AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನಸಭೆ ಚುನಾವಣೆಯಲ್ಲಿ ಪುತ್ರ ನಿಖಿಲ್ ಸ್ಪರ್ಧೆ ಸುಳಿವು ಕೊಟ್ಟ ಕುಮಾರಸ್ವಾಮಿ: ಕ್ಷೇತ್ರ ಯಾವುದು?

ಜೆಡಿಎಸ್​ ಶಾಸಕಾಂಗ ಪಕ್ಷದ ನಾಯಕ ಎಚ್​ಡಿ ಕುಮಾರಸ್ವಾಮಿ ಅವರು ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಮುಂದಿನ ಚುನಾವಣೆಗೆ ಸ್ಪರ್ಧೆ ಮಾಡುವ ಬಗ್ಗೆ ಮಹತ್ವದ ಸುಳಿವು ಕೊಟ್ಟಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಪುತ್ರ ನಿಖಿಲ್ ಸ್ಪರ್ಧೆ ಸುಳಿವು ಕೊಟ್ಟ ಕುಮಾರಸ್ವಾಮಿ: ಕ್ಷೇತ್ರ ಯಾವುದು?
HD Kumaraswamy And Nikhil
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:Oct 20, 2022 | 5:53 PM

Share

ಮೈಸೂರು: ಮುಂಬರುವ ವಿಧಾನಸಭೆ ಚುನಾವಣೆಗೆ (Karnataka Assembly Election 2023) ಜೆಡಿಎಸ್ ಭರ್ಜರಿ ತಯಾರಿ ನಡೆಸಿದೆ. ಮೈಸೂರಿನಲ್ಲಿ ಚುನಾವಣೆ ಬಗ್ಗೆ ಕಾರ್ಯಹಾರ ನಡೆಸಿದೆ. ಅಲ್ಲದೇ ಇದೇ ನವೆಂಬರ್ 1ರಂದು ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುವುದಾಗಿ ಮಾಜಿ ಸಿಎಂ ಎಚ್​ಡಿ ಕುಮಾರಸ್ವಾಮಿ ಹೇಳಿದ್ದು, ಪುತ್ರ ನಿಖಿಲ್ ಸ್ಪರ್ಧೆಯ ಸುಳಿವು ಕೊಟ್ಟಿದ್ದಾರೆ.

ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಗುರುವಾರ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್ 1ರಂದು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುತ್ತೆ, 126 ಅಭ್ಯರ್ಥಿಗಳ ಪಟ್ಟಿಯಲ್ಲಿ ಪುತ್ರ, ಪಕ್ಷದ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೆಸರೂ ಇರಬಹುದು ಎಂದು ಅಚ್ಚರಿ ಹೇಳಿಕೆ ನೀಡಿದರು. ಈ ಮೂಲಕ ನಿಖಿಲ್ ಕುಮಾರಸ್ವಾಮಿ ಮುಂದಿನ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡುವ ಸುಳಿವು ಕೊಟ್ಟಂತಿದೆ.

Karnataka Elections 2022: ಎಲ್ಲ 224 ಕ್ಷೇತ್ರಗಳಲ್ಲಿಯೂ ಜೆಡಿಎಸ್ ಸ್ಪರ್ಧೆ; ಎಚ್​ಡಿ ಕುಮಾರಸ್ವಾಮಿ ಘೋಷಣೆ

ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಂಭವನೀಯ ಅಭ್ಯರ್ಥಿಗಳು, ಶಾಸಕರು, ಮಾಜಿ ಶಾಸಕರ ಜೊತೆ ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದಿದ್ದೇನೆ. ಪೂರ್ಣ ಪ್ರಮಾಣದ ಸರ್ಕಾರ ಅಸ್ತಿತ್ವಕ್ಕೆ ತರುವಂತೆ ತಾಯಿಯನ್ನು ಬೇಡಿಕೊಂಡಿದ್ದೇನೆ. ತಾಯಿಯ ಅನುಗ್ರಹದಿಂದ ಹಾಗೂ ಜನರ ಆಶೀರ್ವಾದದಿಂದ ನಾವು ಅಧಿಕಾರಕ್ಕೆ ಬರುತ್ತೇವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಉಚಿತವಾಗಿ ಗುಣಮಟ್ಟದ ಶಿಕ್ಷಣ, ಆರೋಗ್ಯ, ರೈತರಿಗೆ ಸ್ವಾವಲಂಬಿ ಯೋಜನೆ, ಪ್ರತಿಯೊಬ್ಬರಿಗೂ ಸೂರು ಮತ್ತು ನೀರಾವರಿ ಕಾರ್ಯಕ್ರಮದ ಪಂಚರತ್ನ ಯೋಜನೆ ಜಾರಿ ಮಾಡುತ್ತೇವೆ. ಇದನ್ನೆಲ್ಲಾ ಅನುಷ್ಠಾನಕ್ಕೆ ತರಲು ಬರುವ ಎಲ್ಲಾ ಸವಾಲನ್ನೂ ಸ್ವೀಕರಿಸಿದ್ದೇನೆ. ಜನರು ಉತ್ತಮ ಬದುಕು ಕಟ್ಟಿಕೊಳ್ಳುವಂತೆ ಮಾಡುವ ಸರ್ಕಾರ ನಡೆಸಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ. ಇದಕ್ಕೆ ರಾಜ್ಯದ ಜನರು ಆಶೀರ್ವಾದ ಮಾಡುವಂತೆ ಕೋರುತ್ತೇನೆ’ ಎಂದರು. ಜನಪರ ಯೋಜನೆಗಳನ್ನು ಚಾಚೂ ತಪ್ಪದೆ ಜಾರಿಗೊಳಿಸಲು 123 ಸೀಟು ಗೆಲ್ಲಬೇಕು ಎನ್ನುವುದು ನನ್ನ ಗುರಿಯಾಗಿದೆ ಹೇಳಿದರು.

ಜಾರಕಿಹೊಳಿ ಬುಟ್ಟಿಗೆ ಕೈ ಹಾಕಿದ ಎಚ್​ಡಿಕೆ, ಮತ್ತೆ ರಾಜಕೀಯ ಧೃವೀಕರಣಕ್ಕೆ ಸಾಕ್ಷಿಯಾಗತ್ತಾ ರಾಜ್ಯ ರಾಜಕಾರಣ?

ನಿಖಿಲ್​ಗೆ ಯಾವ ಕ್ಷೇತ್ರ?

ಮಂಡ್ಯ ಲೋಕಸಭಾ ಚುನಾವಣೆ ಸೋಲುಕಂಡಿರುವ ನಿಖಿಲ್ ಕುಮಾರಸ್ವಾಮಿ ಅವರನ್ನು ವಿಧಾನಸಭೆ ಚುನಾವಣೆ ಅಖಾಡಕ್ಕಿಳಿಸಲು ಕುಮಾರಸ್ವಾಮಿ ಚಿಂತನೆ ನಡೆಸಿದ್ದಾರೆ. ಇದಕ್ಕೆ ಪೂರಕವೆಂಬಂತೆ ಅಭ್ಯರ್ಥಿಗಳ ಪಟ್ಟಿಯಲ್ಲಿ ನಿಖಿಲ್ ಹೆಸರು ಇದ್ದರೂ ಇರದಬಹುದು ಎಂದು ಹೇಳುವ ಮೂಲಕ ಸುಳಿವು ನೀಡಿದ್ದಾರೆ. ಒಂದು ವೇಳೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಖಚಿತವಾದರೆ ಯಾವ ಕ್ಷೇತ್ರದಿಂದ ಕಣಕ್ಕಿಳಿಯುತ್ತಾರೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ. ಈ ಬಾರಿ ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿ ಸ್ಪರ್ಧೆ ಮಾಡುವುದಿಲ್ಲ ಎಂದು ಈ ಹಿಂದೆ ಎಚ್​ಡಿಕೆ ಘೋಷಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಮನಗರ ಕ್ಷೇತ್ರದಿಂದ ಪುತ್ರ ನಿಖಿಲ್ ಕುಮಾರಸ್ವಾಮಿಯನ್ನು ಅಖಾಡಕ್ಕಿಳಿಸುವ ಸಾಧ್ಯತೆಗಳು ಹೆಚ್ಚಿವೆ.

Published On - 5:45 pm, Thu, 20 October 22