Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಖಚಿತಪಡಿಸಿದ ಎಚ್​ಡಿಕೆ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಜೆಡಿಎಸ್​ ಈಗಾಗಲೇ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ್ದು. ಇದರ ಮಧ್ಯೆ ಕುಮಾರಸ್ವಾಮಿ ತಮ್ಮ ಪುತ್ರ ಸ್ಪರ್ಧೆ ಮಾಡುವ ಬಗ್ಗೆಯೂ ಖಚಿತಪಡಿಸಿದ್ದಾರೆ.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಖಚಿತಪಡಿಸಿದ ಎಚ್​ಡಿಕೆ
ಹೆಚ್.ಡಿ. ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Oct 21, 2022 | 8:35 PM

ರಾಮನಗರ: ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ (Karnataka Assembly Election 2023) ಈಗಾಗಲೇ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ಮೈಸೂರು ಜಿಲ್ಲೆಯ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಇನ್ನು ಈ ಬಗ್ಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್​ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಪುತ್ರ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಮುಂದಿನ ಎಲೆಕ್ಷನ್​ಗೆ ಸ್ಪರ್ಧೆ ಮಾಡುವುದನ್ನು ಖಚಿತಪಡಿಸಿದ್ದಾರೆ.

ಇಂದು(ಅಕ್ಟೋಬರ್.21) ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಮಂಚನಬೆಲೆ ಗ್ರಾಮದಲ್ಲಿ ಮಾತನಾಡಿದ ಅವರು, ಮೈಸೂರು ಭಾಗದ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ. ಇನ್ನೂ ಫೈನಲ್ ಆಗಿಲ್ಲ. ಆದರೆ ಟಿ.ನರಸೀಪುರ, ಪಿರಿಯಾಪಟ್ಟಣ, ನಮ್ಮ ಹಾಲಿ ಎಂಎಲ್​ಎ ಇದ್ದಾರೆ. ಚಾಮುಂಡೇಶ್ವರಿಯಿಂದ ಜಿ.ಟಿ ದೇವೇಗೌಡ ಇರ್ತಾರೆ. ಹುಣಸೂರು ಹರೀಶ್ ಗೌಡ ನಿಲ್ಲಿಸಬೇಕು ಅಂತ ನಿರ್ಣಯ ಆಗಿದೆ ಎಂದು ಸ್ಪಷ್ಟಪಡಿಸಿದರು.

ಕರ್ನಾಟಕ ವಿಧಾನಸಭೆ ಚುನಾವಣೆ 2023: ​ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಜೆಡಿಎಸ್

ಎಚ್ ಡಿ. ಕೋಟೆಯಲ್ಲಿ ಇಬ್ಬರು ಇದ್ದಾರೆ. ಇಬ್ಬರು ಒಮ್ಮತದಿಂದ ತೀರ್ಮಾನಕ್ಕೆ ಬರುವಂತೆ ತಿಳಿಸಿದ್ದೇನೆ. 15 ರಿಂದ 20 ದಿನಗಳ ಒಳಗೆ ಮಾಹಿತಿ ಪಡೆದು ಫೈನಲ್ ಮಾಡುತ್ತೇನೆ. ಉಳಿದ ಕ್ಷೇತ್ರಗಳ ಅಭ್ಯರ್ಥಿಗಳನ್ನು ಪಕ್ಷ ತೀರ್ಮಾನ ಮಾಡಲಿದೆ ಎಂದು ಹೇಳಿದರು.

ಚನ್ನಪಟ್ಟಣದ ಪ್ರತಿ ಹಳ್ಳಿಯಿಂದ 4 ರಿಂದ 5 ಜನ ಬರ ಹೇಳಿದ್ದೇನೆ. ಪ್ರಮುಖ ಕಾರ್ಯಕರ್ತರನ್ನ, ಮುಖಂಡರನ್ನು ಬರಲು ಹೇಳಿದ್ದೇನೆ. ನವೆಂಬರ್ 1 ರಿಂದ ಪಂಚರತ್ನ‌ ಯೋಜನೆ ಕಾರ್ಯಕ್ರಮವಿದೆ. ಇಡೀ ರಾಜ್ಯದಲ್ಲಿ ಪಂಚರತ್ನ ರಥಯಾತ್ರೆ 120 ದಿನಗಳ ಕಾಲ ನಡೆಯಲಿದೆ. ಪದೇ ಪದೆ ಬರಲು ಸಾಧ್ಯವಿಲ್ಲ. ಕಾರ್ಯಕರ್ತರೇ ಜವಾಬ್ದಾರಿ ತೆಗೆದುಕೊಳ್ಳಲು ಸೂಚನೆ ನೀಡಲು ಕರೆದಿದ್ದೇನೆ. ನಮ್ಮ ಪಕ್ಷದಲ್ಲಿ ಯಾವುದೇ ಅಸಮಧಾನ ಇಲ್ಲ . ಸಣ್ಣ ಪುಟ್ಟ ಸಮಸ್ಯೆಗಳು ಇದ್ರೆ ನನ್ನ ಗಮನಕ್ಕೆ ಬಂದ ಕೂಡಲೇ ಬಗೆಹರಿಸುತ್ತೇನೆ ಎಂದು ತಿಳಿಸಿದರು.

ರಾಮನಗರದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯಿಸಿ, ಹಲವಾರು ಕ್ಷೇತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನು ಕರೆಯುತ್ತಿದ್ದಾರೆ. ನಾನು ಎಲ್ಲಾ ಕ್ಷೇತ್ರಗಳಲ್ಲೂ ಜೆಡಿಎಸ್ ಗೆಲ್ಲಿಸಿಕೊಂಡು ಬರಬೇಕು ಅಂತ ನಿಖಿಲ್ ಗೆ ಹೇಳಿದ್ದೇನೆ‌. ಅಂತಿಮವಾಗಿ ಎಲ್ಲಿ ನಿಲ್ಲಬೇಕು ಎಂಬುದನ್ನ ಪಕ್ಷ ತೀರ್ಮಾನ ಮಾಡಲಿದೆ. ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಬಗ್ಗೆ ಪಕ್ಷ ತೀರ್ಮಾನ ತೆಗೆದುಕೊಳ್ಳಲಿದೆ. ಎಲ್ಲೋ ಒಂದು ಕಡೆ ಸ್ವರ್ಧೆ ಮಾಡಲಿದ್ದಾರೆ ಎಂದರು. ಈ ಮೂಲಕ ಪುತ್ರ ನಿಖಿಲ್ ಮುಂದಿನ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡುವುದನ್ನು ಖಚಿತಪಡಿಸಿದರು. ಆದ್ರೆ, ಕ್ಷೇತ್ರ ಯಾವುದು ಎನ್ನುವುದು ಮಾತ್ರ ಸಸ್ಪೆನ್ಸ್ ಇಟ್ಟರು.

ಮೂಲಕಗಳ ಪ್ರಕಾರ ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿ ಬದಲಿಗೆ ನಿಖಿಲ್ ಸ್ಪರ್ಧೆ ಮಾಡುವ ಎಲ್ಲಾ ಸಾಧ್ಯತೆಗಳಿವೆ.

Published On - 8:35 pm, Fri, 21 October 22

ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ
ಬಿಜೆಪಿಯ ರಾಜಕೀಯ ಪಿತೂರಿ; ಇಡಿ ಸಮನ್ಸ್ ಬಳಿಕ ರಾಬರ್ಟ್ ವಾದ್ರಾ ಆರೋಪ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ
ಮತ್ತೊಮ್ಮೆ ಸಮೀಕ್ಷೆ ಮಾಡಿಸುವಂತೆ ಸಿಎಂ, ಡಿಸಿಎಂಗೆ ಆಗ್ರಹಿಸುತ್ತೇವೆ: ಶಾಸಕ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಿಎಂ ಹಣ ಮೀಸಲಿಟ್ಟಿದ್ದಾರಾ? ವಿಜಯೇಂದ್ರ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಸಿಎಂ ಹಣ ಮೀಸಲಿಟ್ಟಿದ್ದಾರಾ? ವಿಜಯೇಂದ್ರ
ಬವೇರಿಯ 1.3 ಕೋಟಿ ಜನಸಂಖ್ಯೆಯಿರುವ ಜರ್ಮನಿಯ ಅತಿದೊಡ್ಡ ರಾಜ್ಯ
ಬವೇರಿಯ 1.3 ಕೋಟಿ ಜನಸಂಖ್ಯೆಯಿರುವ ಜರ್ಮನಿಯ ಅತಿದೊಡ್ಡ ರಾಜ್ಯ
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
ಸಕಾಲದಲ್ಲಿ 13 ನೇ ಕ್ರಾಸ್​ನಿಂದ 18ನೇ ಕ್ರಾಸ್ ತಲುಪಿದ ವಿದ್ಯಾರ್ಥಿನಿ
VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ
ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ
ಭಾವಿ ಪತ್ನಿ ವೈಷ್ಣವಿಗಾಗಿ ಕನ್ನಡ ಕಲಿತು ಮಾತನಾಡಿದ ಅನುಕೂಲ್
ಭಾವಿ ಪತ್ನಿ ವೈಷ್ಣವಿಗಾಗಿ ಕನ್ನಡ ಕಲಿತು ಮಾತನಾಡಿದ ಅನುಕೂಲ್
ಬುರ್ಖಾ ತೆಗೆ, ಹೆಸರೇನು ಹೇಳು: ಬೆಂಗಳೂರಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ
ಬುರ್ಖಾ ತೆಗೆ, ಹೆಸರೇನು ಹೇಳು: ಬೆಂಗಳೂರಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ
ರಾಯಚೂರಿನ ಆರ್​ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ
ರಾಯಚೂರಿನ ಆರ್​ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ