AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾರಂಟಿ ಯೋಜನೆಗಳಿಂದ ಹೆಣ್ಣುಮಕ್ಕಳು ದಾರಿ ತಪ್ಪಿದ್ದಾರೆ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಕುಮಾರಸ್ವಾಮಿ

ಪಿಕ್​ ಪಾಕೆಟ್ ಮಾಡಿ, ಗ್ಯಾರಂಟಿಯ ಎರಡು ಸಾವಿರ ಕೊಟ್ಟಿದ್ದಾರೆ. ಅದಕ್ಕೆ ದಾರಿ ತಪ್ಪಬೇಡಿ ಅಂತ ಹೇಳಿದ್ದೇನೆ. ನನ್ನ ಅವಧಿಯಲ್ಲಿ ಸಾರಾಯಿ ನಿಷೇಧ ಮಾಡಿದೆ. ಮಹಿಳೆಯರಿಗೆ ಗೌರವ ಕೊಡಲು ನಾನು ಸಾರಾಯಿ ನಿಷೇಧ ಮಾಡಿದ್ದು ತಪ್ಪಾ. ಹೌದು, ನಾನು ದಾರಿತಪ್ಪಿದ್ದೆ, ಅದನ್ನು ಈ ಹಿಂದೆಯೇ ಸದನದಲ್ಲಿ ಹೇಳಿದ್ದೇನೆ. ನನ್ನ ಪತ್ನಿ ನನ್ನನ್ನು ತಿದ್ದಿದ್ದಾಳೆ ಎಂದರು.

ಗ್ಯಾರಂಟಿ ಯೋಜನೆಗಳಿಂದ ಹೆಣ್ಣುಮಕ್ಕಳು ದಾರಿ ತಪ್ಪಿದ್ದಾರೆ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಕುಮಾರಸ್ವಾಮಿ
ಹೆಚ್​ಡಿ ಕುಮಾರಸ್ವಾಮಿ
Follow us
TV9 Web
| Updated By: ವಿವೇಕ ಬಿರಾದಾರ

Updated on:Apr 15, 2024 | 12:07 PM

ಬೆಂಗಳೂರು, ಏಪ್ರಿಲ್​ 15: ರಾಜ್ಯದ ಹಣ ಲೂಟಿಯಾಗುತ್ತಿದೆ. ಕಾಂಗ್ರೆಸ್​ ಸರ್ಕಾರ (Congress Government) ಜನರ ತಲೆ ಮೇಲೆ ಸಾಲದ ಹೊರೆ ಹೊರಸುತ್ತಿದೆ. ಗ್ಯಾರಂಟಿಗಳಿಗೆ ಮಾರುಹೋಗಿ ದಾರಿ ತಪ್ಪಬೇಡಿ ಎಂದಿದ್ದೇನೆ. ದಾರಿ ತಪ್ಪುವುದು ಎಂಬ ಪದ ಅಶ್ಲೀಲನಾ? ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸ್ತೇನೆ ಎಂದು ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂಬ ತಮ್ಮ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ವಿಷಾದ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ತುಮಕೂರಿನಲ್ಲಿ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದಾಗ, ಹಲವಾರು ವಿಚಾರ ಪ್ರಸ್ತಾಪ ಮಾಡಿದೆ. ಈ ಸಂದರ್ಭದಲ್ಲಿ ನಾನು ನಾಡಿನ ಮಹಿಳೆಯರಿಗೆ ಅಪಮಾನ ಮಾಡಿದ್ದೇನೆ ಅಂತ ಕಾಂಗ್ರೆಸ್​ನವರು ಆರೋಪ ಮಾಡುತ್ತಿದ್ದಾರೆ.

ಪಿಕ್​ ಪಾಕೆಟ್ ಮಾಡಿ, ಗ್ಯಾರಂಟಿ ಎರಡು ಸಾವಿರ ಕೊಟ್ಟಿದ್ದಾರೆ. ಅದಕ್ಕೆ ದಾರಿ ತಪ್ಪಬೇಡಿ ಅಂತ ಹೇಳಿದ್ದೇನೆ. ನನ್ನ ಅವಧಿಯಲ್ಲಿ ಸಾರಾಯಿ ನಿಷೇಧ ಮಾಡಿದೆ. ಮಹಿಳೆಯರಿಗೆ ಗೌರವ ಕೊಡಲು ನಾನು ಸಾರಾಯಿ ನಿಷೇಧ ಮಾಡಿದ್ದು ತಪ್ಪಾ. ಹೌದು, ನಾನು ದಾರಿತಪ್ಪಿದ್ದೆ, ಅದನ್ನು ಈ ಹಿಂದೆಯೇ ಸದನದಲ್ಲೇ ಹೇಳಿದ್ದೇನೆ. ನನ್ನ ಪತ್ನಿ ನನ್ನನ್ನು ತಿದ್ದಿದ್ದಾಳೆ ಎಂದರು.

ಕೆಲವು ಕುಟುಂಬದ ಹೆಣ್ಣು ಮಕ್ಕಳನ್ನು ಅಪಹರಿಸಿ, ಜಮೀನು ಬರೆಸಿಕೊಂಡಾಗ ಅವರಿಗೆ ಕಣ್ಣೀರು ಬರಲಿಲ್ಲ. ಡಿಕೆ ಶಿವಕುಮಾರ್​ ಅವರೇ, ನಿಮ್ಮ ರಾಜ್ಯ ಕಾಂಗ್ರೆಸ್​ ಉಸ್ತುವಾರಿ ರಣದೀಪ್​ ಸಿಂಗ್​ ಸುರ್ಜೇವಾಲಾ ಅವರು ಬಿಜೆಪಿ ಸಂಸದೆ ಹೇಮಾ ಮಾಲಿನಿ ಬಗ್ಗೆ ಅಶ್ಲೀಲ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಯನ್ನು ಕನ್ನಡದಲ್ಲಿ ಹೇಳಲು‌ ಸಾಧ್ಯವಿಲ್ಲ. ಹೇಮಾ ಮಾಲಿನಿಗೆ ಬಿಜೆಪಿ ಟಿಕೆಟ್ ಕೊಟ್ಟಿರುವುದು ಲಿಫ್ ಮಾಡಲಿಕ್ಕೆ ಅಂತ ಸುರ್ಜೆವಾಲ ಹೇಳಿದ್ದಾರೆ. ಇದು ಅತ್ಯದ್ಭುತ ಹೇಳಿಕೆ ಅಲ್ಲವೇ ಡಿಕೆ ಶಿವಕುಮಾರ್ ಅವರೇ ಎಂದು ಪ್ರಶ್ನಿಸಿದರು.

ಕಂಗನ ರಾವತ್ ಅವರಿಗೆ ಟಿಕೆಟ್ ಕೊಟ್ಟಿದ್ದಕ್ಕೆ ಮಹಿಳೆಯರಿಗೆ ರೆಟ್ ಫಿಕ್ಸ್ ಮಾಡಿದ್ರಿ ಅಂತ ಹೇಳಿದ್ರಿ. ಇದಕ್ಕೆ ನಿಮ್ಮ ಸೋನಿಯ ಗಾಂಧಿ ಏನು ಹೇಳುತ್ತಾರೆ. ವಿಧಾನಸಭೆ ಕಲಾಪದಲ್ಲಿ ರಮೇಶ್​ ಕುಮಾರ್ ಅತ್ಯಾಚಾರ ಅನಿವಾರ್ಯವಾದರೆ ಆನಂದಿಸಿ ಎಂದು ಹೇಳಿದ್ದರು. ರಮೇಶ್​ ಕುಮಾರ್ ಹೇಳಿದ್ದನ್ನ ನೀವು ಮರೆತು ಬಿಟ್ರಾ? ಶಾಮನೂರು ಶಿವಶಂಕರಪ್ಪನವರು ಇತ್ತೀಚೆಗೆ ಹೆಣ್ಮಕ್ಕಳು ಅಡುಗೆ ಮನೆಯಿಂದ ಹೊರಬರಬಾರದು ಅಂದರು. ನಿಮ್ಮ ಪಕ್ಷದವರ ಹೇಳಿಕೆ ಕುರಿತು ನೂರಾರು ನಿದರ್ಶನಗಳನ್ನು ಕೊಡಬಲ್ಲೆ. ನಿಮ್ಮಿಂದ ನಾನು ಕಲಿಯಬೇಕಾ? ಮಹಿಳಾ ಆಯೋಗಕ್ಕೂ ಕಾಂಗ್ರೆಸ್​ನವರು ದೂರು ನೀಡಿದ್ದಾರಂತೆ. ನನಗೆ ನೋಟಿಸ್​ ಕೊಡಲಿ ನಾನು ಉತ್ತರ ಕೊಡುತ್ತೇನೆ ಎಂದರು.

ಇದನ್ನೂ ಓದಿ: ನಾನೆ ಮುಂದಿನ ಒಕ್ಕಲಿಗರ ನಾಯಕ: ಪರೋಕ್ಷವಾಗಿ ಡಿಕೆ ಶಿವಕುಮಾರ್​ ಹೇಳಿಕೆ, ಕುಮಾರಸ್ವಾಮಿ, ದೇವೇಗೌಡಗೆ ಗುದ್ದು

ಸಾವಿರ ಎಕರೆ ಭೂಮಿ ಇದೆ ಎಂಬ ಡಿಕೆ ಶಿವಕುಮಾರ್​ ಹೇಳಿಕೆ ಪ್ರತಿಕ್ರಿಯಿಸಿದ ಅವರು, ನನ್ನದು 48 ಎಕರೆ ಭೂಮಿ ಇದೆ. ರಾಜಕಾರಣಕ್ಕೂ ಬರುವ ಮೊದಲೇ ನಾನು ಆಸ್ತಿ ಖರೀದಿಸಿದ್ದೆ. ಚಿತ್ರರಂಗದಲ್ಲಿ ನಿರ್ಮಾಪಕ, ಹಂಚಿಕೆದಾರನಾಗಿದ್ದಾಗ ಆಸ್ತಿ ಖರೀದಿ ಮಾಡಿದ್ದೇನೆ. ಬಂದು ನೋಡಪ್ಪ. 50 ಟನ್​ ಕಲ್ಲಂಗಡಿ ಬೆಳೆದಿದ್ದೇನೆ, ವಿಡಿಯೋ ಮಾಡಿದ್ದೇನೆ. 55 ಲಕ್ಷ ಮೌಲ್ಯದ ಬಾಳೆ ಹಣ್ಣು ಬೆಳೆದಿದ್ದೇನೆ. 20 ಟನ್​ ಕೊಬ್ಬರಿ ಬೆಳೆದು ಸ್ಟಾಕ್​ ಇಟ್ಟಿದ್ದೇನೆ. ನಾನು ಬೆಳೆದ ಬೆಳೆಯ ಎಲ್ಲ ವಿಡಿಯೋ ಮಾಡಿಟ್ಟಿದ್ದೇನೆ. ಕಷ್ಟಪಟ್ಟು ದುಡಿದು ಹಣ, ಆಸ್ತಿ ಸಂಪಾದನೆ ಮಾಡಿದ್ದೇನೆ ಎಂದು ತಿರುಗೇಟು ನೀಡಿದರು.

ಇವತ್ತು ನನ್ನ ವಿರುದ್ಧ ಮಂಡ್ಯದಲ್ಲಿ ಗೋ ಬ್ಯಾಕ್ ಮಾಡುತ್ತಿದ್ದಾರೆ. ಇದಕ್ಕೆ ನಾನು ಹೆದರಿಕೊಳ್ಳಬೇಕಾ?ಅಪಾರ್ಟ್ಮೆಂಟ್​ಗೆ ಎನ್​ಓಸಿ ನೀಡಬೇಕಾದರೆ ನನ್ನ ತಮ್ಮನಿಗೆ ಮತ ಹಾಕಿ, ನೀರು ಕೊಡಬೇಕಾದರೆ ತಮ್ಮನಿಗೆ ಮತ ಹಾಕಿ ಅಂತ ಹೇಳುತ್ತಿದ್ದಾರೆ. ಕಾಂಗ್ರೆಸ್ ಮಹಿಳಾ ಮಣಿಯರಿಗೆ ನೋವು ಆಗಿದ್ದರೆ ಕ್ಷಮೆ ಕೇಳುತ್ತೇನೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:45 am, Mon, 15 April 24

ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು
ಸೋಫಿಯಾ ಮಾವನ ಮನೆ ಮೇಲೆ ದಾಳಿ ನಡೆಸುವ ಮನಸ್ಥಿತಿ ಕನ್ನಡಿಗರು ಕ್ಷಮಿಸಲಾರರು