Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಪ್ತ್​-ಗುಪ್ತ್ ಮಾತುಕತೆ: ವಿಜಯೇಂದ್ರ ಭೇಟಿ ಬಳಿಕ ಕುಮಾರಸ್ವಾಮಿ ಹೇಳಿದ್ದೇನು?

ಬಿವೈ ವಿಜಯೇಂದ್ರ ಅವರು ಇಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ. ಬಿಡದಿಯ ತೋಟದ ಮನೆಯಲ್ಲಿ ಕುಮಾರಸ್ವಾಮಿ ಅವರನ್ಜು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಕುಮಾರಸ್ವಾಮಿ ಹೇಳಿದ್ದೇನು ಎನ್ನುವ ವಿವರ ಇಲ್ಲಿದೆ.

ಗುಪ್ತ್​-ಗುಪ್ತ್ ಮಾತುಕತೆ: ವಿಜಯೇಂದ್ರ ಭೇಟಿ ಬಳಿಕ ಕುಮಾರಸ್ವಾಮಿ ಹೇಳಿದ್ದೇನು?
ವಿಜಯೇಂದ್ರ-ಕುಮಾರಸ್ವಾಮಿ
Follow us
ಸೈಯ್ಯದ್​ ನಿಜಾಮುದ್ದೀನ್​, ರಾಮನಗರ
| Updated By: ರಮೇಶ್ ಬಿ. ಜವಳಗೇರಾ

Updated on: Nov 26, 2023 | 4:54 PM

ಬೆಂಗಳೂರು (ನವೆಂಬರ್ 26): ಬಿವೈ ವಿಜಯೇಂದ್ರ ಅವರು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಮಿತ್ರ ಪಕ್ಷದ ನಾಯಕ ಹೆಚ್​ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದರು. ಬಿಡದಿಯ ಅವರ ತೋಟದ ಮನೆಯಲ್ಲಿ ಭೇಟಿಯಾಗಿ ಮಹತ್ವದ ಸಮಾಲೋಚನೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ಬಾಮಿ, ಬಹಳ ದಿನಗಳ ಹಿಂದೆಯೇ ವಿಜಯೇಂದ್ರ ಭೇಟಿ ಮಾಡಬೇಕಿತ್ತು. ಹಲವಾರು ಕಾರ್ಯಕ್ರಮಗಳು ಇದ್ದ ಕಾರಣ ಆಗಿರಲಿಲ್ಲ. ಇವತ್ತು ನಮ್ಮ ಭೇಟಿಯ ಉದ್ದೇಶ ರಾಜ್ಯದ ಅಭಿವೃದ್ಧಿ ದೃಷ್ಟಿಯಾಗಿದೆ. ಮೋದಿ ಮತ್ತೆ ದೇಶದ ಪ್ರಧಾನಮಂತ್ರಿ ಆಗುವ ನಿಟ್ಟಿನಲ್ಲಿ ಕೂತು ಚರ್ಚೆ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಯುವ ರಾಜ್ಯಾಧ್ಯಕ್ಷರ ನೇಮಕದಿಂದ ಕಾರ್ಯಕರ್ತರ ಹುರುಪು ಹೆಚ್ಚಾಗಿದೆ. 2006-07 ರಲ್ಲಿ ಯಡಿಯೂರಪ್ಪ ನಾನು ಸರ್ಕಾರ ನಡೆಸಿದ್ದೋ, ಇವತ್ತೂ ಸಹ ಅಂತಹ ಸರ್ಕಾರ ಬರಬೇಕು ಎನ್ನುವುದು ಜನರ ಅಭಿಪ್ರಾಯ ಇದೆ. ನಿಖಿಲ್, ವಿಜಯೇಂದ್ರ ಸಹೋದರ ಮನೋಭಾವದಲ್ಲಿ ಒಟ್ಟಾಗಿ ಹೋಗುತ್ತಾರೆ. ಉತ್ತಮ ಬಾಂಧವ್ಯ ಜೊತೆಗೆ ಚುನಾವಣೆ ಮಾಡುತ್ತಾರೆ ಎಂದರು.

ಇದನ್ನೂ ಓದಿ: ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಕುಮಾರಸ್ವಾಮಿಯನ್ನ ಭೇಟಿಯಾದ ವಿಜಯೇಂದ್ರ

ಲೋಕಸಭಾ ಚುನಾವಣೆ ಸೀಟು ಹಂಚಿಕೆ ವಿಚಾರ ಬಗ್ಗೆ ಮಾತಾಡಿಲ್ಲ. ಆ ಬಗ್ಗೆ ಕೇಂದ್ರ ನಾಯಕರು ಕೂತು ಚರ್ಚೆ ಮಾಡುತ್ತಾರೆ. ಇನ್ನು ಸಿಎಂ ಸಿದ್ದರಾಮಯ್ಯ ಜನತಾ ದರ್ಶನಕ್ಕಾಗಿ ದೊಡ್ಡ ದೊಡ್ಡ ಜಾಹಿರಾತು ಕೊಟ್ಟಿದ್ದಾರೆ. ನಾವು ಅಂದೇ ಜನತಾ ದರ್ಶನ ಯಶಸ್ವಿಯಾಗಿ ಮಾಡಿ ತೋರಿಸಿದ್ದೆವು. ಈಗ ಕೇವಲ ಪ್ರಚಾರದ ಕೆಲಸ ಅಷ್ಟೇ ಎಂದು ಕಿಡಿಕಾರಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಈಗ ಮತಾಂತರ ಮಾಡಲಾಗಲ್ಲ, ಹಾಗಾಗೇ ಮುಸ್ಲಿಮೇತರರನ್ನು ಕೊಲ್ಲೋದು: ರವಿ
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ