AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್‌ನ 20 ಶಾಸಕರ ಜೊತೆ ಹೈದರಾಬಾದ್‌ಗೆ ತೆರಳಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ವಿಶೇಷ ಏನು?

HD Kumaraswamy: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಜೆಡಿಎಸ್ ಪಕ್ಷದ 20 ಶಾಸಕರ ಜತೆ ಇಂದು ಹೈದ್ರಾಬಾದ್ ಗೆ ಪ್ರಯಾಣ ಬೆಳೆಸಿದ್ದಾರೆ.

ಜೆಡಿಎಸ್‌ನ 20 ಶಾಸಕರ ಜೊತೆ ಹೈದರಾಬಾದ್‌ಗೆ ತೆರಳಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ವಿಶೇಷ ಏನು?
ಜೆಡಿಎಸ್‌ನ 20 ಶಾಸಕರ ಜೊತೆ ಹೈದರಾಬಾದ್‌ಗೆ ತೆರಳಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ವಿಶೇಷ ಏನು?
TV9 Web
| Edited By: ಸಾಧು ಶ್ರೀನಾಥ್​|

Updated on: Oct 04, 2022 | 6:06 PM

Share

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು (HD Kumaraswamy) ತಮ್ಮ ಜೆಡಿಎಸ್ ಪಕ್ಷದ 20 ಶಾಸಕರ ಜತೆ ಇಂದು ಹೈದ್ರಾಬಾದ್ ಗೆ ಪ್ರಯಾಣ ಬೆಳೆಸಿದ್ದಾರೆ. ವಿಶೇಷ ವಿಮಾನದಲ್ಲಿ ತಮ್ಮ ಶಾಸಕರ ಜೊತೆ ಪ್ರಯಾಣ ಹೆಚ್‌ಡಿಕೆ ಇಂದು ಮತ್ತು ನಾಳೆ ಹೈದರಾಬಾದ್‌ನಲ್ಲಿ ವಾಸ್ತವ್ಯವಿರಲಿದ್ದಾರೆ. ತೆಲಂಗಾಣ (Telangana) ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು (K Chandrasekhar Rao) ನವರಾತ್ರಿ ಸಂದರ್ಭದಲ್ಲಿ ನೂತನ ಪಕ್ಷ ಘೋಷಣೆ ಮಾಡುವುದಾಗಿ ಈ ಹಿಂದೆ ಘೋಷಿಸಿದಂತೆ ನಾಳೆ ಹೈದರಾಬಾದ್‌ನಲ್ಲಿ (Hyderabad) ಕಾರ್ಯಕ್ರಮ ಹಮ್ಮಿಕೊಂಡಿದೆ. ಸಿಎಂ ಕೆಸಿಆರ್​ ಆಹ್ವಾನದ ಮೇರೆಗೆ HDK ತಂಡ ನಾಳೆ ಆ ಸಮಾರಂಭದಲ್ಲಿ ಭಾಗಿಯಾಗಲಿದೆ.

ಸಿಎಂ ಕೆಸಿಆರ್‌ ನೂತನ ಪಕ್ಷ ಘೋಷಣೆ ಕಾರ್ಯಕ್ರಮದಲ್ಲಿ ಭಾಗಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಭಾರತ ರಾಷ್ಟ್ರ ಸಮಿತಿ ಪಕ್ಷವನ್ನು ಅಧಿಕೃತವಾಗಿ ನಾಳೆ ಸ್ಥಾಪನೆ ಮಾಡಲಿದ್ದಾರೆ. ಇತ್ತೀಚೆಗೆ ಬೆಂಗಳೂರಿಗೆ ಆಗಮಿಸಿದ್ದ ಮುಖ್ಯಮಂತ್ರಿ ಕೆ.ಸಿ.ಆರ್​ ಅವರು ಭಾರತದ ಮಾಜಿ ಪ್ರಧಾನಿ, ಜೆಡಿಎಸ್ ಅಧಿನಾಯಕ ಹೆಚ್‌ಡಿ ದೇವೇಗೌಡ ಮತ್ತು ಹೆಚ್‌ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ, ಚರ್ಚೆ ನಡೆಸಿದ್ದರು. ಪಕ್ಷ ಸ್ಥಾಪನೆ ಬಗ್ಗೆಯೂ ಹೆಚ್‌ಡಿ ದೇವೇಗೌಡ ಮತ್ತು ಹೆಚ್‌ಡಿಕೆ ಜತೆ ಚರ್ಚಿಸಿದ್ದರು.

Follow Us
TV9 Web
TV9 Web

TV9 Kannada

Read More