ದೇವೇಗೌಡರ ಆಶೀರ್ವಾದ ಆನೆ ಬಲ ತಂದಿದೆ: ಬಿಜೆಪಿ ಜೆಡಿಎಸ್ ಸಮನ್ವಯ ಸಭೆ ಬಳಿಕ ವಿಜಯೇಂದ್ರ ಹರ್ಷ

ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಕಾರಣ ಉಭಯ ಪಕ್ಷಗಳ ಸಮನ್ವಯ ಸಭೆ ಬೆಂಗಳೂರಿನಲ್ಲಿ ಶುಕ್ರವಾರ ನಡೆಯಿತು. ನಂತರ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ದೇವೇಗೌಡರ ಸಹಕಾರ, ಬೆಂಬಲಕ್ಕೆ ಕೃತಜ್ಞತೆ ವ್ಯಕ್ತಪಡಿಸಿದರು.

ದೇವೇಗೌಡರ ಆಶೀರ್ವಾದ ಆನೆ ಬಲ ತಂದಿದೆ: ಬಿಜೆಪಿ ಜೆಡಿಎಸ್ ಸಮನ್ವಯ ಸಭೆ ಬಳಿಕ ವಿಜಯೇಂದ್ರ ಹರ್ಷ
ಬಿವೈ ವಿಜಯೇಂದ್ರ
Follow us
ಕಿರಣ್​ ಹನಿಯಡ್ಕ
| Updated By: Ganapathi Sharma

Updated on: Mar 29, 2024 | 1:11 PM

ಬೆಂಗಳೂರು, ಮಾರ್ಚ್​ 29: ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ (HD Deve Gowda) ಆಶೀರ್ವಾದ ನಮಗೆ ಆನೆ ಬಲ ತಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಹೇಳಿದರು. ಬಿಜೆಪಿ ಜೆಡಿಎಸ್ ಸಮನ್ವಯ ಸಭೆ ಬಳಿಕ ಮಾತನಾಡಿದ ಅವರು, ಈ ಸಭೆ ಬಹಳ ಹಿಂದೆಯೇ ಆಗಬೇಕಾಗಿತ್ತು. ಈ ಸಮ್ಮಿಲನ ಸುವರ್ಣಾಕ್ಷರದಲ್ಲಿ ಬರೆದಿಡುವ ಫಲಿತಾಂಶ ಆಗಲಿದೆ. ಹಿಂದೆಯೂ ಬಿಜೆಪಿ ಹಾಗೂ ಜೆಡಿಎಸ್ ಮಧ್ಯೆ ಹೊಂದಾಣಿಕೆ ಆಗಿತ್ತು. ಆದರೆ ಸೈದ್ದಾಂತಿಕ ನೆಲೆಗಟ್ಟಿನಲ್ಲಿ ಅಂದಿನ ಕಾಲಘಟ್ಟದಲ್ಲಿ ದೇವೇಗೌಡರ ಸಮ್ಮತಿ‌ ಇರಲಿಲ್ಲ ಎಂಬುದೂ ಗೊತ್ತಿರುವ ವಿಚಾರ. ಇದೀಗ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕೆಂದು ದೇವೇಗೌಡರು ಆಶೀರ್ವಾದ ಮಾಡಿರುವುದು ಆನೆ ಬಲ ತಂದಿದೆ ಎಂದು ಹೇಳಿದರು.

ರಾಜದಲ್ಲಿ ಹಲವು ಹೊಂದಾಣಿಕೆ ರಾಜಕಾರಣ ನಡೆದಿದೆ. ಮೈತ್ರಿಯನ್ನು ರಾಜ್ಯದ ಜನ ಗಂಭೀರವಾಗಿ ತೆಗೆದುಕೊಂಡಿದ್ದಾರೆ. ಇನ್ನೂ ಕೂಡಾ ಸಮನ್ವಯತೆ ಮೂಡಿಸುವ ಕೆಲಸ ಮಾಡಬೇಕಾಗಿದೆ. ಆರೋಗ್ಯದ ಸಮಸ್ಯೆಯನ್ನು ಕಡೆಗಣಿಸಿ ಕುಮಾರಸ್ವಾಮಿ ಪ್ರವಾಸ ಕೈಗೊಂಡು ಬದ್ಧತೆ ತೋರಿಸಿದ್ದಾರೆ. ಸಿಎಂ ಕನಿಷ್ಠ 15-20 ಮಂತ್ರಿಗಳನ್ನು ಸ್ಫರ್ಧೆ ಮಾಡಿಸಬೇಕು ಎಂದುಕೊಂಡಿದ್ದರು. ಬಿಜೆಪಿ-ಜೆಡಿಎಸ್ ಮೈತ್ರಿ ಎಷ್ಟು ಗಟ್ಟಿಯಾಗಿದೆ ಅಂದರೆ, ಕಾಂಗ್ರೆಸ್ ಪಕ್ಷದ ಯಾವುದೇ ಮಂತ್ರಿ ಸ್ಪರ್ಧಿಸುವ ಎದೆಗಾರಿಕೆ ತೋರಿಸಲು ಸಾಧ್ಯವಾಗಿಲ್ಲ ಎಂದು ವಿಜಯೇಂದ್ರ ಹೇಳಿದರು.

ಬೆಂಗಳೂರಿನ ಖಾಸಗಿ ಹೋಟೆಲ್​​ನಲ್ಲಿ ಬಿಜೆಪಿ-ಜೆಡಿಎಸ್​​ ಸಮನ್ವಯ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಜೆಡಿಎಸ್​ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡ, ಕರ್ನಾಟಕ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್, ಮಾಜಿ ಸಿಎಂಗಳಾದ ಯಡಿಯೂರಪ್ಪ, ಹೆಚ್.​ಡಿ.ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್​.ಅಶೋಕ್​, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ರಾಜ್ಯ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಜೆಡಿಎಸ್​​ ಶಾಸಕ ಬಂಡೆಪ್ಪ ಕಾಶೆಂಪೂರ್​, ಎಂಎಲ್​ಸಿ ಶರವಣ, ಸಂಸದ ಸದಾನಂದಗೌಡ, ಮಾಜಿ ಸಚಿವ ಗೋವಿಂದ ಕಾರಜೋಳ, ಸಿ.ಟಿ.ರವಿ ಸೇರಿದಂತೆ ಬಿಜೆಪಿ, ಜೆಡಿಎಸ್ ನಾಯಕರು ಸಭೆಯಲ್ಲಿ ಭಾಗಿಯಾದರು.

ಇದನ್ನೂ ಓದಿ: ಹಾಸನ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಆಸ್ತಿ ಮೌಲ್ಯ ನಾಲ್ಕು ಪಟ್ಟು ಹೆಚ್ಚಳ; ಎಷ್ಟು ಗೊತ್ತಾ?

ಹೆಚ್.ಡಿ. ದೇವೇಗೌಡ, ಯಡಿಯೂರಪ್ಪ, ಕುಮಾರಸ್ವಾಮಿ, ವಿಜಯೇಂದ್ರ, ಅಶೋಕ್, ರಾಧಾ ಮೋಹನ್ ದಾಸ್, ಕಾರಜೋಳ ಮತ್ತು ಜಿ.ಟಿ. ದೇವೇಗೌಡ ಬಿಜೆಪಿ ಮತ್ತು ಜೆಡಿಎಸ್ ಶಾಲುಗಳನ್ನು ಧರಿಸಿ ಸಭೆಯಲ್ಲಿ ಭಾಗಿಯಾದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ