ಸಿಕ್ಕಸಿಕ್ಕ ಕಡೆ ಬಾಯಿ ಹಾಕುತ್ತಿರುವ ‘ಪರ್ಸಂಟೇಜ್ ಪಟಾಲಂ’ ಈಗ ಕಸಕ್ಕೂ ಬಾಯಿ: ಯಾರ ಮೇಲೆ ಕುಮಾರಸ್ವಾಮಿ ಟ್ವೀಟ್ ದಾಳಿ?

ಸಿಕ್ಕಸಿಕ್ಕ ಕಡೆ ಬಾಯಿ ಹಾಕುತ್ತಿರುವ 'ಪರ್ಸಂಟೇಜ್ ಪಟಾಲಂ' ಈಗ ಕಸಕ್ಕೂ ಬಾಯಿ ಹಾಕಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ.

ಸಿಕ್ಕಸಿಕ್ಕ ಕಡೆ ಬಾಯಿ ಹಾಕುತ್ತಿರುವ 'ಪರ್ಸಂಟೇಜ್ ಪಟಾಲಂ' ಈಗ ಕಸಕ್ಕೂ ಬಾಯಿ: ಯಾರ ಮೇಲೆ ಕುಮಾರಸ್ವಾಮಿ ಟ್ವೀಟ್ ದಾಳಿ?
ಹೆಚ್​ಡಿ ಕುಮಾರಸ್ವಾಮಿ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Oct 15, 2023 | 1:52 PM

ಬೆಂಗಳೂರು, (ಅಕ್ಟೋಬರ್ 15): ಆದಾಯ ತೆರಿಗೆ ಅಧಿಕಾರಿಗಳು ಬೆಂಗಳೂರಿನಲ್ಲಿ ನಡೆಸಿದ ದಾಳಿಯಲ್ಲಿ ಮಾಜಿ ಕಾರ್ಪೋರೆಟರ್​ ಹಾಗೂ ಬಿಲ್ಡರ್​ ಮನೆಗಳಲ್ಲಿ ಕೋಟ್ಯಂತರ ರೂಪಾಯಿ ನಗದು ಪತ್ತೆಯಾಗಿದೆ. ಇದು ಇದೀಗ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ವಿಪಕ್ಷಗಳು ಕಾಂಗ್ರೆಸ್ ಸರ್ಕಾರವ ವಿರುದ್ಧ ಮುಗಿಬಿದ್ದಿವೆ. ಪಂಚರಾಜ್ಯ ಚುನಾವಣೆಗೆ ಸಂಗ್ರಹಿಸಲ್ಪ ಹಣ ಎಂದು ಆರೋಪಿಸಿದ್ದಾರೆ. ಇದರ ಮಧ್ಯೆ ಇದೀಗ ಮಾಜಿ ಮುಖ್ಯಮಂತ್ರಿ ಹೆಎಚ್​ಡಿ ಕುಮಾರಸ್ವಾಮಿ (HD Kumaraswamy), ಸಿಕ್ಕಸಿಕ್ಕ ಕಡೆ ಬಾಯಿ ಹಾಕುತ್ತಿರುವ ‘ಪರ್ಸಂಟೇಜ್ ಪಟಾಲಂ’ ಈಗ ಕಸಕ್ಕೂ ಬಾಯಿ ಹಾಕಿದೆ ಎಂದು ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಸಿಕ್ಕಸಿಕ್ಕ ಕಡೆ ಬಾಯಿ ಹಾಕುತ್ತಿರುವ ‘ಪರ್ಸಂಟೇಜ್ ಪಟಾಲಂ’ ಈಗ ಕಸಕ್ಕೂ ಬಾಯಿ ಹಾಕಿದೆ! ಬ್ರ್ಯಾಂಡ್ ಬೆಂಗಳೂರು ಅನ್ನುವುದು ಕೆಲವರಿಗೆ ಬಿರಿಯಾನಿ. ಅದರ ಒಳಗುಟ್ಟು ರಟ್ಟಾಗಿದೆ. ‘ಬ್ರ್ಯಾಂಡ್’ ಹೆಸರಿನಲ್ಲಿ ಕೊಳ್ಳೆ ಹೊಡೆಯಲು, ಕಂಡ ಕಂಡ ಕಡೆ ಬೇಲಿ ಹಾಕಲು ಬೆಂಗಳೂರಿನ ನಾಲ್ಕೂ ದಿಕ್ಕುಗಳಲ್ಲಿಯೂ ಕಸದ ಡಂಪಿಂಗ್ ಯಾರ್ಡ್ʼಗಳನ್ನು ಸೃಷ್ಟಿ ಮಾಡುತ್ತಿರುವುದು ದಿಟ. ದಿನವೊಂದಕ್ಕೆ 1,630 ಟನ್ ಕಸ ಸುರಿದರೆ ಅಲ್ಲಿನ ಜನರ ಪಾಡೇನು? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕೆಪಿಸಿಸಿ ಅಂದರೆ ಕರ್ನಾಟಕ ಪ್ರದೇಶ ಕಮಿಷನ್ ಕಮಿಟಿ: ಸಿಟಿ ರವಿ ವ್ಯಂಗ್ಯ

ಮಂಡೂರು ಜನ ಎದುರಿಸಿದ ಕಷ್ಟ ಅಷ್ಟಿಷ್ಟಲ್ಲ. ಯಶವಂತಪುರ ಕ್ಷೇತ್ರದ ಜನ ಈ ನರಕದಲ್ಲೇ ಬೇಯುತ್ತಿದ್ದಾರೆ. ದೊಡ್ಡಬಳ್ಳಾಪುರದ ಜನರೂ ಕಸದ ಕಷ್ಟಕ್ಕೆ ಸಿಲುಕಿದ್ದಾರೆ. ಈಗ ರಾಮನಗರದ ಸರದಿ. ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳನ್ನು ʼಕಸದ ತೊಟ್ಟಿʼಗಳನ್ನಾಗಿ ಮಾಡಿ ʼಸಾವಿನ ದಿಬ್ಬʼಗಳನ್ನು ನಿರ್ಮಿಸಲು ʼಬ್ರ್ಯಾಂಡ್ ಬೆಂಗಳೂರುʼ ಹೆಸರಿನಲ್ಲಿ ಹುನ್ನಾರ ಹೂಡಲಾಗಿದೆ. ಇದು ಘೊರ ಅಕ್ಷಮ್ಯ ಹಾಗೂ ರಾಜಧಾನಿಯ ಆಸುಪಾಸಿನಲ್ಲಿ ಈಗಾಗಲೇ ಕೆಟ್ಟಿರುವ ಪರಿಸರವನ್ನು ಮತ್ತಷ್ಟು ಹಾಳು ಮಾಡುವ ದುಷ್ಟ ತಂತ್ರವಷ್ಟೇ ಎಂದು ಕಿರಿಕಾರಿದ್ದಾರೆ.

ಬೆಂಗಳೂರು ಅಕ್ಕಪಕ್ಕದ ಜಿಲ್ಲೆಗಳು ಕೃಷಿ, ತೋಟಗಾರಿಕೆ, ಹೈನುಗಾರಿಕೆಯಲ್ಲಿ ಸಮೃದ್ಧವಾಗಿವೆ. ಅಲ್ಲಿನ ಪರಿಸರ, ಜೀವ ವೈವಿಧ್ಯಕ್ಕೆ ಹಾನಿ ಮಾಡಿ, ಜನಜೀವನವನ್ನು ಸರ್ವನಾಶ ಮಾಡುವುದು ಒಂದೆಡೆಯಾದರೆ, ಹೊಸ ಡಂಪಿಂಗ್ ಯಾರ್ಡ್ʼಗಳ ಮೂಲಕ ಕೋಟಿಗಟ್ಟಲೇ ಹಣವನ್ನು ಜೇಬಿಗೆ ಡಂಪ್ ಮಾಡಿಕೊಳ್ಳುವ ಖತರ್ನಾಕ್ ಐಡಿಯಾ ಇನ್ನೊಂದೆಡೆ ಅಡಗಿದೆ ಎಂದು ಆರೋಪಿಸಿದ್ದಾರೆ.

ಜಗತ್ತಿನಲ್ಲಿಯೇ ಉತ್ಕೃಷ್ಟ ಮಾವು, ರೇಷ್ಮೆ, ಹಣ್ಣು, ತರಕಾರಿ ಬೆಳೆಯುತ್ತಿರುವ ರಾಮನಗರ, ಬಿಡದಿ ಬಳಿ ನೂರು ಎಕರೆ ಪ್ರದೇಶದಲ್ಲಿ ಕಸ ಸುರಿಯಲು ಉಪ ಮುಖ್ಯಮಂತ್ರಿಗಳ ದೊಡ್ಡ ಹುನ್ನಾರದ ಒಳ ಉದ್ದೇಶ ಸ್ಪಷ್ಟ. ಈಗಾಗಲೇ ವೃಷಭಾವತಿ ಸೇರಿ ರಾಮನಗರ ಜಿಲ್ಲೆಯ ಜಲಮೂಲಗಳು ಪೂರ್ಣ ಹಾಳಾಗಿ ಅಂತರ್ಜಲವೂ ಕಲುಷಿತವಾಗಿದೆ. ನೂರು ಎಕರೆ ಸರಕಾರಿ ಭೂಮಿಯನ್ನು ಅನಾಮತ್ತಾಗಿ ಎಗರಿಸಿಬಿಡುವ ರಿಯಲ್ ಎಸ್ಟೇಟ್ ಬ್ರ್ಯಾಂಡೆಡ್ ಪರಿಕಲ್ಪನೆ ಇದಲ್ಲದೆ ಮತ್ತೇನು? ಅಕ್ಕಪಕ್ಕದ ಜಿಲ್ಲೆಗಳ ಜನರ ಸಮಾಧಿ ಮೇಲೆ ಬ್ರ್ಯಾಂಡ್ ಬೆಂಗಳೂರು ಕಟ್ಟಿದರೆ ಅದಕ್ಕೆ ನಮ್ಮ ತೀವ್ರ ವಿರೋಧವಿದೆ. ಸರಕಾರವು ಈ ನಿರ್ಧಾರವನ್ನು ಕೈಬಿಡದಿದ್ದರೆ ಜನರು ಬೀದಿಗೆ ಬೀದಿಗಿಳಿದಾರು ಹುಷಾರು ಎಂದು ಎಚ್ಚರಿಸಿದ್ದಾರೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ