AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕುಮಾರಸ್ವಾಮಿ ಸ್ಪರ್ಧೆ ಫಿಕ್ಸ್, ಅಧಿಕೃತ ಘೋಷಣೆಯೊಂದೇ ಬಾಕಿ

ಲೋಕಸಭಾ ಚುನಾವಣೆ ಸಂಬಂಧ ಮಾಜಿ ಮುಖ್ಯಮಂತ್ರಿ ಎಚ್​ಡಿ ಕುಮಾರಸ್ವಾಮಿ ಮಹತ್ವದ ಸುದ್ದಿಗೋಷ್ಠಿ ನಡೆಸಿದ್ದು, ಕೆಲ ವಿಚಾರಳಗನ್ನು ಹಂಚಿಕೊಂಡಿದ್ದಾರೆ. ಅದರಲ್ಲೂ ಮುಖ್ಯವಾಗಿ ಮಂಡ್ಯ, ಕೋಲಾರ ಮತ್ತು ಹಾಸನ ಅಭ್ಯರ್ಥಿಗಳ ಬಗ್ಗೆ ಮಾತನಾಡಿದ್ದಾರೆ. ಅಲ್ಲದೇ ಇದೇ ವೇಳೆ ಮಂಡ್ಯದಲ್ಲಿ ತಾವು ಸ್ಪರ್ಧೆ ಮಾಡುವ ಬಗ್ಗೆ ಪರೋಕ್ಷ ಸುಳಿವು ಸಹ ಕೊಟ್ಟಿದ್ದಾರೆ. ಹಾಗಾದ್ರೆ, ಎಚ್​ಡಿಕೆ ಸುದ್ದಿಗೋಷ್ಠಿಯಲ್ಲಿ ಏನೆಲ್ಲಾ ಅಂಶಗಳನ್ನು ಹೇಳಿದ್ದಾರೆ ಎನ್ನುವ ವಿವರ ಇಲ್ಲಿದೆ.

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕುಮಾರಸ್ವಾಮಿ ಸ್ಪರ್ಧೆ ಫಿಕ್ಸ್, ಅಧಿಕೃತ ಘೋಷಣೆಯೊಂದೇ ಬಾಕಿ
ಹೆಚ್​ಡಿ ಕುಮಾರಸ್ವಾಮಿ
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Mar 26, 2024 | 3:33 PM

Share

ಬೆಂಗಳೂರು, (ಮಾರ್ಚ್ 26): ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ (BJP JDS Alliance)ತನ್ನ ಪಾಲಿನ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್​ಡಿ ಕುಮಾರಸ್ವಾಮಿ ಇಂದು (ಮಾರ್ಚ್ 26) ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ, ಮೂರು ಕ್ಷೇತ್ರಗಳ ಜೆಡಿಎಸ್​ ಅಭ್ಯರ್ಥಿಗಳ ಹೆಸರುಗಳನ್ನು ಸಂಜೆ ಘೋಷಿಸುವುದಾಗಿ ಹೇಳಿದರು. ಅಲ್ಲದೇ ಇದೇ ವೇಳೆ ಮಂಡ್ಯ ಕ್ಷೇತ್ರದ ಅಭಿವೃದ್ಧಿಗೆ ತಲೆಕೊಡಲು ಸಿದ್ಧ ಎಂದು ಹೇಳಿದರು. ಈ ಮೂಲಕ ಮಂಡ್ಯದಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಪರೋಕ್ಷವಾಗಿ ಸುಳಿವು ಕೊಟ್ಟಿದ್ದು, ಸಂಜೆ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ. ಇದರೊಂದಿಗೆ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಮೈತ್ರಿ ಅಭ್ಯರ್ಥಿ ಯಾರು ಯಾರು ಎನ್ನುವ ಕಾರ್ಯಕರ್ತರಿಗೆ ಕ್ಲಾರಿಟಿ ಸಿಕ್ಕಂತಾಗಿದೆ.

ಈ ಮೊದಲು ಮಂಡ್ಯದಲ್ಲಿ ಪುಟ್ಟರಾಜು ಅವರನ್ನು ಕಣಕ್ಕಿಳಿಸಬೇಕೆಂದು ತೀರ್ಮಾನ ಮಾಡಿದ್ವಿ. ಅಲ್ಲದೇ ನಿಖಿಲ್ ಕುಮಾರಸ್ವಾಮಿ ಸಹ ಸ್ಪರ್ಧೆ ಮಾಡಲ್ಲ ಎಂದಿದ್ದಾನೆ. ಇನ್ನು ಜಿಲ್ಲೆಯ ಕಾರ್ಯಕರ್ತರು ನನ್ನನ್ನು ನಿಲ್ಲುವಂತೆ ಒತ್ತಾಯಿಸುತ್ತಿದ್ದಾರೆ. ಹೀಗಾಗಿ ಇಂದು (ಮಾರ್ಚ್ 26) ಸಂಜೆ ಮಂಡ್ಯ ಜಿಲ್ಲೆಯ ಮುಖಂಡರ ಸಭೆ ನಡೆಸಿ ಅಂತಿಮ ತೀರ್ಮಾನ ತಿಳಿಸುತ್ತೇನೆ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಕೆಎಸ್ ಈಶ್ವರಪ್ಪ ನಾಮಪತ್ರ ಸಲ್ಲಿಕೆಗೆ ಮುಹೂರ್ತ ಫಿಕ್ಸ್; ಬ್ರಹ್ಮ ಬಂದರೂ ನಾನು ಚುನಾವಣೆ ಸ್ಪರ್ಧೆ ಖಚಿತ ಎಂದ ಈಶ್ವರಪ್ಪ

ಬಿಜೆಪಿ-JDS​ ಮೈತ್ರಿಯಿಂದ ನಾವು ಮೂರು ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ. ದೇಶಾದೆಲ್ಲೆಡೆ ಮೋದಿ ಅಲೆ ಇದೆ. ಹೀಗಾಗಿ ಮಂಡ್ಯ, ಹಾಸನ, ಕೋಲಾರ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿ ಗೆಲ್ಲಲಿದ್ದಾರೆ. ಸಂಜೆಯೊಳಗೆ ಕೋಲಾರ ಮೈತ್ರಿ ಅಭ್ಯರ್ಥಿ ಘೋಷಿಸುತ್ತೇವೆ. ರಾಮನಗರ ಜಿಲ್ಲೆ ನನಗೆ ರಾಜಕೀಯವಾಗಿ ಶಕ್ತಿ ಮತ್ತು ಜನ್ಮಕೊಟ್ಟಿದೆ. ಇನ್ನೂ 10 ಜನ್ಮ ಹುಟ್ಟಿ ಬಂದರೂ ರಾಮನಗರದಿಂದ ಕಳಿಸಲು ಆಗಲ್ಲ ಎಂದು ವಿರೋಧಿಗಳಿಗೆ ತಿರುಗೇಟು ನೀಡಿದರು. ಈ ಮೂಲಕ ಕುಮಾರಸ್ವಾಮಿ ಮಂಡ್ಯದಿಂದ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದ್ದು, ಸಂಜೆ ಅಧಿಕೃತ ಘೋಷಣೆ ಮಾಡಲಿದ್ದಾರೆ.

ಮಾ.29ರಂದು ಬಿಜೆಪಿ-ಜೆಡಿಎಸ್ ಸಮನ್ವಯ ಸಭೆ

ಚುನಾವಣೆಗೆ ಈಗಾಗಲೇ ಸ್ಟಾರ್​ ಪ್ರಚಾರಕರ ಪಟ್ಟಿ ಸಿದ್ಧಪಡಿಸಿದ್ದೇವೆ. ಅಲ್ಲದೇ ಬಿಜೆಪಿ-ಜೆಡಿಎಸ್ ನಡುವೆ​ ಸಮನ್ವಯಕ್ಕಾಗಿ ಸಭೆ ಕರೆದಿದ್ದೇವೆ. ಮಾ.29ರಂದು ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಸಭೆ ನಿಗದಿಯಾಗಿದೆ. ಎಂದರು.

ಇನ್ನು ನಾಳೆ (ಮಾರ್ಚ್ 27) ಸಂಜೆ 4 ಗಂಟೆಗೆ ಮೈಸೂರಿನಲ್ಲಿ ಮೈತ್ರಿ ಅಭ್ಯರ್ಥಿಗಳ ಸಭೆ ಕರೆದಿದ್ದೇವೆ. ಮೈಸೂರು-ಕೊಡಗು, ಚಾಮರಾಜನಗರ ಕ್ಷೇತ್ರಗಳ ಪ್ರಚಾರ ಸಭೆ ನಡೆಯಲಿದೆ. ಈ ಸಭೆಯಲ್ಲಿ ಬಿಜೆಪಿ, ಜೆಡಿಎಸ್​ನ ಮುಖಂಡರು ಭಾಗಿಯಾಗಲಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

ಇದೇ ವೇಳೆ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ಕೇಂದ್ರದ ಬಳಿ ಇವರಿಗೆ ಸರಿಯಾಗಿ ಮನವಿ ಮಾಡೋದಕ್ಕೆ ಬರಲ್ಲ. ರಾಜ್ಯ ಸರ್ಕಾರ ತನ್ನ ಬಳಿಯೇ ನ್ಯೂನತೆ ಇಟ್ಟುಕೊಂಡಿದೆ/ ಕೇಂದ್ರ ನೀಡಿದ 3 ಸಾವಿರ ಕೋಟಿ ರೂಪಾಯಿ ಅನುದಾನ ಬಳಕೆ ಮಾಡಿಕೊಂಡಿಲ್ಲ ಎಂದು ಕಿಡಿಕಾರಿದರು.

ಗುಬ್ಬಿ ಶಾಸಕ ಶ್ರೀನಿವಾಸ್ ಬಳಸಿರುವ ಪದಗಳನ್ನು ನಾನು ಗಮನಿಸಿದ್ದೇನೆ. ನಾಡಿನ ರೈತರ ಹಿತಕ್ಕಾಗಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದೇವೆ. ಪ್ರಾದೇಶಿಕ ಜೆಡಿಎಸ್​ ಪಕ್ಷ ಅಧಿಕಾರಕ್ಕೆ ಬರಲಿಲ್ಲ. ನೆರೆ ರಾಜ್ಯಗಳಿಗೆ ಅನ್ಯಾಯವಾಗದಂತೆ ನಿರ್ಧಾರ ತೆಗೆದುಕೊಳ್ಳಬೇಕು. ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸಿ ಎಂದು ಕರೆ ನೀಡಿದರು.

ಜಿ ಟಿ ದೇವೇಗೌಡರ ನೇತೃತ್ವದಲ್ಲಿ ಕೋರ್ ಕಮೀಟಿ ಸಭೆ ನಡೆದಿದ್ದು, ಇವತ್ತಿನ ಸಭೆಯಲ್ಲಿ ಮುಂದಿನ ಲೋಕಸಭಾ ಚುನಾವಣೆಯ‌ ತಯಾರಿ ಬಗ್ಗೆ ಚರ್ಚೆ ಆಗಿದೆ. ಮೈತ್ರಿಯ ಎರಡು ಪಕ್ಷಗಳ ನಾಯಕರ ವಿಶ್ವಾಸದೊಂದಿಗೆ ಯಾವ ರೀತಿ ಚುನಾವಣೆಯಲ್ಲಿ ಭಾಗವಹಿಸಬೇಕಯ ಎಂದು ಚರ್ಚೆ ಮಾಡಿದ್ದೇವೆ. ಪ್ರಮುಖವಾಗಿ 6 ವಿಚಾರಗಳ ಕುರಿತು ಚರ್ಚ್ ನಟೆಸಿದ್ದೇವೆ. ಶಾಸಕರ ಎಲ್ಲರ ಒಳಗೊಂಡ ಸಮನ್ವಯ ಸಮಿತಿಯನ್ನ ಪ್ರಕಟ ಮಾಡಿದ್ದೇವೆ. ಚುನಾವಣೆ ಯಾವ ರೀತಿ ನಡೆಸಬೇಕು ಎಂದು ಪಕ್ಷದ ಮುಖಂಡರಿಗೆ ಹೇಳಿದ್ದೇವೆ. ಇವತ್ತು ವಿಷೇಶವಾಗಿ ಚರ್ಚೆ ಮಾಡಿದ್ದು, ತಮಿಳುನಾಡಿನ ಡಿಎಂಕೆ ಸರ್ಕಾರ ಪ್ರಣಾಳಿಕೆಯಲ್ಲಿ ಮೇಕೆದಾಟು ನಿಲ್ಲಿಸುತ್ತೇವೆ ಎಂದು ಹಾಕಿದ್ದಾರೆ. ಅದರ ಬಗ್ಗೆ ನಾವು ಸುದೀರ್ಘವಾಗಿ ಚರ್ಚೆ ಮಾಡಿದ್ದೇವೆ . ಪ್ರಣಾಳಿಕೆಯನ್ನು ಮಾಡಬೇಕು ಎಂದು ರಾಷ್ಟ್ರೀಯ ಅಧ್ಯಕ್ಷರು ತಿರ್ಮಾನ ಇದೆ. ಆ ಕುರಿತು ಚರ್ಚೆ ಆಗಿದೆ ಎಂದು ಹೇಳಿದರು.

ಕೆಲವು ಸೂಕ್ಷ್ಮ ವಿಚಾರಗಳು ಇವೆ. ಎನ್ ಡಿ ಎ ಸರ್ಕಾರ ಇದೆ ಎಂಬುವುದು ನಮ್ಮ ವಿಶ್ವಾಸ. ಮೂರು ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ. ನಮ್ಮ ಪ್ರಣಾಳಿಕೆ ಘೋಷಣೆ ಮಾಡಿದ್ರು ಗಂಭೀರವಾಗಿ ತೆಗೆದುಕೊಳ್ಳುವುದು ಕಷ್ಟ ಇದೆ. ನಮ್ಮ ಲೋಕಸಭಾ ಸದಸ್ಯರ ಮೇಲೆ ಕೆಲವು ರಾಜಕೀಯ ಹೇಳಿಕೆ ಗಮಿನಿಸಿದ್ದೇವೆ. 28 ಸದಸ್ಯರ ಇದ್ರು ನಮ್ಮ ರಾಜ್ಯಕ್ಕೆ ಅನ್ಯಾಯ ಆಗಿದೆ ಎಂದು ಕಾಂಗ್ರೆಸ್‌ ನಾಯಕರು ಅಪ ಪ್ರಚಾರ ಮಾಡಿದ್ದಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:12 pm, Tue, 26 March 24