ಬೆಂಗಳೂರು: ಇಂದು (ಏಪ್ರಿಲ್ 3) ಬೆಳಗ್ಗೆ ಒಂದು ಸುದ್ದಿ ಬರಸಿಡಿಲಿನಂತೆ ಅಪ್ಪಳಿಸಿದೆ. ಪೆಟ್ರೋಲ್ (Petrol) ಹಾಗೂ ಡೀಸೆಲ್ (Diesel) ದರ ಮತ್ತೆ ಏರಿಕೆಯಾಗಿದೆ. ಕಳೆದ 13 ದಿನಗಳಲ್ಲಿ ತೈಲ ದರ 8 ರೂಪಾಯಿ ಏರಿಕೆಯಾಗಿದೆ. ಇದಪ್ಪಾ ‘ಬಹುಜನ ಹಿತಾಯ, ಬಹುಜನ ಸುಖಾಯ’ ಎಂದು ಭಾಷಣ ಬಿಗಿಯುವ ಬಿಜೆಪಿ ಆಡಳಿತದಲ್ಲಿ ಇಂಡಿಯಾ ಶೈನಿಂಗ್ ಅಂತ ತೈಲ ದರ ಏರಿಕೆಗೆ ಟ್ವಿಟರ್ನಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿರಂತರವಾಗಿ 13 ದಿನದಿಂದ ಬೆಲೆ ಏರಿಕೆಯಾಗುತ್ತಿದೆ. ಎರಡೂ ತೈಲಗಳ ಬೆಲೆ 8 ರೂ. ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರಿಗೆ 108.99 ರೂ., ಡೀಸೆಲ್ ಬೆಲೆ ಲೀಟರಿಗೆ 92.83 ರೂಪಾಯಿಗೆ ಜಿಗಿದಿದೆ. ಖಜಾನೆ ಭರ್ತಿಗೆ ಷೇರು ಸೂಚ್ಯಂಕವನ್ನು ಕುಣಿಸಿದಂತೆ, ಬೆಲೆ ಸೂಚ್ಯಂಕದ ಕರಡಿ ಕುಣಿತವೂ ಭರ್ಜರಿಯಾಗಿದೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
2018ರಲ್ಲಿ ನಾನು ಸಿಎಂ ಆಗಿದ್ದಾಗ ಸಾಲ ಮನ್ನಾಕ್ಕಾಗಿ ಪೆಟ್ರೋಲ್ ಲೀಟರಿಗೆ 1.12 ಪೈಸೆ, ಮತ್ತು ಡೀಸೆಲ್ ಬೆಲೆಯಲ್ಲಿ ಲೀಟರಿಗೆ 1.14 ಪೈಸೆ ಹೆಚ್ಚಳ ಮಾಡಿದ್ದಕ್ಕೆ ಬಿಜೆಪಿ ನಾಯಕರು ಕೂಗಾಡಿ ಗಲಾಟೆ ಎಬ್ಬಿಸಿದ್ದರು. ಬೆಲೆ ಹೆಚ್ಚಳದ ಈ ಹಣ ರೈತರಿಗೆ ಹೋಗಿಬಿಡುತ್ತದಲ್ಲ ಎಂದು ಅವರ ಹೊಟ್ಟೆ ಉರಿದುಹೋಯಿತು ಎಂದು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಹಾದಿಬೀದಿಯಲ್ಲಿ ಖಾಲಿ ಸಿಲಿಂಡರುಗಳನ್ನು ಹೊತ್ತ ಬಿಜೆಪಿಗರು ಈಗೇಕೆ ಮೌನಕ್ಕೆ ಶರಣಗಾಗಿದ್ದಾರೆ? ಬೆಲೆ ಏರಿಕೆಯಿಂದ ಬಡವರ ಹೊಟ್ಟೆ ಉರಿದರೆ ನಿಮಗೆ ಖುಷಿಯಾ? ಬನ್ನಿ, ಬೀದಿಗೆ ಬಂದು ಪ್ರತಿಭಟನೆ ಮಾಡಿ, ಕೇಂದ್ರ ಸರಕಾರದ ವಿರುದ್ಧ ಧಿಕ್ಕಾರ ಕೂಗಿ ಎಂದಿದ್ದಾರೆ.
ಹಲಾಲ್ ಹಾಲಾಹಲದ ನಡುವೆಯೇ ಇಂದು ಬೆಳಗ್ಗೆ ಬರಸಿಡಿಲಿನಂತೆ ಅಪ್ಪಳಿಸಿದ ಸುದ್ದಿ.
ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ; 13 ದಿನಗಳಲ್ಲಿ 8 ರೂ. ಜಿಗಿತ!
ಇದಪ್ಪಾ ʼಬಹುಜನ ಹಿತಾಯ, ಬಹುಜನ ಸುಖಾಯʼ ಎಂದು ಭಾಷಣ ಬಿಗಿಯುವ ಬಿಜೆಪಿ ಆಡಳಿತದಲ್ಲಿ ಇಂಡಿಯಾ ಶೈನಿಂಗ್!! 1/10
— H D Kumaraswamy (@hd_kumaraswamy) April 3, 2022
ಸಿಮೆಂಟ್, ಕಬ್ಬಿಣ, ಆಹಾರ ಪದಾರ್ಥ ಸೇರಿ ಸಾಮಾನ್ಯ ವ್ಯಕ್ತಿ ಬಳಸುವ ಪ್ರತಿ ವಸ್ತುವಿನ ಬೆಲೆ ನಿತ್ಯವೂ ಜಿಗಿಯುತ್ತಿದೆ. ಶ್ರೀಸಾಮಾನ್ಯನು ಮನೆ ಕಟ್ಟುವ ಕನಸು ಇನ್ನು ಬರೀ ಕನಸೇ. ಅವನ ಜೇಬು ಖಾಲಿಯಾಗುತ್ತಿದೆ, ಕೆಲವರ ಜೇಬು ತುಂಬುತ್ತಿದೆ. ಬಿಜೆಪಿ ಭಾರತದಲ್ಲಿ ಉದ್ಯಮಿಗಳು ಜಗತ್ತಿನ ಟಾಪ್ ಶ್ರೀಮಂತರಾಗುತ್ತಿದ್ದಾರೆ ಎಂದು ಹೆಚ್ಡಿಕೆ ಹೇಳಿದ್ದಾರೆ.
ಇದನ್ನೂ ಓದಿ
ಶ್ರೀಲಂಕಾಕ್ಕೆ ಭಾರತದಿಂದ ಅಕ್ಕಿ ಸರಬರಾಜು ಆರಂಭ: ಆರ್ಥಿಕ ಸಂಕಷ್ಟದಲ್ಲಿರುವ ದೇಶಕ್ಕೆ ಸಹಾಯಹಸ್ತ
Poetry: ಅವಿತಕವಿತೆ; ಆಗಿನ್ನೂ ಮಸೀದಿಗಳೇ ನನಗೆ ಎಟುಕಿರಲಿಲ್ಲ, ಇನ್ನು ಪಾಕಿಸ್ತಾನ ಗೊತ್ತಾಗುವುದು ಹೇಗೆ?