AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಾರಸ್ವಾಮಿ ಅವರಲ್ಲಿ ಇಷ್ಟವಾದ ಗುಣಗಳೇನು? ಜೆಡಿಎಸ್ ಸಂಘಟನಾ ಕಾರ್ಯಗಾರದಲ್ಲಿ ಟಿಕೆಟ್ ಆಕಾಂಕ್ಷಿಗಳಿಗೆ ಕಠಿಣ ಪರೀಕ್ಷೆ!

HD Kumaraswamy: ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆ ಆಗಲಿದೆ. ಹೊಸ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದೇವೆ ಎಂದು ಜೆಡಿಎಸ್ ಸಂಘಟನಾ ಕಾರ್ಯಾಗಾರದಲ್ಲಿ ಹೆಚ್‌.ಡಿ. ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

ಕುಮಾರಸ್ವಾಮಿ ಅವರಲ್ಲಿ ಇಷ್ಟವಾದ ಗುಣಗಳೇನು? ಜೆಡಿಎಸ್ ಸಂಘಟನಾ ಕಾರ್ಯಗಾರದಲ್ಲಿ ಟಿಕೆಟ್ ಆಕಾಂಕ್ಷಿಗಳಿಗೆ ಕಠಿಣ ಪರೀಕ್ಷೆ!
ಎಚ್ ​ಡಿ ಕುಮಾರಸ್ವಾಮಿ
Follow us
TV9 Web
| Updated By: ganapathi bhat

Updated on:Sep 27, 2021 | 7:05 PM

ರಾಮನಗರ: ಜೆಡಿಎಸ್‌ ಪಕ್ಷದ ಟಿಕೆಟ್ ಆಕಾಂಕ್ಷಿಗಳಿಗೆ ಜೆಡಿಎಸ್ ಸಂಘಟನಾ ಕಾರ್ಯಾಗಾರದಲ್ಲಿ ಕಠಿಣ ಪರೀಕ್ಷೆ ನೀಡಲಾಗಿದೆ. ಕ್ಷೇತ್ರದಲ್ಲಿ ಎಷ್ಟು ಸದಸ್ಯತ್ವ ನೋಂದಣಿ ಮಾಡಿಸಿದ್ದೀರಿ? ಹೆಚ್‌.ಡಿ. ಕುಮಾರಸ್ಚಾಮಿ ಅವರಲ್ಲಿ ನಿಮಗೆ ಇಷ್ಟವಾದ ಗುಣಗಳೇನು? ಹೆಚ್‌.ಡಿ. ಕುಮಾರಸ್ವಾಮಿ ಅವರಲ್ಲಿ ಇಷ್ಟವಾಗದ ಗುಣಗಳು ಯಾವುವು? ಕ್ಷೇತ್ರದ ಜನ ನಿಮ್ಮಲ್ಲಿ ಇಷ್ಟಪಡುವ ಗುಣಗಳೇನು? ಕ್ಷೇತ್ರದ ಜನ ನಿಮ್ಮಲ್ಲಿ ಇಷ್ಟಪಡದ ಗುಣಗಳೇನು? ಎಂಬ ಇತ್ಯಾದಿ ಸುಮಾರು 61 ಪ್ರಶ್ನೆಗಳಿರುವ ಪ್ರಶ್ನೆ ಪತ್ರಿಕೆಯ ಮೂಲಕ ಟಿಕೆಟ್ ಆಕಾಂಕ್ಷಿಗಳಿಗೆ ಕಠಿಣ ಪರೀಕ್ಷೆ ನೀಡಲಾಗಿದೆ.

ಕರ್ನಾಟಕದಲ್ಲಿ ಪ್ರಾದೇಶಿಕ ಪಕ್ಷದ ಸರ್ಕಾರ ತರಬೇಕಾಗಿದೆ. ಹಲವು ರೀತಿ ತರಬೇತಿ ನೀಡುವ ಕಾರ್ಯಕ್ರಮ ಇದಾಗಿದೆ. ದೇಶದಲ್ಲಿರುವ ಚುನಾವಣಾ ಪದ್ಧತಿ, ಪಕ್ಷಕ್ಕಿರುವ ಅವಕಾಶ ಹೀಗೆ ಹಲವು ವಿಚಾರಗಳನ್ನು ದತ್ತಾರವರು ಮಾತನಾಡಿದ್ದಾರೆ. ರಾಷ್ಟ್ರೀಯ ಪಕ್ಷಗಳ ನಡವಳಿಕೆ ಬಗ್ಗೆಯೂ ಚರ್ಚಿಸಿದ್ದೇವೆ. ಮುಂದಿನ ಚುನಾವಣೆಗೆ ಜೆಡಿಎಸ್‌ ಸಕಲ ರೀತಿ ಸಜ್ಜಾಗಿದೆ. ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆ ಆಗಲಿದೆ. ಹೊಸ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದೇವೆ ಎಂದು ಜೆಡಿಎಸ್ ಸಂಘಟನಾ ಕಾರ್ಯಾಗಾರದಲ್ಲಿ ಹೆಚ್‌.ಡಿ. ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ರಾಮನಗರ ಜಿಲ್ಲೆ ಕೇತಗಾನಹಳ್ಳಿಯಲ್ಲಿ ನಡೆದ ಜೆಡಿಎಸ್ ಕಾರ್ಯಾಗಾರದಲ್ಲಿ ಪರೀಕ್ಷೆ ನಡೆಸಲಾಗಿದೆ. ಆ ಬಳಿಕ, ಕುಮಾರಸ್ವಾಮಿ ಮಾತನಾಡಿದ್ದಾರೆ.

ಕರ್ನಾಟಕದಲ್ಲಿ ಪ್ರಾದೇಶಿಕ ಪಕ್ಷದ ಸರ್ಕಾರ ತರಬೇಕಾಗಿದೆ. ದೇವೇಗೌಡರು ತಮ್ಮ ಸುಧೀರ್ಘ ರಾಜಕೀಯದ ದಾರಿಯ ಬಗ್ಗೆ ಮಾತನಾಡಿದ್ದಾರೆ. ಅವರು ನಡೆದು ಬಂದ ದಾರಿ ಬಗ್ಗೆ ಹೇಳಿದ್ದಾರೆ. ರಾಷ್ಟ್ರೀಯ ಪಕ್ಷಗಳ ನಡವಳಿಕೆ ಬಗ್ಗೆಯೂ ಚರ್ಚೆ ಮಾಡಿದ್ದೇವೆ. ಪಕ್ಷದ ಸಂಘಟನೆಗೆ ಜೆಡಿಎಸ್ ಹೊಸ ರೀತಿಯಾಗಿ ಸಜ್ಜಾಗಿದೆ. ತಂತ್ರಜ್ಞಾನಗಳನ್ನು ಬಳಸಿಕೊಳ್ಳುತ್ತಿದೆ. ಮುಂದಿನ ಚುನಾವಣೆಗೆ ಸಕಲ ರೀತಿಯ ಸಿದ್ದತೆಗಳು ಆಗಿವೆ. ಈಗಾಗಲೇ ಬೆಳಗ್ಗೆಯಿಂದ ಪಕ್ಷದ ಸಂಘಟನೆಗೆ ಕಾರ್ಯಕ್ರಮ ಮಾಡಲಾಗಿದೆ. 136 ಅಭ್ಯರ್ಥಿಗಳು ಹಾಗೂ ಪದಾಧಿಕಾರಿಗಳ ಜೊತೆ ಕಾರ್ಯಗಾರ ಮಾಡಲಾಗಿದೆ. ಪ್ರಶ್ನಾವಳಿಯ ಕಿರು ಹೊತ್ತಿಗೆ ನೀಡಲಾಗಿತ್ತು. ಪ್ರತಿಯೊಬ್ಬರು ಆಸಕ್ತಿಯಿಂದ ಬರೆದಿದ್ದಾರೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಅವರವರ ಕ್ಷೇತ್ರಗಳಿಗೆ ಯಾವ ರೀತಿ ಹೊತ್ತು ಕೊಟ್ಟಿದ್ದಾರೆ. ಅವರಿಗಿರುವ ಅಡೆತಡೆಗಳು ಸೇರಿದಂತೆ ಹಲವಾರು ವಿಚಾರಗಳ ಬಗ್ಗೆ ಉತ್ತರ ನೀಡಿದ್ದಾರೆ. 61 ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ. ಅಭ್ಯರ್ಥಿಗಳಾಗಿ ಏನು ಸಿದ್ದತೆ ಮಾಡಿಕೊಂಡಿದ್ದಾರೆ ಅನ್ನೋದನ್ನು ಬರೆದಿದ್ದಾರೆ. ನಾಳೆಯ ದಿನ ಪಂಚರತ್ನ ಕಾರ್ಯಕ್ರಮದ ಬಗ್ಗೆ ಜನತೆ ಮುಂದೆ ತೆಗೆದುಕೊಂಡು ಹೋಗುವುದು. ಮಿಷನ್ 123 ಪ್ಲಸ್​ಗೆ ಏನು ಮಾಡಬೇಕು ಎಂಬುದು ಚರ್ಚೆಯಾಗಿದೆ. ಪ್ರತಿ ತಿಂಗಳು ಒಂದೊಂದು ಜಿಲ್ಲೆಯಲ್ಲಿ ಕಾರ್ಯಕ್ರಮ ಇರಲಿದೆ. ಪ್ರಥಮ ಹಂತದ ಅಭ್ಯರ್ಥಿ ಆಯ್ಕೆ ಆಗುತ್ತಿದ್ದಾರೆ ಅವರ ನೇತೃತ್ವದಲ್ಲಿ ಸಂಘಟನೆ ಆಗಲಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ಅಕ್ಕಿ ರಾಜಕೀಯಕ್ಕೆ ಟ್ವೀಟ್ ಮೂಲಕ ತಿರುಗೇಟು ನೀಡಿದ ಹೆಚ್​ಡಿ ಕುಮಾರಸ್ವಾಮಿ

ಇದನ್ನೂ ಓದಿ: ವಿಧಾನಸಭೆ ಚುನಾವಣೆಗೆ ಜೆಡಿಎಸ್ ತಯಾರಿ; 4 ದಿನ ಕಾರ್ಯಾಗಾರ; ಹೆಚ್​ಡಿ ಕುಮಾರಸ್ವಾಮಿ

Published On - 6:31 pm, Mon, 27 September 21

ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ಸಚಿವ ಡಾ ಎಂಸಿ ಸುಧಾಕರ್ ನನ್ನ ರಾಜಕೀಯ ಗುರು: ಪ್ರದೀಪ್ ಈಶ್ವರ್
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
ನಾವು ಸಂಸ್ಕಾರವಂತರು, ಸಚಿವೆ ಜೊತೆ ಕೆಟ್ಟದ್ದಾಗಿ ವರ್ತಿಸಲ್ಲ: ಕಾರ್ಯಕರ್ತೆ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
KCET Result 2025: ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟ, ನೇರ ಪ್ರಸಾರ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಸಿನಿಮಾ ರಿಲೀಸ್ ಎಂದು ಕನಸು ಕಂಡಿದ್ದರು, ಆದರೆ, ಮೊದಲ ದಿನ ಅವರೇ ಇಲ್ಲ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಆತಂಕಕ್ಕೊಳಗಾಗುವ ಅಗತ್ಯವಿಲ್ಲ, ಅದರೆ ಜನ ಎಚ್ಚರವಹಿಸುವ ಜರೂರತ್ತಿದೆ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ಲೋಕಕ್ಕೆ ಜಲ ವಾಯು ಗಂಡಾಂತರ, ಯುದ್ಧ ಭೀತಿ: ಕೋಡಿ ಶ್ರೀ ಸ್ಫೋಟಕ ಭವಿಷ್ಯ
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್
ದಕ್ಷಿಣದ ನಳಂದ ವಿಶ್ವವಿದ್ಯಾಲಯ ಸ್ಥಾಪಿಸಲು ಒಂದೆಕರೆ ಜಮೀನು ನೀಡುವೆ: ಸುರೇಶ್
ತಾಳಿ ಕಟ್ಟುವಾಗ ಮದುವೆ ಬೇಡವೆಂದ್ಲು, ಅದೇ ದಿನ ಪ್ರಿಯಕರನ ವಿವಾಹವಾದ್ಲು!
ತಾಳಿ ಕಟ್ಟುವಾಗ ಮದುವೆ ಬೇಡವೆಂದ್ಲು, ಅದೇ ದಿನ ಪ್ರಿಯಕರನ ವಿವಾಹವಾದ್ಲು!
IPL 2025: ಇದೇ ಕಾರಣಕ್ಕೆ ಟಿಮ್​ ಡೇವಿಡ್​ಗೆ ರನ್ನರ್ ನೀಡಲಾಗಿಲ್ಲ..!
IPL 2025: ಇದೇ ಕಾರಣಕ್ಕೆ ಟಿಮ್​ ಡೇವಿಡ್​ಗೆ ರನ್ನರ್ ನೀಡಲಾಗಿಲ್ಲ..!
Daily Devotional: ಕುಟುಂಬ ಕಲಹಕ್ಕೆ ಈ ಮಂತ್ರವೇ ಪರಿಹಾರ
Daily Devotional: ಕುಟುಂಬ ಕಲಹಕ್ಕೆ ಈ ಮಂತ್ರವೇ ಪರಿಹಾರ