ಜಾರಕಿಹೊಳಿ ಬುಟ್ಟಿಗೆ ಕೈ ಹಾಕಿದ ಎಚ್​ಡಿಕೆ, ಮತ್ತೆ ರಾಜಕೀಯ ಧೃವೀಕರಣಕ್ಕೆ ಸಾಕ್ಷಿಯಾಗತ್ತಾ ರಾಜ್ಯ ರಾಜಕಾರಣ?

ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ, ಜಾರಕಿಹೊಳಿ ಬುಟ್ಟಿಗೆ ಕೈ ಹಾಕಿದ್ದು, ರಾಜ್ಯ ರಾಜಕಾರಣದಲ್ಲಿ ಮತ್ತೆ ರಾಜಕೀಯ ಧೃವೀಕರಣಕ್ಕೆ ಸಾಕ್ಷಿಯಾಗತ್ತಾ ?

ಜಾರಕಿಹೊಳಿ ಬುಟ್ಟಿಗೆ ಕೈ ಹಾಕಿದ ಎಚ್​ಡಿಕೆ, ಮತ್ತೆ ರಾಜಕೀಯ ಧೃವೀಕರಣಕ್ಕೆ ಸಾಕ್ಷಿಯಾಗತ್ತಾ ರಾಜ್ಯ ರಾಜಕಾರಣ?
ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ
Edited By:

Updated on: Oct 14, 2022 | 3:35 PM

ಬೆಂಗಳೂರು/ಬೆಳಗಾವಿ: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ (Karnataka Assembly Election 2023 ರಾಜ್ಯ ರಾಜಕಾರಣದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಒಂದೆಡೆ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ಹೊರಟ್ಟಿದ್ರೆ, ಮತ್ತೊಂದೆಡೆ ಬಿಜೆಪಿ ಜನಸಂಕಲ್ಪ ಸಮಾವೇಶಗಳನ್ನ ಮಾಡುತ್ತಿದೆ. ಮತ್ತೊಂದರೆಡೆ ಕಾಂಗ್ರೆಸ್ ಹಾಗೂ ಬಿಜೆಪಿಗೆ ಠಕ್ಕರ್ ಕೊಡಲು ಜೆಡಿಎಸ್​ ಮಾಸ್ಟರ್ ಪ್ಲಾನ್ ಮಾಡಿದ್ದು, ಮತ್ತೆ ರಾಜಕೀಯ ಧೃವೀಕರಣಕ್ಕೆ ಸಾಕ್ಷಿಯಾಗತ್ತಾ ಎನ್ನುವ ರೀತಿಯಲ್ಲಿ ರಾಜ್ಯ ರಾಜಕೀಯ ಬೆಳವಳಿಗೆ ಆಗುತ್ತಿವೆ.

ಯೆಸ್….ಮೈತ್ರಿ ಸರ್ಕಾರ ಬೀಳಿಸಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಪ್ರಮುಖ ಪಾತ್ರವಹಿಸಿದ್ದ ರಮೇಶ್ ಜಾರಕಿಹೊಳಿ ಇತ್ತೀಚೆಗೆ ಪಕ್ಷದ ಕಾರ್ಯಚಟುವಟಿಕೆಗಳಿಂದ ದೂರು ಉಳಿದುಕೊಂಡಿದ್ದಾರೆ. ಸಿಡಿ ಪ್ರಕರಣ ಬಳಿಕ ಸೈಲೆಟ್​ ಆಗಿರುವ ರಮೇಶ್ ಜಾರಕಿಹೊಳಿ ಅವರನ್ನು ಬುಟ್ಟಿಗೆ ಹಾಕಿಕೊಳ್ಳಲು ಮಾಜಿ ಸಿಎಂ ಎಚ್​ಡಿ ಕುಮಾರಸ್ವಾಮಿ ಕಸರತ್ತು ನಡೆಸಿದ್ದಾರೆ.

ಮೊಳಕಾಲ್ಮೂರು ಕ್ಷೇತ್ರದ ‘ಕೈ’ ಟಿಕೆಟ್ ಫೈಟ್: ಆಕಾಂಕ್ಷಿಗಳಿಗೆ ಪ್ರಮಾಣ ಮಾಡಿಸಿದ ಡಿಕೆಶಿ

ಹೌದು..ಇದಕ್ಕೆ ಪೂರಕವೆಂಬಂತೆ ಸಚಿವ ಸ್ಥಾನ ಸಿಗದಿರುವ ಬಗ್ಗೆ ಬಿಜೆಪಿ ಮೇಲೆ ಮುನಿಸಿಕೊಂಡಿರುವ ರಮೇಶ್ ಜಾರಕಿಹೊಳಿ ಅವರನ್ನು ಕುಮಾರಸ್ವಾಮಿ ಸಂಪರ್ಕಿಸಿದ್ದು, ಕೈಜೋಡಿಸುವಂತೆ ಮನವಿ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಈಗಾಗಲೇ ರಮೇಶ್ ಜಾರಕಿಹೊಳಿ ಜೊತೆಗೆ ಮೂರ್ನಾಲ್ಕು ಸುತ್ತಿನ ಮಾತುಕತೆ ಸಹ ನಡೆದಿದೆ ಎನ್ನಲಾಗಿದೆ.

ಒಂದು ವೇಳೆ ರಮೇಶ್ ಜಾರಕಿಹೊಳಿ ಓಕೆ ಅಂದರೆ ಉತ್ತರ ಕರ್ನಾಟಕ ಭಾಗದಲ್ಲಿ ಅವರ ಬೆಂಬಲಿಗರಿಗೆ ಟಿಕೆಟ್ ನೀಡುವ ಪ್ಲಾನ್ ದಳಪತಿಗಳದ್ದಾಗಿದ್ದು, ಈ ಮೂಲಕ ಕುಮಾರಸ್ವಾಮಿ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲು ಮಾಸ್ಟರ್ ಪ್ಲಾನ್ ಮಾಡಿದ್ದಾರೆ.

ಒಟ್ಟಿನಲ್ಲಿ ಕುಮಾರಸ್ವಾಮಿ ಅವರು ರಮೇಶ್ ಜಾರಕಿಹೊಳಿ ಅವರನ್ನು ಬುಟ್ಟಿಗೆ ಹಾಕಿಕೊಂಡು ಉತ್ತರ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ ಬಿಜೆಪಿಗೆ ಠಕ್ಕರ್ ಕೊಡಲು ರಣತಂತ್ರ ರೂಪಿಸಿದ್ದಾರೆ. ಆದ್ರೆ, ಇದು ಎಷ್ಟರ ಮಟ್ಟಿಗೆ ವರ್ಕೌಟ್ ಆಗುತ್ತೆ ಎನ್ನುವುದುನ್ನು ಕಾದುನೋಡಬೇಕಿದೆ.

Published On - 3:16 pm, Fri, 14 October 22

Web contact

TV9 Kannada

Read More
Follow Us