ಅವತ್ತೇ ಅಮಿತ್ ಶಾ​​ ಮಾತಿಗೆ ಒಪ್ಪಿದ್ದರೆ 5 ವರ್ಷ ಸಿಎಂ ಆಗುತ್ತಿದ್ದೆ: ಶಾ ಕರೆ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ

ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ಬೆನ್ನಲ್ಲೇ ಇಂದು(ಸೆ.27) ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ಹಾಗೂ ಹೆಚ್​ಡಿ ಕುಮಾರಸ್ವಾಮಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೈತ್ರಿ ಬಗ್ಗೆ ವ್ಯಂಗ್ಯವಾಡುತ್ತಿರುವವರ ವಿರುದ್ಧ ವಾಗ್ದಾಳಿ ನಡೆಸಿದರು. ಅಲ್ಲದೇ ಬಿಜೆಪಿಯ ಬಿ ಟೀಮ್​ ಆರೋಪಕ್ಕೆ ಖಡಕ್ ತಿರುಗೇಟು ನೀಡಿದ್ದಾರೆ.

ಅವತ್ತೇ ಅಮಿತ್ ಶಾ​​ ಮಾತಿಗೆ ಒಪ್ಪಿದ್ದರೆ 5 ವರ್ಷ ಸಿಎಂ ಆಗುತ್ತಿದ್ದೆ: ಶಾ ಕರೆ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Sep 27, 2023 | 2:45 PM

ಬೆಂಗಳೂರು, (ಸೆಪ್ಟೆಂಬರ್ 27): ಸೆಕ್ಯುಲರಿಸಂ ಪ್ರಶ್ನಿಸಿದವರಿಗೆ ಜೆಡಿಎಸ್(JDS)​ ವರಿಷ್ಠ ಹೆಚ್​ಡಿ ದೇವೇಗೌಡ (HD Devegowda) ಖಡಕ್​ ಉತ್ತರ ಕೊಟ್ಟಿದ್ದಾರೆ. ಬಳಿಕ ಕುಮಾರಸ್ವಾಮಿ (HD Kumaraswamy) ಮಾತನಾಡಿ, ಜೆಡಿಎಸ್​ ಬಿಜೆಪಿಯ ಬಿ ಟೀಮ್​ ಎಂದು ಕುಹಕವಾಡುತ್ತಿರುವ ಕಾಂಗ್ರೆಸ್​ ನಾಯಕರ ವಿರುದ್ಧ ಗುಡುಗಿದ್ದಾರೆ. ಬೆಂಗಳೂರಿನಲ್ಲಿ ಇಂದು(ಸೆ.26) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, 2018 ರಲ್ಲಿ ಸಿದ್ದರಾಮಯ್ಯ, ಖರ್ಗೆ,‌ಡಿಕೆ ಶಿವಕುಮಾರ್, ಪರಮೇಶ್ವರ್ ಇದ್ರು. ನಮ್ಮ ಪಕ್ಷಕ್ಕೆ ನನ್ನ ಮಗನಿಗೆ ಸಿಎಂ ಸ್ಥಾನ ಬೇಡ ಎಂದು ದೇವೇಗೌಡ್ರು ಹೇಳಿದ್ದರು. ಇಲ್ಲ ಕುಮಾರಸ್ವಾಮಿ ಸಿಎಂ ಆಗಬೇಕು ಎಂದು ಕಾಂಗ್ರೆಸ್ ಕೇಂದ್ರ ನಾಯಕರು ಹೇಳಿದ್ರು. ಇನ್ನೊಂದೆಡೆ ಅವತ್ತೇ ಮಧ್ಯಾಹ್ನ 2 ಗಂಟೆ ಅಮಿಶ್ ಶಾ ಕಾಲ್ ಮಾಡಿದ್ರು. ಅವತ್ತೇ ನಾನು ಒಪ್ಪಿದ್ರೆ ಐದು ವರ್ಷಗಳ ಸಿಎಂ ಆಗುತ್ತಿದ್ದೆ. ಆದ್ರೆ, ದೇವೇಗೌಡ ನಿರ್ಧಾರಕ್ಕೆ ಬದ್ಧನಾಗಿ ಕಾಂಗ್ರೆಸ್​ ಜೊತೆ ಹೋದೆ ಎಂದು ಸ್ಪಷ್ಟಪಡಿಸಿದರು.

ಅಂದು ಮುಖ್ಯಮಂತ್ರಿಯಾಗಲು ದೇವೇಗೌಡರ ನಿರ್ಧಾರಕ್ಕೆ ಬೆಲೆ ಕೊಟ್ಟು ಓಕೆ ಅಂದೆ. ಆಗ ಏನೇನೋ ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಹಲವರು ರಾಜ್ಯ, ರಾಷ್ಟ್ರದಲ್ಲಿ ನಡೆದಿರುವ ಘಟನೆ ಬಗ್ಗೆ ಮಾತಾಡಿದ್ರು. 2004 ರಲ್ಲಿ ಸಿದ್ದರಾಮಯ್ಯ ಏನು ಮಾಡಿದ್ರು? ಚೆನೈಗೆ ನಾಲ್ಕು ಟಿಕೆಟ್ ಯಾರ್ಯಾದು ಬುಕ್ ಆಗಿತ್ತು? ಇವರು ಬಿಜೆಪಿ ಜೊತೆ ಹೋಗಲು ಏನು ಮಾಡಿದ್ರು ಎನ್ನುವ ಎಲ್ಲಾ ಘಟನೆಗಳು ನಮ್ಮ ಮುಂದೆ ಇದೆ ಎಂದರು.

ಇದನ್ನೂ ಓದಿ: ಬಿಜೆಪಿ ಜತೆ ಮೈತ್ರಿ ಬೆನ್ನಲ್ಲೇ ತಮ್ಮ ಸೆಕ್ಯುಲರಿಸಂ ಪ್ರಶ್ನಿಸಿದವರಿಗೆ ಖಡಕ್ ಉತ್ತರ ಕೊಟ್ಟ ದೇವೇಗೌಡ

ಕಾಂಗ್ರೆಸ್ ಜಾತ್ಯತೀತ ಪಕ್ಷಗಳನ್ನ ಹಾಳು ಮಾಡುವುದಕ್ಕೆ ಹೊರಟಿದೆ. 2004 ರಲ್ಲಿ ಜೆಡಿಎಸ್ ಮುಗಿಸಿಲು ಪ್ರಾರಂಭ ಮಾಡಿದ್ರು. ಇವರೆಲ್ಲ ಬಹಳ ಸಿದ್ದಾಂತ ಇಟ್ಟುಕೊಂಡು ಇರುವರು ಫಾರೂಕ್​ ಅವರನ್ನ ಸೋಲಿಸಿದ್ದು ಯಾಕೆ ಎಂದು ಪ್ರಶ್ನಿಸಿದ ಕುಮಾರಸ್ವಾಮಿ , ಅಮಿಶ್ ಶಾ ಕಾಲು ಹಿಡಿದು ಪಕ್ಷ ಉಳಿಸಿಕೊಳ್ಳಲು ಹೋಗಿದ್ದಾರೆ ಅಂತ ಹೇಳಿದ್ದಾರೆ. ನಮಗೆ ಅಂತ ಪರಿಸ್ಥಿತಿ ನಮಗೆ ಬಂದಿಲ್ಲ. ಕಾಂಗ್ರೆಸ್ ನಲ್ಲಿ ಹಿಂದೆ ನಾಲ್ಕು ಮಂತ್ರಿಗಳಿದ್ದರು ಮಾತಾಡಿಲ್ಲ ಎಂದು ತಿರುಗೇಟು ನೀಡಿದರು.

ಮುಸ್ಲಿಂ ನಾಯಕರ ರಾಜೀನಾಮೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಇದೆಲ್ಲಾ ರಾಜಕೀಯದಲ್ಲಿ ನಡೆಯುತ್ತಿರುತ್ತದೆ. 60 ವರ್ಷದ ದೇವೇಗೌಡರು ಅನುಭವಿಸಿದ ನೋವು ನೋಡಿದ್ದೇವೆ. ಆ ಸಮಾಜಕ್ಕೆ ರಕ್ಷಣೆ ಕೊಡಲು ದೇವೇಗೌಡರು ಕೊಟ್ಟಷ್ಟು ಗೌರವ ಯಾರೂ ಕೊಟ್ಟಿಲ್ಲ. ನಾನು ಮುಸ್ಲಿಂ ಸಮಾಜಕ್ಕೆ ಗೌರವ ಕೊಟ್ಟಿದ್ದೆ. ನನಗೆ ಮುಸ್ಲಿಂ ಮುಖಂಡರು ಪಕ್ಷ ಬಿಟ್ಟು ಹೋಗುತ್ತಿರುವುದು ನನಗೆ ಶಾಕ್ ಆಗಿಲ್ಲ. ಈ ಹಿಂದೆ ಬಹಳ ಜನ ಪಕ್ಷ ಬಿಟ್ಟು ಹೋಗಿದ್ದಾರೆ. ಇಬ್ರಾಹಿಂ ಅವರಿಗೆ ಪ್ರತಿಯೊಂದನ್ನೂ ಹೇಳಿದ್ದೇನೆ. ಕೆಲವರನ್ನ ಒತ್ತಾಯ ಮಾಡಿ ಕಾಂಗ್ರೆಸ್​ ಕರೆದುಕೊಳ್ಳುವ ಕೆಲಸವೂ ನಡೆಯುತ್ತಿದೆ ಎಂದು ಆರೋಪಿಸಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್