್ಠ ನಾಯಕತ್ವದಲ್ಲಿ ಬಿಜೆಪಿ ಮೂರು ರಾಜ್ಯಗಳಲ್ಲಿ ವಿಜಯ ಪತಾಕೆ ಹಾರಿಸಿದ್ದು, ಮುಂಬರುವ ಲೋಕಸಭೆ ಚುನಾವಣೆಗೆ ಈ…
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 3, 2023
ಈ ಬಗ್ಗೆ ಟ್ವೀಟ್ ಮಾಡಿದ ಅವರು, ಮೋದಿಯವರ ಬಲಿಷ್ಠ ನಾಯಕತ್ವದಲ್ಲಿ ಬಿಜೆಪಿ ವಿಜಯ ಪತಾಕೆ ಹಾರಿಸಿದೆ. ಮುಂಬರುವ ಲೋಕಸಭೆ ಚುನಾವಣೆಗೆ ಈ ಫಲಿತಾಂಶ ಸ್ಪಷ್ಟ ದಿಕ್ಸೂಚಿ ಆಗಿದೆ ಎಂದರು.
ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ