AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಮರ ಮೀಸಲಾತಿ ಬಗ್ಗೆ ಜೆಡಿಎಸ್ ನಿಲುವೇನು? ಕೊನೆಗೂ ಸ್ಪಷ್ಟನೆ ನೀಡಿದ ಹೆಚ್​ಡಿ ಕುಮಾರಸ್ವಾಮಿ

ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ ಅವರು ಕರ್ನಾಟಕದಲ್ಲಿ ಮುಸ್ಲಿಮರಿಗೆ ನೀಡಲಾಗಿರುವ ಶೇ.4ರ ಗುತ್ತಿಗೆ ಮೀಸಲಾತಿ ವಿರುದ್ಧದ ಹೋರಾಟದಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಈ ಕ್ರಮವನ್ನು ಟೀಕಿಸಿರುವ ಅವರು, ಮೀಸಲಾತಿಯನ್ನು ಚುನಾವಣಾ ಸ್ವಾರ್ಥಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಮುಸ್ಲಿಮರ ಮೀಸಲಾತಿ ಬಗ್ಗೆ ಜೆಡಿಎಸ್ ನಿಲುವೇನು? ಕೊನೆಗೂ ಸ್ಪಷ್ಟನೆ ನೀಡಿದ ಹೆಚ್​ಡಿ ಕುಮಾರಸ್ವಾಮಿ
ಹೆಚ್​ ಡಿ ಕುಮಾರಸ್ವಾಮಿ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Mar 24, 2025 | 2:06 PM

Share

ನವದೆಹಲಿ/ಬೆಂಗಳೂರು, ಮಾರ್ಚ್​ 24: ಮೀಸಲು ಧರ್ಮಾಧಾರಿತ ಅಲ್ಲ. ಅದು ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ನಿಂತಿದೆ. ನಿಂತಿರಬೇಕು ಎನ್ನುವುದು ಜೆಡಿಎಸ್ ಅಚಲ ನಿಲುವು ಎಂದು ಹೇಳುವ ಮೂಲಕ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ (HD Kumaraswamy), ಮುಸ್ಲಿಮರಿಗೆ ಕಾಂಗ್ರೆಸ್​ ಸರಕಾರ 4% ಗುತ್ತಿಗೆ ಮೀಸಲಾತಿ (Muslim Reservation) ನೀಡಿರುವುದರ ವಿರುದ್ಧದ ಹೋರಾಟದಲ್ಲಿ ಜೆಡಿಎಸ್​ ಮತ್ತು ಬಿಜೆಪಿ ನಡುವೆ ಹೊಂದಾಣಿಕೆ ಇಲ್ಲ, ಗೊಂದಲವಿದೆ ಎಂಬ ಹೇಳಿಕೆಗೆ ಚೆಕ್​ಮೆಟ್​ ನೀಡಿದ್ದಾರೆ.

ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಹೆಚ್​ಡಿ ಕುಮಾರಸ್ವಾಮಿ, ಮುಸ್ಲಿಮರಿಗೆ ಕಾಂಗ್ರೆಸ್ ಸರಕಾರ ಶೇ.4ರಷ್ಟು ಗುತ್ತಿಗೆ ಮೀಸಲಾತಿ ನೀಡಿರುವುದರ ವಿರುದ್ಧದ ಹೋರಾಟದಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ಹೊಂದಾಣಿಕೆ ಇಲ್ಲ, ಗೊಂದಲವಿದೆ ಎನ್ನುವುದು ಸತ್ಯಕ್ಕೆ ದೂರ. ಕೆಲ ಪತ್ರಿಕೆ ಮತ್ತು ಸುದ್ದಿವಾಹಿನಿಗಳಲ್ಲಿ ವರದಿಯಾಗಿರುವ ವರದಿಗಳು ಸತ್ಯಕ್ಕೆ ದೂರ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ
Image
ಬಿಜೆಪಿ ಯಾವತ್ತಿಗೂ ಮುಸ್ಲಿಂ ವಿರೋಧಿ ಪಕ್ಷ ಅಲ್ಲ: ವಿಜಯೇಂದ್ರ
Image
ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ವಿಧೇಯಕ ಮಂಡನೆ: ವಿಧೇಯಕದಲ್ಲೇನಿದೆ?
Image
ಮುಸ್ಲಿಮರಿಗೆ ಶೇ 4 ಮೀಸಲಾತಿ ಸುಪ್ರೀಂ​ನಲ್ಲಿ ಪ್ರಶ್ನಿಸಲಾಗ್ತಿದೆ: ಬೊಮ್ಮಾಯಿ
Image
ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇ4 ರಷ್ಟು ಮೀಸಲಾತಿ ಅಸವಿಂಧಾನಿಕ: ಸೂರ್ಯ

ವಿಧಾನಮಂಡಲ ಅಧಿವೇಶನ ಆರಂಭಕ್ಕೆ ಮೊದಲೇ ಬೆಂಗಳೂರಿನಲ್ಲಿ ಎನ್​ಡಿಎ ‘ಸಮನ್ವಯ ಸಮಿತಿ’ ಸಭೆ ನಡೆದು ಎಲ್ಲಾ ವಿಚಾರಗಳನ್ನೂ ಸಮಗ್ರವಾಗಿ ಚರ್ಚಿಸಲಾಗಿದೆ. ಸರಕಾರದ ವಿರುದ್ಧ ಹೋರಾಟದ ರೂಪುರೇಷೆ ರೂಪಿಸಲಾಗಿತ್ತು. ಆ ಸಭೆಯಲ್ಲಿ ಸ್ವತಃ ನಾನೂ ಭಾಗವಹಿಸಿದ್ದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಸರಕಾರವು ಕೇವಲ ಚುನಾವಣಾ ಸ್ವಾರ್ಥಕ್ಕೆ, ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ‘ಸಾಮಾಜಿಕ ನ್ಯಾಯದ ಆದರ್ಶ ಪರಿಕಲ್ಪನೆ’ಯಾದ ಮೀಸಲಾತಿ ವ್ಯವಸ್ಥೆಯನ್ನು ಹಾಳು ಮಾಡುತ್ತಿದೆ. ಮೀಸಲಾತಿಯನ್ನೇ ಓಲೈಕೆ ಅಸ್ತ್ರವನ್ನಾಗಿ ಮಾಡಿಕೊಂಡು ರಾಜ್ಯದ ಜನತೆಯ ದಿಕ್ಕು ತಪ್ಪಿಸುತ್ತಿದೆ. ರಾಷ್ಟ್ರದ ಉದ್ದಗಲಕ್ಕೂ ಕಾಂಗ್ರೆಸ್ ಮೀಸಲು ಅರಾಜಕತೆ ಸೃಷ್ಟಿಸುತ್ತಿದೆ ಎಂದು ಅವರು ಆರೋಪ ಮಾಡಿದ್ದಾರೆ.

ಟ್ವಿಟರ್​ ಪೋಸ್ಟ್​

ಜೆಡಿಎಸ್ – ಬಿಜೆಪಿ ಪಕ್ಷಗಳು ಈಗಾಗಲೇ ಒಟ್ಟಾಗಿ ಅನೇಕ ಜನಪರ ಹೋರಾಟಗಳಲ್ಲಿ ಭಾಗಿಯಾಗಿವೆ. ಮುಂದೆಯೂ ಹೋರಾಡುತ್ತವೆ. ಈ ಬಗ್ಗೆ ರಾಜಿ ಪ್ರಶ್ನೆಯೇ ಇಲ್ಲ. ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ದುರ್ಬಲವಾಗಿರುವ ಎಲ್ಲಾ ಸಮುದಾಯಗಳಿಗೆ ಸಮಾನ ಅವಕಾಶಗಳು, ಸೌಲಭ್ಯಗಳು ಸಿಗಬೇಕು. ಆದರೆ, ಒಂದು ನಿರ್ದಿಷ್ಟ ಸಮುದಾಯದ ತುಷ್ಟೀಕರಣ, ಬಹು ಸಮುದಾಯಗಳ ತುಚ್ಚೀಕರಣ ನ್ಯಾಯ ಸಮ್ಮತವಲ್ಲ. ಇದು ಸಂವಿಧಾನಕ್ಕೆ ಎಸಗುವ ಅಪಚಾರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ಮೀಸಲಾತಿ ವಿಧೇಯಕ ಪಾಸು ಮಾಡಿಕೊಳ್ಳಲು ಬಿಜೆಪಿಯ 18 ಶಾಸಕರನ್ನು ಸಸ್ಪೆಂಡ್ ಮಾಡಲಾಗಿದೆ: ಯತ್ನಾಳ್

ಮೀಸಲು ಧರ್ಮಾಧಾರಿತ ಅಲ್ಲ. ಅದು ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ನಿಂತಿದೆ. ನಿಂತಿರಬೇಕು ಎನ್ನುವುದು ಜೆಡಿಎಸ್ ಅಚಲ ನಿಲುವು. ತುಷ್ಟೀಕರಣ VS ತುಚ್ಚೀಕರಣ ನಡೆಯುತ್ತಿದೆ ಎಂದು ರಾಜ್ಯ ಸರ್ಕಾರದ ಕಾಲೆಳೆದಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:06 pm, Mon, 24 March 25

Follow Us
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗುಡ್ ನ್ಯೂಸ್: ಶಿವರಾಮ ಕಾರಂತ ಬಡಾವಣೆ ನಿವೇಶನ ಹಂಚಿಕೆಗೆ ಡೇಟ್ ಫಿಕ್ಸ್​​
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗೆ ಬೀಗ?
ಗದಗದ ಕೆಂಚಲಾಪೂರದಲ್ಲಿ ಸದ್ದಿಲ್ಲದೆ ಸರ್ಕಾರಿ ಕನ್ನಡ ಶಾಲೆಗೆ ಬೀಗ?