ಮತ್ತೆ ವಿದೇಶಕ್ಕೆ ಹಾರಿದ ಕುಮಾರಸ್ವಾಮಿ, ಈ ಬಾರಿ ಯಾರ ಜೊತೆಗೆ ಹೋಗಿದ್ದಾರೆ ಗೊತ್ತಾ?

ಇತ್ತೀಚೆಗಷ್ಟೇ ಕುಟುಂಬ ಸಮೇತರಾಗಿ ಯುರೋಪ್ ಪ್ರವಾಸಕ್ಕೆ ತೆರಳಿದ್ದ ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ, ಈಗ ಮತ್ತೆ ವಿದೇಶಕ್ಕೆ ಹಾರಿದ್ದಾರೆ.

ಮತ್ತೆ ವಿದೇಶಕ್ಕೆ ಹಾರಿದ ಕುಮಾರಸ್ವಾಮಿ, ಈ ಬಾರಿ ಯಾರ ಜೊತೆಗೆ ಹೋಗಿದ್ದಾರೆ ಗೊತ್ತಾ?
ಹೆಚ್​ಡಿ ಕುಮಾರಸ್ವಾಮಿ
Image Credit source: PTI
Edited By:

Updated on: Aug 08, 2023 | 9:02 AM

ಬೆಂಗಳೂರು, (ಆಗಸ್ಟ್ 08): ಮೊನ್ನೇ ಅಷ್ಟೇ ಕುಟುಂಬದ ಜೊತೆ ಯುರೋಪ್ ಪ್ರವಾಸ ಮುಗಿಸಿಕೊಂಡು ಬೆಂಗಳೂರಿಗೆ (Bengaluru) ವಾಪಸ್ ಆಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ(HD Kumaraswamy), ಇದೀಗ ಮತ್ತೆ ವಿದೇಶಕ್ಕೆ (Foreign) ಹಾರಿದ್ದಾರೆ. ಹೌದು.. ಇತ್ತೀಚೆಗಷ್ಟೇ ಕುಟುಂಬ ಸಮೇತರಾಗಿ ಯುರೋಪ್ ಪ್ರವಾಸಕ್ಕೆ ತೆರಳಿದ್ದ ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ, ಈಗ ಮತ್ತೆ ಸಿಂಗಾಪುರಕ್ಕೆ ತೆರಳಿದ್ದಾರೆ. ನಿನ್ನೆ(ಆಗಸ್ಟ್ 07) ರಾತ್ರಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಆಪ್ತರ ಜೊತೆಗೆ ಮಲೇಶಿಯಾದ ಕೌಲಾಲಂಪುರಕ್ಕೆ ಪ್ರಯಾಣ ಬೆಳೆಸಿದ್ದಾರೆ.

ಇದನ್ನೂ ಓದಿ: ಯುರೋಪ್ ಪ್ರವಾಸದಿಂದ ಕುಮಾರಸ್ವಾಮಿ ವಾಪಸ್, ಸರ್ಕಾರ ಬೀಳಿಸಲು ವಿದೇಶದಲ್ಲಿ ತಂತ್ರ ನಡೆದಿದೆ ಎಂದಿದ್ದ ಡಿಕೆ ಶಿವಕುಮಾರ್​ಗೆ​ ತಿರುಗೇಟು

ಕುಮಾರಸ್ವಾಮಿ ಸೇರಿದಂತೆ ಒಟ್ಟು ಐವರು ಸೋಮವಾರ ರಾತ್ರಿ 12 ಗಂಟೆಯ ವಿಮಾನದಲ್ಲಿ ಮಲೇಶಿಯಾದ ಕೌಲಾಲಂಪುರಕ್ಕೆ ತೆರಳಿದ್ದಾರೆ. ಇನ್ನು ಈ ಬಾರಿಯ ವಿದೇಶ ಪ್ರವಾಸಕ್ಕೆ ಕುಮಾರಸ್ವಾಮಿಗೆ ಮಾಜಿ ಸಚಿವ ಸಾರಾ ಮಹೇಶ್, ವಿಧಾನಪರಿಷತ್ ಸದಸ್ಯ ರಮೇಶ್ ಗೌಡ ಸಾಥ್ ನೀಡಿದ್ದಾರೆ. ಕುಮಾರಸ್ವಾಮಿ ಅವರು ಈ ವಿದೇಶ ಪ್ರಯಾಣ ತೀವ್ರ ಕುತೂಹಲ ಮೂಡಿಸಿದೆ. ಆದ್ರೆ, ಯಾವ ಕಾರಣಕ್ಕೆ ಹೋಗಿದ್ದಾರೆ ಎಂದು ಕಾರಣ ತಿಳಿದುಬಂದಿಲ್ಲ.

ಕಳೆದ ವಾರ ಅಷ್ಟೇ ಕುಮಾರಸ್ವಾಮಿ ಕುಟುಂಬದ ಜೊತೆ ಯುರೋಪ್ ಪ್ರವಾಸಕ್ಕೆ ತೆರಳಿದ್ದರು. ಕುಮಾರಸ್ವಾಮಿ ವಿದೇಶ ಪ್ರವಾಸ ಬೆನ್ನಲ್ಲೇ ಇತ್ತ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗಂಭೀರ ಆರೋಪ ಮಾಡಿದ್ದರು. ಸಿಂಗಾಪುರಕ್ಕೆ ಹೋಗಿ ನಮ್ಮ ಸರ್ಕಾರವನ್ನು ಬೀಳಿಸುವ ಹುನ್ನಾರ ನಡೆಯುತ್ತಿದೆ ಎಂದು ಹೇಳಿದ್ದರು. ಇದೀಗ ಮತ್ತೆ ಕುಮಾರಸ್ವಾಮಿ ವಿದೇಶಕ್ಕೆ ಹಾರಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us