ಸ್ಯಾಂಟ್ರೋ ರವಿ ಕಂತೆ-ಕಂತೆ ಹಣ ಲೆಕ್ಕ ಹಾಕಿರುವುದು ಗೃಹ ಸಚಿವರ ಮನೆಯಲ್ಲಿ: ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ

ಸ್ಯಾಂಟ್ರೋ ರವಿ ಕಂತೆ-ಕಂತೆ ಹಣ ಎಣಿಕೆ ಮಾಡುತ್ತಿರುವುದು ಗೃಹ ಸಚಿವ ಆರಗ ಜ್ಞಾನೇಂದ್ರ ನಿವಾಸದಲ್ಲಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅನುಮಾನ ವ್ಯಕ್ತಪಡಿಸಿದ್ದಾರೆ.

ಸ್ಯಾಂಟ್ರೋ ರವಿ ಕಂತೆ-ಕಂತೆ ಹಣ ಲೆಕ್ಕ ಹಾಕಿರುವುದು ಗೃಹ ಸಚಿವರ ಮನೆಯಲ್ಲಿ: ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ
ಹೆಚ್​ಡಿಕೆ, ಸ್ಯಾಂಟ್ರೋ ರವಿ, ಆರಗ ಜ್ಞಾನೇಂದ್ರ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Jan 08, 2023 | 2:59 PM

ಬೀದರ್: ಸ್ಯಾಂಟ್ರೋ ರವಿ(Santro Ravi) ಜೊತೆಗೆ ಸಚಿವರು, ಬಿಜೆಪಿ (BJP) ನಾಯಕರು ಇರುವ ಫೋಟೋಗಳು ಸಾಮಾಜಿಕ ಜಾಲತಾಣಗಳ ವೈರಲ್ ಆಗುತ್ತಿವೆ. ಅದರಲ್ಲೂ ಮುಖ್ಯವಾಗಿ ಕಂತೆ-ಕಂತೆ ನೋಟುಗಳ ಜೊತೆ ಸ್ಯಾಂಟ್ರೋ ರವಿ ಫೋಟೋ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು, ಆರಗ ಮನೆಯಲ್ಲಿ ಹಣದ ಲೆಕ್ಕ ಹಾಕುತ್ತಿರುವ ಫೋಟೋ ಎಂದು ಮಾಜಿ ಮುಖ್ಯಮಂತ್ರಿ ಎಚ್​ಡಿ ಕುಮಾರಸ್ವಾಮಿ(HD Kumaraswamy) ಹೊಸ ಬಾಂಬ್ ಸಿಡಿಸಿದ್ದಾರೆ.

ಇದನ್ನೂ ಓದಿ: ಯುವತಿಯರ ವಯಸ್ಸು.. ಚೆಂದಕ್ಕೆ ತಕ್ಕಂತೆ ಕೋಡ್​ ವರ್ಡ್: ಗರ್ಲ್ಸ್ ಸಪ್ಲೈಗೆ ಇಟ್ಟಿದ್ದ ‘ಕಾರ್’ ಕೋಡ್‌ವರ್ಡ್​ಗಳು ಹೀಗಿವೆ

ಬೀದರ್​ ಜಿಲ್ಲೆ ಬಸವಕಲ್ಯಾಣದಲ್ಲಿ ಇಂದು(ಜನವರಿ 08) ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್​.ಡಿ.ಕುಮಾರಸ್ವಾಮಿ, ಗೃಹ ಸಚಿವರ ಮನೆಯಲ್ಲಿ ಹಣದ ಲೆಕ್ಕ ಹಾಕಿರುವ ಫೋಟೋ ವೈರಲ್ ಆಗಿದೆ. ಆರಗ ಮನೆಯಲ್ಲಿ ಲೆಕ್ಕ ಹಾಕಿದ ಹಣದ ಫೋಟೋ ತೆಗೆದವರು ಯಾರು? ಎಸಿಪಿ ವರ್ಗಾವಣೆ ಮಾಡಿಸಲು 15 ಲಕ್ಷ ಹಣ ಎಣಿಸುತ್ತಿರುವುದಂತೆ. ಇದು ಗೃಹಸಚಿವರ ನಿವಾಸದಲ್ಲೇ ನಡೆದಿದೆ, ಈ ಬಗ್ಗೆ ತನಿಖೆಯಾಗಲಿ ಎಂದು ಆಗ್ರಹಿಸಿದರು.

ಸಚಿವ ಸೋಮಶೇಖರ್ ಜತೆ ಸ್ಯಾಂಟ್ರೋ ರವಿ ವರ್ಗಾವಣೆ ಬಗ್ಗೆ ಚರ್ಚೆಯಾಗುತ್ತಿದೆ. ಆ ವಿಡಿಯೋ ರೆಕಾರ್ಡ್ ನಾನು ಮಾಡಿಸಿದ್ದಾ ಎಂದು ಪ್ರಶ್ನಿಸಿದ ಕುಮಾರಸ್ವಾಮಿ, ಇಂತಹ ವಿಷಯ ಇಟ್ಟುಕೊಂಡು ರಾಜಕೀಯ ಮಾಡುವ ಕರ್ಮ ನನಗಿಲ್ಲ ಸಿಎಂ ದಲ್ಲಾಳಿಗಳೇ ಆಡಳಿತ ನಡೆಸುವ ಸ್ಥಿತಿ ಸೃಷ್ಟಿ ಮಾಡಿಕೊಂಡಿದ್ದಾರೆ ಎಂದು ತಿರುಗೇಟು ನೀಡಿದರು.

ಇದನ್ನೂ ಓದಿ: Santro Ravi: ಸ್ಯಾಂಟ್ರೋ ರವಿಗೆ ಆ ಹೆಸರು ಬಂದಿದ್ದು ಹೇಗೆ? ಇಲ್ಲಿದೆ ಮಂಡ್ಯ ಡಿವೈಎಸ್‌ಪಿ ಪುತ್ರನ ಸಂಪೂರ್ಣ ಜಾತಕ

ಕುಮಾರಕೃಪಾ ಹೊಸ ಕಟ್ಟಡದಲ್ಲಿ ಏನೆಲ್ಲಾ ನಡೆಯಿತು. ಉಸ್ತುವಾರಿ ಇದ್ದ ದೇವರಾಜನನ್ನು ಯಾಕೆ ಎತ್ತಂಗಡಿ ಮಾಡಿದರು? ಸಿಎಂ ಹೆಚ್ಚುವರಿ ಕಾರ್ಯದರ್ಶಿ ಜಗದೀಶ್ ಎತ್ತಂಗಡಿ ಯಾಕೆ ಆಯ್ತು? ಜಗದೀಶ್​​ಗೆ ಹೆಚ್ಚುವರಿ ಹೊಣೆ ಇತ್ತು, ಬೆಂಕಿ ಇಲ್ಲದೆ ಹೊಗೆ ಬರುತ್ತಾ? ನಿಮ್ಮ ತಂದೆಯವರು ಹೇಳಿಕೊಟ್ಟಿದ್ದು ಇದೇನಾ ಬೊಮ್ಮಾಯಿ ಅವರೇ? ರಾಯಿಸ್ಟ್ ಎಸ್.ಆರ್.ಬೊಮ್ಮಾಯಿರಿಂದ ಸಿಎಂ ಕಲಿತದ್ದು ಇದೇನಾ? ಮುಖ್ಯಮಂತ್ರಿ ಮನೆ ಕೂಗಳತೆ ದೂರದಲ್ಲಿ ಇದೆಲ್ಲಾ ಅಸಹ್ಯ ನಡೆದಿದೆ. ಇದೇನಾ ನಿಮ್ಮ ತಂದೆಯವರಿಂದ ಕಲಿತದ್ದು ಎಂದು ಸಿಎಂ ಬೊಮ್ಮಾಯಿ ವಿರುದ್ಧ ಕುಮಾರಸ್ವಾಮಿ ಕಿಡಿಕಾರಿದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 2:58 pm, Sun, 8 January 23

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್