ಜೆಡಿಎಸ್​ನಿಂದ ಪಂಚರತ್ನ ಯೋಜನೆ ಘೋಷಣೆ; ವಸತಿ, ಆರೋಗ್ಯ, ಶಿಕ್ಷಣ, ಉದ್ಯೋಗ, ಕೃಷಿಗೆ ನೆರವು

HD Kumaraswamy: ಪಂಚರತ್ನ ಯೋಜನೆ ಘೋಷಣೆ ಮಾಡಿದ್ದೇವೆ. ಪಂಚರತ್ನ ಅಂದರೆ ವಸತಿ, ಆರೋಗ್ಯ, ಶಿಕ್ಷಣ, ಉದ್ಯೋಗ, ಕೃಷಿಗೆ ವಿಶೇಷ ಯೋಜನೆ ನೀಡುತ್ತೇವೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಜೆಡಿಎಸ್​ನಿಂದ ಪಂಚರತ್ನ ಯೋಜನೆ ಘೋಷಣೆ; ವಸತಿ, ಆರೋಗ್ಯ, ಶಿಕ್ಷಣ, ಉದ್ಯೋಗ, ಕೃಷಿಗೆ ನೆರವು
ಎಚ್ ​ಡಿ ಕುಮಾರಸ್ವಾಮಿ
Follow us
TV9 Web
| Updated By: ganapathi bhat

Updated on:Sep 28, 2021 | 9:39 PM

ಬೆಂಗಳೂರು: ಜೆಡಿಎಸ್ ಪಕ್ಷದಿಂದ ಪಂಚರತ್ನ ಯೋಜನೆ ಘೋಷಣೆ ಮಾಡಲಾಗಿದೆ. ವಸತಿ, ಆರೋಗ್ಯ, ಶಿಕ್ಷಣ, ಉದ್ಯೋಗ, ಕೃಷಿಗೆ ಯೋಜನೆ ಕೈಗೊಳ್ಳಲಾಗಿದೆ. ಸಾಲಮನ್ನಾ ಶಾಶ್ವತ ಪರಿಹಾರ ಅಲ್ಲ, ರೈತರಿಗೆ ನೆರವಾಗಬೇಕು. ರೈತರು ಸಾಲವನ್ನೇ ಮಾಡದ ರೀತಿಯಲ್ಲಿ ನೆರವಾಗಬೇಕು ಎಂದು ಹೇಳಿದ್ದಾರೆ. ಕೇತಗಾನಹಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಈ ಬಗ್ಗೆ ಹೇಳಿಕೆ ನೀಡಿದ್ದಾರೆ.

ಸರ್ಕಾರದ ಮೂಲಕ ಆರ್ಥಿಕವಾಗಿ ನೆರವಾಗುವ ಯೋಜನೆ. ಮಹಿಳೆಯರು, ಯುವಕರಿಗೆ ಉದ್ಯೋಗ ನೀಡುವ ಯೋಜನೆ ಇದಾಗಲಿದೆ ಎಂದು ತಿಳಿಸಿದ್ದಾರೆ. ಜನವರಿಯಿಂದ ರಾಜ್ಯದ ಪ್ರತಿ ಹಳ್ಳಿ ಹಳ್ಳಿಗೆ ಹೋಗುತ್ತೇವೆ. ಮಹಿಳೆಯರಿಗೆ ವಿಧವಾ ವೇತನ, ಬಿಸಿಯೂಟ ತಯಾರಕರು, ಹಿರಿಯ ನಾಗರಿಕರು, ಅಂಗನವಾಡಿ ಕಾರ್ಯಕರ್ತೆಯರಿಗೆ ನೆರವು ನೀಡುತ್ತೇವೆ. ಹೀಗೆ ಹಲವಾರು ವಿಚಾರ ಜನರ ಮುಂದೆ ಕೊಂಡೊಯ್ಯುತ್ತೇವೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಪಂಚರತ್ನ ಯೋಜನೆ ಘೋಷಣೆ ಮಾಡಿದ್ದೇವೆ. ಪಂಚರತ್ನ ಅಂದರೆ ವಸತಿ, ಆರೋಗ್ಯ, ಶಿಕ್ಷಣ, ಉದ್ಯೋಗ, ಕೃಷಿಗೆ ವಿಶೇಷ ಯೋಜನೆ ನೀಡುತ್ತೇವೆ. ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತರು, ಸಮಸ್ಯೆ ಪರಿಹಾರ ನೀಡುವ ಕೆಲಸ ಮಾಡ್ತೀವಿ. ವಿಧವಾ ವೇತನಾ, ಹಿರಿಯ ನಾಗರೀಕರು, ಯುವಕ ಸಮಸ್ಯೆಗೆ ಬೇಕಾದ ಹಲವು ಯೋಜನೆ ಪ್ರಾರಂಭ ಮಾಡ್ತೀವಿ. 17 ತಿಂಗಳು ಈ ಕಾರ್ಯಕ್ರಮಗಳನ್ನ ಜನರಿಗೆ ತಿಳಿಸೋ ಕೆಲಸ ಮಾಡ್ತೀವಿ ಎಂದು ಹೇಳಿದ್ದಾರೆ.

ಕರ್ನಾಟಕದ ನೀರಾವರಿ ವಿಚಾರದಲ್ಲಿ ಬಿಜೆಪಿಗೆ ಬದ್ದತೆ ಇಲ್ಲ. ಹೊಸ ಸಿಎಂ ಸೇರಿದಂತೆ ಬಿಜೆಪಿಗೆ ಬದ್ದತೆ ಇಲ್ಲ. ಹೀಗಾಗಿ ನೀರಾವರಿ ಯೋಜನೆ ಕುರಿತು ಜೆಡಿಎಸ್ ಹೋರಾಟ ಮಾಡುತ್ತೆ. ಮುಂಬರುವ ದಿನಗಳಲ್ಲಿ ದೊಡ್ಡ ಹೋರಾಟ ರೂಪಿಸುತ್ತೇವೆ. ಕೇಂದ್ರ ಸರ್ಕಾರದ ವಿರುದ್ದವೂ ಹೋರಾಟ ಮಾಡ್ತೀವಿ. ಭಾಷೆ, ನೆಲ, ನೀರಿನ ವಿಚಾರದಲ್ಲಿ ನಾಡಿನ ಹಿತ ಕಾಪಾಡಲು ಜೆಡಿಎಸ್ ಕೆಲಸ ಮಾಡುತ್ತೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಇದನ್ನೂ ಓದಿ: ಜೆಡಿಎಸ್​ನದ್ದು ಮಿಷನ್ 123, ಬಿಜೆಪಿಯವರದ್ದು ಮಿಷನ್ 150; ನಮ್ಮದು ಮಿಷನ್ 224: ಡಿಕೆ ಶಿವಕುಮಾರ್

ಇದನ್ನೂ ಓದಿ: ಕುಮಾರಸ್ವಾಮಿ ಅವರಲ್ಲಿ ಇಷ್ಟವಾದ ಗುಣಗಳೇನು? ಜೆಡಿಎಸ್ ಸಂಘಟನಾ ಕಾರ್ಯಗಾರದಲ್ಲಿ ಟಿಕೆಟ್ ಆಕಾಂಕ್ಷಿಗಳಿಗೆ ಕಠಿಣ ಪರೀಕ್ಷೆ!

Published On - 9:37 pm, Tue, 28 September 21

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ