ಬಿಜೆಪಿಗೆ ದಳಪತಿ ಶುಭಾಶಯ, ಮೋದಿ ಅದ್ಭುತ ಪ್ರದರ್ಶನಕ್ಕೆ ಚುನಾವಣಾ ಫಲಿತಾಂಶ ಸಾಕ್ಷಿ: ಹೆಚ್​ಡಿ ದೇವೇಗೌಡ

| Updated By: Rakesh Nayak Manchi

Updated on: Dec 03, 2023 | 7:35 PM

ಪಂಚ ರಾಜ್ಯಗಳಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್​ಗಢದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಬಗ್ಗೆ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಅವರು ಟ್ವೀಟ್ ಮಾಡಿ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಭಾಶಯ ಕೋರಿದ್ದಾರೆ. ಅದೇ ರೀತಿ, ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಕೂಟ ಟ್ವೀಟ್ ಮಾಡಿದ್ದಾರೆ.

ಬಿಜೆಪಿಗೆ ದಳಪತಿ ಶುಭಾಶಯ, ಮೋದಿ ಅದ್ಭುತ ಪ್ರದರ್ಶನಕ್ಕೆ ಚುನಾವಣಾ ಫಲಿತಾಂಶ ಸಾಕ್ಷಿ: ಹೆಚ್​ಡಿ ದೇವೇಗೌಡ
ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ
Follow us on

ಬೆಂಗಳೂರು, ಡಿ.3: ಪಂಚ ರಾಜ್ಯಗಳಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್​ಗಢದಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಿಜೆಪಿಗೆ ಹಾಗೂ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ (HD Deve Gowda) ಅವರು ಶುಭಾಶಯ ಕೋರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿದ ದೇವೇಗೌಡ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಅದ್ಭುತ ಪ್ರದರ್ಶನಕ್ಕಾಗಿ ನನ್ನ ಪಕ್ಷವು ಬಿಜೆಪಿಯ ಉನ್ನತ ನಾಯಕತ್ವವನ್ನು, ವಿಶೇಷವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸುತ್ತದೆ ಎಂದಿದ್ದಾರೆ.

ಚುನಾವಣಾ ಫಲಿತಾಂಶಗಳ ಬಗ್ಗೆ ಟಿವಿ9 ಜೊತೆ ಮಾತನಾಡಿದ ದೇವೇಗೌಡ, ನರೇಂದ್ರ ಮೋದಿಯವರ ಅವರ ಅದ್ಭುತ ಪ್ರದರ್ಶನಕ್ಕೆ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢ 2023 ರ ಫಲಿತಾಂಶ ಸಾಕ್ಷಿಯಾಗಿದೆ ಎಂದರು.

ಇದನ್ನೂ ಓದಿ: Rajasthan Election 2023 Results: ರಾಜಸ್ಥಾನದಲ್ಲಿ ಕೇಸರಿ ಅಲೆಯಲ್ಲಿ ಮರೆಯಾದ ಕಾಂಗ್ರೆಸ್; ಬಿಜೆಪಿಗೆ ಭರ್ಜರಿ ಗೆಲುವು; ಮುಂದಿನ ಸಿಎಂ ಯಾರು?

ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್​ಗಢದಲ್ಲಿ ಬಿಜೆಪಿ ಗೆಲುವಿಗೆ ಶುಭಾಶಯ ಕೋರಿದ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ, ಬಿಜೆಪಿಯ ಎಲ್ಲ ನಾಯಕರಿಗೆ ಅಭಿನಂದನೆಗಳು ಹಾಗೂ ಶುಭಾಶಯಗಳು ಎಂದರು.

ಈ ಬಗ್ಗೆ ಟ್ವೀಟ್ ಮಾಡಿದ ಅವರು, ಮೋದಿಯವರ ಬಲಿಷ್ಠ ನಾಯಕತ್ವದಲ್ಲಿ ಬಿಜೆಪಿ ವಿಜಯ ಪತಾಕೆ ಹಾರಿಸಿದೆ. ಮುಂಬರುವ ಲೋಕಸಭೆ ಚುನಾವಣೆಗೆ ಈ ಫಲಿತಾಂಶ ಸ್ಪಷ್ಟ ದಿಕ್ಸೂಚಿ ಆಗಿದೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ