ದೇಶ ಉಳಿಸಲು ಜೆಡಿಎಸ್ ಬೆಂಬಲಿಸಿ: ಮುಸ್ಲಿಂ ಮುಖಂಡರಿಗೆ ಜೆಡಿಎಸ್ ನಾಯಕ ಕುಮಾರಸ್ವಾಮಿ ಕರೆ

ಕಾಂಗ್ರೆಸ್ ಇದೀಗ ವಿವಿಧ ರಾಜ್ಯಗಳಲ್ಲಿ ನಶಿಸುತ್ತಿದೆ. ನಾನು ಕಾಂಗ್ರೆಸ್​ಗೆ ಮತ ಹಾಕಬೇಡಿ ಎನ್ನಲ್ಲ, ಜೆಡಿಎಸ್​ ಬಲವಿದ್ದಲ್ಲಿ ಜೆಡಿಎಸ್​ಗೆ ಮತ ಹಾಕಿ, ಇತರೆಡೆ ಕಾಂಗ್ರೆಸ್​ಗೆ ಮತ ಚಲಾಯಿಸಬಹುದು ಎಂದು ಅವರು ಕಾಂಗ್ರೆಸ್ ಪರಿಸ್ಥಿತಿಯನ್ನು ವ್ಯಾಖ್ಯಾನಿಸಿದರು.

ದೇಶ ಉಳಿಸಲು ಜೆಡಿಎಸ್ ಬೆಂಬಲಿಸಿ: ಮುಸ್ಲಿಂ ಮುಖಂಡರಿಗೆ ಜೆಡಿಎಸ್ ನಾಯಕ ಕುಮಾರಸ್ವಾಮಿ ಕರೆ
ಹೆಚ್.ಡಿ. ಕುಮಾರಸ್ವಾಮಿ
Follow us
TV9 Web
| Updated By: guruganesh bhat

Updated on:Oct 03, 2021 | 5:47 PM

ಬೆಂಗಳೂರು: ದೇಶ ಉಳಿಸಲು ಮುಸಲ್ಮಾನ ಬಾಂಧವರ ಮನೆ ಮನೆಗೆ ಜೆಡಿಎಸ್ ಪಕ್ಷವನ್ನು ತಲುಪಿಸಬೇಕು ಎಂದು 5ನೆ ದಿನದ ಜೆಡಿಎಸ್ ಕಾರ್ಯಾಗಾರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮುಸ್ಲಿಂ ಸಮುದಾಯದ ಮುಖಂಡರನ್ನುದ್ದೇಶಿಸಿ ಕರೆ ನೀಡಿದರು. ಜೆಡಿಎಸ್ ಬಿಜೆಪಿ ಬಿ ಟೀಂ ಎಂದು ಕಾಂಗ್ರೆಸ್ನವರು ಆರೋಪಿಸುತ್ತಾರೆ. ಆದರೆ ಅದು ಸುಳ್ಳೆಂಬುದನ್ನು ನೀವು ಅರ್ಥಮಾಡಿಕೊಳ್ಳಬೇಕು. ರಾಮಮಂದಿರ ಕಟ್ಟಲು ದೇಣಿಗೆ ನೀಡಿದ ಇಟ್ಟಿಗೆಗಳು ಈಗ ಎಲ್ಲಿ ಹೋದವೊ ತಿಳಿಯದು ಎಂದು ಅವರು ಟೀಕಿಸಿದರು.

19 ಪರ್ಸೆಂಟ್ ಇರುವ ಮುಸಲ್ಮಾನ್ ಬಂಧುಗಳನ್ನು ದ್ರೋಹಿಗಳು ಎಂದು ಬಿಂಬಿಸಲಾಗುತ್ತಿದೆ. ನಮ್ಮ ಸಂವಿಧಾನದ ವ್ಯವಸ್ಥೆಯಲ್ಲಿ ನಾವೆಲ್ಲಾ ಒಂದು ಕುಟುಂಬದಂತೆ ಬದುಕಬೇಕು. ಕಾಂಗ್ರೆಸ್ ಸುದೀರ್ಘವಾಗಿ ಆಡಳಿತ ನಡೆಸಿದೆ. ತುರ್ತು ಪರಿಸ್ಥಿತಿಯವರೆಗೆ ಕಾಂಗ್ರೆಸ್ ಹತ್ತಿರಕ್ಕೆ ಹೋಗಲು ಸಾಧ್ಯವಾಗಿರಲಿಲ್ಲ. ಆದರೆ ಇದೀಗ ಕಾಂಗ್ರೆಸ್ ಸಂಪೂರ್ಣವಾಗಿ ನಶಿಸಿ ಹೋಗುತ್ತಿದೆ. ಕಾಂಗ್ರೆಸ್ ಸ್ವಯಂಕೃತ್ಯ ಅಪರಾಧವೇ ಅದಕ್ಕೆ ಕಾರಣ. ರಾಷ್ಟ್ರೀಯ ಪಕ್ಷವಾಗಿದ್ದ ಕಾಂಗ್ರೆಸ್ ಇದೀಗ ವಿವಿಧ ರಾಜ್ಯಗಳಲ್ಲಿ ನಶಿಸುತ್ತಿದೆ. ನಾನು ಕಾಂಗ್ರೆಸ್​ಗೆ ಮತ ಹಾಕಬೇಡಿ ಎನ್ನಲ್ಲ, ಜೆಡಿಎಸ್​ ಬಲವಿದ್ದಲ್ಲಿ ಜೆಡಿಎಸ್​ಗೆ ಮತ ಹಾಕಿ, ಇತರೆಡೆ ಕಾಂಗ್ರೆಸ್​ಗೆ ಮತ ಚಲಾಯಿಸಬಹುದು ಎಂದು ಅವರು ಕಾಂಗ್ರೆಸ್ ಪರಿಸ್ಥಿತಿಯನ್ನು ವ್ಯಾಖ್ಯಾನಿಸಿದರು.

ಈ ದೇಶ ಈ ಪರಿಸ್ಥಿತಿಗೆ ಬರಲು ಕಾರಣ ಏನು ಅಂತ ಯೋಚನೆ ಮಾಡಿ. ಕಾಂಗ್ರೆಸ್ ಪಕ್ಷ ನಮ್ಮನ್ನು ಗುಲಾಮರಂತೆ ನೋಡಿತು. ಮುಸ್ಲಿಂ ಸಮುದಾಯದವರ ಮುಗ್ಧತೆಯನ್ನು ಬಳಸಿಕೊಂಡಿತು. 2004 ರಲ್ಲಿ ಕಾಂಗ್ರೆಸ್ ಜೊತೆ ಮೈತ್ರಿಯಾಗಿತ್ತು. ಆಗಲೂ ನಮಗೆ ಅಧಿಕಾರ ಮಾಡಲು ಬಿಡಲಿಲ್ಲ. ಪಕ್ಷದ ಕಾರ್ಯಕ್ರಮ ಬಿಟ್ಟು ಅಹಿಂದ ಅಂತಾ ಸಿದ್ದರಾಮಯ್ಯ ಹೊರಟರು.. ಮತ್ತೆ ಚುನಾವಣೆಗೆ ಹೋಗಬೇಕು ಅಂದುಕೊಂಡಿದ್ದೆವು. ಆದರೆ ನಮ್ಮ ಶಾಸಕರು ಕೈ ಮುಗಿದು ಬೇಡಿ ಮತ್ತೆ ಚುನಾವಣೆ ಬೇಡ ಅಂದ್ರು. ಬಿಜೆಪಿಯವರೇ ನಮ್ಮ ಮನೆ ಬಾಗಿಲಿಗೆ ಬಂದಿದ್ದು. ಬಿಜೆಪಿಯವರು ಸಹ ನಮ್ಮನ್ನು ಅವರಿಗೆ ಬೇಕಾದಾಗ ಬಳಸಿಕೊಂಡರು ಎಂದು ಎಚ್ಡಿಕೆ ಈ ಬಾರಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುವಂತೆ ಕರೆ ನೀಡಿದರು.

ಇದನ್ನೂ ಓದಿ: 

ಬಹಿರಂಗ ಹೇಳಿಕೆ ನೀಡದಂತೆ ಜೆಡಿಎಸ್ ಶಾಸಕರಿಗೆ ಹೆಚ್ ಡಿ ಕುಮಾರಸ್ವಾಮಿ ಸೂಚನೆ

ಉಪಚುನಾವಣೆಯಲ್ಲಿ ಜೆಡಿಎಸ್​ನಿಂದ ಮುಸ್ಲಿಂ ಅಭ್ಯರ್ಥಿ ವಿಚಾರ; ಸಿದ್ದರಾಮಯ್ಯ, ಕುಮಾರಸ್ವಾಮಿ ವಾಕ್ಸಮರ

Published On - 5:42 pm, Sun, 3 October 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ