ಡಿಕೆ ಶಿವಕುಮಾರ್​ ತನಿಖೆಗೆ ಕೋರ್ಟ್ ಅಸ್ತು: ಜೈಲಿಗೆ ಹೋಗ್ತಾರೆ ಹೇಳಿಕೆ ಸ್ಪಷ್ಟನೆ ಕೊಟ್ಟ ಹೆಚ್​ಡಿ ಕುಮಾರಸ್ವಾಮಿ

ಬೆಂಗಳೂರು, (ಅಕ್ಟೋಬರ್ 19): ಡಿಕೆ ಶಿವಕುಮಾರ್  (dk Shivakumar) ಅವರು ಸಿಬಿಐ ತನಿಖೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ (Karnataka High Court) ವಜಾಗೊಳಿಸಿದೆ. ಅಲ್ಲದೇ ಸಿಬಿಐ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನೂ ಸಹ ಹೈಕೋರ್ಟ್ ತೆರವುಗೊಳಿಸಿದ್ದು, 3 ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಲು ಆದೇಶಿಸಿದೆ. ಇದರಿಂದ ಡಿಕೆ ಶಿವಕುಮಾರ್​ಗೆ ಸಂಕಷ್ಟಕ್ಕೆ ಎದುರಾಗಿದೆ. ಇನ್ನು ಈ ಬಗ್ಗೆ ವಿರೋಧ ಪಕ್ಷಗಳ ನಾಯಕರು ತಮ್ಮದೇ ಅಭಿಪ್ರಾಯಗಳನ್ನು ತಿಳಿಸಿದ್ದಾರೆ. ಡಿಕೆ ಶಿವಕುಮಾರ್ ತಿಹಾರ್ ಜೈಲಿಗೆ ಹೋಗುತ್ತಾರೆ ಎಂದಿದ್ದ ಕುಮಾರಸ್ವಾಮಿ ಇದೀಗ […]

ಡಿಕೆ ಶಿವಕುಮಾರ್​ ತನಿಖೆಗೆ ಕೋರ್ಟ್ ಅಸ್ತು: ಜೈಲಿಗೆ ಹೋಗ್ತಾರೆ ಹೇಳಿಕೆ ಸ್ಪಷ್ಟನೆ ಕೊಟ್ಟ ಹೆಚ್​ಡಿ ಕುಮಾರಸ್ವಾಮಿ
ಕುಮಾರಸ್ವಾಮಿ-ಡಿಕೆ ಶಿವಕುಮಾರ್
Follow us
| Updated By: ರಮೇಶ್ ಬಿ. ಜವಳಗೇರಾ

Updated on: Oct 19, 2023 | 12:36 PM

ಬೆಂಗಳೂರು, (ಅಕ್ಟೋಬರ್ 19): ಡಿಕೆ ಶಿವಕುಮಾರ್  (dk Shivakumar) ಅವರು ಸಿಬಿಐ ತನಿಖೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ (Karnataka High Court) ವಜಾಗೊಳಿಸಿದೆ. ಅಲ್ಲದೇ ಸಿಬಿಐ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನೂ ಸಹ ಹೈಕೋರ್ಟ್ ತೆರವುಗೊಳಿಸಿದ್ದು, 3 ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಲು ಆದೇಶಿಸಿದೆ. ಇದರಿಂದ ಡಿಕೆ ಶಿವಕುಮಾರ್​ಗೆ ಸಂಕಷ್ಟಕ್ಕೆ ಎದುರಾಗಿದೆ. ಇನ್ನು ಈ ಬಗ್ಗೆ ವಿರೋಧ ಪಕ್ಷಗಳ ನಾಯಕರು ತಮ್ಮದೇ ಅಭಿಪ್ರಾಯಗಳನ್ನು ತಿಳಿಸಿದ್ದಾರೆ. ಡಿಕೆ ಶಿವಕುಮಾರ್ ತಿಹಾರ್ ಜೈಲಿಗೆ ಹೋಗುತ್ತಾರೆ ಎಂದಿದ್ದ ಕುಮಾರಸ್ವಾಮಿ ಇದೀಗ ಹೈಕೋರ್ಟ್​ ನೀಡಿದ ತೀರ್ಪಿನ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಇಂದು (ಅಕ್ಟೋಬರ್ 19) ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್​ಡಿ ಕುಮಾರಸ್ವಾಮಿ, ರಾಮನಗರದಿಂದ ಗಂಟು ಮೂಟೆ ಕಟ್ಟಿ ಹಾಸನಕ್ಕೆ ಕಳಿಸುತ್ತೇವೆ ಎಂದು ಡಿಕೆ ಬ್ರದರ್ಸ್​ ಹೇಳಿದ್ದರು. ಇದಕ್ಕೆ ನಮ್ಮ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದರು ಡಿಕೆ ಬ್ರದರ್ಸ್ ವಿಚಾರವಾಗಿ ನೀವು ಸಾಫ್ಟ್ ಆಗಿದ್ದೀರಾ ಎಂದು ನನ್ನನ್ನು ಪ್ರಶ್ನಿಸಿದ್ದರು. ಈ ಸಂದರ್ಭದಲ್ಲಿ ನಾನು ಮಾತನಾಡಿ ಸಂತೋಷವಾಗಿ ಹಾಸನಕ್ಕೆ ಹೋಗಬಹುದು, ಅವರು ಎಲ್ಲಿಗೆ (ತಿಹಾರ್ ಜೈಲು) ಹೋಗಬಹುದು ಎಂದು ಕೇಳಿದ್ದೆ ಆದ್ರೆ, ಇದೀಗ ನನ್ನ ಹೇಳಿಕೆಗೂ, ಹೈಕೋರ್ಟ್ ಆದೇಶಕ್ಕೂ ಸಂಬಂಧ ಇಲ್ಲ. ಸಿಬಿಐ ಕೊಟ್ಟ ಮಾಹಿತಿ ಆಧಾರದ ಮೇಲೆ ನ್ಯಾಯಾಲಯದ ತೀರ್ಪು ಕೊಟ್ಟಿದೆ. ಮೂರು ತಿಂಗಳಲ್ಲಿ ತನಿಖೆ ಮುಗಿಸಿ ಎಂದು ಸಿಬಿಐ ಅವರಿಗೂ ಗಡುವು ಕೊಟ್ಟಿದ್ದಾರೆ. ಮುಂದೆ ಏನಾಗಲಿದೆ ಅಂತ ಕಾದು ನೋಡೋಣ ಎಂದು ಹೇಳಿದರು. ಈ ಮೂಲಕ ಡಿಕೆ ಶಿವಕುಮಾರ್ ತಿಹಾರ್ ಜೈಲಿಗೆ ಹೋಗುತ್ತಾರೆ ಎಂಬ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದರು.

ಇದನನ್ನೂ ಓದಿ: ಸಿಬಿಐ ತನಿಖೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾ: ಡಿಕೆ ಶಿವಕುಮಾರ್​ಗೆ ಮತ್ತೆ ಸಂಕಷ್ಟ

ಗಾದೆ ಮಾತಿನ ಮೂಲಕ ಟಾಂಗ್ ಕೊಟ್ಟ ಸಿಟಿ ರವಿ

ಸಿಬಿಐ ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿರುವ ಬಗ್ಗೆ ಬಿಜೆಪಿ ನಾಯಕ ಸಿಟಿ ರವಿ ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯಿಸಿ, ಹಾಲಿಂದು ಹಾಲಿಗೆ, ನೀರಿಂದು ನೀರಿಗೆ, ಉಪ್ಪು ತಿಂದೋನು ನೀರು ಕುಡಿಲೇಬೇಕು. ಇವೆಲ್ಲಾ ಹಳೇ ಕಾಲದ ಗಾದೆ ಮಾತುಗಳು. ತಪ್ಪು ಮಾಡಿದವನಿಗೆ ಶಿಕ್ಷೆ ಆಗಬೇಕು, ಪ್ರಮಾಣಿಕರಿಗೆ ತೊಂದರೆ ಆಗಬಾರದು . ಯಾರಾದ್ರು ಅಕ್ರಮ ಮಾಡಿದ್ರೆ ಅದು ಇಂದಲ್ಲ ನಾಳೆ ಬಯಲಿಗೆ ಬರಬೇಕು. ಸುಮ್​ ಸುಮ್ನೆ ಗಾದೆ ಹುಟ್ಟುತ್ತಾ, ತಲೆತಲಾಂತರದ ಸತ್ಯ ಇರುತ್ತೆ. ಊರಿಗೆ ಬಂದವಳು ನೀರಿಗೆ ಬರಲ್ವಾ. ಕಳ್ಳನ ಹೆಂಡ್ತಿ ಯಾವತ್ತಿದ್ರು ಡ್ಯಾಶ್….ಡ್ಯಾಶ್…ಸತ್ಯವನ್ನ ಹೂತಾಕಲು ಆಗಲ್ಲ, ಕೆಲ ಕಾಲ ಮುಚ್ಚಿಡಬಹುದು. ಆದರೆ ಹೊರಬರುವುದು ಸತ್ಯ ಎಂದು ಪರೋಕ್ಷವಾಗಿ ಡಿಕೆ ಶಿವಕುಮಾರ್​ಗೆ ಟಾಂಗ್ ಕೊಟ್ಟರು.

ಯಾರಾದರೂ ತಪ್ಪುಮಾಡಿರುವವರು ಇದ್ದರೆ ಶಿಕ್ಷೆ ಆಗಬೇಕು. ಕಾನೂನಿಗಿಂತ ಯಾರು ದೊಡ್ಡವರಲ್ಲ. ನಾನು, ಸಿಎಂ, ಡಿಸಿಎಂ, ಪ್ರಧಾನಿ ಯಾರೂ ಕಾನೂನಿಗೆ ಅತಿಥರಲ್ಲ. ಕಾನೂನಿನ ದೃಷ್ಟಿಯಿಂದ ಎಲ್ಲರೂ ಸಮಾನರು ಎಂದು ಅಂಬೇಡ್ಕರ್ ಹೇಳಿದ್ದಾರೆ. ಇವರಿಗೆ ಕಾನೂನು ಅನ್ವಯ ಆಗಲ್ಲ, ಏನ್ ಮಾಡಿದರೆ ನಡೆಯುತ್ತೆ ಎನ್ನುವುದು ನಮ್ಮ ದೇಶದಲ್ಲಿ ಇಲ್ಲ. ಯಾರು ತಪ್ಪು ಮಾಡಿದರೂ ಶಿಕ್ಷೆ ಆಗಲೇಬೇಕು. ಯಾರು ತಪ್ಪು ಮಾಡಿದ್ದಾರೆಂದು ಹೇಳುವ ಅಧಿಕಾರ ನನಗೆ ಇಲ್ಲ, ನ್ಯಾಯಾಲಯಕ್ಕೆ ಇದೆ. ನಾವು ಮಾಡಿರಬಹುದು ಎಂದು ಹೇಳಬಹುದು, ಮಾಡಿದ್ದಾರೆ ಎಂದು ಹೇಳುವುದಕ್ಕೆ ಆಗಲ್ಲ ಎಂದು ಡಿಕೆ ಶಿವಕುಮಾರ್ ಹೆಸರೇಳದೆ ಗಾದೆ ಮೂಲಕ ತಿವಿದರು.

ಮತ್ತೆ ಡಿಕೆಶಿ ಜೈಲಿಗೆ ಹೋಗ್ತಾರೆ ಎಂದ ಈಶ್ವರಪ್ಪ

ಡಿಕೆ ಶಿವಕುಮಾರ್ ಪ್ರಕರಣದ ಬಗ್ಗೆ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಶಿವಮೊಗ್ಗದಲ್ಲಿ ಮಾತನಾಡಿ, ಈ ಕೇಸ್​ನಲ್ಲಿ ಡಿಕೆ ಶಿವಕುಮಾರ್​ ಜೈಲಿಗೆ ಹೋಗಿ ಜಾಮೀನಿನ ಮೇಲೆ ಹೊರಗೆ ಇದ್ದಾರೆ. ಡಿಕೆ ಶಿವಕುಮಾರ್ ಅಕ್ರಮ ಸಂಪಾದನೆ ಪ್ರಕರಣ ಬಗ್ಗೆ ಸಿಬಿಐ ತನಿಖೆ ಮಾಡುತ್ತಿದೆ. ಡಿ.ಕೆ.ಶಿವಕುಮಾರ್ ಮತ್ತೆ ಜೈಲಿಗೆ ಹೋಗುತ್ತಾರೆ ಬರೆದಿಟ್ಟುಕೊಳ್ಳಿ ಎಂದು ಬಾಂಬ್ ಸಿಡಿಸಿದರು.

ಡಿ.ಕೆ.ಶಿವಕುಮಾರ್​ ಭಂಡತನದ ರಾಜಕಾರಣ ಮಾಡುತ್ತಿದ್ದಾರೆ. ಮೊನ್ನೆ ಬೆಂಗಳೂರಿನಲ್ಲಿ 100 ಕೋಟಿ ರೂಪಾಯಿ ಅಕ್ರಮ ಹಣ ಪತ್ತೆಯಾಗಿದೆ. ತನಿಖೆ ಮಾಡಿ ಎಂದು ಬಿಜೆಪಿ ಕೇಳುವುದು ತಪ್ಪಾ ಎಂದು ಪ್ರಶ್ನಿಸಿದ ಈಶ್ವರಪ್ಪ. ನೀವು ಕಳ್ಳರು ಎಂದು ನಾವು ಇನ್ನೂ ನೇರವಾಗಿ ಹೇಳಿಲ್ಲ ಎಂದು ಕಿಡಿಕಾರಿದರು.

ಈ ಬಗ್ಗೆ ಮತ್ತೋರ್ವ ಬಿಜೆಪಿ ನಾಯಕ ಮಹೇಶ್ ಟೆಂಗಿನಕಾಯಿ ಮಾತನಾಡಿ, ಕೋರ್ಟ್ ಆದೇಶವನ್ನು ನಾವು ಸ್ವಾಗತಿಸುತ್ತೇವೆ. ಆದಷ್ಟು ಬೇಗ ಸಿಬಿಐ ತನಿಖೆ ಮಾಡಿ ಡಿ.ಕೆ. ಶಿವಕುಮಾರ್ ವಿರುದ್ಧದ ಆರೋಪ ಸಾಬೀತು ಮಾಡಲಿ. ಯಾವಾಗಲೂ ಸತ್ಯಕ್ಕೆ ಜಯ ಇರುತ್ತದೆ. ಡಿ.ಕೆ. ಶಿವಕುಮಾರ್ ತಪ್ಪು ಮಾಡಿದ್ದರೆ ಎದುರಿಸಲೇಬೇಕು. ತಪ್ಪು ಮಾಡದಿದ್ದರೆ ಸಾಬೀತು ಮಾಡಲಿ. ಶಿವಕುಮಾರ್ ಬಳಿ ಸಾಕಷ್ಟು ದೊಡ್ಡ ಹಣ ಸಿಕ್ಕಿತ್ತು, ದೊಡ್ಡ ಆಪಾದನೆ ಇತ್ತು. ಈ ಬಗ್ಗೆ ಸಿಬಿಐ ತನಿಖೆ ತೀವ್ರಗೊಳಿಸಿ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಕಾಣಿಸಲಿ ಎಂದು ಹೇಳಿದರು.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಯಲಾ ಕುನ್ನಿ ಚಿತ್ರದಲ್ಲಿ ಕೋಮಲ್ ಜತೆ ಮಿತ್ರಾಗೆ ಸಿಕ್ಕಿದೆ ಡಿಫರೆಂಟ್ ಪಾತ್ರ
ಯಲಾ ಕುನ್ನಿ ಚಿತ್ರದಲ್ಲಿ ಕೋಮಲ್ ಜತೆ ಮಿತ್ರಾಗೆ ಸಿಕ್ಕಿದೆ ಡಿಫರೆಂಟ್ ಪಾತ್ರ
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ