ಬಿಜೆಪಿ-ಜೆಡಿಎಸ್ ಮೈತ್ರಿ ಬೆನ್ನಲ್ಲೇ ರಾಜಕೀಯ ವೈರತ್ವ ಮರೆತು ಒಂದಾದ ಕುಮಾರಸ್ವಾಮಿ, ಸಿಪಿ ಯೋಗೇಶ್ವರ್

ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವ ಹಿನ್ನೆಲೆ ರಾಜಕೀಯ ಭವವಿಷ್ಯದ ದೃಷ್ಟಿಯಿಂದ ಬಿಜೆಪಿಯ ಸಿಪಿ ಯೋಗೇಶ್ವರ್ ಮತ್ತು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ರಾಜಕೀಯ ಬದ್ಧ ವೈರತ್ವ ಮರೆತು ಒಂದಾಗಿದ್ದಾರೆ. ಸಂಧಾನ ಯಶಸ್ವಿಯಾದ ನಂತರ ಯೋಗೇಶ್ವರ್ ಅವರು ಎರೆಡೆರಡು ಬಾರಿ ಆಸ್ಪತ್ರೆಗೆ ಭೇಟಿ ನೀಡಿ ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ್ದಾರೆ.

ಬಿಜೆಪಿ-ಜೆಡಿಎಸ್ ಮೈತ್ರಿ ಬೆನ್ನಲ್ಲೇ ರಾಜಕೀಯ ವೈರತ್ವ ಮರೆತು ಒಂದಾದ ಕುಮಾರಸ್ವಾಮಿ, ಸಿಪಿ ಯೋಗೇಶ್ವರ್
ಹೆಚ್​ಡಿ ಕುಮಾರಸ್ವಾಮಿ ಮತ್ತು ಸಿಪಿ ಯೋಗೇಶ್ವರ್
Follow us
Sunil MH
| Updated By: Rakesh Nayak Manchi

Updated on: Oct 05, 2023 | 1:44 PM

ಬೆಂಗಳೂರು, ಅ.5: ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವ ಹಿನ್ನೆಲೆ ರಾಜಕೀಯ ಭವವಿಷ್ಯದ ದೃಷ್ಟಿಯಿಂದ ಬಿಜೆಪಿಯ ಸಿ.ಪಿ. ಯೋಗೇಶ್ವರ್ (C.P. Yogeshwar) ಮತ್ತು ಮಾಜಿ ಸಿಎಂ ಹೆಚ್.​ಡಿ. ಕುಮಾರಸ್ವಾಮಿ (H.D. Kumaraswamy) ರಾಜಕೀಯ ಬದ್ಧ ವೈರತ್ವ ಮರೆತು ಒಂದಾಗಿದ್ದಾರೆ. ಸಂಧಾನ ಯಶಸ್ವಿಯಾದ ನಂತರ ಯೋಗೇಶ್ವರ್ ಅವರು ಎರೆಡೆರಡು ಬಾರಿ ಆಸ್ಪತ್ರೆಗೆ ಭೇಟಿ ನೀಡಿ ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ್ದಾರೆ.

ಮಾಗಡಿ ಮಾಜಿ ಶಾಸಕ ಮಂಜು ಮತ್ತು ರಾಮನಗರ ಜಿಲ್ಲಾ ಮುಖಂಡರು ಸೇರಿ ಸಂಧಾನ ಸಭೆ ನಡೆಸಿ ಇಬ್ಬರು ನಾಯಕರನ್ನು ಒಂದಾಗಿಸಿದ್ದಾರೆ. ಇದರ ಬೆನ್ನಲ್ಲೇ ಎರಡನೇ ಬಾರಿ ಆಸ್ಪತ್ರೆಗೆ ಭೇಟಿ ನೀಡಿದ ಯೋಗೇಶ್ವರ್ ಅವರು ಕುಮಾರಸ್ವಾಮಿ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ.

ಇದನ್ನೂ ಓದಿ: ಕುಮಾರಸ್ವಾಮಿ ಅಪ್ಪನ ಹೆಸರು ಹೇಳಿಕೊಂಡು ಇನ್ನೆಷ್ಟು ದಿನ ರಾಜಕಾರಣ ನಡೆಸುತ್ತಾರೆ? ಎನ್ ಚಲುವರಾಯಸ್ವಾಮಿ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿರುವ ಯೋಗೇಶ್ವರ್ ಅವರು ಜೆಡಿಎಸ್ ಜೊತೆ ಒಟ್ಟಾಗಿ ಹೋದರೆ ಗೆಲ್ಲುವ ಅವಕಾಶ ಹೆಚ್ಚಿದೆ. ಇದೇ ಕಾರಣಕ್ಕೆ ಜೆಡಿಎಸ್ ಜೊತೆ ಮುನಿಸು ಬಿಟ್ಟು ಕೈಜೋಡಿಸಿದ್ದಾರೆ.

ಜೆಡಿಎಸ್ ಜೊತೆ ಒಟ್ಟಾಗಿ ಹೋಗದೇ ಇದ್ದರೆ ಮತ ವಿಭಜನೆಯಾಗಿ ಕಾಂಗ್ರೆಸ್​​ಗೆ ಅನುಕೂಲ ಹೆಚ್ಚು. ಅದ್ದರಿಂದ ಮುಂದಿನ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಉಭಯ ನಾಯಕರು ಒಂದಾಗಿದ್ದಾರೆ. ಕಳೆಸ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಬೆಂಬಲ ನೀಡದೆ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿತ್ತು. ಇದರಿಂದ ಕಾಂಗ್ರೆಸ್ ಗೆಲ್ಲಲು ಅನುಕೂಲ ಆಗಿತ್ತು.

ಈಗ ಬಿಜೆಪಿ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ. ಹೀಗಾಗಿ ಕುಮಾರಸ್ವಾಮಿ ಯೋಗೇಶ್ವರ್ ಒಟ್ಟಾದರೆ ಬಿಜೆಪಿ ಅಭ್ಯರ್ಥಿ ಗೆಲುವು ಸುಲಭವಾಗಲಿದೆ. ಹೀಗಾಗಿ ಇಬ್ಬರ ನಡುವೆ ಏನೇ ವೈಷಮ್ಯ ಇದ್ದರೂ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಉಭಯ ನಾಯಕರು ಒಂದಾಗಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್