AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯನವರ ಹೃದಯ ವೈಶಾಲ್ಯತೆಯನ್ನು ಮೆಚ್ಚಿಕೊಂಡ ಕುಮಾರಸ್ವಾಮಿ ಹೇಳಿದ್ದಿಷ್ಟು

ಈ ಬಾರಿ ವಾಡಿಕೆಯಂತೆ ಮಳೆಯಾಗದೆ ಜಲಾಶಯಗಳಲ್ಲಿ ನೀರಿನ ಕೊರತೆ ಎದುರಾಗಿದೆ. ರಾಜ್ಯದ ಬರ ಪೀಡಿತ ತಾಲೂಕುಗಳ ಸಂಖ್ಯೆಯನ್ನು 223ಕ್ಕೆ ಹೆಚ್ಚಿಸಲಾಗಿದೆ. ಕೆಲವೆಡೆ ಪರಿಸ್ಥಿತಿ ಭೀಕರವಾಗಿದೆ.. ಜನ ಜಾನುವಾರುಗಳಿಗೆ ಕುಡಿಯುವ ನೀರು, ಮೇವಿಲ್ಲದೆ ಪರದಾಡುವಂತಾಗಿದೆ. ಬೆಳೆಹಾನಿಯಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದೆಲ್ಲದರ ನಡುವೆ ರಾಜಕೀಯ ಪಕ್ಷಗಳ ನಡುವೆ ಬರ ಬಡಿದಾಟ ತಾರಕ್ಕೇರಿದೆ. ಆದ್ರೆ, ಇತ್ತ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಪರಸ್ಪರ ಶ್ಲಾಘಿಸಿಕೊಂಡಿದ್ದಾರೆ.

ಸಿದ್ದರಾಮಯ್ಯನವರ ಹೃದಯ ವೈಶಾಲ್ಯತೆಯನ್ನು ಮೆಚ್ಚಿಕೊಂಡ ಕುಮಾರಸ್ವಾಮಿ ಹೇಳಿದ್ದಿಷ್ಟು
ಸಿದ್ದರಾಮಯ್ಯ-ಕುಮಾರಸ್ವಾಮಿ
Sunil MH
| Updated By: ರಮೇಶ್ ಬಿ. ಜವಳಗೇರಾ|

Updated on: Nov 06, 2023 | 8:00 AM

Share

ಬೆಂಗಳೂರು (ನವೆಂಬರ್ 06): ಜೆಡಿಎಸ್​ (JDS) ರಾಜ್ಯದಲ್ಲಿ ಬರಪರಿಸ್ಥಿತಿಯ ವೀಕ್ಷಣೆಗೆ ರೈತ ಸಾಂತ್ವನ ಯಾತ್ರೆ ಕೈಗೊಂಡಿದ್ದು, ಇದಕ್ಕೆ ಸಿದ್ದರಾಮಯ್ಯ(Siddaramaiah) ಸ್ವಾಗತ ಮಾಡಿದ್ದಾರೆ. ಅಲ್ಲದೇ ಜೆಡಿಎಸ್ ನಿಡುವ ವರದಿಯನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಶೀಲಿಸಲಿದೆ ಎನ್ನುವ ಸಿದ್ದರಾಮಯ್ಯನವರ ಮಾರ್ಮಿಕ ಹೇಳಿಕೆಗೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ(JD Kumaraswamy) ಪ್ರತಿಕ್ರಿಯಿಸಿದ್ದು,  ಸಿದ್ದರಾಮಯ್ಯನವರ ಗುಣವನ್ನು ಮೆಚ್ಚಿಕೊಂಡಿದ್ದಾರೆ.  ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಪ್ರತಿಪಕ್ಷಗಳ ಕೆಲಸ ಗುರುತಿಸುವ ನಿಮ್ಮ ಹೃದಯ ವೈಶಾಲ್ಯತೆಗೆ ಆಭಾರಿ. ಯಾತ್ರೆ ಸ್ವಾಗತಿಸಿದ ನಿಮ್ಮ ದೊಡ್ಡ ಗುಣವನ್ನು ಮನಸಾರೆ ಕೊಂಡಾಡುತ್ತೇನೆ ಎಂದು ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದರ ಜೊತೆಗೆ ಸಿದ್ದರಾಮಯ್ಯನವರ ರೀತಿಯಯಲ್ಲೇ  ಮಾರ್ಮಿಕ ಹೇಳಿಕೆಗಳಿಗೆ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ಜೆಡಿಎಸ್​ನ ಬರ ಅಧ್ಯಯನಕ್ಕೆ ಸಿದ್ದರಾಮಯ್ಯ ಸ್ವಾಗತ, ಬಿಜೆಪಿಗೆ ಟಾಂಗ್​​

ಬರ ಅಧ್ಯಯನ ವರದಿಯನ್ನು ಗಂಭೀರವಾಗಿ ಪರಿಗಣಿಸುತ್ತೇವೆ ಎಂದಿದ್ದೀರಿ. ರೈತ ಸಾಂತ್ವನ ಯಾತ್ರೆ ಅನುಭವವನ್ನು ಕೇಂದ್ರದ ಜತೆ ಹಂಚಿಕೊಳ್ಳುತ್ತೇವೆ. ನಿಮಗೆ ಸಂಶಯ ಬೇಡ. ರಾಜ್ಯದ ಅಗತ್ಯಗಳಿಗೆ ಕೇಂದ್ರ ಸರಕಾರ ಹೇಗೆ ಸ್ಪಂದಿಸುತ್ತಿದೆ? ಅದಕ್ಕೆ ನಿಮ್ಮ ನೇತೃತ್ವದ ಸರಕಾರ ಎಷ್ಟು ʼಗಂಭೀರʼ ಪ್ರಯತ್ನ ಮಾಡಿದೆ, ಮಾಡುತ್ತಿದೆ ಎನ್ನುವುದು ನನಗೂ ತಿಳಿದಿದೆ. ಬರ, ವಿದ್ಯುತ್‌ ಬಿಕ್ಕಟ್ಟು, ಕಾವೇರಿ ಸಂಕಷ್ಟದ ವಿಷಯದಲ್ಲಿ ನಿಮ್ಮ ಸರಕಾರದ ʼಅಪರಿಮಿತ ಅಸಡ್ಡೆʼಯನ್ನು ಅರಿಯದಷ್ಟು ಮುಗ್ಧನೇ ನಾನು? ಎಂದು ಪ್ರಶ್ನಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಹೆಚ್.ಡಿ.ದೇವೇಗೌಡರು ಮತ್ತವರ ಕುಟುಂಬಕ್ಕೆ ಆತ್ಮೀಯತೆ ಇದೆ ಎಂಬುದರಲ್ಲಿ ಎರಡು ಮಾತಿಲ್ಲ. ಬಿಜೆಪಿ-ಜೆಡಿಎಸ್‌ ನಡುವೆ ಮೈತ್ರಿ ಏರ್ಪಟ್ಟಿದೆ ಎನ್ನುವುದೂ ನಿಜ. ರಾಜ್ಯದ ಹಿತಕ್ಕಾಗಿ ನಾವು ಪ್ರಧಾನಿಯವರ ಮುಂದೆಯೂ ದನಿ ಎತ್ತುತ್ತೇವೆ, ಅದು ನಮ್ಮ ಬದ್ಧತೆ. ನಿಮಗೆ ರಾಜ್ಯದ ಬರ ಮತ್ತಿತರೆ ಸಂಕಷ್ಟಗಳಿಗಿಂತ ಈ ಮೈತ್ರಿಯೇ ಬಹುದೊಡ್ಡ ಸಂಕಷ್ಟವಾಗಿ ಪರಿಣಮಿಸಿದಂತೆ ತೋರುತ್ತಿದೆ. ಪ್ರತಿಪಕ್ಷಗಳಾಗಿ ನಮ್ಮ ಪ್ರಯತ್ನ ನಾವು ಮಾಡುತ್ತೇವೆ ಎಂದಿದ್ದಾರೆ.

ಸರಕಾರವಾಗಿ ನಿಮ್ಮ ಸಾಧನೆ ಏನು? ಎಷ್ಟು ರೈತರಿಗೆ ಬೆಳೆ ವಿಮೆ ಕೊಡಿಸಿದ್ದೀರಿ? ಸರಕಾರದ ವತಿಯಿಂದ ಎಷ್ಟು ಪರಿಹಾರ ನೀಡಿದ್ದೀರಿ? ಅದನ್ನು ಹೇಳಬೇಕೆ ಹೊರತು, ಮಿತ್ರರ ನಡುವೆ ಹುಳಿ ಹಿಂಡುವ ಉಡಾಳತನ ತಮಗ್ಯಾಕೆ? ಇದು ನನ್ನ ವಿನಮ್ರ ಪ್ರಶ್ನೆ ಎಂದು ಸಿದ್ದರಾಮಯ್ಯನವರ ಮಾರ್ಮಿಕ ಹೇಳಿಕೆಗೆ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

236 ತಾಲೂಕುಗಳಲ್ಲಿ 216 ತಾಲೂಕು ಬರಪೀಡಿತ ಎಂದು ಲೆಕ್ಕ ಕೊಟ್ಟಿದ್ದೀರಿ. 33,710 ಕೋಟಿ ರೂ. ಮೌಲ್ಯದ ಬೆಳೆಹಾನಿ ಆಗಿದ್ದು, ಕೇಂದ್ರಕ್ಕೆ 17,901 ಕೋಟಿ ರೂ. ಪರಿಹಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದ್ದೀರಿ ಸರಿ. 343 ಕೋಟಿ ರೂ. ಬಿಡುಗಡೆ ಮಾಡಿದ್ದೇವೆ ಎಂದು ತಿಳಿಸಿದ್ದೀರಿ. ಈ ಹಣವನ್ನು ಯಾರಿಗೆ ಹಂಚಿದ್ದೀರಿ? ಎಂದು ಲೆಕ್ಕ ಕೇಳಿದ್ದಾರೆ.

ಈ ರಾಜ್ಯದಲ್ಲಿ ಹೆಚ್ಚು ಬಜೆಟ್‌ ಮಂಡಿಸಿದವರು ನೀವು. ವಿಶ್ವವಿಖ್ಯಾತ ವಿತ್ತತಜ್ಞʼರಾಗಿ ಮೆರೆಯುತ್ತಿರುವವರು ನೀವು ಅಧಿಕಾರಕ್ಕೆ ಬಂದೊಡನೆ ವಿಶೇಷವಾಗಿ ವಿತ್ತಖಾತೆಯನ್ನು ತಮ್ಮಲ್ಲಿಯೇ ʼಜೋಪಾನʼ ಮಾಡಿಕೊಳ್ಳುತ್ತೀರಿ. ಕೇಂದ್ರ ಸರಕಾರ ಬರಕ್ಕೆ, ಪ್ರವಾಹಕ್ಕೆ ಯಾವ ರೀತಿ ಪರಿಹಾರ ಕೊಡುತ್ತದೆ ಎನ್ನುವ ಸಾಮಾನ್ಯ ತಿಳಿವಳಿಕೆಯೂ ಇಲ್ಲವೇ ನಿಮಗೆ? ಹೋಗಲಿ, ನೀವು ಈ ರಾಜ್ಯದ ಮುಖ್ಯಮಂತ್ರಿ ದೆಹಲಿಗೆ ಹೋಗಿ ಪ್ರಧಾನಿಗಳಿಗೆ ವಸ್ತುಸ್ಥಿತಿ ಮನವರಿಕೆ ಮಾಡಿಕೊಡಬೇಕಿತ್ತು. ಅದನ್ನೂ ಮಾಡಲಿಲ್ಲ, ಪ್ರತಿಷ್ಠೆ ನಿಮಗೆ. ಪ್ರಧಾನಿಗಳನ್ನು ಸದಾ ನಿಂದಿಸುತ್ತಾ ಕುಳಿತರೆ ಲಾಭವೇನು? ಎಂದು ಕಿಡಿಕಾರಿದ್ದಾರೆ.

ಇಲ್ಲಿ ವರ್ಗಾವಣೆ ದಂಧೆ, ಕಮೀಷನ್ ವಸೂಲಿ, ಆಪರೇಷನ್‌ ಹಸ್ತ, ಡಿನ್ನರ್‌-ಬ್ರೇಕ್‌ ಫಾಸ್ಟ್‌ ಮೀಟಿಂಗುಗಳಲ್ಲಿಯೇ ʼಭಾರೀʼ ಬ್ಯುಸಿ‌ ಆಗಿರುವ ನಿಮಗೆ ದೆಹಲಿಗೆ ಜನರ ಅಹವಾಲು ತೆಗೆದುಕೊಂಡು ಹೋಗಲು ಸಮಯವಾದರೂ ಎಲ್ಲಿದೆ? ನೀವು ಕರೆದೊಯ್ಯುವ ಸರ್ವಪಕ್ಷ ನಿಯೋಗದಲ್ಲಿ ಜೆಡಿಎಸ್ ಪಕ್ಷವೂ ಇರುತ್ತದೆ, ನಮ್ಮ ಮಿತ್ರಪಕ್ಷ ಬಿಜೆಪಿಯೂ ಇರುತ್ತದೆ. ಇನ್ನೊಬ್ಬರ ಧೈರ್ಯದ ಬಗ್ಗೆ ಮಾತನಾಡುವ ನೀವು, ನಿಮ್ಮ ಸ್ಥೈರ್ಯದ ಬಗ್ಗೆಯೂ ಕೊಂಚ ಹೇಳಬೇಕಲ್ಲವೇ? ಮುಖ್ಯಮಂತ್ರಿಯಾಗಿ ನೀವು ರಾಜ್ಯಕ್ಕೆ ಸಂಬಂಧಿಸಿ ಪ್ರಧಾನಿಗಳನ್ನು,‌ ಸಂಬಂಧಿಸಿದ ಕೇಂದ್ರ ಸಚಿವರನ್ನು ಎಷ್ಟು ಸಲ ಭೇಟಿ ಆಗಿದ್ದೀರಿ? ಎಷ್ಟು ಅರ್ಜಿ ಕೊಟ್ಟಿದ್ದೀರಿ? ಎಂದು ಹರಿಹಾಯ್ದಿದ್ದಾರೆ.

ರಾಜ್ಯದ ನೆಲ-ಜಲ, ಇನ್ನಿತರೆ ಸಂಕಷ್ಟದ ವೇಳೆ ಈ ಇಳಿವಯಸ್ಸಿನಲ್ಲಿಯೂ ದೇವೇಗೌಡರು ನಡೆಸುತ್ತಿರುವ ಹೋರಾಟ ನಿಮಗೆ ಕಾಣಿಸಿಲ್ಲವೇ? ಕಾವೇರಿ ಬಗ್ಗೆ ದೇವೇಗೌಡರು ಸಂಸತ್ತಿನಲ್ಲಿ ಸಿಡಿದೆದ್ದಾಗ ನಿಮ್ಮ ಪಕ್ಷದ ಸದಸ್ಯರೆಲ್ಲರೂ ಎಲ್ಲಿ ಅವಿತು ಕುಳಿತಿದ್ದರು? ಡಿನ್ನರ್‌-ಬ್ರೇಕ್‌ ಫಾಸ್ಟ್ ಮೀಟಿಂಗ್‌‌ ನಲ್ಲೂ ಆಪರೇಷನ್‌ ಹಸ್ತದ ಬಗ್ಗೆಯೇ ಅಲವತ್ತುಕೊಳ್ಳುತ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ