ಹೆಚ್​​ಡಿಕೆ, ನಿಖಿಲ್ ಉಚ್ಚಾಟನೆ ನಕಲಿ ಪತ್ರ ವೈರಲ್: ಜೆಸಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ ಸಿಎಂ ಇಬ್ರಾಹಿಂ

ನಕಲಿ ಪತ್ರ ವೈರಲ್ ಆಗಿರುವುದರಿಂದ ನನಗೆ ಮತ್ತು ಪಕ್ಷಕ್ಕೆ ಮುಜುಗರ ಆಗಿದೆ. ಕಿಡಿಗೇಡಿಗಳು ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಉಂಟು ಮಾಡುತ್ತಿದ್ದಾರೆ. ಈ ರೀತಿ ನಕಲಿ ಪತ್ರ ಹರಿಬಿಟ್ಟವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಿ ಎಂದು ದೂರಿನಲ್ಲಿ ಸಿಎಂ ಇಬ್ರಾಹಿಂ ಪೊಲೀಸರಿಗೆ ಮನವಿ ಮಾಡಿದ್ದಾರೆ.

ಹೆಚ್​​ಡಿಕೆ, ನಿಖಿಲ್ ಉಚ್ಚಾಟನೆ ನಕಲಿ ಪತ್ರ ವೈರಲ್: ಜೆಸಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ ಸಿಎಂ ಇಬ್ರಾಹಿಂ
ಸಿಎಂ ಇಬ್ರಾಹಿಂ Image Credit source: ANI
Follow us
| Updated By: ಗಣಪತಿ ಶರ್ಮ

Updated on: Oct 17, 2023 | 6:32 PM

ಬೆಂಗಳೂರು, ಅಕ್ಟೋಬರ್ 17: ಜೆಡಿಎಸ್ ನಾಯಕರಾದ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಮತ್ತು ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರನ್ನು ಪಕ್ಷದ ರಾಜ್ಯಾಧ್ಯಕ್ಷರು ಉಚ್ಚಾಟನೆ ಮಾಡಿದ್ದಾರೆ ಎನ್ನಲಾದ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದರ ಬೆನ್ನಲ್ಲೇ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ (CM Ibrahim) ಅವರು ಜೆಸಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಕಲಿ ಪತ್ರ ವೈರಲ್ ಆಗಿರುವುದರಿಂದ ತಾವು ಮುಜುಗರಕ್ಕೀಡಾಗುವಂತಾಗಿದೆ ಎಂದು ಇಬ್ರಾಹಿಂ ಹೇಳಿದ್ದಾರೆ.

ನಕಲಿ ಪತ್ರ ವೈರಲ್ ಆಗಿರುವುದರಿಂದ ನನಗೆ ಮತ್ತು ಪಕ್ಷಕ್ಕೆ ಮುಜುಗರ ಆಗಿದೆ. ಕಿಡಿಗೇಡಿಗಳು ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಉಂಟು ಮಾಡುತ್ತಿದ್ದಾರೆ. ನಕಲಿ ಪತ್ರ ವೈರಲ್ ಆಗಿರುವುದರಿಂದ ನನ್ನ ವೈಯಕ್ತಿಕ ವರ್ಚಸ್ಸಿಗೆ ಧಕ್ಕೆ ಆಗಿದೆ. ಈ ರೀತಿ ನಕಲಿ ಪತ್ರ ಹರಿಬಿಟ್ಟವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಿ ಎಂದು ದೂರಿನಲ್ಲಿ ಸಿಎಂ ಇಬ್ರಾಹಿಂ ಪೊಲೀಸರಿಗೆ ಮನವಿ ಮಾಡಿದ್ದಾರೆ.

ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾಗಿ ಎನ್​ಡಿಎ ಜತೆ ಮೈತ್ರಿ ಘೋಷಣೆ ಮಾಡಿರುವುದಕ್ಕೆ ಇಬ್ರಾಹಿಂ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಸೋಮವಾರ ಪತ್ರಿಕಾಗೋಷ್ಠಿ ಮೂಲಕ ಮಾಹಿತಿ ನೀಡಿದ್ದ ಅವರು, ಜೆಡಿಎಸ್​ ಅಧ್ಯಕ್ಷ ತಾವು. ತಮ್ಮ ಅನುಮತಿ ಇಲ್ಲದೆ ಯಾವುದೇ ಮೈತ್ರಿ ಸಾಧ್ಯವಿಲ್ಲ. ನಾವು ಬಿಜೆಪಿಯನ್ನು ಬೆಂಬಲಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದರು. ಅಲ್ಲದೆ, ತಮ್ಮ ಬಳಿ ಸಮಾಲೋಚನೆ ಮಾಡದೆ ಮೈತ್ರಿ ಘೋಷಣೆ ಮಾಡಿದ್ದಕ್ಕೆ ಕುಮಾರಸ್ವಾಮಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ನಮ್ಮದೇ ಒರಿಜಿನಲ್ ಜೆಡಿಎಸ್: ಇಬ್ರಾಹಿಂ ಈ ಹೇಳಿಕೆ ಹಿಂದೆ ಇದ್ಯಾ ಅವರ ಕೈವಾಡ? ಜಿಟಿ ದೇವೇಗೌಡ ಬಾಂಬ್

ಅಲ್ಲದೆ, ಕೋರ್ ಕಮಿಟಿ ರಚನೆ ಮಾಡಿದ್ದೇವೆ. ಎಲ್ಲ ಶಾಸಕರ ಜತೆ ಚರ್ಚೆ ಮಾಡಲಾಗುವುದು. ನಂತರ ಪತ್ರ ಮುಖೇನ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್​ಡಿ ದೇವೇಗೌಡರಿಗೆ ಮನವಿ ಸಲ್ಲಿಸಲಾಗುವುದು ಎಂದು ಇಬ್ರಾಹಿಂ ಹೇಳಿದ್ದರು. ಅಲ್ಲದೆ, ದೇವೇಗೌಡರ ಮಾತನ್ನು ಮೀರಿ ಕುಮಾರಸ್ವಾಮಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.

ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಹೆಚ್​ಡಿ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಅವರನ್ನು ಸಿಎಂ ಇಬ್ರಾಹಿಂ ಉಚ್ಚಾಟನೆ ಮಾಡಲಿದ್ದಾರೆ ಎಂಬ ವದಂತಿಗಳೂ ಹಬ್ಬಿದ್ದವು. ಇದಾದ ನಂತರ ಉಚ್ಚಾಟನೆ ಪತ್ರ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ