ದೇಶದ ಆಡಳಿತ ವ್ಯವಸ್ಥೆಯಲ್ಲಿ ಆರ್ಎಸ್ಎಸ್ ಆರ್ಭಟ, ಇದನ್ನು ನಾನು ಹೇಳಿರುವುದಲ್ಲ, ಆರ್ಎಸ್ಎಸ್ನಿಂದಲೇ ಈ ಮಾಹಿತಿ ಇದೆ ಎಂದು ಕೇತಗಾನಹಳ್ಳಿಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಆರ್ಎಸ್ಎಸ್ ಕೊಟ್ಟ ಮಾಹಿತಿಯನ್ನು ಜನತೆ ಮುಂದೆ ಇಟ್ಟಿದ್ದೇನೆ. ಆರ್ಎಸ್ಎಸ್ನವರ ಐಪಿಎಸ್, ಐಎಎಸ್ ಅಧಿಕಾರಿಗಳಿದ್ದಾರೆಂದು ಹೇಳಿದ್ದಾರೆ. ಆರ್ಎಸ್ಎಸ್ ಅಜೆಂಡಾ ಇಂಪ್ಲಿಮೆಂಟ್ ಮಾಡಲು ತರಬೇತಿ ಕೊಡ್ತಾರೆ ಎಂದು ತಿಳಿಸಿದ್ದಾರೆ.
ಆರ್‌ಎಸ್ಎಸ್ ಸಂಘಟನೆಯಿಂದ ಉತ್ತರ ಪ್ರದೇಶದಲ್ಲಿ ಸರ್ಕಾರ ರಚನೆ ಆಗಿದೆ. ಉತ್ತರ ಪ್ರದೇಶದಲ್ಲಿರುವುದು ಆರ್‌ಎಸ್ಎಸ್ ಸರ್ಕಾರ. ಉತ್ತರ ಪ್ರದೇಶ ಸರ್ಕಾರ ಆರ್‌ಎಸ್ಎಸ್ ಹಿಡಿತದಲ್ಲಿದೆ. ಮನುಸ್ಮೃತಿ ಯುಗಕ್ಕೆ ಕರೆದೊಯ್ಯುವುದು ನಿಮ್ಮ ಅಜೆಂಡಾ. ನಾವೂ ಹಿಂದೂಗಳೇ, ಆದ್ರೆ ಹಿಂದುತ್ವ ನಮ್ಮ ಅಜೆಂಡಾವಲ್ಲ. ಮೊದಲು ದುಡಿಯುವ ಕೈಗಳಿಗೆ ದುಡಿಮೆ ಕೊಡಿ. ಸರ್ಕಾರಗಳು ಬಡವರ ಬಗ್ಗೆ ಗಮನ ಕೊಡಬೇಕು. ರೈತರ ಮೇಲೆ ಗೌರವ ಇದ್ದರೆ ತಪ್ಪಿತಸ್ಥರನ್ನು ಬಂಧಿಸಿ. ಕಾರು ಹತ್ತಿಸಿದವರನ್ನು ಮೊದಲು ಬಂಧಿಸಬೇಕಾಗಿತ್ತು. ಕಾರು ಹತ್ತಿಸಿದವರಿಗೆ ಏಕೆ ರಕ್ಷಣೆ ಕೊಟ್ಟಿದ್ದೀರಿ? ಎಂದು ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಉತ್ತರ ಪ್ರದೇಶದ ಲಖೀಮ್‌ಪುರ ಖೇರಿಯಲ್ಲಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ಜೆಡಿಎಸ್ ನಾಯಕ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಘಟನೆಯ ಬಗ್ಗೆ ಅವರು ಖಂಡನೆ ವ್ಯಕ್ತಪಡಿಸಿದ್ದಾರೆ.
ಸಾಮಾನ್ಯ ವ್ಯಕ್ತಿ ಈ ಕೆಲಸ ಮಾಡಿದ್ರೆ ಬಂಧಿಸ್ತಿದ್ರಿ. ಇದೇನಾ ನಿಮ್ಮ ಶಾಂತಿಯುತ ಉತ್ತರಪ್ರದೇಶ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ಗೆ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. ಅಧಿಕಾರಕ್ಕಾಗಿ ಅಮಾಯಕರನ್ನು ಬಲಿ ಪಡೆಯುವುದು, ರಕ್ತದೋಕುಳಿ ಮಾಡ್ತಾ ಇದ್ದೀರಾ ಎಂದು ಕೇಳಿದ್ದಾರೆ. ಆರ್ಎಸ್ಎಸ್ನವರು ನಮ್ಮ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಆರ್‌ಎಸ್‌ಎಸ್‌ಗೆ ಸಂಬಂಧಪಟ್ಟ ಪುಸ್ತಕ ಓದುತ್ತಿದ್ದೆ. ಅದರಲ್ಲಿ ಇವರ ಹಿಡನ್ ಅಜೆಂಡಾ ಏನೆಂದು ಗೊತ್ತಾಗುತ್ತೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
ಇದನ್ನೂ ಓದಿ: ದೇಶ ಉಳಿಸಲು ಜೆಡಿಎಸ್ ಬೆಂಬಲಿಸಿ: ಮುಸ್ಲಿಂ ಮುಖಂಡರಿಗೆ ಜೆಡಿಎಸ್ ನಾಯಕ ಕುಮಾರಸ್ವಾಮಿ ಕರೆ