AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಕ್ಷ ವಿಸರ್ಜನೆ ಯಾವಾಗ? ಎಂದು ಪ್ರಶ್ನಿಸುವವರಿಗೆ ಖಡಕ್ ಉತ್ತರ ಕೊಟ್ಟ ಹೆಚ್​ಡಿ ಕುಮಾರಸ್ವಾಮಿ

ಬಹುಮತ ಸಿಗದಿದ್ದರೆ ಪಕ್ಷ ವಿಸರ್ಕನೆ ಮಾಡುವುದಾಗಿ ಹೇಳಿದ್ದ ಹೆಚ್​ಡಿ ಕುಮಾರಸ್ವಾಮಿ ಅವರು ಇದೀಗ ನೆಟ್ಟಿಗರ ಟ್ರೋಲ್‌ಗೆ ಆಹಾರವಾಗಿದ್ದಾರೆ. ಕುಮಾರಸ್ವಾಮಿ ಅವರೇ ಪಕ್ಷ ವಿಸರ್ಜನೆ ಯಾವಾಗ? ಎಂದು ನೆಟ್ಟಿಗರು ಕಾಲೆಳೆಯುತ್ತಿದ್ದು, ಇದಕ್ಕೆ ಸ್ವತಃ ಕುಮಾರಸ್ವಾಮಿ ಉತ್ತರಿಸಿದ್ದಾರೆ.

ಪಕ್ಷ ವಿಸರ್ಜನೆ ಯಾವಾಗ? ಎಂದು ಪ್ರಶ್ನಿಸುವವರಿಗೆ ಖಡಕ್ ಉತ್ತರ ಕೊಟ್ಟ ಹೆಚ್​ಡಿ ಕುಮಾರಸ್ವಾಮಿ
ಹೆಚ್​​ ಡಿ ಕುಮಾರಸ್ವಾಮಿ Image Credit source: File photo
Follow us
ರಮೇಶ್ ಬಿ. ಜವಳಗೇರಾ
|

Updated on: May 31, 2023 | 9:27 AM

ಬೆಂಗಳೂರು: ರಾಜ್ಯದಲ್ಲಿ 2023ರ ವಿಧಾನಸಭಾ ಚುನಾವಣೆ (Karnataka Assembly Elections 2023) ಮುಗಿದಿದ್ದು, ಫಲಿತಾಂಶವೂ ಹೊರಬಿದ್ದಿದೆ. ಬಹುಮತ ಸಾಧಿಸಿರುವ ಕಾಂಗ್ರೆಸ್‌ ಅಧಿಕಾರಕ್ಕೇರಿದೆ. ಕಾಂಗ್ರೆಸ್‌ ಸಂಭ್ರಮದ ನಡುವೆ ನೆಟ್ಟಿಗರು ಇತರ ಪಕ್ಷಗಳ ಕಾಲೆಳೆಯುತ್ತಿದ್ದಾರೆ. ಅದರಲ್ಲೂ ಮುಖ್ಯವಾಗಿ ಈ ಬಾರಿ ಜೆಡಿಎಸ್​ಗೆ ಬಹುಮತ ಸಿಗದಿದ್ದರೆ ಪಕ್ಷ ವಿಸರ್ಜನೆ ಮಾಡುವುದಾಗಿ ಹೆಚ್​ಡಿ ಕುಮಾರಸ್ವಾಮಿ(HD Kumaraswamy) ಶಪಥ ಮಾಡಿದ್ದರು. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಅಂದಿನ ಕುಮಾರಸ್ವಾಮಿ ಹೇಳಿಕೆಗೆ ಛೇಡಿಸುತ್ತಿದ್ದಾರೆ. ಅಲ್ಲದೇ ಕುಮಾರಸ್ವಾಮಿ ಅವರೇ ಪಕ್ಷ ವಿಸರ್ಜನೆ ಯಾವಾಗ? ಎಂದು ನೆಟ್ಟಿಗರು ಕಾಲೆಳೆಯುತ್ತಿದ್ದಾರೆ. ಇನ್ನು ಇದಕ್ಕೆ ಸ್ವತಃ ಹೆಚ್​ಡಿ ಕುಮಾರಸ್ವಾಮಿ ಉತ್ತರಿಸಿದ್ದಾರೆ.

ಪಕ್ಷ ವಿಸರ್ಜನೆ ಯಾವಾಗ? ಎಂದು ಪ್ರಶ್ನಿಸುವವರ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಪಕ್ಷ ವಿಸರ್ಜನೆ, ಅಂತಿಮ ಸಂಸ್ಕಾರದ ಹೇಳಿಕೆ ಕೊಟ್ಟ ಸಂಸ್ಕಾರಹೀನರಿಗೆ ಹೇಳುವುದು ಇಷ್ಟೇ. ನನಗೆ 123 ಸೀಟು ಬಂದಿಲ್ಲ, ಪಂಚರತ್ನ ಜಾರಿಗೆ ಜನರು ಅವಕಾಶವನ್ನೂ ಕೊಟ್ಟಿಲ್ಲ, ಹಾಗಾಗಿ ಪಕ್ಷವನ್ನು ವಿಸರ್ಜನೆ ಮಾಡುವುದೂ ಇಲ್ಲ. ಇನ್ನೇನಾದರೂ ಅನುಮಾನ ಇದ್ದವರು ಬರಲಿ, ಅಂಥವರ ಅಜ್ಞಾನ ಹೋಗಲಾಡಿಸುತ್ತೇನೆ ಎಂದಿದ್ದಾರೆ.

ಕೆಲವರ ವಿವೇಕರಹಿತ ಹೇಳಿಕೆಗಳಿಗೆ ಉತ್ತರಿಸುವುದು ಬೇಡ ಭಾವಿಸಿದ್ದೆ. ನಾನು ಸೋತ ನೋವಿನಲ್ಲಿದ್ದೇನೆ. ಕಾಂಗ್ರೆಸ್ ನವರು ಗೆದ್ದ ಅಹಂನಲ್ಲಿ ಇದ್ದಾರೆ. ಅಹಂ ಅಳಿಯುತ್ತದೆ ಅನ್ನುವ ಕನಿಷ್ಠ ಅರಿವು ಅವರಿಗೆ ಇದ್ದಂತೆ ಇಲ್ಲ. ಆ ಅರಿವು ಬರುವ ಕಾಲವೂ ದೂರವಿಲ್ಲ. ಕಾಯುವ ತಾಳ್ಮೆ ನನಗಿದೆ. ಚುನಾವಣೆ ಫಲಿತಾಂಶ ಬಂದಿದೆ, ನನಗೆ ಜನರು 123 ಕ್ಷೇತ್ರ ಕೊಡಲಿಲ್ಲ. ಈಗ ಪಂಚರತ್ನ ಜಾರಿ ಹಾಗೂ ಪಕ್ಷ ವಿಸರ್ಜನೆ ಪ್ರಶ್ನೆ ಎಲ್ಲಿ? ಸಾಮಾನ್ಯಜ್ಞಾನವೇ ಇಲ್ಲದ ಸಚಿವರಿಗೆ ಈ ಪರಿ ಅಜ್ಞಾನವಿದೆ ಎಂದು ನಾನಂತೂ ಎಣಿಸಿರಲಿಲ್ಲ. ಇಷ್ಟು ಅವಿವೇಕವುಳ್ಳ ಇವರ ಮುಂದಿನ ಆಡಳಿತದ ಈಗಲೇ ಆತಂಕವಾಗುತ್ತಿದೆ ಎಂದು ತಿರುಗೇಟು ನೀಡಿದ್ದಾರೆ.

ಚುನಾವಣೆಗೆ ಸಿದ್ದತೆ ಮತ್ತು ಪ್ರಚಾರದ ವೇಳೆ ರಾಜಕೀಯ ಪಕ್ಷದ ನಾಯಕರು ಹೇಳಿಕೆಗಳು, ಗ್ಯಾರೆಂಟಿಗಳು, ಭರವಸೆಗಳ ಮೂಲಕ ಜನರನ್ನು ಸೆಳೆಯಲು ಪೈಪೋಟಿ ನಡೆಸಿದ್ದವು. ಈ ವೇಳೆ, ಹಲವು ನಾಯಕರು ಪ್ರಚಾರದ ಭರದಲ್ಲಿ ಮೀತಿ ಮೀರಿ ಮಾತಾಡಿದ್ದು ಉಂಟು. ಅಂತೆಯೇ, ಜೆಡಿಎಸ್‌ ನಾಯಕ ಎಚ್‌.ಡಿ ಕುಮಾರಸ್ವಾಮಿ ಉತ್ತರ ಕನ್ನಡ ಜಿಲ್ಲೆ ಹಳಿಯಾಳದಲ್ಲಿ ಪ್ರಚಾರದ ವೇಳೆ, ಈ ಬಾರಿ ಸರ್ಕಾರ ರಚಿಸಲು ನಮಗೆ ಬಹುಮತ ಸಿಗದಿದ್ದರೆ ಪಕ್ಷವನ್ನೇ ವಿಸರ್ಜಿಸುತ್ತೇನೆ ಎಂದು ಕುಮಾರಸ್ವಾಮಿ ಅವರು ಪ್ರಚಾರದ ವೇಳೆ ಹೇಳಿಕೆ ನೀಡಿದ್ದರು.

ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ