ಎರಡು ರಾಷ್ಟ್ರೀಯ ಪಕ್ಷಗಳ ವಿರುದ್ಧ ಹೋರಾಟಕ್ಕೆ ಕಾರ್ಯಕರ್ತರಿಗೆ ಕರೆ ಕೊಟ್ಟ ಕುಮಾರಸ್ವಾಮಿ

ಬೆಂಗಳೂರಿನ ಜೆಡಿಎಸ್​ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಧ್ವಜರೋಹಣ ನೆರವೇರಿಸಿದರು. ಇದೇ ವೇಳೆ ಹೆಚ್​ಡಿ ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್​ನ ಹಲವು ನಾಯಕರು ಉಪಸ್ಥಿತಿರಿದ್ದರು. ಬಳಿಕ ಸುದ್ದಿಗಾರರಿಂದಿಗೆ ಮಾತನಾಡಿದ ಕುಮಾರಸ್ವಾಮಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಎರಡು ರಾಷ್ಟ್ರೀಯ ಪಕ್ಷಗಳ ವಿರುದ್ಧ ಹೋರಾಟಕ್ಕೆ ಕಾರ್ಯಕರ್ತರಿಗೆ ಕರೆ ಕೊಟ್ಟ ಕುಮಾರಸ್ವಾಮಿ
ಹೆಚ್​ಡಿ ಕುಮಾರಸ್ವಾಮಿ
Image Credit source: PTI
Updated By: ರಮೇಶ್ ಬಿ. ಜವಳಗೇರಾ

Updated on: Aug 15, 2023 | 10:51 AM

ಬೆಂಗಳೂರು:  (ಆಗಸ್ಟ್, 15): ದೇಶದ ಆರ್ಥಿಕತೆ ಮೂರನೇ ಸ್ಥಾನದಲ್ಲಿದೆ ಎಂದರೆ ಅದಕ್ಕೆ ಪ್ರಜೆಗಳು ಕಾರಣವೇ ಹೊರತು ಸರ್ಕಾರವಲ್ಲ. ಈಗ ಈಸ್ಟ್ ಇಂಡಿಯಾ ಕಂಪನಿಗಳು ಈಗ ಭಾರತದಲ್ಲೇ ಹುಟ್ಟಿಕೊಂಡಿವೆ. ಎರಡು ರಾಷ್ಟ್ರೀಯ ಪಕ್ಷಗಳು ಅದರ ಸ್ಥಾನ ತುಂಬುತ್ತಿವೆ. ದೇಶದ ಸಂಪತ್ತನ್ನು ಲೂಟಿ ಮಾಡುತ್ತಿದ್ದರೂ ಮೌನವಾಗಿ ನೋಡುವ ಸ್ಥಿತಿ ಎದುರಾಗಿದೆ. ಹೀಗಾಗಿ ಎರಡೂ ರಾಷ್ಟ್ರೀಯ ಪಕ್ಷಗಳ ವಿರುದ್ಧ ಕಾರ್ಯಕರ್ತರು ಹೋರಾಟ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kiumaraswamy) ಕರೆ ನೀಡಿದರು.

ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಜೆಡಿಎಸ್ ಕಚೇರಿ ಜೆ.ಪಿ ಭವನದಲ್ಲಿ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್​ಡಿ ಕುಮಾರಸ್ವಾಮಿ ಭಾಗವಹಿಸಿದ್ದರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, 77ನೇ ಸ್ವಾತಂತ್ರತ್ಯೋತ್ಸವದ ಪ್ರಯುಕ್ತ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಮಾತನಾಡಿದ್ರು, ವ್ಯಾಪಾರಕ್ಕಾಗಿ ಭಾರತಕ್ಕೆ ಬಂದ ಬ್ರಿಟಿಷರು, ದೇಶವನ್ನು ತಮ್ಮ ಆಳ್ವಿಕೆಯಲ್ಲಿ ಇಟ್ಟುಕೊಂಡಿದ್ದರು, ಅನೇಕರ ಹೋರಾಟದ ಫಲವಾಗಿ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದ್ದರೂ, ಬ್ರಿಟಿಷರು ಭಾರತವನ್ನು ಮುಕ್ತಗೊಳಿಸುವುದಕ್ಕೆ ಒಪ್ಪಿರಲಿಲ್ಲ. ಇಂತಹ ಅನಿವಾರ್ಯ ಸಂದರ್ಭದಲ್ಲಿ ದೇಶ ವಿಭಜನೆಯ ಸಮಸ್ಯೆಯನ್ನೂ ಅನುಭವಿಸಿತು ಎಂದರು.

ಇದನ್ನೂ ಓದಿ: ಹೆಚ್​ಡಿ ಕುಮಾರಸ್ವಾಮಿ ಬಿಜೆಪಿ ವಕ್ತಾರರಂತೆ ಮಾತಾಡುತ್ತಿದ್ದಾರೆ: ಸಿಎಂ ಸಿದ್ಧರಾಮಯ್ಯ ಕಿಡಿ

ಈ ಸಂದರ್ಭದಲ್ಲಿ ಮಾತನಾಡಿದ ಅವರು, 1958 ರಲ್ಲಿ ದೇಶದಲ್ಲಿ ಮೊದಲ ಚುನಾವಣೆ ನಡೆಯಿತು, ಆಗಿನ ಸರ್ಕಾರ ಹಾಗೂ ಬಿ.ಆರ್. ಅಂಬೇಡ್ಕರ್‍ರವರ ಅಧ್ಯಕ್ಷತೆಯಲ್ಲಿ ರಚನೆಯಾದ ಸಂವಿಧಾನ ಜವಾಬ್ದಾರಿಯುತವಾಗಿ ಕೆಲಸ ನಿರ್ವಹಿಸಿದ್ದರಿಂದ ಈಗ ಎಲ್ಲರೂ ಸಮಾನತೆಯ ಬದುಕನ್ನು ನಡೆಸಲು ಸಾಧ್ಯವಾಗುತ್ತಿವೆ. ಆದ್ರೆ ಈಗ ಗ್ಯಾರಂಟಿ ಯೋಜನೆಗಳು ಸಮಾನತೆ ತರುತ್ತಿವೆ ಎಂದು ಹೇಳುತ್ತಿದೆ, ದುಡಿಯುವ ಕೈಗಳಿಗೆ ಶಕ್ತಿ ತುಂಬದ ಯೋಜನೆಗಳು ಯಾವ ರೀತಿ ಸಮಾನತೆ ತರುತ್ತಿವೆ? ಎಂದು ಗುಡುಗಿದರು.

ಮಧ್ಯಪ್ರದೇಶದಲ್ಲಿ 40% ಸರ್ಕಾರ ಕಾಂಗ್ರೆಸ್ ಬೋರ್ಡ್ ಹಾಕಿಕೊಂಡು ಪ್ರಚಾರ ಮಾಡುತ್ತಿದೆ ಆದರೆ ರಾಜ್ಯದಲ್ಲಿ ಇವರೆಗೆ ಯಾವುದೇ ಸುಧಾರಣೆ ಕಂಡುಬಂದಿಲ್ಲ. ರಾಜ್ಯದಲ್ಲಿಯೂ ಇದೇ ರೀತಿ ಪೋಸ್ಟರ್ ಬಳಸಿ ಅಧಿಕಾರಕ್ಕೆ ಬಂದರೂ, ಈಗ ‘ದಾಖಲೆ ನೀಡಿ’ ಎಂದು ಹೊಸ ಖ್ಯಾತೆ ತೆಗೆದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ