ಕಾಂಗ್ರೆಸ್ ಸೆರ್ಕಾರದ ವಸೂಲಿ ಬಿಸ್ನೆಸ್ ಹಾದಿಬೀದಿಗೆ: ವಿಡಿಯೋದೊಂದಿಗೆ ಕುಮಾರಸ್ವಾಮಿ ವಾಗ್ದಾಳಿ

ಸಿಎಂ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಮಗ ಯತೀಂದ್ರ ಹಸ್ತಕ್ಷೇಪ ಬಹಳವಾಗಿದೆ ಎಂಬ ಆರೋಪಕ್ಕೆ ಸಾಕ್ಷಿ ಎಂಬಂತೆ, ಯತೀಂದ್ರ ಅವರು ಫೋನ್‌ನಲ್ಲಿ ತಂದೆಯ ಜತೆ ಮಾತಾಡಿ ತನ್ನ ಕೆಲಸ ಮಾತ್ರ ಆಗುವಂತೆ ತಾಕೀತು ಮಾಡುತ್ತಿರುವ ವಿಡಿಯೋ ವೈರಲ್‌ ಆಗಿದೆ.  ಇದೀಗ ಇದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಇನ್ನು ಇದಕ್ಕೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿ, ಕಾಂಗ್ರೆಸ್ ಸೆರ್ಕಾರದ ವಸೂಲಿ ಬಿಸ್ನೆಸ್ ಹಾದಿಬೀದಿಗೆ ಬಂದಿದೆ ಎಂದು ವಿಡಿಯೋ ಹಂಚಿಕೊಂಡಿದ್ದಾರೆ.

ಕಾಂಗ್ರೆಸ್ ಸೆರ್ಕಾರದ ವಸೂಲಿ ಬಿಸ್ನೆಸ್ ಹಾದಿಬೀದಿಗೆ: ವಿಡಿಯೋದೊಂದಿಗೆ ಕುಮಾರಸ್ವಾಮಿ ವಾಗ್ದಾಳಿ
ಕುಮಾರಸ್ವಾಮಿ-ಯತೀಂದ್ರ ಸಿದ್ದರಾಮಯ್ಯ
Follow us
ರಮೇಶ್ ಬಿ. ಜವಳಗೇರಾ
|

Updated on: Nov 16, 2023 | 10:19 AM

ಬೆಂಗಳೂರು, (ನವೆಂಬರ್16): ಸಿಎಂ ಸಿದ್ದರಾಮಯ್ಯ (CM siddaramaiah) ಅವರ ಸರ್ಕಾರದಲ್ಲಿ ಮಗ ಯತೀಂದ್ರ (Yathindra Siddaramaiah) ಹಸ್ತಕ್ಷೇಪ ಬಹಳವಾಗಿದೆ ಎಂಬ ಆರೋಪಕ್ಕೆ ಸಾಕ್ಷಿ ಎಂಬಂತೆ, ಯತೀಂದ್ರ ಅವರು ಫೋನ್‌ನಲ್ಲಿ ತಂದೆಯ ಜತೆ ಮಾತಾಡಿ ತನ್ನ ಕೆಲಸ ಮಾತ್ರ ಆಗುವಂತೆ ತಾಕೀತು ಮಾಡುತ್ತಿರುವ ವಿಡಿಯೋ ವೈರಲ್‌ (viral video) ಆಗಿದೆ.  ಇದೀಗ ಇದು ರಾಜ್ಯ ರಾಜಕಾರಣದಲ್ಲಿ ಸಂಚಲಬ ಮೂಡಿಸಿದೆ. ಇದಕ್ಕೆ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಪ್ರತಿಕ್ರಿಯಿಸಿದ್ದು, ಕಾಸಿಗಾಗಿ ಹುದ್ದೆ ದಂಧೆ ಕರ್ನಾಟಕದಲ್ಲಿ ಅವ್ಯಾಹತವಾಗಿ, ಎಗ್ಗಿಲ್ಲದೆ, ಲಜ್ಜೆಗೆಟ್ಟು ನಡೆದಿದೆ ಎನ್ನುವುದಕ್ಕೆ ಈ ವಿಡಿಯೋ ತುಣುಕೇ ಸಾಕ್ಷಿ ಎಂದು ಕಿಡಿಕಾರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಕಾಸಿಗಾಗಿ ಹುದ್ದೆ ಉರುಫ್ #CashForPosting ದಂಧೆ ಕರ್ನಾಟಕದಲ್ಲಿ ಅವ್ಯಾಹತವಾಗಿ, ಎಗ್ಗಿಲ್ಲದೆ, ಲಜ್ಜೆಗೆಟ್ಟು ನಡೆದಿದೆ ಎನ್ನುವುದಕ್ಕೆ ಈ ವಿಡಿಯೋ ತುಣುಕೇ ಸಾಕ್ಷಿ. ಕಾಂಗ್ರೆಸ್ ಸೆರ್ಕಾರದ ವಸೂಲಿ ಬಿಸ್ನೆಸ್ ಹಾದಿಬೀದಿಗೆ ಬಂದಿದೆ. ನೈತಿಕತೆ, ಮೌಲ್ಯ, ಸಾಮಾಜಿಕ ನ್ಯಾಯದ ಡೋಂಗಿ ಹರಿಕಾರನ ಅಸಲಿ ಮುಖ ಅದೇ ಹಾದಿಬೀದಿಯಲ್ಲಿ ಮೂರು ಕಾಸಿಗೆ ಹರಾಜಾಗಿದೆ ಎಂದು ಯತೀಂದ್ರ ಸಿದ್ದರಾಮಯ್ಯನವರ ವಿಡಿಯೋ ಬಗ್ಗೆ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ನಾನು ನೀಡಿದ ಲಿಸ್ಟ್​​ನದ್ದು ಮಾತ್ರ ಮಾಡಿ: ಡಾ.ಯತೀಂದ್ರ ಎಡವಟ್ಟು ವಿಡಿಯೋ ವೈರಲ್

ಕರ್ನಾಟಕದ ಕಲೆಕ್ಷನ್ ಕಿಂಗ್ ಅಪ್ಪ, ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ಮಗ ಸೇರಿ ಸಿಎಂ ಸಚಿವಾಲಯವನ್ನು ಸುಲಿಗೆ ಅಡ್ಡಾ ಮಾಡಿಕೊಂಡಿದ್ದಾರೆ ಎನ್ನುವುದಕ್ಕೆ ಇದಕ್ಕಿಂತ ದೊಡ್ಡ ಪುರಾವೆ ಬೇಕಿಲ್ಲ? ಸಾರ್ವಜನಿಕ ಸಭೆಯಲ್ಲೇ ಎಗ್ಗಿಲ್ಲದೆ, ನಾಚಿಕೆ ಮಾನ ಮರ್ಯಾದೆ ಬಿಟ್ಟು ವರ್ಗಾವಣೆ ದಂಧೆ ನಡೆಸುವ ಮುಖ್ಯಮಂತ್ರಿ, ಮತ್ತವರ ಸುಪುತ್ರ, ಸಿಎಂ ಕಚೇರಿಯ ಪರ್ಸಂಟೇಜ್ ಪಟಾಲಂ ರಾಜ್ಯದ ಪ್ರತಿಷ್ಠೆಯನ್ನು ಹಣಕ್ಕಾಗಿ ಮಾರಿಕೊಂಡಿದೆ. ಬೀದಿಯಲ್ಲಿಯೇ ಇಷ್ಟಾದರೆ ನಾಲ್ಕು ಗೋಡೆಗಳ ಮಧ್ಯೆ ಇನ್ನೆಷ್ಟು ವ್ಯವಹಾರ ನಡೆಸುತ್ತಿರಬಹುದು? ಎಂದು ಪ್ರಶ್ನಿಸಿದ್ದಾರೆ.

ರಾಜ್ಯದ ಮುಖ್ಯಮಂತ್ರಿಗೇ ಧಮ್ಕಿ ಹಾಕಿ, “ನಾನು ಹೇಳಿದವರಷ್ಟನ್ನೇ ಮಾಡಿ” ಎನ್ನುವ ಈ ವ್ಯಕ್ತಿ ಮುಖ್ಯಮಂತ್ರಿ ಮಗನೋ ಅಥವಾ ಕರ್ನಾಟಕದ ಸೂಪರ್ ಸಿಎಮ್ಮೋ? ಅಥವಾ ಮಿನಿಸ್ಟರ್ ಫಾರ್ ಕ್ಯಾಶ್ ಫಾರ್ ಪೋಸ್ಟಿಂಗಾ? ಇಲ್ಲವೇ ಒಳಾಡಳಿತ ಸಚಿವಾಲಯ ಮಾದರಿಯ ‘ಒಳ ವಸೂಲಿ ಸಚಿವಾಲಯ’ದ ಸಚಿವರಾ? ಸ್ವತಃ ಮುಖ್ಯಮಂತ್ರಿಯೇ ಫೋನ್ ಕೊಡುವಷ್ಟು ಪ್ರಭಾವಿಯಾದ ಆ ಭಾರೀ ಆಸಾಮಿ ಯಾರು? ಇಷ್ಟಕ್ಕೂ ಆ ಮಹದೇವ ಎನ್ನುವ ವ್ಯಕ್ತಿ ಯಾರು? ಹಿಂದೊಮ್ಮೆ ನಾನೇ ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದೆ. ಪ್ರತೀ ವರ್ಗಾವಣೆಗೆ ತಲಾ 30 ಲಕ್ಷ ರೂ. ಪೀಕುತ್ತಿದ್ದ ಗಿರಾಕಿ ಈತ ಎಂದು ತಿಳಿಸಿದ್ದೆ. ಕುಮಾರಸ್ವಾಮಿ ಸುಳ್ಳು ಹೇಳ್ತಾ ಇದ್ದಾರೆ, ಅವರು ಹೇಳೋದು 99.9999% ಸುಳ್ಳು. ಅವರಿಗೆ ನಾನು ಉತ್ತರ ಕೊಡಲ್ಲ, ಅವರು ಹಿಟ್ ಅಂಡ್ ರನ್ ಗಿರಾಕಿ ಎಂದಿದ್ದ ಸಿಎಂ ಸಿದ್ದರಾಮಯ್ಯನವರು ಈಗ ಏನು ಹೇಳುತ್ತಾರೆ? ಎಂದು ಪ್ರಶ್ನಿಸಿದ್ದಾರೆ.

ಈಗ ಹೇಳಿ ಸಿದ್ದರಾಮಯ್ಯನವರೇ, ನೀವು, ನಿಮ್ಮ ಮಗ ಎಷ್ಟು ಪರ್ಸೆಂಟ್ ಗೆ ಹುದ್ದೆಗಳನ್ನು ಮಾರಿದ್ದೀರಿ? ಅದರಲ್ಲಿ ನಿಮಗೆಷ್ಟು? ನಿಮ್ಮ ಮಗನಿಗೆ ಎಷ್ಟು? ನಿಮ್ಮ ಕಚೇರಿಯ ಪರ್ಸಂಟೇಜ್ ಪಟಾಲಂಗೆ ಎಷ್ಟು? ನಾನು ಹೇಳಿದ್ದೆಲ್ಲಾ ಸುಳ್ಳು ಸುಳ್ಳು ಎಂದು ಸಲೀಸಾಗಿ ಹೇಳುತ್ತೀರಲ್ಲ? ಸತ್ಯ ಎದ್ದು ಎದುರಿಗೇ ಕೂತಿದೆ. ಏನು ಹೇಳುತ್ತೀರಿ? ವಿಡಿಯೋದಲ್ಲಿರುವ ವಿಷಯ ಸುಳ್ಳೋ, ನಿಜವೋ ನಾಡಿನ ಜನ ತೀರ್ಮಾನ ಮಾಡುತ್ತಾರೆ. ಅದರ ಸಾಧಕ ಬಾಧಕ ನಾನೇ ಎದುರಿಸುತ್ತೇನೆ. ಸಾರ್ವಜನಿಕ ಸಭೆಯಲ್ಲೇ ನಿಮ್ಮ ‘ಸುಲಿಗೆಪುತ್ರ’ ಕಾಸಿಗಾಗಿ ಹುದ್ದೆ ವ್ಯವಹಾರವನ್ನು ಬಟಾಬಯಲು ಮಾಡಿ ನಿಮ್ಮ ವಸೂಲಿ ದಂಧೆಯನ್ನು ಬೆತ್ತಲು ಮಾಡಿದ್ದಾರಲ್ಲ!! ಇದಕ್ಕೆ ಅಹಿಂದ ಮಹಾಪುರುಷರಾದ ತಾವೇ ರಾಜ್ಯದ ಜನರಿಗೆ ಉತ್ತರ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

ನಿಮ್ಮಿಂದ ಉತ್ತರವಷ್ಟೇ ಅಲ್ಲ, ನಿಮಗೆ ಮಾನ ಮರ್ಯಾದೆ ಬಹಳ ಜಾಸ್ತಿ ಅಲ್ಲವೇ? ನೈತಿಕ ಮೌಲ್ಯಗಳಂತೂ ದುಪಟ್ಟು ಜಾಸ್ತಿ, ಹೌದಲ್ಲವೇ? ಅದಕ್ಕೆ ಬೆಲೆ ಕೊಟ್ಟು ರಾಜೀನಾಮೆ ಕೊಡಿ. ನಿಮಗೆ ಉಳಿದಿರುವುದು ಸಿಎಂ ಕಚೇರಿ ಖಾಲಿ ಮಾಡುವುದಷ್ಟೇ. ಕೂಡಲೇ ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ಕೊಡಿ ಎಂದು ಒತ್ತಾಯಿಸಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್