ಅವಧಿಗೂ ಮುನ್ನವೇ ಚುನಾವಣೆ ಬರುವ ಸಾಧ್ಯತೆ ಇದೆ; ಚುನಾವಣೆಗೆ ಜೆಡಿಎಸ್ ಪಕ್ಷ ಸಿದ್ಧವಾಗುತ್ತಿದೆ: ಹೆಚ್​ಡಿ ಕುಮಾರಸ್ವಾಮಿ

| Updated By: ganapathi bhat

Updated on: Mar 06, 2022 | 11:36 AM

2 ರಾಜ್ಯ ಒಪ್ಪಿದರೆ ಮಾತುಕತೆ ನಡೆಸುವುದಾಗಿ ಹೇಳುತ್ತಾರೆ. 2 ರಾಷ್ಟ್ರೀಯ ಪಕ್ಷಗಳಿಗೆ ಯೋಜನೆ ಮಾಡುವ ಯೋಗ್ಯತೆ ಇಲ್ಲ. ಇವರಿಗೆ ಮೇಕೆದಾಟು ಯೋಜನೆ ಮಾಡುವ ಯೋಗ್ಯತೆ ಇಲ್ಲ ಎಂದು ಕಲಬುರಗಿಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಟೀಕಿಸಿದ್ದಾರೆ.

ಅವಧಿಗೂ ಮುನ್ನವೇ ಚುನಾವಣೆ ಬರುವ ಸಾಧ್ಯತೆ ಇದೆ; ಚುನಾವಣೆಗೆ ಜೆಡಿಎಸ್ ಪಕ್ಷ ಸಿದ್ಧವಾಗುತ್ತಿದೆ: ಹೆಚ್​ಡಿ ಕುಮಾರಸ್ವಾಮಿ
ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ
Follow us on

ಕಲಬುರಗಿ: ಅವಧಿಗೂ ಮುನ್ನವೇ ಚುನಾವಣೆ ಬರುವ ಸಾಧ್ಯತೆ ಇದೆ. ಕರ್ನಾಟಕ ರಾಜ್ಯ ವಿಧಾನಸಭೆಗೆ ಚುನಾವಣೆ ಬರುವ ಸಾಧ್ಯತೆ ಇದೆ. ಹೀಗಾಗಿ ಚುನಾವಣೆಗೆ ಜೆಡಿಎಸ್ ಪಕ್ಷ ಸಿದ್ಧವಾಗುತ್ತಿದೆ ಎಂದು ಕಲಬುರಗಿಯಲ್ಲಿ ಮಾಜಿ ಸಿಎಂ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ ಕುಮಾರಸ್ವಾಮಿ ಭಾನುವಾರ ಹೇಳಿಕೆ ನೀಡಿದ್ದಾರೆ. ರಾಜ್ಯದ ಜನರಿಗೆ ರಾಷ್ಟ್ರೀಯ ಪಕ್ಷಗಳು ದ್ರೋಹ ಮಾಡುತ್ತಿವೆ. ರಾಜ್ಯದ ಜನರಿಗೆ ಸಿಎಂ ಬಸವರಾಜ ಬೊಮ್ಮಾಯಿ ದ್ರೋಹ ಮಾಡಿದ್ದಾರೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

ಮೇಕೆದಾಟು ವಿಚಾರವಾಗಿ ಮಾತನಾಡುವುದಾಗಿ ಹೇಳಿದ್ದಾರೆ. ಕೇಂದ್ರ ಜಲ ಶಕ್ತಿ ಸಚಿವರು ಹೇಳಿಕೆ ನೀಡಿದ್ದಾರೆ. 2 ರಾಜ್ಯ ಒಪ್ಪಿದರೆ ಮಾತುಕತೆ ನಡೆಸುವುದಾಗಿ ಹೇಳುತ್ತಾರೆ. 2 ರಾಷ್ಟ್ರೀಯ ಪಕ್ಷಗಳಿಗೆ ಯೋಜನೆ ಮಾಡುವ ಯೋಗ್ಯತೆ ಇಲ್ಲ. ಇವರಿಗೆ ಮೇಕೆದಾಟು ಯೋಜನೆ ಮಾಡುವ ಯೋಗ್ಯತೆ ಇಲ್ಲ ಎಂದು ಕಲಬುರಗಿಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಟೀಕಿಸಿದ್ದಾರೆ.

ಕಾಂಗ್ರೆಸ್ ನವರು ನಮ್ಮ ಪಾದಯಾತ್ರೆ ನೋಡಿ ಸಾವಿರ ಕೋಟಿ ನೀಡಿದ್ದಾರೆ ಅಂತ ಹೇಳ್ತಾರೆ. ಎರಡು ಪಕ್ಷಕ್ಕೆ ಮೇಕೆದಾಟು ಯೋಜನೆ ಪ್ರಾರಂಭ ಮಾಡೋ ಯೋಗ್ಯತೆ ಇಲ್ಲ. ರಾಜ್ಯದಲ್ಲಿ ಬಡ ಮತ್ತು ಮಧ್ಯಮ ವರ್ಗದ ಮಕ್ಕಳಿಗೆ ಕೈಗೆಟಕುವ ದರದಲ್ಲಿ ಶಿಕ್ಷಣ ಸಿಗ್ತಿಲ್ಲ. ಸಿಕ್ಕರೆ ಅಲ್ಲಿ ಉಕ್ರೇನಿಗೆ ಹೋಗಿ ಪ್ರಾಣ ಕಳೆದುಕೊಳ್ಳಬೇಕಾದ ಸ್ಥಿತಿ ನಿರ್ಮಾಣ ಆಗ್ತಿರಲಿಲ್ಲ. ನನಗೆ ಯಾವತ್ತೂ ಬಿಜೆಪಿ ಬಗ್ಗೆ ಸಾಫ್ಟ್ ಕಾರ್ನರ್ ಇಲ್ಲ. ಫ್ರೆಂಟು ಬ್ಯಾಕು ಅಂತ ಮಾತಡಲ್ಲ ಏನಿದ್ರೂ ನಾವು ಸ್ಟ್ರೇಟು. ಎರಡೂ ಪಕ್ಷಗಳು ನಮ್ಮನ್ನ ಅ‌ವರಿಗೆ ಬೇಕಾದಾಗ ನಮ್ಮನ್ನು ರೈಟು ಲೆಫ್ಟು ಅಂತ ಕರಿತಾರೆ ಎಂದು ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.

ಮೇಕೆದಾಟು ಯೋಜನೆ ‘ವಿವಾದ’ವನ್ನು ಕರ್ನಾಟಕ-ತಮಿಳುನಾಡು ಪರಸ್ಪರ ಚರ್ಚೆ ನಡೆಸುವ ಮೂಲಕ ಬಗೆಹರಿಸಿಕೊಳ್ಳುವಂತೆ ಕೇಂದ್ರ ಜಲಸಂಪನ್ಮೂಲ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್‌ ಹೇಳಿದ್ದಾರೆ. ಅವರೇ ʼವಿವಾದʼ ಎನ್ನುವ ಮೂಲಕ ನಮ್ಮ ಜನರ ಕುಡಿಯುವ ನೀರಿನ ಯೋಜನೆಗೆ ಬಿಕ್ಕಟ್ಟಿನ ಲೇಪನ ಹಚ್ಚಿದ್ದಾರೆ. ಎರಡೂ ರಾಜ್ಯಗಳು ಕುಳಿತು ಚರ್ಚೆ ಮಾಡಿಕೊಂಡು ಒಮ್ಮತಕ್ಕೆ ಬರಬೇಕು ಎಂದು ಕೇಂದ್ರ ಸಚಿವರೇ ಹೇಳುವ ಮೂಲಕ, ಮೇಕೆದಾಟು ಯೋಜನೆಗೆ ಒಕ್ಕೂಟ‌ ವ್ಯವಸ್ಥೆಯ ಆಶಯಕ್ಕೆ ತಕ್ಕಂತೆ ಕಾನೂನಾತ್ಮಕ ಅನುಮತಿ ನೀಡುವ ಹೊಣೆಗಾರಿಕೆಯಿಂದ ಕೇಂದ್ರ ಸರಕಾರ ನುಣುಚಿಕೊಳ್ಳುತ್ತಿದೆ ಎನ್ನುವುದು ನನ್ನ ಸ್ಪಷ್ಟ ಅಭಿಪ್ರಾಯ ಎಂದು ಮೇಕೆದಾಟು ವಿವಾದದ ಬಗ್ಗೆ ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ ಇಂದು ಟ್ವೀಟ್ ಮಾಡಿದ್ದರು. ಮೇಕೆದಾಟು ಯೋಜನೆ ಬಗ್ಗೆ ಅಸಮಾಧಾನ ಹೊರಹಾಕಿದ್ದರು.

ಇದನ್ನೂ ಓದಿ: ರಾಷ್ಟ್ರೀಯ ಪಕ್ಷಗಳ ಮೇಕೆದಾಟು ಮಕ್ಮಲ್ ಟೋಪಿ; ಕಾಂಗ್ರೆಸ್, ಬಿಜೆಪಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಟೀಕಾಪ್ರಹಾರ

ಇದನ್ನೂ ಓದಿ: ದೇವೇಗೌಡರು ಪ್ರಧಾನಿಯಾಗಿದ್ದಾಗ 9 ಟಿ ಎಮ್ ಸಿ ನೀರು ಬಿಡಿಸಿರದಿದ್ದರೆ, ಕಾಂಗ್ರೆಸ್ ಆಣೆಕಟ್ಟುಗಳನ್ನು ಎಲ್ಲಿ ಕಟ್ಟುತ್ತಿತ್ತು? ಕುಮಾರಸ್ವಾಮಿ

Published On - 11:35 am, Sun, 6 March 22