ಡಿಕೆ ಶಿವಕುಮಾರ್ ಸವಾಲು ಸ್ವೀಕರಿಸಿದ ಹೆಚ್​ಡಿ ಕುಮಾರಸ್ವಾಮಿ, ಉಭಯ ನಾಯಕರ ರಾಜಕೀಯ ಯುದ್ಧ ಶುರು

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ನಡುವಿನ ಮಾತಿನ ಯುದ್ಧ ತೀವ್ರ ಸ್ವರೂಪ ಪಡೆದುಕೊಮಡಿದೆ. ಅದರಲ್ಲೂ ಕನಕಪುರ ತಾಲೂಕು ಬೆಂಗಳೂರಿಗೆ ಸೇರಿಸುವ ಡಿಕೆ ಶಿವಕುಮಾರ್ ನಿರ್ಧಾರಕ್ಕೆ ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ. ಇದೀಗ ಡಿಕೆ ಶಿವಕುಮಾರ್ ಹಾಕಿದ ಸವಾಲನ್ನು ಕುಮಾರಸ್ವಾಮಿ ಸ್ವೀಕರಿಸಿದ್ದು, ಈಗ ಉಭಯ ನಾಯಕರ ಆರೋಪ-ಪ್ರತ್ಯಾರೋಪ ಮತ್ತೊಂದು ಹಂತಕ್ಕೆ ತಿರುಗಿದೆ.

ಡಿಕೆ ಶಿವಕುಮಾರ್ ಸವಾಲು ಸ್ವೀಕರಿಸಿದ ಹೆಚ್​ಡಿ ಕುಮಾರಸ್ವಾಮಿ, ಉಭಯ ನಾಯಕರ ರಾಜಕೀಯ ಯುದ್ಧ ಶುರು
ಕುಮಾರಸ್ವಾಮಿ-ಡಿಕೆ ಶಿವಕುಮಾರ್
Follow us
| Updated By: ರಮೇಶ್ ಬಿ. ಜವಳಗೇರಾ

Updated on:Oct 26, 2023 | 11:57 AM

ಬೆಂಗಳೂರು, (ಅಕ್ಟೋಬರ್ 26): ರಾಮನಗರ (Ramanagara) ಜಿಲ್ಲೆ ವಿಚಾರವಾಗಿ ಬಹಿರಂಗ ಚರ್ಚೆಗೆ ಡಿಕೆ ಶಿವಕುಮಾರ್ (DK Shivakumar) ಹಾಕಿರುವ ಸವಾಲನ್ನು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ(HD Kumaraswamy) ಸ್ವೀಕರಿಸಿದ್ದಾರೆ. ಅಲ್ಲದೇ ನಾನು ಪಲಾಯನ ಮಾಡಲ್ಲ, ನನ್ನ ಬಳಿಯೂ ಸಾಕಷ್ಟು ಸರಕು ಇದೆ ಎಂದು ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. ಇದರೊಂದಿಗೆ ಕುಮಾರಸ್ವಾಮಿ ಹಾಗೂ ಡಿಕೆ ಶಿವಕುಮಾರ್ ನಡುವಿನ ಮತ್ತೊಂದು ರಾಜಕೀಯ ಕದನ ಶುರುವಾಗಿದೆ.

ಬೆಂಗಳೂರಿನಲ್ಲಿ ಇಂದು(ಅಕ್ಟೋಬರ್ 26) ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ವಿಜಯದಶಮಿಯ ಆಸುಪಾಸಿನಲ್ಲಿ ಹಬ್ಬದ ಆಚರಣೆ ಜೊತೆಗೆ ಸಿಎಂ ಹಾಗೂ ಡಿಸಿಎಂ ವಯ್ಯಕ್ತಿಕವಾಗಿ ನನ್ನ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಅದಕ್ಕೆ ಸಂಬಂಧಪಟ್ಟ ಎರಡು ಮೂರು ವಿಚಾರಗಳಿಗೆ ಡಿಸಿಎಂ ನನಗೆ ಸವಾಲು ಹಾಕಿದ್ದಾರೆ. ಅದಕ್ಕೆ ನಾನು ಚರ್ಚೆಗೆ ಸಿದ್ದನಿದ್ದೇನೆ. ನಾನು ಸ್ವೀಕಾರ ಮಾಡುತ್ತೇನೆ. ಪಲಾಯನ ಮಾಡಲ್ಲ. ನನ್ನ ಹತ್ತಿರ ಸಹ ಸರಕು ಇದೆ. ಇವತ್ತಿನ ಆರ್ಥಿಕ ಪರಿಸ್ಥಿತಿಗೆ ಹಿಂದಿನ ಬಿಜೆಪಿ ಕಾರಣ ಎಂದು ಸಿಎಂ ಹೇಳಿದ್ದಾರೆ. ಇದಕ್ಕೆ ಶ್ವೇತ ಪತ್ರ ಹೊರಡಿಸುತ್ತೇನೆ ಎಂದು ಹೇಳಿದ್ದಾರೆ. ಇದಕ್ಕೆ ಸ್ವಾಗತ ಮಾಡುತ್ತೇನೆ. ಅವರು ಕೊಟ್ಟಂತಹ ತೀರ್ಮಾನಗಳ ಆದಾರದ ಮೇಲೆ ಬಿಜೆಪಿ ಸರ್ಕಾರ ನಡೆದಿದೆ ಎಂದು ಹೇಳಿದರು.

ಇದನ್ನೂ ಓದಿ: ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆಯೆಂದು ನಾಮಕರಣಕ್ಕೆ ಚಿಂತನೆ: ಡಿಸಿಎಂ ಡಿಕೆ ಶಿವಕುಮಾರ್

ಆಣೆ ಪ್ರಮಾಣಕ್ಕೆ ಸವಾಲು

ವರ್ಗಾವಣೆಯಲ್ಲಿ ಯಾವುದೇ ಹಣ ಪಡೆದಿಲ್ಲ ಎಂದು ಪ್ರಮಾಣ ಮಾಡಿ. ಸಿಎಂ, ಡಿಸಿಎಂ ಹಾಗೂ ಎಲ್ಲಾ ಮಂತ್ರಿಗಳು ಬಂದು ಪ್ರಮಾಣ ಮಾಡಿ ಎಂದು ಸವಾಲು ಹಾಕಿದ ಕುಮಾರಸ್ವಾಮಿ, ಕಳೆದ ಐದು ತಿಂಗಳಲ್ಲಿ ಯಾವುದೇ ವರ್ಗಾವಣೆಯಲ್ಲಿ ಹಣ ಪಡೆದಿಲ್ಲ ಎಂದು ಪ್ರಮಾಣ ಮಾಡಿ. ನಾನು ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡುತ್ತೇನೆ. ಹಳೇ ವಿಚಾರ ಬೇಡ ಈ 5 ತಿಂಗಳಲ್ಲಿ ಲಂಚ ಪಡೆದಿಲ್ಲವೆಂದು ಪ್ರಮಾಣ ಮಾಡಿ. ಧರ್ಮಸ್ಥಳ ಬೇಡ ಅಂದ್ರೆ ಚಾಮುಂಡೇಶ್ವರಿ ಬೆಟ್ಟಕ್ಕೆ ಹೋಗೋಣ ಬನ್ನಿ. ನೀವು ದೊಡ್ಡ ಆಲಹಳ್ಳಿಯಲ್ಲಿ ಏನೇನು ಮಾಡಿದ್ದೀರಾ ಅಂತಾ ಗೊತ್ತಿದೆ. ನಾನು ಒಂದು ಬಾರಿ ತಪ್ಪು ಮಾಡಿದ್ದೇನೆ. ಅದನ್ನು ಒಪ್ಪಿಕೊಂಡಿದ್ದೇನೆ. ನಾನು ನಿಮ್ಮ ರೀತಿ ಕೆಲಸ ಮಾಡಿಲ್ಲ ಎಂದು ಗುಡುಗಿದರು.

ನಾನು ಮೈತ್ರಿ ಸರ್ಕಾರ ಮಾಡಿದಾಗ ವಸತಿ ಇಲಾಖೆಗೆ ಸಂಬಂದಪಟ್ಟ ವಿಚಾರ ಹೇಳುತ್ತೇನೆ. ಚುನಾವಣೆಗೆ ಮುಂಚೆ 15 ಲಕ್ಷ ಮನೆ ಕಟ್ಟುವುದಕ್ಕೆ ಆದೇಶ ಪ್ರತಿ ಹೊರಡಿಸಿದ್ದರು. 2018 ಫೆಬ್ರುವರಿಯಲ್ಲಿ ಬಜೆಟ್ ಮಂಡನೆ ಮಾಡಿದ್ದು, 2700 ಕೋಟಿ ರೂಒಆಯಿ ಬಜೆಟ್ ನಲ್ಲಿ ಇಟ್ಟಿದ್ದರು. ನಾನು ಅಧಿಕಾರ ಸ್ವೀಕಾರ ಮಾಡಿದಾಗ 29 ಸಾವಿರ ಕೋಟಿ ರೂ. ಕಮಿಟ್​ ಮೆಂಟ್ ಇತ್ತು. ಆದ್ರೆ, ಅದಕ್ಕೆ ಫೈನಾನ್ಸ್ ಅಪ್ರುವಲ್ ಅಗಿರಲಿಲ್ಲ. 1500 ಕೋಟಿ ದುಡ್ಡು ಯಾರು ಕೊಡುತ್ತಿದ್ದರು. ಫೈನಾನ್ಸ್ ಅಪ್ರುವಲ್ ಇಲ್ಲ. 1500 ಕೊಟಿಯಲ್ಲಿ ಎಷ್ಟು ವಸೂಲಿ ಮಾಡಿದ್ದಿರಾ? ವಿಧಾನಸಭೆಯಲ್ಲಿ ಚರ್ಚೆ ಮಾಡುತ್ತೇನೆ. ಪಾಪ ಬಿಜೆಪಿ ಮೇಲೆ ಆರೋಪ ಮಾಡುತ್ತಿದ್ದಾರೆ. 80 ಶಾಸಕರು ಯಾವುದೇ ಷರತ್ತಿಲ್ಲದೆ ಸಿಎಂ ಮಾಡಿದ್ದಕ್ಕೆ ಕೃತಜ್ಞತೆ ಸಲ್ಲಿಸಲಿಲ್ಲ ಎಂದು ಡಿಸಿಎಂ ಹೇಳಿದ್ದಾರೆ. ಡೇ 1ರಿಂದಲೇ ಷರತ್ತುಗಳನ್ನ ಹಾಕಿದ್ರು. ನಾವೇನು ನಿಮ್ಮ ಹೈಕಮಾಂಡ್ ಮುಂದೆ ಹೋಗಿದ್ನಾ? ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

Published On - 11:30 am, Thu, 26 October 23

ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು