ಎಲ್​ಆರ್ ಶಿವರಾಮೇಗೌಡ ಆಡಿಯೋ ವೈರಲ್ ವಿಚಾರಕ್ಕೆ ಹೆಚ್​ಡಿ ಕುಮಾರಸ್ವಾಮಿ ಗರಂ; ಪಕ್ಷದಿಂದ ಹೊರಹಾಕಲು ಸೂಚನೆ

ಎಲ್​ಆರ್ ಶಿವರಾಮೇಗೌಡ ಆಡಿಯೋ ವೈರಲ್ ವಿಚಾರಕ್ಕೆ ಹೆಚ್​ಡಿ ಕುಮಾರಸ್ವಾಮಿ ಗರಂ; ಪಕ್ಷದಿಂದ ಹೊರಹಾಕಲು ಸೂಚನೆ
ಜೆಡಿಎಸ್ ನಾಯಕ ಹೆಚ್​.ಡಿ. ಕುಮಾರಸ್ವಾಮಿ

ಶಿವರಾಮೇಗೌಡ ಪಕ್ಷದಿಂದ ಹೊರಹಾಕಲು ಹೆಚ್‌.ಡಿ. ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ನೋಟಿಸ್ ನೀಡಿ ಪಕ್ಷದಿಂದ ಹೊರಹಾಕಲು ಸೂಚನೆ ಕೊಡಲಾಗಿದೆ. ಈ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷರಿಗೆ ‌ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.

TV9kannada Web Team

| Edited By: ganapathi bhat

Jan 31, 2022 | 5:25 PM


ಬೆಂಗಳೂರು: ಮಾಜಿ ಸಂಸದ ಶಿವರಾಮೇಗೌಡ ಆಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿ ಎಲ್.ಆರ್ ಶಿವರಾಮೇಗೌಡ ವಿರುದ್ಧ ಮಾಜಿ ಸಿಎಂ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಗರಂ ಆಗಿದ್ದಾರೆ. ಶಿವರಾಮೇಗೌಡ ಪಕ್ಷದಿಂದ ಹೊರಹಾಕಲು ಹೆಚ್‌.ಡಿ. ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ನೋಟಿಸ್ ನೀಡಿ ಪಕ್ಷದಿಂದ ಹೊರಹಾಕಲು ಸೂಚನೆ ಕೊಡಲಾಗಿದೆ. ಈ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷರಿಗೆ ‌ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.

ಸಚಿವ ಆನಂದ್ ಸಿಂಗ್, ಡಿ.ಕೆ.ಶಿವಕುಮಾರ್​ ಭೇಟಿ ವಿಚಾರವಾಗಿ ಬೆಂಗಳೂರಿನಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಉತ್ತರಪ್ರದೇಶ, ಗೋವಾ, ಪಂಜಾಬ್ ಚುನಾವಣೆ ನಡೀತಿದೆ. ಬೆಳಗ್ಗೆ ಒಂದು ಪಕ್ಷ, ಸಂಜೆ ಇನ್ನೊಂದು ಪಾರ್ಟಿಗೆ ಹೋಗ್ತಾರೆ. ಇಂದು ರಾಜಕೀಯ ನಾಯಕರಲ್ಲಿ ನಿಷ್ಠೆ ಇಲ್ಲ. ಇಂಥವರು ಇಂಥದ್ದೇ ಪಕ್ಷದಲ್ಲಿರ್ತಾರೆಂದು ಊಹಿಸಲಾಗಲ್ಲ. ಚುನಾವಣೆ ಸಮಯದಲ್ಲಿ ಏನಾಗುತ್ತೆ ಎಂದು ನೋಡೋಣ ಎಂದು ಹೇಳಿದ್ದಾರೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದರ ಕೊಡುಗೆ ಏನು. ನನ್ನನ್ನು ಸುಳ್ಳುಗಾರ ಎನ್ನುವ ಸಂಸದರು ಏನೇನು ಮಾಡಿದ್ದಾರೆ. ನನ್ನ ವಿರುದ್ಧ ಬೇಕಾಬಿಟ್ಟಿ ಆರೋಪಮಾಡಿದರೆ ಸುಮ್ಮನಿರಲ್ಲ ಎಂದು ರಾಮನಗರ ತಾಲೂಕಿನ ಕೇತಗಾನಹಳ್ಳಿಯಲ್ಲಿ ಹೆಚ್​.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಕಾಂಗ್ರೆಸ್ ನಾಯಕ ಹಾಗೂ ಸಂಸದ ಡಿ.ಕೆ. ಸುರೇಶ್ ಇತ್ತೀಚೆಗೆ ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅವರಿಬ್ಬರ ನಡುವಿನ ವಾಗ್ವಾದ ಮತ್ತೆ ಮುಂದುವರಿದಿದೆ.

ಶಿವರಾಮೇಗೌಡ ಪ್ರತಿಕೃತಿಯನ್ನು ದಹಿಸಿ ತೀವ್ರ ಆಕ್ರೋಶ

ಇತ್ತ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿಯಲ್ಲಿ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ವಿರುದ್ಧ ಪ್ರತಿಭಟನೆ ನಡೆಸಲಾಗಿದೆ. ಕೆ.ಎಂ. ದೊಡ್ಡಿಯಲ್ಲಿ ಜಿ. ಮಾದೇಗೌಡ ಅಭಿಮಾನಿಗಳಿಂದ ಧರಣಿ ನಡೆಸಲಾಗಿದೆ. ಶಿವರಾಮೇಗೌಡ ಪ್ರತಿಕೃತಿಯನ್ನು ದಹಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಲಾಗಿದೆ. ಮಾದೇಗೌಡ ವಿರುದ್ಧ ಶಿವರಾಮೇಗೌಡ ಲಘುವಾಗಿ ಮಾತಾಡಿದ್ದರು. ಹೀಗಾಗಿ ಮಾಜಿ ಸಂಸದ ಶಿವರಾಮೇಗೌಡ ವಿರುದ್ಧ ಪ್ರತಿಭಟನೆ ನಡೆಸಲಾಗಿದೆ.

ಇದನ್ನೂ ಓದಿ: ವೈರಲ್ ಆಡಿಯೋ: ಮಾದೇಗೌಡ ವಿರುದ್ಧ ಅವಹೇಳನಕಾರಿ ಮಾತು ನನ್ನದೇ ಎಂದ ಶಿವರಾಮೇಗೌಡ -ಶಿಸ್ತುಕ್ರಮಕ್ಕೆ ಜೆಡಿಎಸ್ ತೀರ್ಮಾನ?

ಇದನ್ನೂ ಓದಿ: ಮಂಡ್ಯ ಲೋಕಸಭಾ ಉಪಚುನಾವಣೆಗೆ 30 ಕೋಟಿ ಖರ್ಚು ಮಾಡಿದ್ದೆ: ಮಾಜಿ ಸಂಸದ ಎಲ್ಆರ್ ಶಿವರಾಮೇಗೌಡ ಆಡಿಯೋ ವೈರಲ್

Follow us on

Related Stories

Most Read Stories

Click on your DTH Provider to Add TV9 Kannada