ಪ್ರೋಟೋಕಾಲ್ ಉಲ್ಲಂಘಿಸಿದ ಸರ್ಕಾರ: ಕುಮಾರಸ್ವಾಮಿ ಬೇಸರ, ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ದಿಶಾ ಸಭೆ

| Updated By: ವಿವೇಕ ಬಿರಾದಾರ

Updated on: Jan 04, 2025 | 9:01 AM

ಕೇಂದ್ರ ಸಚಿವರ ರಾಜ್ಯ ಪ್ರವಾಸದ ವೇಳೆ ಸರ್ಕಾರ ಪ್ರೋಟೋಕಾಲ್ ಪಾಲಿಸಿಲ್ಲ. ಇದರಿಂದ ಅಸಮಾಧಾನಗೊಂಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರದ ವಾಹನ ಒದಗಿಸದಿರುವುದನ್ನು ಖಂಡಿಸಿರುವ ಅವರು, ಕೇಂದ್ರ ಸರ್ಕಾರದ ವಾಹನದಲ್ಲಿಯೇ ತಮ್ಮ ಪ್ರವಾಸ ಮುಂದುವರಿಸುತ್ತಿದ್ದಾರೆ.

ಪ್ರೋಟೋಕಾಲ್ ಉಲ್ಲಂಘಿಸಿದ ಸರ್ಕಾರ: ಕುಮಾರಸ್ವಾಮಿ ಬೇಸರ, ಸಿದ್ದರಾಮಯ್ಯ ತವರು ಜಿಲ್ಲೆಯಲ್ಲಿ ದಿಶಾ ಸಭೆ
ಹೆಚ್​​ಡಿ ಕುಮಾರಸ್ವಾಮಿ
Follow us on

ಮಂಡ್ಯ, ಜನವರಿ 04: ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಮತ್ತು ಕರ್ನಾಟಕ ಸರ್ಕಾರದ (Karnataka Government) ನಡುವಿನ ಮುಸುಕಿನ ಗುದ್ದಾಟ ಮುಂದುವರೆದಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಹೆಚ್​ಡಿ ಕುಮಾರಸ್ವಾಮಿ ರಾಜ್ಯ ಪ್ರವಾಸದ ವೇಳೆ ಸರ್ಕಾರ ಕೇಂದ್ರ ಸಚಿವರ ಪ್ರೋಟೋಕಾಲ್ ಪಾಲನೆ ಮಾಡದೆ ಎಡವಟ್ಟು ಮಾಡಿಕೊಂಡಿದೆ ಎನ್ನಲಾಗುತ್ತಿದೆ. ಹೆಚ್​ಡಿ ಕುಮಾರಸ್ವಾಮಿ ಎರಡು ದಿನ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಸರ್ಕಾರ ಹೆಚ್​ಡಿ ಕುಮಾರಸ್ವಾಮಿ ರಾಜ್ಯ ಪ್ರವಾಸಕ್ಕೆ ಸರ್ಕಾರ ಕಾರು ನೀಡದೆ ನಿರ್ಲಕ್ಷ್ಯ ತೋರಿದೆ ಎಂಬ ಆರೋಪ ಕೇಳಿಬಂದಿದೆ.

ಇದರಿಂದ ಅಸಮಾಧಾನಗೊಂಡಿರುವ ಹೆಚ್​ಡಿ ಕುಮಾರಸ್ವಾಮಿ, ರಾಜ್ಯ ಸರ್ಕಾರದ ನಡೆ ವಿರುದ್ಧ ಆಕ್ರೋಶಗೊಂಡಿದ್ದಾರೆ. ಇದೀಗ, ಹೆಚ್​ಡಿ ಕುಮಾರಸ್ವಾಮಿ ಕೇಂದ್ರ ಸರ್ಕಾರದ ವಾಹನದಲ್ಲೇ ಮಂಡ್ಯ, ಮೈಸೂರು ಜಿಲ್ಲೆ ಪ್ರವಾಸ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರದ ನಡೆಗೆ ಮಂಡ್ಯದ ಕೆ.ಆರ್.ಪೇಟೆಯಲ್ಲಿ ಹೆಚ್​ಡಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ

“ರಾಜ್ಯ ಸರ್ಕಾರ ನನಗೆ ಇಲ್ಲಿವರೆಗೂ ಕಾರು ಕೊಟ್ಟಿಲ್ಲ. ಹೀಗಾಗಿ, ನಮ್ಮ ಕೇಂದ್ರ ಸರ್ಕಾರದ ವಾಹನ ಬಳಕೆ ಮಾಡುತ್ತಿದ್ದೇನೆ. ಬೃಹತ್ ಕೈಗಾರಿಕಾ ಇಲಾಖೆಯ ವಾಹನ ತರಿಸಿಕೊಂಡಿದ್ದೇನೆ” ಎಂದು ಹೆಚ್​ಡಿ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ಹೆಚ್ ಡಿ ಕುಮಾರಸ್ವಾಮಿಯವರನ್ನು ನಿರ್ಲಕ್ಷ್ಯ ಮಾಡುತ್ತಿದೆ ಎಂಬ ವಿಚಾರವಾಗಿ ಮಾತನಾಡಿದ ಅವರು “ಆ ಬಗ್ಗೆ ನನಗೆ ಏನು ಗೊತ್ತಿಲ್ಲ. ಈ ಬಗ್ಗೆ ಅವರನ್ನೇ ಕೇಳಬೇಕು” ಎಂದರು.

ಮೈಸೂರಿನಲ್ಲಿ ಕುಮಾರಸ್ವಾಮಿ ದಿಶಾ ಸಭೆ

ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ದಿಶಾ ಸಭೆ ನಡೆಯಲಿದೆ. ಮೈಸೂರು ಜಿಲ್ಲಾ ಪಂಚಾಯತ್​ ಸಭಾಂಗಣದಲ್ಲಿ ಶನಿವಾರ ಬೆಳಗ್ಗೆ 11 ಗಂಟೆಗೆ ಸಭೆ ನಡೆಯಲಿದೆ. ಇಂದಿನ ದಿಶಾ ಸಭೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಏಕೆಂದರೆ ಜೆಡಿಎಸ್​ನ ಹಿರಿಯ ಮುಖಂಡ, ಶಾಸಕ ಜಿಟಿ ದೇವೇಗೌಡ ಮುನಿಸು ಮರೆತು ಸಭೆಯಲ್ಲಿ ಭಾಗಿಯಾಗುತ್ತಾರಾ ಕಾದುನೋಡಬೇಕಿದೆ.

ದಿಶಾ ಸಭೆ ಬಳಿಕ ಹೆಚ್​ಡಿ ಕುಮಾರಸ್ವಾಮಿ ಸಂಜೆ 4 ಗಂಟೆಗೆ ಮೈಸೂರಿನ ಸಾರಾ ಕನ್ವೆಂಷನ್ ಹಾಲ್​​ನಲ್ಲಿ ಜೆಡಿಎಸ್​ ಕಾರ್ಯಕರ್ತರ ಜೊತೆ ಸಭೆ ನಡೆಸಲಿದ್ದಾರೆ. ಹಳೇ ಮೈಸೂರು ಭಾಗದಲ್ಲಿ ಪಕ್ಷವನ್ನು ಸಂಘಟನೆಗೊಳಿಸಿ, ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಗದ್ದುಗೆ ಹಿಡಿಯಲು ತಯಾರಿ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ