AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಪ್ರತಿಭಟನೆಗೆ ಕೇರಳ ಉದಾಹರಣೆ ಕೊಟ್ಟು ಕಾಂಗ್ರೆಸ್​ಗೆ ಭರ್ಜರಿ ತಿರುಗೇಟು ಕೊಟ್ಟ ಕುಮಾರಸ್ವಾಮಿ

ಅನುದಾನದಲ್ಲಿ ತಾರತಮ್ಯ ಆಗಿದೆ ಎಂದು ಆರೋಪಿಸಿ ಕರ್ನಾಟಕ ಕಾಂಗ್ರೆಸ್ ಸರ್ಕಾರವು ನಾಳೆ ದೆಹಲಿಯ ಜಂತರ್ ಮಂತರ್​ನಲ್ಲಿ ಪ್ರತಿಭಟನೆ ನಡೆಸಲಿದೆ. ಇದಕ್ಕೆ ಪ್ರತಿಯಾಗಿ ಬಿಜೆಪಿ ನಾಳೆ ರಾಜ್ಯದಲ್ಲಿ ಪ್ರತಿಭಟನೆ ನಡೆಸಿ ಕಾಂಗ್ರೆಸ್​ಗೆ ತಿರುಗೇಟು ನೀಡಲು ಸಜ್ಜಾಗಿದೆ. ಈ ನಡುವೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದು, ಕೇರಳವನ್ನು ಉದಾಹರಣೆಯನ್ನಾಗಿಸಿಕೊಂಡು ಕಾಂಗ್ರೆಸ್​ಗೆ ಭರ್ಜರಿ ಟಾಂಗ್ ಕೊಟ್ಟಿದ್ದಾರೆ.

ದೆಹಲಿ ಪ್ರತಿಭಟನೆಗೆ ಕೇರಳ ಉದಾಹರಣೆ ಕೊಟ್ಟು ಕಾಂಗ್ರೆಸ್​ಗೆ ಭರ್ಜರಿ ತಿರುಗೇಟು ಕೊಟ್ಟ ಕುಮಾರಸ್ವಾಮಿ
ದೆಹಲಿ ಪ್ರತಿಭಟನೆಗೆ ಕೇರಳ ಉದಾಹರಣೆ ಕೊಟ್ಟು ಕಾಂಗ್ರೆಸ್​ಗೆ ಭರ್ಜರಿ ತಿರುಗೇಟು ಕೊಟ್ಟ ಕುಮಾರಸ್ವಾಮಿ
Sunil MH
| Updated By: Rakesh Nayak Manchi|

Updated on: Feb 06, 2024 | 7:26 PM

Share

ಬೆಂಗಳೂರು, ಫೆ.6: ಅನುದಾನದಲ್ಲಿ ತಾರತಮ್ಯ ಆಗಿದೆ ಎಂದು ಆರೋಪಿಸಿ ಕರ್ನಾಟಕ ಕಾಂಗ್ರೆಸ್ (Congress) ಸರ್ಕಾರವು ನಾಳೆ ದೆಹಲಿಯ ಜಂತರ್ ಮಂತರ್​ನಲ್ಲಿ ಪ್ರತಿಭಟನೆ ನಡೆಸಲಿದೆ. ಇದಕ್ಕೆ ಕೇರಳ ರಾಜ್ಯವನ್ನು ಉದಾಹರಣೆಯನ್ನಾಗಿಸಿಕೊಂಡು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಅವರು ಕಾಂಗ್ರೆಸ್ ಪಕ್ಷವನ್ನು ಕುಟುಕಿದ್ದಾರೆ. ದಿಲ್ಲಿ ಯಾತ್ರೆಗೆ ಹೊರಟ ಕಾಂಗ್ರೆಸ್​ನ 2 ತಲೆ ರಾಜಕಾರಣ ಬೆತ್ತಲಾಗಿದೆ. ಕರ್ನಾಟಕಕ್ಕೆ ಒಂದು ನೀತಿ, ಕೇರಳಕ್ಕೆ ಮತ್ತೊಂದು ನೀತಿ. ಉದ್ದೇಶ ಮಾತ್ರ ಲೋಕಸಭೆ ಚುನಾವಣೆ ಎಂದು ತಿರುಗೇಟು ನೀಡಿದ್ದಾರೆ.

“ತೆರಿಗೆ ಪಾಲು, ಅನುದಾನದಲ್ಲಿ ಅನ್ಯಾಯವಾಗಿದೆ ಎಂದು ದಿಲ್ಲಿಗೆ ಯಾತ್ರೆ ಹೊರಟಿರುವ ರಾಜ್ಯ ಕಾಂಗ್ರೆಸ್ ಪಕ್ಷದ ಎರಡು ತಲೆ ರಾಜಕಾರಣ ಈಗ ಬೆತ್ತಲಾಗಿದೆ. ಅದರ ವರಸೆ ಹೇಗಿದೆ ಎಂದರೆ, ಕರ್ನಾಟಕಕ್ಕೆ ಒಂದು ನೀತಿ. ಕೇರಳಕ್ಕೆ ಮತ್ತೊಂದು ನೀತಿ! ಉದ್ದೇಶ: ಲೋಕಸಭೆ ಚುನಾವಣೆ” ಎಂದು ಹೇಳಿದ್ದಾರೆ. ಅಲ್ಲದೆ, ರಾವಣ ತಲೆಗಳ ಕಾಂಗ್ರೆಸ್ ರಾಜಕಾರಣ ಎಂದು ಹ್ಯಾಷ್ ಟ್ಯಾಗ್ ಮಾಡಿದ್ದಾರೆ.

“ಕೇರಳದ ಸಿಎಂ ಪಿಣರಾಯಿ ವಿಜಯನ್ ಅವರು, “ನಮ್ಮ ರಾಜ್ಯಕ್ಕೆ ತೆರಿಗೆ ಪಾಲು, ಅನುದಾನದಲ್ಲಿ ಅನ್ಯಾಯ ಆಗಿದೆ. ಅದಕ್ಕೆ ಕೇಂದ್ರದ ವಿರುದ್ಧ ದನಿ ಎತ್ತೋಣ ಬನ್ನಿ, ಸಹಕಾರ ನೀಡಿ” ಎಂದು ಕರೆದರೆ, ಅದಕ್ಕೆ ಕೇರಳ ಕಾಂಗ್ರೆಸ್ಸಿಗರು ಕೊಟ್ಟ ಉತ್ತರ ಹೀಗಿತ್ತು; “ಜನರ ಹಣವನ್ನು ನೀವು ಅನಗತ್ಯ ವೆಚ್ಚಗಳಿಗೆ ಪೋಲು ಮಾಡುತ್ತಿದ್ದೀರಿ, ನಾವು ಬರಲ್ಲ” ಎಂದಿದ್ದಾರೆ” ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: SSLC Preparatory Exam: ಎಸ್​​ಎಸ್​​ಎಲ್​ಸಿ ಮಕ್ಕಳ ಕಿಸೆಗೂ ಕೈ ಹಾಕಿದೆ ಗತಿಗೆಟ್ಟ ಸರ್ಕಾರ: ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ

“ವಿಜಯನ್ ಅವರು ಕರೆದಿದ್ದ ಸರ್ವಪಕ್ಷ ಸಭೆಗೂ ಅಸಹಕಾರ ತೋರಿರುವ ಕಾಂಗ್ರೆಸ್ಸಿಗರು, ಕೇಂದ್ರ ಸರಕಾರದ ವಿರುದ್ಧ ಕೇರಳ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸುವಾಗಲೂ ಗೈರುಹಾಜರಾಗಿದ್ದಾರೆ ಮತ್ತು ಕಲಾಪವನ್ನೇ ಬಹಿಷ್ಕರಿಸಿದ್ದಾರೆ. ಅಷ್ಟೇ ಅಲ್ಲ; ಫೆಬ್ರುವರಿ 8ನೇ ತಾರೀಖು ದಿಲ್ಲಿಯಲ್ಲಿ ವಿಜಯನ್ ಅವರು ಹಮ್ಮಿಕೊಂಡಿರುವ ಪ್ರತಿಭಟನೆಯನ್ನೂ ಕೇರಳ ಕಾಂಗ್ರೆಸ್ಸಿಗರು ಬಹಿಷ್ಕರಿಸಿದ್ದಾರೆ” ಎಂದರು.

“ಕರ್ನಾಟಕದ ಕಾಂಗ್ರೆಸ್, ಕೇರಳಕ್ಕೆ ತದ್ವಿರುದ್ಧ ದಿಕ್ಕಿನಲ್ಲಿದೆ. ಒಂದೆಡೆ ರಾಜ್ಯ ಬಿಜೆಪಿ ಸಂಸದರು ಶೋ ಪೀಸುಗಳು, ಗಂಡಸ್ತನ ಇಲ್ಲದವರು ಎಂದು ಕಾಂಗ್ರೆಸ್ ನಾಯಕರು ನಾಲಿಗೆ ಜಾರಿ ಬಿಡುತ್ತಿದ್ದಾರೆ. ಈಗ ನೋಡಿದರೆ, “ಪ್ರತಿಭಟನೆಗೆ ಬನ್ನಿ. ನಿಮ್ಮ ಸಹಕಾರವೂ ಇರಲಿ..” ಎಂದು ಆ ಪಕ್ಷದ ಸಂಸದರನ್ನು ಅದೇ ನಾಲಿಗೆಯಿಂದಲೇ ಕರೆಯುತ್ತಿದ್ದಾರೆ. ಜೆಡಿಎಸ್ ಸಂಸದರಿಗೂ ಪತ್ರ ಬರೆದಿದ್ದಾರೆ. ಇದೆಂಥಾ ವೈರುಧ್ಯ? ಇದೆಂಥಾ ಚೋದ್ಯ?” ಎಂದು ಪ್ರಶ್ನಿಸಿದ್ದಾರೆ.

“ಕೇರಳದ LDF ಸರಕಾರ ಜನರ ತೆರಿಗೆ ಹಣ ಪೋಲು ಮಾಡುತ್ತಿದೆ ಎಂದಾದರೆ, ಕರ್ನಾಟಕದಲ್ಲಿ ಗ್ಯಾರಂಟಿ ಹೆಸರಿನಲ್ಲಿ ಕಾಂಗ್ರೆಸ್ ಮಾಡುತ್ತಿರುವುದೇನು? ಯೋಜನೆಗಳ ಹೆಸರಿನಲ್ಲಿ ಕೊಳ್ಳೆ ಹೊಡೆಯುತ್ತಿರುವುದೇನು?” ಎಂದು ಪ್ರಶ್ನಿಸಿದ್ದಾರೆ.

“ಕೇರಳದಲ್ಲಿ ಅಸಹಕಾರ! ಕರ್ನಾಟಕದಲ್ಲಿ ಸಹಕಾರ!! ಇದೆಂಥಾ ನೀತಿ? ಎರಡು ತಲೆಗಳು ಮಾತ್ರವಲ್ಲ, ರಾವಣ ತಲೆಗಳ ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಮೈಯ್ಯೆಲ್ಲಾ ರಾಜಕೀಯವೇ ತುಂಬಿದೆ. ಅದೂ ಸ್ವಾರ್ಥ ರಾಜಕೀಯ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ