AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಬಲ ಕೊಟ್ಟಂತೆ ಮಾಡಿ ಕುತ್ತಿಗೆ ಕುಯ್ಯುವುದೇ ಇವರ ಕೆಲಸ; ನನಗೆ ಅನುಭವ ಆಗಿದೆ: ಕಾಂಗ್ರೆಸ್ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ

ಯಡಿಯೂರಪ್ಪ ನಮಗೆ ವೈಯಕ್ತಿಕವಾಗಿ ಮನವಿ ಮಾಡಿದ್ದು ಅಷ್ಟೇ. ಎಲ್ಲಿ ನಿಮ್ಮ ಅಭ್ಯರ್ಥಿಗಳು ಇಲ್ಲ ಬಿಜೆಪಿಗೆ ಬೆಂಬಲ ನೀಡಿ ಎಂದು ಮನವಿ ಮಾಡಿದ್ದರು. ಅದು ಅವರ ದೊಡ್ಡತನ ತೋರಿಸಿದೆ ಎಂದು ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.

ಬೆಂಬಲ ಕೊಟ್ಟಂತೆ ಮಾಡಿ ಕುತ್ತಿಗೆ ಕುಯ್ಯುವುದೇ ಇವರ ಕೆಲಸ; ನನಗೆ ಅನುಭವ ಆಗಿದೆ: ಕಾಂಗ್ರೆಸ್ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ
ಜೆಡಿಎಸ್ ನಾಯಕ ಹೆಚ್​.ಡಿ. ಕುಮಾರಸ್ವಾಮಿ
TV9 Web
| Updated By: ganapathi bhat|

Updated on: Dec 10, 2021 | 4:48 PM

Share

ರಾಮನಗರ: ಬೆಂಬಲ ಕೊಟ್ಟಂತೆ ಮಾಡಿ ಕುತ್ತಿಗೆ ಕೊಯ್ಯುವುದೇ ಇವರ ಕೆಲಸ. ಈ ರೀತಿ ನನಗೆ ಎರಡು ಮೂರು ಬಾರಿ ಅನುಭವವಾಗಿದೆ. ಕಾಂಗ್ರೆಸ್ ನಡವಳಿಕೆ ಹೊರ‌ನೋಟಕ್ಕೆ ಜಾತ್ಯತೀತ ಎನ್ನುತ್ತಾರೆ. ಆದರೆ ಕಾಂಗ್ರೆಸ್ ಪಕ್ಷದಲ್ಲಿ ಆ ರೀತಿಯ ವಾತಾವರಣ ಇಲ್ಲ. ಜಾತ್ಯತೀತ ಶಕ್ತಿಗಳನ್ನೇ ನಿರ್ನಾಮ ಮಾಡಬೇಕೆಂಬ ನಡವಳಿಕೆ ಅವರದು ಎಂದು ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಜೆಡಿಎಸ್ ನಾಯಕ ಹೆಚ್.ಡಿ ‌ಕುಮಾರಸ್ವಾಮಿ ‌ಹೇಳಿಕೆ ನೀಡಿದ್ದಾರೆ.

ಆರು ವಿಧಾನಪರಿಷತ್ ಸ್ಥಾನಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಒಂದು ವರ್ಷದ ಅವಧಿಯಲ್ಲಿ ಯಾವ ರೀತಿ ಬದಲಾವಣೆ ಆಗಲಿದೆ ಎಂದು ಯಾರು ನಿರೀಕ್ಷೆ ‌ಮಾಡಲು ಸಾಧ್ಯವಿಲ್ಲ. ಯಡಿಯೂರಪ್ಪ ನಮಗೆ ವೈಯಕ್ತಿಕವಾಗಿ ಮನವಿ ಮಾಡಿದ್ದು ಅಷ್ಟೇ. ಎಲ್ಲಿ ನಿಮ್ಮ ಅಭ್ಯರ್ಥಿಗಳು ಇಲ್ಲ ಬಿಜೆಪಿಗೆ ಬೆಂಬಲ ನೀಡಿ ಎಂದು ಮನವಿ ಮಾಡಿದ್ದರು. ಅದು ಅವರ ದೊಡ್ಡತನ ತೋರಿಸಿದೆ. ಯಡಿಯೂರಪ್ಪ ಕೃತಜ್ಞತೆ ಸಲ್ಲಿಸುವ ಔದಾರ್ಯ ತೋರಿಸಿದ್ದಾರೆ. ಕಾಂಗ್ರೆಸ್ ನಾಯಕರಿಗೆ ಸೌಜನ್ಯವೂ ಇಲ್ಲ ಎಂದು ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ದೇವೇಗೌಡರು ಪ್ರಧಾನಿ ಆಗಿದ್ದು ಕಾಂಗ್ರೆಸ್ ನಿಂದ ಅಂತಾ ಹೇಳುತ್ತಾರೆ. ದೇವೇಗೌಡರು ಪ್ರಧಾನಿ ಮಾಡಿ ಎಂದು ಅರ್ಜಿ‌ ಇಟ್ಟುಕೊಂಡು ಹೋಗಿದ್ರಾ. ನಾನು ಮುಖ್ಯಮಂತ್ರಿ ಆದಾಗ ಕಾಂಗ್ರೆಸ್ ಮುಂದೆ ಅರ್ಜಿ ಇಟ್ಟುಕೊಂಡು ಹೋಗಿದ್ನಾ. ನಮ್ಮನ್ನ ಬೆಂಬಲ ಕೊಟ್ಟಂಗೆ ಮಾಡಿ ಕುತ್ತಿಗೆ ಕುಯ್ಯುವುದೇ ಇವರ ಕೆಲಸ. ಈ ರೀತಿ ಎರಡು ಮೂರಿ ಬಾರಿ ಅನುಭವವಾಗಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

ಬೆಳಗಾವಿ: ಸ್ಪರ್ಧಿಸಿದ ಎಲ್ಲಾ ಕ್ಷೇತ್ರಗಳಲ್ಲೂ ಗೆಲ್ತೇವೆ: ಬಸವರಾಜ ಬೊಮ್ಮಾಯಿ ವಿಶ್ವಾಸ ಸ್ಪರ್ಧಿಸಿದ ಎಲ್ಲಾ ಕ್ಷೇತ್ರಗಳಲ್ಲೂ ಗೆಲ್ತೇವೆ ಎಂದು ವಿಧಾನ ಪರಿಷತ್ ಚುನಾವಣೆಗೆ ಮತದಾನ ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಚುನಾವಣೆ ವಿಧಾನಸಭೆ ಚುನಾವಣೆ ದಿಕ್ಸೂಚಿ ಆಗುತ್ತಾ ಎಂಬ ವಿಚಾರವಾಗಿಯೂ ಪ್ರತಿಕ್ರಿಯೆ ನೀಡಿದ್ದಾರೆ. ಒಂದೊಂದು ಚುನಾವಣೆಗೆ ಅದರದ್ದೆ ಆದಂತ ಮತದಾರ ತೀರ್ಮಾನ ಇರುತ್ತೆ. ಉಪಚುನಾವಣೆ ಇರಲಿ, ವಿಧಾನ ಪರಿಷತ್ ಚುನಾವಣೆ ಇರಲಿ ಅದರ ನೆಲೆಗಟ್ಟಿನ ಮೇಲಾಗುತ್ತೆ. ವಿಧಾನಸಭೆ ಚುನಾವಣೆ ಅವತ್ತಿನ ಸಂದರ್ಭದಲ್ಲಿ ಯಾವ ರಾಜಕೀಯ ಸನ್ನಿವೇಶ ಇರುತ್ತೋ ಆ ನೆಲೆಗಟ್ಟಿನ ಮೇಲೆ ಆಗುತ್ತೆ ಎಂದು ಹೇಳಿಕೆ ನೀಡಿದ್ದಾರೆ.

ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಪ್ರಾಶಸ್ತ್ಯ ವಿಚಾರವಾಗಿ ಮಾತನಾಡಿದ್ದಾರೆ. ಉತ್ತರ ಕರ್ನಾಟಕ ಹಲವು ಸಮಸ್ಯೆಗಳು ಸಹಜವಾಗಿ ಚರ್ಚೆಗೆ ಬರುತ್ತೆ ಎಂದು ನಿರೀಕ್ಷೆ ಮಾಡಿದ್ದೇವೆ. ಇಲ್ಲಿಯೂ ಸಚಿವ ಸಂಪುಟ ಸಭೆ ಮಾಡುವ ಚರ್ಚೆ ನಡೆದಿದೆ. ಆ ಸಂದರ್ಭದಲ್ಲಿ ಈ ಭಾಗದ ಅಭಿವೃದ್ಧಿಗಳಿಗೆ ಹೆಚ್ಚಿನ ಮಹತ್ವ ಕೊಡ್ತೇವೆ. ವಿಧೇಯಕಗಳ ಬಗ್ಗೆ ಪಾರ್ಲಿಮೆಂಟರಿ ಮಿನಿಸ್ಟರ್ ಬರ್ತಾರೆ. ಮಹದಾಯಿ ವಿವಾದ, ಭೂಸುಧಾರಣಾ ಕಾಯ್ದೆ ತಿದ್ದುಪಡಿ ಕಾಯ್ದೆ ಎಲ್ಲದರ ಬಗ್ಗೆ ಚರ್ಚೆ ಆಗಲಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಯಡಿಯೂರಪ್ಪ ಹತಾಶರಾಗಿ ಜೆಡಿಎಸ್ ಬೆಂಬಲ ಕೋರಿದ್ದಾರೆ: ಡಿಕೆ ಶಿವಕುಮಾರ್ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಒಗ್ಗಟ್ಟಿನ ಪ್ರದರ್ಶನ ವ್ಯಕ್ತಪಡಿಸಿದೆ. ಯಡಿಯೂರಪ್ಪ ಹತಾಶರಾಗಿ ಜೆಡಿಎಸ್ ಬೆಂಬಲ ಕೋರಿದ್ದಾರೆ. ಬಿಜೆಪಿ ತನ್ನ ಶಕ್ತಿ ಕಳೆದುಕೊಂಡಿದೆ ಎಂಬುದಕ್ಕೆ ಇದೇ ಸಾಕ್ಷಿ. ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್​ನಿಂದ ಪಾದಯಾತ್ರೆ ಮಾಡಲಾಗುತ್ತದೆ. ಕಾವೇರಿ ಜಲಾನಯನ ಪ್ರದೇಶ, ಬೆಂಗಳೂರು ನಾಯಕರ ಸಭೆ ನಡೆಸುತ್ತೇವೆ. ರಾಜ್ಯದ ಹಿತಕ್ಕಾಗಿ ಹೋರಾಟ ಹಮ್ಮಿಕೊಂಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಾಮನಗರದಲ್ಲಿ ಹೇಳಿಕೆ ನೀಡಿದ್ಧಾರೆ.

ಇದನ್ನೂ ಓದಿ: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 140ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ; ನಾನೇ ಸಿಎಂ ಆಗುವೆ: ಶಾಮನೂರು ಶಿವಶಂಕರಪ್ಪ

ಇದನ್ನೂ ಓದಿ: ಚಿತ್ರದುರ್ಗ: ಮತಗಟ್ಟೆಯತ್ತ ಸುಳಿಯದ ಮತದಾರರು; ಮಧ್ಯಾಹ್ನ 2 ಗಂಟೆಯವರೆಗೆ ಶೇಕಡಾ 10.70ರಷ್ಟು ಮತದಾನ