ಆಸ್ತಿ ಮೌಲ್ಯ ಹೆಚ್ಚಿಸಿ ಖಜಾನೆ ವೃದ್ಧಿಸುವ ಹುನ್ನಾರ: ಕನಕಪುರವನ್ನು ಬೆಂಗಳೂರಿಗೆ ಸೇರಿಸುವ ಡಿಕೆಶಿ ಹೇಳಿಕೆಗೆ ಕುಮಾರಸ್ವಾಮಿ ಕಿಡಿ

ಡಿಕೆ ಶಿವಕುಮಾರ್ ಅವರು ರಾಮನಗರ ಜಿಲ್ಲೆಯಿಂದ ಕನಕಪುರ ತಾಲೂಕನ್ನು ಬೇರ್ಪಡಿಸಿ ಬೆಂಗಳೂರಿಗೆ ಸೇರಿಸುವೆ ಎಂದು ನೀಡಿರುವ ಹೇಳಿಕೆ ಸರಿಯಲ್ಲ. ಕನಕಪುರ ಸುತ್ತಮುತ್ತ ಇರುವ ತಮ್ಮ ಆಸ್ತಿಗಳ ಮೌಲ್ಯವನ್ನು ಹೆಚ್ಚಿಸಿಕೊಂಡು ತಮ್ಮ ಖಜಾನೆ ವೃದ್ಧಿ ಮಾಡಿಕೊಳ್ಳುವ ಏಕೈಕ ದುರುದ್ದೇಶದಿಂದ ಅವರು ಹೊಸ ನಾಟಕ ಶುರು ಮಾಡಿದ್ದಾರೆ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.

ಆಸ್ತಿ ಮೌಲ್ಯ ಹೆಚ್ಚಿಸಿ ಖಜಾನೆ ವೃದ್ಧಿಸುವ ಹುನ್ನಾರ: ಕನಕಪುರವನ್ನು ಬೆಂಗಳೂರಿಗೆ ಸೇರಿಸುವ ಡಿಕೆಶಿ ಹೇಳಿಕೆಗೆ ಕುಮಾರಸ್ವಾಮಿ ಕಿಡಿ
ಡಿಕೆ ಶಿವಕುಮಾರ್ & ಹೆಚ್​ಡಿ ಕುಮಾರಸ್ವಾಮಿ
Follow us
TV9 Web
| Updated By: Ganapathi Sharma

Updated on:Oct 24, 2023 | 5:01 PM

ಬೆಂಗಳೂರು, ಅಕ್ಟೋಬರ್ 24: ಕನಕಪುರ (Kanakpura) ತಾಲೂಕನ್ನು ಬೆಂಗಳೂರು ಜಿಲ್ಲೆಗೆ (Bangalore District) ಸೇರಿಸುತ್ತೇನೆ ಎಂಬ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಹೇಳಿಕೆಗೆ ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸಂದೇಶ ಪ್ರಕಟಿಸಿರುವ ಕುಮಾರಸ್ವಾಮಿ, ಕನಕಪುರ ಸುತ್ತಮುತ್ತ ಇರುವ ತಮ್ಮ ಆಸ್ತಿಗಳ ಮೌಲ್ಯವನ್ನು ಹೆಚ್ಚಿಸಿಕೊಂಡು ಖಜಾನೆ ವೃದ್ಧಿ ಮಾಡಿಕೊಳ್ಳುವ ಏಕೈಕ ದುರುದ್ದೇಶದಿಂದ ಡಿಕೆ ಶಿವಕುಮಾರ್ ಆ ಹೇಳಿಕೆ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಾಮನಗರ ಜಿಲ್ಲೆಯಿಂದ ಕನಕಪುರ ತಾಲೂಕನ್ನು ಬೇರ್ಪಡಿಸಿ ಬೆಂಗಳೂರಿಗೆ ಸೇರಿಸುವೆ ಎಂದು ನೀಡಿರುವ ಹೇಳಿಕೆ ಸರಿಯಲ್ಲ. ಕನಕಪುರ ಸುತ್ತಮುತ್ತ ಇರುವ ತಮ್ಮ ಆಸ್ತಿಗಳ ಮೌಲ್ಯವನ್ನು ಹೆಚ್ಚಿಸಿಕೊಂಡು ತಮ್ಮ ಖಜಾನೆ ವೃದ್ಧಿ ಮಾಡಿಕೊಳ್ಳುವ ಏಕೈಕ ದುರುದ್ದೇಶದಿಂದ ಅವರು ಕನಕಪುರ ಜನರ ನೆಪ ಹೇಳಿಕೊಂಡು ಈ ಹೊಸ ನಾಟಕ ಶುರು ಮಾಡಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಕನಕಪುರದವರು ರಾಮನಗರ ಜಿಲ್ಲೆಯವರಲ್ಲ, ಬೆಂಗಳೂರು ಜಿಲ್ಲೆಯವರು ಎಂಬುದನ್ನು ನೆನಪಿಟ್ಟುಕೊಳ್ಳಿ ಎನ್ನುವ ಅವರ ಮಾತು ರಾಮನಗರ ಜಿಲ್ಲೆಗೆ ಎಸಗುವ ಮಹಾದ್ರೋಹ. ಅಷ್ಟೇ ಅಲ್ಲ; ಕನಕಪುರ ಜನರಿಗೆ ಮಂಕುಬೂದಿ ಎರಚುವ ಹುನ್ನಾರ. ನಿಮ್ಮ ಜೇಬಿಗೆ ನಾನು ನೇರವಾಗಿ ದುಡ್ಡು ಹಾಕಲು ಆಗುವುದಿಲ್ಲ, ಮನೆ ಕಟ್ಟಿಸಿಕೊಡಲು ಆಗುವುದಿಲ್ಲ ಎನ್ನುವ ಇವರು; ಇಷ್ಟು ದಿನ ಶಾಸಕರಾಗಿ, ಸಚಿವರಾಗಿ ಉಪ ಮುಖ್ಯಮಂತ್ರಿ ಆಗಿ ಮಾಡಿದ್ದೇನು? ತಮ್ಮ ಜೇಬು ತುಂಬಿಸಿಕೊಂಡಿದ್ದು, ತಮ್ಮ ಮನೆಯನ್ನು ಉದ್ಧಾರ ಮಾಡಿಕೊಂಡಿದ್ದಷ್ಟೇ. ಇಷ್ಟಕ್ಕೂ ಕನಕಪುರ ಸುತ್ತಮುತ್ತ ಯಾರ ಆಸ್ತಿಗಳಿವೆ? ಅದರಲ್ಲಿ ಬೇನಾಮಿಗಳು ಎಷ್ಟು? ಎಲ್ಲೆಲ್ಲಿ ಅಕ್ರಮವಾಗಿ ಬೇಲಿ ಹಾಕಲಾಗಿದೆ? ಅವೆಲ್ಲಾ ಅಕ್ರಮಗಳನ್ನು ಸಕ್ರಮ ಮಾಡಿಕೊಳ್ಳಲು ಬೆಂಗಳೂರು ಸೇರ್ಪಡೆಯ ನಾಟಕ! ಈಗಾಗಲೇ ಕನಕಪುರಕ್ಕೆ ಒಂದು ಮೆಡಿಕಲ್ ಕೊಟ್ಟಿದ್ದರೂ ರಾಮನಗರ ಮೆಡಿಕಲ್ ಕಾಲೇಜನ್ನು ಕದ್ದು ಒಯ್ಯವುದರ ಹಿಂದೆಯೂ ಇದೇ ದುಷ್ಟ ತಂತ್ರ ಅಡಗಿತ್ತು ಎಂದು ಜೆಡಿಎಸ್ ನಾಯಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನಕಪುರಕ್ಕೆ 52 ಕೀ.ಮೀ. ದೂರದಲ್ಲಿದೆ ಬೆಂಗಳೂರು. 25 ಕೀ.ಮೀ. ದೂರದಲ್ಲಿದೆ ರಾಮನಗರ. ಜನರಿಗೆ ಯಾವುದು ಅನುಕೂಲ? ದಿನ ಬೆಳಗಾದರೆ ಕನಕಪುರದವರು ಬೆಂಗಳೂರಿಗೆ ಅಲೆಯಬೇಕೆ? ಉಪ ಮುಖ್ಯಮಂತ್ರಿಗಳ ಒಳ ಉದ್ದೇಶದ ಬಗ್ಗೆ ಅನೇಕ ಅನುಮಾನಗಳು ಸಹಜವಾಗಿಯೇ ಮೂಡುತ್ತವೆ ಎಂದು ಅವರು ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

2006-2007ರಲ್ಲಿ ಕನಕಪುರ ಹೇಗಿತ್ತು? ಡಿಕೆಶಿ ಅವರು ನೆನಪು ಮಾಡಿಕೊಳ್ಳಬೇಕು. ಆಗಲೇ ಪಟ್ಟಣದ ಡಬಲ್ ರಸ್ತೆ ನಿರ್ಮಾಣ, ಕನಕಪುರ ಹೆಬ್ಬಾಗಿಲಿನಲ್ಲಿರುವ ಸೇತುವೆ ನಿರ್ಮಾಣಕ್ಕೆ ಯೋಜನೆ ಕೊಟ್ಟವನು ನಾನು. ಸಂಗಮದಲ್ಲಿ ಪ್ರವಾಹ ಬಂದಾಗಲೆಲ್ಲಾ ಅನೇಕರು ಹಗ್ಗ ಕಟ್ಟಿಕೊಂಡು ರಸ್ತೆ ದಾಟಲು ಹೋಗಿ ಸಾವನ್ನಪ್ಪುತ್ತಿದ್ದರು. ಇದನ್ನು ತಪ್ಪಿಸಲು ಅಲ್ಲಿ ಸೇತುವೆ ನಿರ್ಮಿಸಿ ಮಹದೇಶ್ವರ ಬೆಟ್ಟಕ್ಕೆ ಸುಲಭ ಸಂಪರ್ಕ ಕಲ್ಪಿಸುವ ಯೋಜನೆಗೆ ಇದೇ ಡಿ.ಕೆ.ಶಿವಕುಮಾರ್ ಅವರು 2006ರಲ್ಲಿಯೇ ವಿರೋಧ ಮಾಡಿದ್ದರು! ಈಗ ಕನಕಪುರವನ್ನು ಬೆಂಗಳೂರು ಜಿಲ್ಲೆಗೆ ಸೇರಿಸುವ ಮಾತು!! ನದಿಯಲ್ಲಿ ಜನರು ಕೊಚ್ಚಿಕೊಂಡು ಹೋಗಿ ಸತ್ತರೂ ಪರವಾಗಿಲ್ಲ. ಆದರೆ, ಇವರ ರಿಯಲ್ ಎಸ್ಟೇಟ್ ವ್ಯವಹಾರ ಪೊಗದಸ್ತಾಗಿ ಸಾಗಬೇಕು. ಸದ್ಯ ಬೆಂಗಳೂರಿನಿಂದ ಕನಕಪುರಕ್ಕೆ ಸುರಂಗ ಕೊರೆಸುವೆ ಎಂದು ಹೇಳಲಿಲ್ಲ. ಅದೇ ನಮ್ಮ ಪುಣ್ಯ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಕನಕಪುರ ತಾಲೂಕನ್ನು ಬೆಂಗಳೂರು ಜಿಲ್ಲೆಗೆ ಸೇರಿಸುತ್ತೇನೆ: ಡಿಕೆ ಶಿವಕುಮಾರ್​​​

ಕನಕಪುರ ಮೆಡಿಕಲ್ ಕಾಲೇಜು ಚಿಕ್ಕಬಳ್ಳಾಪುರ ಪಾಲಾದ ಮೇಲೆ ಮೈತ್ರಿ ಸರಕಾರದ ಅವಧಿಯಲ್ಲಿ ಕನಕಪುರಕ್ಕೆ ಮತ್ತೊಂದು ಮೆಡಿಕಲ್ ಕಾಲೇಜ್ ಮಂಜೂರು ಮಾಡಿದ್ದೆ. ಆದರೆ, ಇದೇ ಮಹಾನುಭಾವರೇ ಮೈತ್ರಿ ಸರಕಾರವನ್ನು ತೆಗೆದ ಪರಿಣಾಮ ಆ ಯೋಜನೆ ನೆನೆಗುದಿಗೆ ಬಿತ್ತು. ಯೋಜನೆಯೂ, ಅದರ 350 ಕೋಟಿ ರೂ.ಗಳಿಗೂ ಹೆಚ್ಚಿನ ಅನುದಾನವೂ ಅಲ್ಲಿಯೇ ಉಳಿಯಿತು. ಉಪ ಮುಖ್ಯಮಂತ್ರಿ ಆದವರು ಆ ಯೋಜನೆಯನ್ನು ಪೂರ್ಣಗೊಳಿಸಬೇಕೆ? ಅಥವಾ ರಾಮನಗರ ಮೆಡಿಕಲ್ ಕಾಲೇಜ್ ಅನ್ನು ಹೈಜಾಕ್ ಮಾಡಲು ಹುನ್ನಾರ ನಡೆಸಬೇಕೇ ಎಂದು ಅವರು ಪ್ರಶ್ನಿಸಿದ್ದಾರೆ.

ರಾಮನಗರ ಜಿಲ್ಲೆ ಕನಕಪುರ, ರಾಮನಗರ, ಚನ್ನಪಟ್ಟಣ, ಮಾಗಡಿ ಕ್ಷೇತ್ರಗಳ ಜನರ ಬಹುಕಾಲದ ಕನಸು. ಆ ಕನಸನ್ನು ನಾನು ನನಸು ಮಾಡಿದ್ದೇನೆ. ಈಗ ತಮ್ಮ ಸ್ವಾರ್ಥಕ್ಕಾಗಿ ರಾಮನಗರ ಜಿಲ್ಲೆ ಜನರ ಬೆನ್ನಿಗೆ ಚೂರಿ ಹಾಕಿ ಕನಕಪುರದ ಜನರ ಹಿತಕ್ಕೆ ಕೊಡಲಿಪೆಟ್ಟು ಹಾಕುವ ಹುನ್ನಾರ ನಡೆದಿದೆ. ಇದನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಕನಕಪುರ ಸೇರಿ 4 ವಿಧಾನಸಭೆ ಕ್ಷೇತ್ರಗಳ ಜನರೂ ಒಟ್ಟಾಗಿ ಒಂದೇ ಜಿಲ್ಲೆಯಲ್ಲಿ ಉಳಿಯಲಿದ್ದಾರೆ. ಡಿಕೆ ಶಿವಕುಮಾರ್ ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 5:00 pm, Tue, 24 October 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್