ಯುರೋಪ್ ಪ್ರವಾಸದಿಂದ ಕುಮಾರಸ್ವಾಮಿ ವಾಪಸ್, ಸರ್ಕಾರ ಬೀಳಿಸಲು ವಿದೇಶದಲ್ಲಿ ತಂತ್ರ ನಡೆದಿದೆ ಎಂದಿದ್ದ ಡಿಕೆ ಶಿವಕುಮಾರ್​ಗೆ​ ತಿರುಗೇಟು

ಕುಟುಂಬ ಸಮೇತ ಯುರೋಪ್ ಗೆ ಪ್ರವಾಸಕ್ಕೆ ಹೋಗಿದ್ದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಬೆಂಗಳೂರಿಗೆ ಬಂದು ಇಳಿದಿದ್ದೇ ತಡ ಸರ್ಕಾರ ಕೆಡುವಲು ವಿದೇಶದಲ್ಲಿ ಷಡ್ಯಂತ್ರ ನಡೆದಿದೆ ಎನ್ನುವ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

ಯುರೋಪ್ ಪ್ರವಾಸದಿಂದ ಕುಮಾರಸ್ವಾಮಿ ವಾಪಸ್, ಸರ್ಕಾರ ಬೀಳಿಸಲು ವಿದೇಶದಲ್ಲಿ ತಂತ್ರ ನಡೆದಿದೆ ಎಂದಿದ್ದ ಡಿಕೆ ಶಿವಕುಮಾರ್​ಗೆ​ ತಿರುಗೇಟು
ಹೆಚ್​ ಡಿ ಕುಮಾರಸ್ವಾಮಿ ಮತ್ತು ಡಿಕೆ ಶಿವಕುಮಾರ್
Follow us
Prajwal Kumar NY
| Updated By: ರಮೇಶ್ ಬಿ. ಜವಳಗೇರಾ

Updated on:Aug 04, 2023 | 10:49 AM

ಬೆಂಗಳೂರು, ಆಗಸ್ಟ್ 04): ಕಾಂಗ್ರೆಸ್​ (Congress) ಸರ್ಕಾರ ಪತನಕ್ಕೆ ಸಿಂಗಾಪುರದಲ್ಲಿ ಷಡ್ಯಂತ್ರ ನಡೆದಿದೆ ಎನ್ನುವ ಡಿಸಿಎಂ ಡಿಕೆ ಶಿವಕುಮಾರ್ (DK Shivakumar)​​ ನೀಡಿದ್ದ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿತ್ತು. ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ(HD Kumaraswamy) ಸಿಂಗಾಪುರ ಪ್ರವಾಸ ತೆರಳಿದ ಬೆನಲ್ಲೇ ಡಿಕೆ ಶಿವಕುಮಾರ್ ಅವರ ಈ ಹೇಳಿಕೆ ಹಲ್​ಚಲ್ ಎಬ್ಬಿಸಿತ್ತು. ಇದೀಗ ಕುಮಾರಸ್ವಾಮಿ ಅವರು ನಿನ್ನೆ (ಗುರುವಾರ) ತಡರಾತ್ರಿ ವಿದೇಶ ಪ್ರವಾಸ ಮುಗಿಸಿ ಬೆಂಗಳೂರಿಗೆ ವಾಪಸ್ ಬಂದಿದ್ದು. ಡಿಕೆ ಶಿವಕುಮಾರ್ ಹೇಳಿಕೆಗೆ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಕೆಂಪೇಗೌಡ ಏರ್​​ಪೋರ್ಟ್​ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಾವು ಕುಟುಂಬ ಸಮೇತ ಯುರೋಪ್​ ಪ್ರವಾಸಕ್ಕೆ ಹೋಗಿದ್ದು. ಆದ್ರೆ ಸರ್ಕಾರ ಕೆಡುವಲು ಹೋಗಿದ್ದೇವೆ ಎಂಬ ರೀತಿ ಬಿಂಬಿಸಲಾಗಿದೆ. 19 ಸ್ಥಾನ ಗೆದ್ದ ನಮ್ಮ ಬಗ್ಗೆ ಎಷ್ಟು ಭಯ ಇದೆ ಎಂದು ಗೊತ್ತಾಗುತ್ತೆ ಎಂದು ಟಾಂಗ್ ಕೊಟ್ಟರು.

ಇದನ್ನೂ ಓದಿ: ಕಾಂಗ್ರೆಸ್‌ ಸರ್ಕಾರ ಬೀಳಿಸಲು ಸಿಂಗಾಪುರದಲ್ಲಿ ಕಾರ್ಯತಂತ್ರ, ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

ನಾನು ವಿದೇಶದಲ್ಲಿದ್ದರೂ ಪ್ರತಿದಿನ ಬೆಳವಣಿಗೆಗಳನ್ನು ಗಮನಿಸಿದ್ದೇವೆ. ಯಾಕೆ ಅವರು ಹಿಂಗೆ ಮಾಡ್ಕೊಂಡಿದ್ದಾರೆ ಗೊತ್ತಿಲ್ಲ. ಬಹುಶಃ ಅವರಿಗೆ ಈ ಸರ್ಕಾರದ ಅವಧಿ ಬಹಳ ದಿನ ಇರಲ್ಲ ಎಂದು ಅಂದುಕೊಂಡಿರಬೇಕು. ನಮ್ಮಗಿಂತ ಜಾಸ್ತಿ ಅವರೇ ಶಾಸ್ತ್ರ ಕೇಳ್ತಾಳುತ್ತಾರೆ. ಜೋತಿಷ್ಯದವರನ್ನ ಬಹಳ ನಂಬಿರೋರು ಅವರು(ಡಿಕೆ ಶಿವಕುಮಾರ್). ಹಲವಾರು ರೀತಿ ಕುತಂತ್ರಗಳನ್ನ ಮಾಡುತ್ತಾರೆ, ಆ ಜೋತಿಷ್ಯದಲ್ಲಿ ಅದರ ಕೃತಕವಾದ ಶಕ್ತಿಯನ್ನ ಚುನಾವಣೆಯಲ್ಲಿ ತುಂಬಿಕೊಂಡಿದ್ದಾರೆ. ಆ ಕೃತಕವಾದ ಶಕ್ತಿ ಬಹುಶಃ ಬಹಳ ದಿನ ಇರಲ್ಲ ಎಂದು ಅವರ ತಲೆಯಲ್ಲಿ ಇರಬಹುದು. ಅದಕ್ಕಾಗಿ ಇಂತಹ ಹೇಳಿಕೆ ನೀಡಿರಬೇಕು ಎಂದು ವ್ಯಂಗ್ಯವಾಡಿದರು.

ಹೊರನೋಟಕ್ಕೆ ಭ್ರಷ್ಟಾಚಾರ ನಿರ್ಮೂಲನೆ ಮಾಡುತ್ತೇವೆ ಎನ್ನುತ್ತಾರೆ. ಆದರೆ ಕಾಂಗ್ರೆಸ್​ ಸ್ವಾತಂತ್ರ್ಯ ಬಂದಾಗಿನಿಂದಲೂ ಅಧಿಕಾರ ನಡೆಸಿದೆ. ಅಂದಿನಿಂದಲೂ ವಸೂಲಿಗಾಗಿಯೇ ಕಾಂಗ್ರೆಸ್​ ಪಕ್ಷ ಇದೆ. ಈಸ್ಟ್ ಇಂಡಿಯಾ ಕಂಪನಿ ಕಾಂಗ್ರೆಸ್​ಗೆ ಅಧಿಕಾರ ನೀಡಿ ಹೋಯ್ತು. ಈಸ್ಟ್ ಇಂಡಿಯಾ ಕಂಪನಿಯ ವಸೂಲಿಯನ್ನು ಕಾಂಗ್ರೆಸ್ ಮುಂದುವರಿಸಿದೆ. ಕಾಂಗ್ರೆಸ್​​ನವರು ಭ್ರಷ್ಟಾಚಾರ ನಿಲ್ಲಿಸುತ್ತಾರಾ ಎಂದು ಪ್ರಶ್ನಿಸಿದರು.

ಅಷ್ಟಕ್ಕು ಡಿಕೆ ಶಿವಕುಮಾರ್ ಹೇಳಿದ್ದೇನು?

ಸಿಂಗಾಪುರದಲ್ಲಿ ಕುಳಿತು ಸರ್ಕಾರದ ವಿರುದ್ಧ ತಂತ್ರ ರೂಪಿಸುತ್ತಿದ್ದಾರೆ. ನಮಗೆ ಬಂದ ಮಾಹಿತಿ ಪ್ರಕಾರ ಅವರೇನೋ ತಂತ್ರ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಮಾಡುವುದು ಬಿಟ್ಟು ಹೊರಗೆ ತಂತ್ರ ಮಾಡುತ್ತಿದ್ದಾರೆ ಎಂದು ಹೆಸರು ಹೇಳದೇ ಪರೋಕ್ಷವಾಗಿ ಕುಮಾರಸ್ವಾಮಿ ಸಿಂಗಾಪುರ ಪ್ರವಾಸದ ಬಗ್ಗೆ ಗಂಭೀರ ಆರೋಪ ಮಾಡಿದ್ದರು.

ಸಿಂಗಾಪುರದಲ್ಲಿ ಸರ್ಕಾರ ಬೀಳಿಸುವ ಕೆಲಸ ನಡೆಯುತ್ತಿದೆ. ಇದೆಲ್ಲಾ ಒಂದು ತಂತ್ರ. ಇದರ ಬಗ್ಗೆ ನಮಗೂ ಮಾಹಿತಿ ಬಂದಿದೆ‌. ಬೆಂಗಳೂರಿನಲ್ಲಿ ಆಪರೇಷನ್ ಮಾಡಿದ್ರೆ ಗೊತ್ತಾಗುತ್ತೆ ಎಂದು ಸಿಂಗಾಪುರದಲ್ಲಿ ಕೂತು ಆಪರೇಷನ್ ಮಾಡುತ್ತಿದ್ದಾರೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದರು. ಕುಮಾರಸ್ವಾಮಿ ಅವರು ವಿದೇಶ ಪ್ರವಾಸಕ್ಕೆ ಹೋದ ಬೆನ್ನಲ್ಲೇ ಡಿಕೆ ಶಿವಕುಮಾರ್ ಅವರು ಈ ಹೇಳಿಕೆ ನೀಡಿದ್ದರು. ಇದು ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿತ್ತು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:13 am, Fri, 4 August 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್