ಬೆಂಗಳೂರು (ನವೆಂಬರ್ 26): ಬಿವೈ ವಿಜಯೇಂದ್ರ ಅವರು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಮಿತ್ರ ಪಕ್ಷದ ನಾಯಕ ಹೆಚ್ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದರು. ಬಿಡದಿಯ ಅವರ ತೋಟದ ಮನೆಯಲ್ಲಿ ಭೇಟಿಯಾಗಿ ಮಹತ್ವದ ಸಮಾಲೋಚನೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ಬಾಮಿ, ಬಹಳ ದಿನಗಳ ಹಿಂದೆಯೇ ವಿಜಯೇಂದ್ರ ಭೇಟಿ ಮಾಡಬೇಕಿತ್ತು. ಹಲವಾರು ಕಾರ್ಯಕ್ರಮಗಳು ಇದ್ದ ಕಾರಣ ಆಗಿರಲಿಲ್ಲ. ಇವತ್ತು ನಮ್ಮ ಭೇಟಿಯ ಉದ್ದೇಶ ರಾಜ್ಯದ ಅಭಿವೃದ್ಧಿ ದೃಷ್ಟಿಯಾಗಿದೆ. ಮೋದಿ ಮತ್ತೆ ದೇಶದ ಪ್ರಧಾನಮಂತ್ರಿ ಆಗುವ ನಿಟ್ಟಿನಲ್ಲಿ ಕೂತು ಚರ್ಚೆ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಯುವ ರಾಜ್ಯಾಧ್ಯಕ್ಷರ ನೇಮಕದಿಂದ ಕಾರ್ಯಕರ್ತರ ಹುರುಪು ಹೆಚ್ಚಾಗಿದೆ. 2006-07 ರಲ್ಲಿ ಯಡಿಯೂರಪ್ಪ ನಾನು ಸರ್ಕಾರ ನಡೆಸಿದ್ದೋ, ಇವತ್ತೂ ಸಹ ಅಂತಹ ಸರ್ಕಾರ ಬರಬೇಕು ಎನ್ನುವುದು ಜನರ ಅಭಿಪ್ರಾಯ ಇದೆ. ನಿಖಿಲ್, ವಿಜಯೇಂದ್ರ ಸಹೋದರ ಮನೋಭಾವದಲ್ಲಿ ಒಟ್ಟಾಗಿ ಹೋಗುತ್ತಾರೆ. ಉತ್ತಮ ಬಾಂಧವ್ಯ ಜೊತೆಗೆ ಚುನಾವಣೆ ಮಾಡುತ್ತಾರೆ ಎಂದರು.
ಇದನ್ನೂ ಓದಿ: ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಕುಮಾರಸ್ವಾಮಿಯನ್ನ ಭೇಟಿಯಾದ ವಿಜಯೇಂದ್ರ
ಲೋಕಸಭಾ ಚುನಾವಣೆ ಸೀಟು ಹಂಚಿಕೆ ವಿಚಾರ ಬಗ್ಗೆ ಮಾತಾಡಿಲ್ಲ. ಆ ಬಗ್ಗೆ ಕೇಂದ್ರ ನಾಯಕರು ಕೂತು ಚರ್ಚೆ ಮಾಡುತ್ತಾರೆ. ಇನ್ನು ಸಿಎಂ ಸಿದ್ದರಾಮಯ್ಯ ಜನತಾ ದರ್ಶನಕ್ಕಾಗಿ ದೊಡ್ಡ ದೊಡ್ಡ ಜಾಹಿರಾತು ಕೊಟ್ಟಿದ್ದಾರೆ. ನಾವು ಅಂದೇ ಜನತಾ ದರ್ಶನ ಯಶಸ್ವಿಯಾಗಿ ಮಾಡಿ ತೋರಿಸಿದ್ದೆವು. ಈಗ ಕೇವಲ ಪ್ರಚಾರದ ಕೆಲಸ ಅಷ್ಟೇ ಎಂದು ಕಿಡಿಕಾರಿದರು.
ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ