ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಹೆಚ್​ಡಿ ದೇವೇಗೌಡ; ಬಿಜೆಪಿ ಜೊತೆಗಿನ ಮೈತ್ರಿ ನಡುವೆ ಕುತೂಹಲ ಮೂಡಿಸಿದ ದಳಪತಿ ಭೇಟಿ

| Updated By: Rakesh Nayak Manchi

Updated on: Dec 15, 2023 | 12:42 PM

ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಸೀಟು ಹಂಚಿಕೆ ಕುರಿತ ಮಾತುಕತೆ ನಡೆಯುತ್ತಿರುವ ನಡುವೆ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ದೆಹಲಿಯಲ್ಲಿ ಭೇಟಿಯಾಗಿದ್ದು, ಕುತೂಹಲ ಮೂಡಿಸಿದೆ.

ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಹೆಚ್​ಡಿ ದೇವೇಗೌಡ; ಬಿಜೆಪಿ ಜೊತೆಗಿನ ಮೈತ್ರಿ ನಡುವೆ ಕುತೂಹಲ ಮೂಡಿಸಿದ ದಳಪತಿ ಭೇಟಿ
ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ಹೆಚ್ ​ಡಿ ದೇವೇಗೌಡ
Follow us on

ನವದೆಹಲಿ, ಡಿ.15: ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಆದರೆ, ಸೀಟು ಹಂಚಿಕೆ ಕುರಿತ ಮಾತುಕತೆಯೊಂದು ನಡೆಯಲು ಬಾಕಿ ಇರುವಾಗಲೇ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ (HD Deve Gowda) ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರನ್ನು ಭೇಟಿಯಾಗಿರುವುದು ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಸಂಸತ್‌ ಭವನದಲ್ಲಿ ಪ್ರಸ್ತುರ ರಾಜಕೀಯ ಬೆಳವಣಿಗೆಗಳ ಕುರಿತು ದೇವೇಗೌಡ ಮತ್ತು ಖರ್ಗೆ ಅವರು ಮಾತುಕತೆ ನಡೆಸಿದರು. ಈ ಬಗ್ಗೆ ಟ್ವೀಟ್ ಮಾಡಿದ ರಾಜ್ಯಸಭಾ ಸದಸ್ಯ ರಾಜೀವ್ ಶುಕ್ಲಾ, “ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಅವರನ್ನು ಸಂಸತ್ತಿನ ಭವನದಲ್ಲಿ ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಿದರು” ಎಂದರು.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲುಂಡ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಲೋಕಸಭೆ ಚುನಾವಣೆಯಲ್ಲಿ ಎಲ್ಲಾ 28 ಸ್ಥಾನಗಳನ್ನು ಗೆದ್ದುಕೊಳ್ಳಲು ಮೈತ್ರಿ ಮಾಡಿಕೊಂಡಿವೆ. ಆ ಮೂಲಕ ಸೋಲಿನ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ. ಮೈತ್ರಿ ಬಗ್ಗೆ ಉಬಯ ಪಕ್ಷಗಳ ನಾಯಕರು ಘೋಷಣೆ ಮಾಡಿದ್ದು, ಸೀಟು ಹಂಚಿಕೆ ಮಾತುಕತೆ ನಡೆಯುತ್ತಿದೆ.

ಇದನ್ನೂ ಓದಿ: ಕಾಂಗ್ರೆಸ್ ನಮ್ಮನ್ನು ಹೊರಗಿಟ್ಟಾಗ ಮೋದಿ, ಅಮಿತ್ ಶಾ ಸ್ವಾಗತಿಸಿದರು: ಹೆಚ್​ಡಿ ದೇವೇಗೌಡ

ಮೈತ್ರಿ ಮಾಡಿಕೊಂಡರೆ ಮುಂದಾಗುವ ಸಾಧಕ ಮತ್ತು ಬಾಧಕಗಳ ಬಗ್ಗೆ ಬಿಜೆಪಿ ನಾಯಕರು ಚರ್ಚೆ ನಡೆಸಿಯೇ ಕೊನೆಗೆ ದಳಪತಿಗಳ ಜತೆ ಮೈತ್ರಿಗೆ ಒಲವು ತೋರಿದ್ದಾರೆ. 2019ರ ಚುನಾವಣೆಯಲ್ಲಿ ಬಿಜೆಪಿ ಕರ್ನಾಟಕದಲ್ಲಿ 28 ಕ್ಷೇತ್ರಗಳ ಪೈಕಿ 25ರಲ್ಲಿ ಗೆದ್ದು ಬೀಗಿತ್ತು. ಆದರೆ, 2024 ರ ಚುನಾವಣೆಯಲ್ಲಿ ಅಷ್ಟು ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಕಡಿಮೆ ಇರುವ ಹಿನ್ನೆಲೆ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದೆ. ಈ ನಡುವೆ ದಳಪತಿ ದೇವೇಗೌಡರು ಕಾಂಗ್ರೆಸ್ ಅಧ್ಯಕ್ಷರನ್ನು ಭೇಟಿಯಾಗಿರುವುದು ಬಿಜೆಪಿ ನಾಯಕರ ನಿದ್ದೆಗೆಡಿಸಿದಂತಾಗಿದೆ.

ರಾಜಕೀಯ ಸುದ್ದಿಗಳನ್ನು ಮತ್ತಷ್ಟು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:29 pm, Fri, 15 December 23